ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಒತ್ತಾಯಿಸಿ ಮೈಸೂರಿನಲ್ಲಿ ರೈತ ಸಂಘದಿಂದ ಪ್ರತಿಭಟನೆ

Date:

ತಮಿಳುನಾಡಿಗೆ ದಿನಕ್ಕೆ 3,500 ಕ್ಯೂಸೆಕ್ಸ್ ಕಾವೇರಿ ನೀರನ್ನು 15 ದಿನಗಳವರೆಗೆ ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (ಸಿ.ಡಬ್ಲ್ಯು.ಆರ್.ಸಿ.) ಶಿಫಾರಸ್ಸು ಮಾಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘವು ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಮೈಸೂರಿನ ನ್ಯಾಯಾಲಯದ ಮುಂಭಾಗದಲ್ಲಿರುವ ಮಹಾತ್ಮ ಗಾಂಧಿ ಪುತ್ಥಳಿ ಎದುರು ಬುಧವಾರ ಪ್ರತಿಭಟನೆ ನಡೆಸಿತು.

- Advertisement -

ಪ್ರತಿಭಟನೆಯಲ್ಲಿ ಮಾತನಾಡಿದ ಮುಖಂಡರು, ರಾಜ್ಯದಲ್ಲಿ ತೀವ್ರ ಬರಗಾಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕಾವೇರಿ ಜಲಾನಯನ ಪ್ರದೇಶದಲ್ಲಿರುವ ಹಾರಂಗಿ ಹೊರತುಪಡಿಸಿ ಉಳಿದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ತೀವ್ರವಾಗಿ ಕುಸಿದಿದೆ ಎಂದು ಆತಂಕ ವ್ಯಕ್ತಪಡಿಸಿದರು. ಮಳೆ ಕೊರತೆಯಿಂದ ಬೆಳೆಗಳು ಒಣಗುತ್ತಿದ್ದು, ಕೆರೆ-ಕಟ್ಟೆಗಳು ಬತ್ತಿ ಹೋಗಿವೆ. ಕುಡಿಯುವ ನೀರಿನ ಅಭಾವದಿಂದ ಜನರು, ಜಾನುವಾರುಗಳು ಹಾಗೂ ವನ್ಯಜೀವಿಗಳಿಗೂ ಸಂಕಷ್ಟ ಎದುರಾಗುವ ಸಾಧ್ಯತೆ ಇರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸಲು ಸಿ.ಡಬ್ಲ್ಯು.ಆರ್.ಸಿ. ಶಿಫಾರಸ್ಸು ಮಾಡಿರುವುದು ರಾಜ್ಯದ ಹಿತಾಸಕ್ತಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ರಾಜ್ಯ ಸರ್ಕಾರ ಕೂಡಲೇ ಈ ಶಿಫಾರಸ್ಸಿನ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮೇಲ್ಮನವಿ ಸಲ್ಲಿಸಿ, ರಾಜ್ಯದ ಪರವಾಗಿ ಕಾನೂನು ಹೋರಾಟವನ್ನು ಮುಂದುವರಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಅಲ್ಲದೆ, ಸಿ.ಡಬ್ಲ್ಯು.ಆರ್.ಸಿ. ಶಿಫಾರಸ್ಸಿನಂತೆ ತಮಿಳುನಾಡಿಗೆ ನೀರು ಬಿಡುವುದಿಲ್ಲ ಎಂಬ ಸ್ಪಷ್ಟ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರಾಜ್ಯದ ಹಿತರಕ್ಷಣೆಯ ವಿಷಯದಲ್ಲಿ ರಾಜಕೀಯ ಭೇದ ಮರೆತು ಎಲ್ಲಾ ರಾಜಕೀಯ ಪಕ್ಷಗಳು, ರೈತ ಸಂಘಟನೆಗಳು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳು ಒಂದಾಗಿ ನಿಲ್ಲಬೇಕಾದ ಅಗತ್ಯವಿದೆ ಎಂದು ಅವರು ಹೇಳಿದರು.

ಸಂಕಷ್ಟದ ಪರಿಸ್ಥಿತಿಯಲ್ಲಿ ನೀರಿನ ಹಂಚಿಕೆ ಕುರಿತು ಕಾವೇರಿ ನ್ಯಾಯಮಂಡಳಿಯ ತೀರ್ಪಿನಲ್ಲಿ ಸ್ಪಷ್ಟ ಮಾರ್ಗಸೂಚಿಗಳ ಕೊರತೆ ಇರುವುದರಿಂದ, ಬರಗಾಲದಂತಹ ವಿಶೇಷ ಸಂದರ್ಭಗಳಿಗೆ ಅನ್ವಯಿಸುವ ಸ್ಪಷ್ಟ ಸೂತ್ರವನ್ನು ರೂಪಿಸಲು ರಾಜ್ಯದ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಒತ್ತಾಯಿಸಿದರು.

