ಕನಿಷ್ಠ ವೇತನ ತಡೆ ಪ್ರಸ್ತಾವನೆ ಕೈಬಿಡಿ; ಪರಿಷ್ಕೃತ ವೇತನ ಜಾರಿಗೊಳಿಸಿ: ಹೊರಗುತ್ತಿಗೆ ನೌಕರರ ಆಗ್ರಹ

Date:

ರಾಜ್ಯ ಸರ್ಕಾರವು 2026ರ ಮೇ 22ರಂದು ಪ್ರಕಟಿಸಿರುವ ಕನಿಷ್ಠ ವೇತನದ ಅಂತಿಮ ಅಧಿಸೂಚನೆಯನ್ನು ಅಮಾನತಿನಲ್ಲಿ ಇಡುವ ಯಾವುದೇ ಪ್ರಸ್ತಾವನೆಯನ್ನು ತಕ್ಷಣ ತಿರಸ್ಕರಿಸಿ, ಪರಿಷ್ಕೃತ ಕನಿಷ್ಠ ವೇತನವನ್ನು ರಾಜ್ಯದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಸಂಸ್ಥೆಗಳ ಹೊರಗುತ್ತಿಗೆ ನೌಕರರಿಗೆ ಕೂಡಲೇ ಜಾರಿಗೊಳಿಸಬೇಕೆಂದು ಆಗ್ರಹಿಸಿ ವಿವಿಧ ಇಲಾಖೆಗಳ ಹೊರಗುತ್ತಿಗೆ ನೌಕರರು ಮೈಸೂರಿನಲ್ಲಿ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

- Advertisement -

ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ವಸತಿ ನಿಲಯಗಳು, ಆರೋಗ್ಯ, ಶಿಕ್ಷಣ, ನಗರ ಸ್ಥಳೀಯ ಸಂಸ್ಥೆಗಳು ಸೇರಿದಂತೆ ವಿವಿಧ ಸರ್ಕಾರಿ ಇಲಾಖೆಗಳ ಹೊರಗುತ್ತಿಗೆ ಸಿಬ್ಬಂದಿ ಹಾಗೂ ಜಿಲ್ಲೆಯ ವಿವಿಧ ಕೈಗಾರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರು ಪ್ರತಿಭಟನೆಯಲ್ಲಿ ಭಾಗವಹಿಸಿ ತಮ್ಮ ಬೇಡಿಕೆಗಳನ್ನು ಸರ್ಕಾರದ ಮುಂದಿಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮ್ಯಾಕಲ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಪ್ರತಿಭಟನಾಕಾರರು ಮಾತನಾಡಿ, ಇದು ಕೇವಲ ಒಂದು ಇಲಾಖೆಯ ಹೋರಾಟವಲ್ಲ. ರಾಜ್ಯದಾದ್ಯಂತ ಕನಿಷ್ಠ ವೇತನ ಪಡೆಯಬೇಕಾದ ಲಕ್ಷಾಂತರ ಹೊರಗುತ್ತಿಗೆ ಕಾರ್ಮಿಕರ ಜೀವನೋಪಾಯ ಹಾಗೂ ಸಂವಿಧಾನಬದ್ಧ ಹಕ್ಕುಗಳನ್ನು ರಕ್ಷಿಸುವ ರಾಜ್ಯವ್ಯಾಪಿ ಹೋರಾಟವಾಗಿದೆ ಎಂದು ತಿಳಿಸಿದರು.

ರಾಜ್ಯ ಸರ್ಕಾರವು ಮೇ 22ರಂದು ಕನಿಷ್ಠ ವೇತನದ ಅಂತಿಮ ಅಧಿಸೂಚನೆ ಹೊರಡಿಸಿದ್ದರೂ, ಹಣಕಾಸು ಇಲಾಖೆಯು ಅದನ್ನು ಅಮಾನತಿನಲ್ಲಿ ಇಡುವ ಪ್ರಸ್ತಾವನೆಯನ್ನು ಮುಂದಿಟ್ಟಿರುವುದು ಕಾರ್ಮಿಕ ವಿರೋಧಿ, ಕಾನೂನುಬಾಹಿರ, ಸಂವಿಧಾನ ವಿರೋಧಿ ಹಾಗೂ ಆಡಳಿತಾತ್ಮಕವಾಗಿ ಅಸಂಗತ ಕ್ರಮವಾಗಿದೆ ಎಂದು ಆರೋಪಿಸಿದರು.

