ಕಬ್ಬಿನ ದರ ಏರಿಕೆಗೆ ಆಗ್ರಹಿಸಿ ಬಣ್ಣಾರಿ ಸಕ್ಕರೆ ಕಾರ್ಖಾನೆಗೆ ರೈತರ ಮುತ್ತಿಗೆ; ಸಕ್ಕರೆ ಗೋದಾಮುಗಳಿಗೆ ಬೀಗ

Date:

ಕಬ್ಬಿನ ದರ ಏರಿಕೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾವಿರಾರು ಕಬ್ಬು ಬೆಳೆಗಾರ ರೈತರು ಬಣ್ಣಾರಿ ಸಕ್ಕರೆ ಕಾರ್ಖಾನೆಗೆ ಮುತ್ತಿಗೆ ಹಾಕಿ ತೀವ್ರ ಪ್ರತಿಭಟನೆ ನಡೆಸಿದರು. ಕಾರ್ಖಾನೆಯ ಸಕ್ಕರೆ ಗೋದಾಮುಗಳಿಗೆ ಬೀಗ ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.

- Advertisement -

ಪ್ರಸಕ್ತ ಸಾಲಿನ ಕಬ್ಬಿಗೆ ಪ್ರತಿ ಟನ್‌ಗೆ 4,500 ರೂ. ದರ ನೀಡಬೇಕು, ಕಳೆದ ಸಾಲಿನಲ್ಲಿ ರಾಜ್ಯ ಸರ್ಕಾರ ಘೋಷಿಸಿದ್ದ ಹೆಚ್ಚುವರಿ 50 ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಬೇಕು ಹಾಗೂ ಕಬ್ಬು ಕಟಾವಿನ ವಿಳಂಬ ಮತ್ತು ಕಟಾವು ಕೂಲಿ ಹೆಚ್ಚಳಕ್ಕೆ ಕಡಿವಾಣ ಹಾಕಬೇಕು ಎಂದು ರೈತರು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮಹಿಳಾ ಮೀಸಲಾತಿ ಮರೆಯಲ್ಲಿ ಕ್ಷೇತ್ರ ಮರುವಿಂಗಡಣೆ: ವಿರೋಧ ಪಕ್ಷಗಳ...

2023ರ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅನಗತ್ಯವಾಗಿ ಕ್ಷೇತ್ರ ಪುನರ್ವಿಂಗಡಣೆಯೊಂದಿಗೆ ತಳುಕು ಹಾಕಿರುವ ಮೋದಿ ಸರ್ಕಾರದ ನಡೆ, ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂಸದೀಯ ಇತಿಹಾಸದಲ್ಲಿಯೇ ಒಂದು ಅಪರೂಪದ ರಾಜಕೀಯ ಹಾಗೂ ಸಾಂವಿಧಾನಿಕ ಬಿಕ್ಕಟ್ಟನ್ನು ಸೃಷ್ಟಿಸಿದೆ....

ಖಾಸಗಿ ವೈದ್ಯರ ಎಡವಟ್ಟು; ಬಡ ಕುಟುಂಬದ ಆಧಾರ ಸ್ತಂಭ...

ಆತ ಕೂಲಿ‌ ಕೆಲಸ ಮಾಡಿಕೊಂಡು ಹಂಗೊ ಹೆಂಗೋ ಜೀವನ‌ ನಡೆಸಿಕೊಂಡು ಬಂದಿದ್ದ ಚಿರ ಯೌವ್ವನದ ಯುವಕ. ತನ್ನ ಮನೆ ಜವಾಬ್ದಾರಿಯನ್ನು ತನ್ನದೇ ಹೆಗಲ ಮೇಲೆರಿಸಿ ಕಷ್ಟಪಟ್ಟು ದುಡಿದು ತನ್ನ ಇಬ್ಬರು ಸಹೋದರಿಯರಿಗೆ ಮದುವೆಯನ್ನೂ...

ಭಾಷಣಗಳಲ್ಲಿ ಆಗಾಗ ಎಡವಟ್ಟು, ಸುಳ್ಳು-ಅತಿಶಯೋಕ್ತಿಯೇ ಮೇಲುಗೈ: ನವಭಾರತದ ‘ಪಪ್ಪು’...

ಒಂದು ಕಾಲದಲ್ಲಿ ರಾಹುಲ್ ಗಾಂಧಿ ಅವರನ್ನು ಅಪಹಾಸ್ಯ ಮಾಡಲು ಬಳಸುತ್ತಿದ್ದ 'ಪಪ್ಪು' ಎಂಬ ಪದವೇ ಇದೀಗ ಮೋದಿ ಅವರತ್ತ ತಿರುಗಿದೆ. 1987-88ರ ಡಿಜಿಟಲ್ ಕ್ಯಾಮೆರಾ-ಇಮೇಲ್ ಕಥೆಯಿಂದ ಹಿಡಿದು ಐತಿಹಾಸಿಕ ಪ್ರಮಾದಗಳವರೆಗೆ, ಮೋದಿ ಅವರ...