ಕಾವೇರಿ ಜಲಾನಯನ ಪ್ರದೇಶದಲ್ಲಿ ವರ್ಷದಿಂದ ವರ್ಷಕ್ಕೆ ನೀರಿನ ಉತ್ಪತ್ತಿ ಪ್ರಮಾಣ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ, ಪ್ರಸ್ತುತ ಪರಿಸ್ಥಿತಿಗೆ ಅನುಗುಣವಾಗಿ ಕಾವೇರಿ ನೀರು ಹಂಚಿಕೆ ತೀರ್ಪನ್ನು ಪುನರ್‌ಪರಿಶೀಲಿಸುವ ಅಗತ್ಯವಿದೆ ಎಂದು ಪ್ರತಿಭಟನಾಕಾರರು ಅಭಿಪ್ರಾಯಪಟ್ಟರು.

ರಾಜ್ಯ ಸರ್ಕಾರ ರೈತರ ಹಿತರಕ್ಷಣೆಯನ್ನು ಕಡೆಗಣಿಸಿ ತಮಿಳುನಾಡಿಗೆ ನೀರು ಹರಿಸುವ ನಿರ್ಧಾರ ಕೈಗೊಂಡಲ್ಲಿ ರಾಜ್ಯಾದ್ಯಂತ ತೀವ್ರ ಹೋರಾಟ ರೂಪಿಸಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಈ ವಿಶೇಷ ಸುದ್ದಿ ಓದಿದ್ದೀರಾ?ಮತದಾರರ ಪಟ್ಟಿ ಪರಿಷ್ಕರಣೆನಾ, ದಾಖಲೆಗಳ ಪರೀಕ್ಷೆಯಾ? -SIR ಮೇಲೇಳಿಸಿರುವ ಪ್ರಶ್ನೆಗಳು

ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಪ್ರಗತಿಪರ ಸಂಘಟನೆಯ ಉಗ್ರ ನರಸಿಂಹೇಗೌಡ, ಪ್ರಧಾನ ಕಾರ್ಯದರ್ಶಿ ಪಿ. ಮರಂಕಯ್ಯ, ಹುಣಸೂರು ತಾಲ್ಲೂಕು ಅಧ್ಯಕ್ಷ ಬೆಂಕಿಪುರ ಚಿಕ್ಕಣ್ಣ, ಗ್ರಾಮಾಂತರ ತಾಲ್ಲೂಕು ಅಧ್ಯಕ್ಷ ಆನಂದೂರು ಪ್ರಭಾಕರ್, ರಾಘವೇಂದ್ರ, ದಶರಥ, ಕೆ.ಆರ್.ನಗರ ತಾಲ್ಲೂಕು ಅಧ್ಯಕ್ಷ ಮಲ್ಲೇಶ್ ಸೇರಿದಂತೆ ಸಂಘಟನೆಗಳ ಪದಾಧಿಕಾರಿಗಳು ಹಾಗೂ ರೈತರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ | ಜುವೆಲರ್ಸ್ ಅಂಗಡಿಯಲ್ಲಿ 1.30 ಲಕ್ಷ ರೂ. ಮೌಲ್ಯದ ಬೆಳ್ಳಿ ಕಾಲು ಚೈನ್ ಕಳವು

ಮುಂಡಗೋಡ: ಪಟ್ಟಣದ ಶಿರಸಿ ರಸ್ತೆಯಲ್ಲಿರುವ ಶ್ರೀ ರಾಜಲಕ್ಷ್ಮೀ ಜುವೆಲರ್ಸ್ ಅಂಗಡಿಯಲ್ಲಿ ಸುಮಾರು...

ವಿಜಯಪುರ | ಡಾ. ಅಣ್ಣಾಭಾವು ಸಾಠೆ ಅವರಿಗೆ ‘ಭಾರತ ರತ್ನ’ ನೀಡಿ; ರಾಜ್ಯದಲ್ಲಿ ಜಯಂತಿ ಆಚರಿಸಿ

ಲೋಕಶಾಹಿರ ಡಾ. ಅಣ್ಣಾಭಾವು ಸಾಠೆ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ...

ರಾಯಚೂರು | ರಕ್ತನಿಧಿ ಕೇಂದ್ರ ಸ್ಥಾಪನೆ ಜೀವ ರಕ್ಷಣೆಯ ಮಹತ್ವದ ಕಾರ್ಯ: ಸಂಸದ ಜಿ.ಕುಮಾರ ನಾಯಕ

ರಕ್ತ ನಿಧಿ ಕೇಂದ್ರ ಬಹಳ ಅವಶ್ಯಕವಾಗಿದ್ದು ಇಂತಹ ಮಹತ್ವದ ಕಾರ್ಯಗಳು ಜನರ...

ರಾಯಚೂರು | ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಸಾಮೂಹಿಕ ವಿವಾಹಗಳು ಹೆಚ್ಚಾಗಲಿ: ಶಾಸಕಿ ಕರೆಮ್ಮ ಗೋಪಾಲಕೃಷ್ಣ

ರಾಜ್ಯದಲ್ಲಿ ಮಠಮಾನ್ಯಗಳ ಕೊಡುಗೆ ಅಪಾರವಾಗಿದ್ದು, ದುಂದು ವೆಚ್ಚಕ್ಕೆ ಕಡಿವಾಣ ಹಾಕಿ ಸಾಮೂಹಿಕ...