ಉಚ್ಚ ನ್ಯಾಯಾಲಯವು ಮಾಲೀಕರ ಸಂಘಗಳು ಸಲ್ಲಿಸಿದ್ದ ತಡೆಯಾಜ್ಞೆ ಅರ್ಜಿಯನ್ನು ಅಂಗೀಕರಿಸಿಲ್ಲ. ಇಂತಹ ಸಂದರ್ಭದಲ್ಲಿ ಆಡಳಿತಾತ್ಮಕವಾಗಿ ಅಧಿಸೂಚನೆಯನ್ನು ತಡೆಹಿಡಿಯಲು ಸಾಧ್ಯವಿಲ್ಲ ಎಂದು ಪ್ರತಿಭಟನಾಕಾರರು ವಾದಿಸಿದರು. 2016ರ ಬಳಿಕ 2021ರಲ್ಲಿ ಆಗಬೇಕಿದ್ದ ಕನಿಷ್ಠ ವೇತನ ಪರಿಷ್ಕರಣೆ ಈಗಾಗಲೇ ಸುಮಾರು ಐದು ವರ್ಷ ವಿಳಂಬವಾಗಿ 2026ರಲ್ಲಿ ಅಧಿಸೂಚನೆ ಹೊರಬಂದಿದ್ದು, ಇದೀಗ ಮತ್ತೆ ತಡೆಹಿಡಿಯುವುದು ಕಾರ್ಮಿಕರಿಗೆ ಮತ್ತಷ್ಟು ಅನ್ಯಾಯವಾಗಲಿದೆ ಎಂದು ಹೇಳಿದರು.

ಕನಿಷ್ಠ ವೇತನ ಕಾಯ್ದೆ, 1948ರ ಪ್ರಕಾರ ಅಂತಿಮ ಅಧಿಸೂಚನೆ ಪ್ರಕಟವಾದ ಬಳಿಕ ಅದನ್ನು ಅಮಾನತಿನಲ್ಲಿ ಇಡುವ ಅವಕಾಶ ಯಾವುದೇ ಇಲಾಖೆಗೆ ಇಲ್ಲ. ಹಲವು ಸರ್ಕಾರಿ ಇಲಾಖೆಗಳು ಈಗಾಗಲೇ ಪರಿಷ್ಕೃತ ವೇತನ ಪಾವತಿಸಲು ಆರಂಭಿಸಿದ್ದು, ಕಾರ್ಮಿಕ ಇಲಾಖೆಯೂ ಅನುಷ್ಠಾನಕ್ಕೆ ಸೂಚನೆ ನೀಡಿದೆ. ಈ ಹಂತದಲ್ಲಿ ಹಿಂಪಡೆಯುವುದರಿಂದ ಆಡಳಿತಾತ್ಮಕ ಗೊಂದಲ, ಕೈಗಾರಿಕಾ ಅಶಾಂತಿ ಹಾಗೂ ಕಾರ್ಮಿಕರ ಮೇಲೆ ಅನ್ಯಾಯ ಉಂಟಾಗಲಿದೆ ಎಂದು ಎಚ್ಚರಿಸಿದರು.