ಕಾರ್ಖಾನೆ ಎದುರು ಜಮಾಯಿಸಿದ ರೈತರು ಕಾರ್ಖಾನೆ ಆಡಳಿತ ಮಂಡಳಿ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ಆರಂಭಿಸಿದರು. ಈ ವೇಳೆ ಸ್ಥಳಕ್ಕೆ ಆಗಮಿಸಿದ ನಂಜನಗೂಡು ತಹಸೀಲ್ದಾರ್ ಹಾಗೂ ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕರು, ಡಿಸೆಂಬರ್ 1ರಂದು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ರೈತ ಮುಖಂಡರು ಹಾಗೂ ಕಾರ್ಖಾನೆ ಮಾಲೀಕರ ಸಭೆ ನಡೆಸಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.

ಬಳಿಕ ಪೊಲೀಸ್ ಭದ್ರತೆಯಲ್ಲಿ ಸ್ಥಳಕ್ಕೆ ಬಂದ ಕಾರ್ಖಾನೆಯ ಉಪಾಧ್ಯಕ್ಷ ವೇಲುಸ್ವಾಮಿ ಅವರು ರೈತರ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ಅವರನ್ನು ಸ್ಥಳದಲ್ಲೇ ಕೂರಿಸಿ ಪ್ರತಿಭಟನೆ ನಡೆಸಿದರು. ಪರಿಸ್ಥಿತಿ ಉದ್ವಿಗ್ನಗೊಳ್ಳುತ್ತಿದ್ದಂತೆ ಪೊಲೀಸ್ ಉಪಾಧೀಕ್ಷಕ ಧರ್ಮೇಂದ್ರ ಅವರು ರೈತ ಮುಖಂಡರೊಂದಿಗೆ ಮಾತುಕತೆ ನಡೆಸಿದರು.

ಸಂಜೆ 5 ಗಂಟೆ ಸುಮಾರಿಗೆ ಪ್ರತಿಭಟನಾಕಾರರು ಕಾರ್ಖಾನೆಯೊಳಗೆ ಪ್ರವೇಶಿಸಿ ಸಕ್ಕರೆ ಗೋದಾಮುಗಳಿಗೆ ಬೀಗಮುದ್ರೆ ಹಾಕಿದರು. ಸಮಸ್ಯೆ ಬಗೆಹರಿಯುವವರೆಗೂ ಸಕ್ಕರೆ ಮಾರಾಟ ಮಾಡಬಾರದು ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, 2012ರಲ್ಲಿ ಬಣ್ಣಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ಶೇ.11ರಷ್ಟು ಸಕ್ಕರೆ ಇಳುವರಿ ಬರುತ್ತಿತ್ತು. ಈಗ ಶೇ.9.1ರಷ್ಟು ಮಾತ್ರ ಬರುತ್ತಿದೆ ಎಂದು ತೋರಿಸಲಾಗುತ್ತಿದೆ. ಇದು ರೈತರಿಗೆ ಮಾಡುತ್ತಿರುವ ಅನ್ಯಾಯವಾಗಿದೆ ಎಂದು ಆರೋಪಿಸಿದರು.

ಈ ವಿಶೇಷ ವರದಿ ಓದಿದ್ದೀರಾ? ಬರಗಾಲ | ಮಳೆಯ ಕೊರತೆಗೆ ಬತ್ತಿದ ಕಾಡಿನ ಕೆರೆಗಳು: ನೀರಿಗಾಗಿ ಪರದಾಡುವ ವನ್ಯಜೀವಿಗಳು

ಗುಲ್ಬರ್ಗದಲ್ಲಿ ಶೇ.10ರಷ್ಟು ಇಳುವರಿ ಬರುವ ಕಬ್ಬಿಗೆ ಕಟಾವು ಮತ್ತು ಸಾಗಾಣಿಕೆ ವೆಚ್ಚ ಹೊರತುಪಡಿಸಿ ಪ್ರತಿ ಟನ್‌ಗೆ 3,600 ರೂ. ನೀಡಲು ಕಾರ್ಖಾನೆಗಳು ಒಪ್ಪಿವೆ. ಸತ್ಯಮಂಗಲದಲ್ಲಿರುವ ಇದೇ ಮಾಲೀಕತ್ವದ ಕಾರ್ಖಾನೆ ಟನ್‌ಗೆ 4,000 ರೂ. ನೀಡುತ್ತಿದೆ. ಆದರೆ, ಇಲ್ಲಿ ಮಾತ್ರ ಕಡಿಮೆ ದರ ನೀಡುತ್ತಿರುವುದೇಕೆ ಎಂದು ಪ್ರಶ್ನಿಸಿದರು. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಹೋರಾಟದಲ್ಲಿ ಪಾಲ್ಗೊಳ್ಳಬೇಕು ಎಂದು ಮನವಿ ಮಾಡಿದರು.