ಉದ್ಯಮಗಳು ರಾಜ್ಯ ಬಿಟ್ಟು ಹೋಗುತ್ತವೆ ಎಂಬ ವಾದಕ್ಕೆ ಯಾವುದೇ ಆಧಾರವಿಲ್ಲ. ಕಟ್ಟಡ ನಿರ್ಮಾಣ, ಭದ್ರತಾ ಸೇವೆ, ಹೌಸ್‌ಕೀಪಿಂಗ್, ಸ್ವಚ್ಛತಾ ಸೇವೆ, ಪೌರ ಸೇವೆಗಳು, ಸರ್ಕಾರಿ ಹೊರಗುತ್ತಿಗೆ ಸೇವೆಗಳು, ವಿಂಡ್‌ಮಿಲ್ ಹಾಗೂ ಸೋಲಾರ್ ಕ್ಷೇತ್ರಗಳಂತಹ ಸ್ಥಳಾಧಾರಿತ ಸೇವೆಗಳನ್ನು ಬೇರೆ ರಾಜ್ಯಗಳಿಗೆ ಸ್ಥಳಾಂತರಿಸಲು ಸಾಧ್ಯವಿಲ್ಲ ಎಂದು ಹೇಳಿದರು.

ಹಣಕಾಸು ಇಲಾಖೆಯ ಆರ್ಥಿಕ ಸಂಕಷ್ಟದ ವಾದವೂ ಕಾನೂನುಬದ್ಧವಲ್ಲ. ಸುಪ್ರೀಂ ಕೋರ್ಟ್ ತೀರ್ಪುಗಳ ಪ್ರಕಾರ ಆರ್ಥಿಕ ಸಂಕಷ್ಟವನ್ನು ನೆಪವನ್ನಾಗಿ ಮಾಡಿಕೊಂಡು ಕನಿಷ್ಠ ವೇತನ ನೀಡದೆ ಇರಲು ಸಾಧ್ಯವಿಲ್ಲ. ಜೊತೆಗೆ, ಸಂವಿಧಾನದ ವಿಧಿ 21 ಮತ್ತು 23 ಹಾಗೂ ಅಂತರರಾಷ್ಟ್ರೀಯ ಕಾರ್ಮಿಕ ಸಂಘಟನೆಯ (ILO) ಆಶಯಗಳಿಗೆ ವಿರುದ್ಧವಾಗಿ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಒತ್ತಾಯಿಸಿದರು.

ಪ್ರತಿಭಟನಾಕಾರರು 2026ರ ಮೇ 22ರ ಕನಿಷ್ಠ ವೇತನ ಅಧಿಸೂಚನೆಯನ್ನು ಅಮಾನತಿನಲ್ಲಿ ಇಡುವ ಹಣಕಾಸು ಇಲಾಖೆಯ ಪ್ರಸ್ತಾವನೆಯನ್ನು ತಕ್ಷಣ ತಿರಸ್ಕರಿಸುವುದು, ಅನುಷ್ಠಾನಕ್ಕೆ ಅಗತ್ಯವಿರುವ ಹೆಚ್ಚುವರಿ ಅನುದಾನ ಬಿಡುಗಡೆ ಮಾಡುವುದು, ಕಾರ್ಮಿಕ ಇಲಾಖೆಯಿಂದ ಕಟ್ಟುನಿಟ್ಟಿನ ಜಾರಿ ಹಾಗೂ ವಿಶೇಷ ತಪಾಸಣೆ ನಡೆಸುವುದು, ಕನಿಷ್ಠ ವೇತನ ನೀಡದ ಗುತ್ತಿಗೆದಾರರು ಮತ್ತು ಸಂಸ್ಥೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದು ಹಾಗೂ ಉಚ್ಚ ನ್ಯಾಯಾಲಯದಲ್ಲಿ ಸಲ್ಲಿಕೆಯಾಗುವ ಯಾವುದೇ ತಡೆಯಾಜ್ಞೆ ಅರ್ಜಿಗಳನ್ನು ಸರ್ಕಾರವು ಬಲವಾಗಿ ವಿರೋಧಿಸಬೇಕು ಎಂದು ಆಗ್ರಹಿಸಿದರು.