ಈ ತನಿಖಾ ವರದಿ ಓದಿದ್ದೀರಾ? ತನಿಖಾ ವರದಿ | ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರ ಬದಲಾವಣೆ ಸುತ್ತ ರಾಜಕೀಯ: ಆದೇಶವಿಲ್ಲದೆ ನೇಮಕದ ಸುದ್ದಿ ಹರಡಿದ್ದೇಕೆ?

ಕರ್ನಾಟಕ ರಾಜ್ಯ ರೈತ ಸಂಘದ ವಿಭಾಗೀಯ ಸಂಚಾಲಕರಾದ ಹೊಸಕೋಟೆ ಬಸವರಾಜ್ ಮಾತನಾಡಿ, 1990ರಲ್ಲಿ ಆರಂಭವಾದ ಕಾರ್ಖಾನೆ ಅಂದಿನಿಂದಲೂ ರೈತರಿಗೆ ನಿರಂತರ ಅನ್ಯಾಯ ಮಾಡುತ್ತಾ ಬಂದಿದೆ. ಕಾರ್ಖಾನೆಯ ಮಾಲೀಕರು ಇಂದು ಐದು ಕಾರ್ಖಾನೆಗಳ ಮಾಲೀಕರಾಗಿದ್ದರೂ ರೈತರ ಸಮಸ್ಯೆಗಳು ಮಾತ್ರ ಬಗೆಹರಿದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವಿಶೇಷ ಲೇಖನ ಓದಿದ್ದೀರಾ? ಆರ್‌ಟಿಇ ಶಿಕ್ಷಣ ಹಕ್ಕೋ, ಶಾಲೆಗಳಲ್ಲಿನ ಸಾಮಾಜಿಕ ಅಂತರಕ್ಕೆ ಕಾರಣವೋ?

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಬರಡನಪುರ ನಾಗರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ. ಮರಂಕಯ್ಯ ಸೇರಿದಂತೆ ಜಿಲ್ಲೆಯ ನೂರಾರು ಕಬ್ಬು ಬೆಳೆಗಾರ ರೈತರು ಹಾಗೂ ರೈತ ಸಂಘಟನೆಗಳ ಮುಖಂಡರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ಷರ ದಾಸೋಹ ನೌಕರರ ಉದ್ಯೋಗಕ್ಕೆ ಕುತ್ತು: ಕ್ಲಸ್ಟರ್ ಕಿಚನ್ ವಿರುದ್ಧ ರಾಜ್ಯಾದ್ಯಂತ ಹೋರಾಟ

ಸರಕಾರಿ ಶಾಲೆಗಳ ಬಿಸಿಯೂಟ ಯೋಜನೆಯನ್ನು ಖಾಸಗೀಕರಣಗೊಳಿಸಿ, ವರ್ಷಗಳಿಂದ ದುಡಿಯುತ್ತಿರುವ ಅಕ್ಷರ ದಾಸೋಹ...

ಕೊಪ್ಪಳ | ರೇಷನ್ ಕಾರ್ಡ್ ಅನುಮೋದನೆಗೆ ಹಣ ವಸೂಲಿ ಆರೋಪ: ತಹಶೀಲ್ದಾರ್ ಕಚೇರಿ ಸಿಬ್ಬಂದಿ ವಿರುದ್ಧ ಸಾರ್ವಜನಿಕರ ಆಕ್ರೋಶ

ರೇಷನ್ ಕಾರ್ಡ್ ಅನುಮೋದನೆ ಮಾಡಿಕೊಡುವ ನೆಪದಲ್ಲಿ ಸಾರ್ವಜನಿಕರಿಂದ ಹಣ ವಸೂಲಿ ಮಾಡಲಾಗುತ್ತಿದೆ...

ಮಂಗಳೂರು ವಿಮಾನ ನಿಲ್ದಾಣದಲ್ಲಿ ನ.27ರಂದು ಅಣಕು ಕಾರ್ಯಾಚರಣೆ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ನವೆಂಬರ್ 27 ರಂದು ತನ್ನ ಮೊದಲ...