ಒಂಬತ್ತು ವರ್ಷಗಳಿಂದ ಕನಿಷ್ಠ ವೇತನ ಪರಿಷ್ಕರಣೆಗೆ ಕಾಯುತ್ತಿರುವ ಲಕ್ಷಾಂತರ ಹೊರಗುತ್ತಿಗೆ ಕಾರ್ಮಿಕರ ಬದುಕು ಸರ್ಕಾರದ ನಿರ್ಧಾರದ ಮೇಲೆ ನಿಂತಿದ್ದು, ಯಾವುದೇ ವಿಳಂಬವಿಲ್ಲದೆ ಪರಿಷ್ಕೃತ ಕನಿಷ್ಠ ವೇತನವನ್ನು ಜಾರಿಗೊಳಿಸಿ ಕಾರ್ಮಿಕ ಕುಟುಂಬಗಳಿಗೆ ನ್ಯಾಯ ಒದಗಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಯಿತು.

ಈ ವಿಶೇಷ ಸುದ್ದಿ ಓದಿದ್ದೀರಾ?ಮಾನವೀಯತೆಗೂ SIRಗೂ ಸಂಬಂಧವೇನು? ಪ್ರಜಾಪ್ರಭುತ್ವದ ಹಕ್ಕು, ದಾಖಲೆಗಳ ಗೊಂದಲ-ಉತ್ತರ ಸಿಗದ ಪ್ರಶ್ನೆಗಳು

ಪ್ರತಿಭಟನೆಯಲ್ಲಿ ಎಐಯುಟಿಯುಸಿ ಜಿಲ್ಲಾ ಅಧ್ಯಕ್ಷ ಚಂದ್ರಶೇಖರ್ ಮೇಟಿ, ಎಐಯುಟಿಯುಸಿ ರಾಜ್ಯ ಉಪಾಧ್ಯಕ್ಷೆ ಎಂ. ಉಮಾದೇವಿ, ಜಿಲ್ಲಾ ಮುಖಂಡರಾದ ಸಂಧ್ಯಾ ಪಿ.ಎಸ್., ಹರೀಶ್, ಮುದ್ದುಕೃಷ್ಣ, ಶಿವಾನಂದ್, ಆಕಾಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ | ಸೆ. 21, 22ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ

ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದೆ. ಭಾರತೀಯ ಹವಾಮಾನ ಇಲಾಖೆಯ (IMD) ಬೆಂಗಳೂರು...

ಹಾವೇರಿ | ವಿರೋಧ ಪಕ್ಷದ ರೀತಿಯಲ್ಲಿ‌ ಕೆಲಸ ಮಾಡೋಣ : ಉಡಚಪ್ಪ ಮಾಳಗಿ ಕರೆ

ಜಿಲ್ಲೆಯಲ್ಲಿ‌ ವಿರೋಧ ಪಕ್ಷವೇ ಇಲ್ಲ. ಇಲ್ಲ ಅನೇಕ ಸಮಸ್ಯೆಗಳು ಇವೆ. ದಲಿತರ...

ಉಡುಪಿ | ಮೇಯಲು ಬಿಟ್ಟ ದನ ಟೆಂಪೋದಲ್ಲಿ ಪತ್ತೆ; 24 ಗಂಟೆಯೊಳಗೆ ನಾಲ್ವರು ಪೊಲೀಸ್ ಬಲೆಗೆ!

ಮೇಯಲು ಬಿಟ್ಟಿದ್ದ ದನವನ್ನು ಅಕ್ರಮವಾಗಿ ಟೆಂಪೋದಲ್ಲಿ ಸಾಗಿಸುತ್ತಿದ್ದರೆಂದು ಆರೋಪಿಸಿ ದಾಖಲಾಗಿದ್ದ ಪ್ರಕರಣಕ್ಕೆ...

ಕಸ್ತೂರಿರಂಗನ್ ವರದಿ ವಿರುದ್ಧ ಆಕ್ರೋಶ: ಶೃಂಗೇರಿ ಬಂದ್‌ಗೆ ರೈತ ಸಂಘಟನೆಗಳ ಬೆಂಬಲ

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ಕಸ್ತೂರಿರಂಗನ್ ವರದಿಯ ಅನುಷ್ಠಾನವನ್ನು ವಿರೋಧಿಸಿ ಇಂದು...