ದೆಹಲಿ ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್ ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಮಾನವ ಸರಪಳಿ-ಪ್ರತಿಭಟನೆ

Date:

ದೆಹಲಿಯ ಜಂತರ್ ಮಂತರ್‌ನಲ್ಲಿ ತಮ್ಮ ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿರುವುದನ್ನು ಖಂಡಿಸಿ, ಮೈಸೂರು ವಿಶ್ವವಿದ್ಯಾನಿಲಯದ ಟವರ್ ಕ್ಲಾಕ್ ಆವರಣದಲ್ಲಿ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು ಹಾಗೂ ವಿವಿಧ ಪ್ರಜಾಪ್ರಭುತ್ವ ಪರ ಸಂಘಟನೆಗಳ ಸದಸ್ಯರು ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಿದರು.

- Advertisement -

ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರು ಕೈಜೋಡಿಸಿ ಮಾನವ ಸರಪಳಿ ನಿರ್ಮಿಸುವ ಮೂಲಕ ವಿದ್ಯಾರ್ಥಿ ಹೋರಾಟಕ್ಕೆ ಐಕ್ಯತೆ ವ್ಯಕ್ತಪಡಿಸಿದರು. ದೇಶದಲ್ಲಿ ಪ್ರತಿಯೊಬ್ಬ ನಾಗರಿಕನಿಗೂ ಹಾಗೂ ವಿದ್ಯಾರ್ಥಿಗಳಿಗೂ ಶಾಂತಿಯುತವಾಗಿ ಪ್ರತಿಭಟನೆ ನಡೆಸುವ ಮತ್ತು ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುವ ಸಂವಿಧಾನಬದ್ಧ ಹಕ್ಕು ಇದೆ. ಇಂತಹ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಬಲಪ್ರಯೋಗದ ಮೂಲಕ ಹತ್ತಿಕ್ಕುವ ಪ್ರಯತ್ನ ಯಾವುದೇ ಕಾರಣಕ್ಕೂ ಸಮರ್ಥನೀಯವಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೀಸಲಾತಿ ಹೆಚ್ಚಳ ಮತ್ತು ನ್ಯಾಯಾಂಗದ ಮಿತಿ: ಸಾಮಾಜಿಕ ನ್ಯಾಯಕ್ಕೆ...

ಮೀಸಲಾತಿ ಬಯಸುವ ಜಾತಿಗಳೆಲ್ಲವೂ ಕೂಡ ವರ್ತಮಾನದ ಸಾಮಾಜಿಕ ಪರಿಸ್ಥಿತಿ ಮತ್ತು ಕಾನೂನು ನಿಯಮಗಳನ್ನು ಸಾಮಾಜಿಕ ನ್ಯಾಯದ ಬೆಳಕಿನಲ್ಲಿ ಅಂತಃಕರಣ ಪೂರ್ವಕವಾಗಿ ಅರ್ಥ ಮಾಡಿಕೊಳ್ಳಬೇಕಾಗಿದೆ. ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯೋನ್ಮುಖವಾದಾಗ ಮಾತ್ರ ಸಾಮಾಜಿಕ ನ್ಯಾಯವೆಂಬ...

ರಾಮಲೀಲೆಗಳಲ್ಲಿ ರಾಮ, ಹನುಮ, ಲಕ್ಷ್ಮಣ ಪಾತ್ರಗಳಲ್ಲಿ ದಾನಿಶ್ –...

ರಾಮನಾಗಿ ದಾನಿಶ್. ಹನುಮಂತನಾಗಿ ಯೂನುಸ್. ಲಕ್ಷ್ಮಣನಾಗಿ ಶೇರ್ ಖಾನ್. ರಾವಣನಾಗಿ ಇಕ್ಬಾಲ್ ಅಹ್ಮದ್. ಇವರೆಲ್ಲರೂ ಮುಸ್ಲಿಂ ಕಲಾವಿದರು. ಆದರೆ, ಇವರು ಅಭಿನಯಿಸಿರುವುದು ಹಿಂದುಗಳ ಮಹಾಕಾವ್ಯ ರಾಮಾಯಣದ ಪಾತ್ರಗಳಲ್ಲಿ. ಉತ್ತರ ಭಾರತದ ಹಲವು ರಾಮಲೀಲೆಗಳಲ್ಲಿ...

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ದೆಹಲಿಯಲ್ಲಿ ವಿದ್ಯಾರ್ಥಿಗಳು ತಮ್ಮ ನ್ಯಾಯಸಮ್ಮತ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶಾಂತಿಯುತವಾಗಿ ಹೋರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಅವರ ಮೇಲೆ ಲಾಠಿಚಾರ್ಜ್ ನಡೆಸಿರುವುದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಪ್ರತಿಭಟನಾಕಾರರು ಅಭಿಪ್ರಾಯಪಟ್ಟರು. ಭಿನ್ನಾಭಿಪ್ರಾಯಗಳನ್ನು ಸಂವಾದದ ಮೂಲಕ ಬಗೆಹರಿಸುವ ಬದಲು ಬಲಪ್ರಯೋಗಕ್ಕೆ ಮುಂದಾಗಿರುವ ಕ್ರಮವು ವಿದ್ಯಾರ್ಥಿ ಸಮುದಾಯದಲ್ಲಿ ಆತಂಕ ಮೂಡಿಸಿದೆ ಎಂದು ಅವರು ಹೇಳಿದರು.

ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕುವ ಬದಲು ಅವರ ಸಮಸ್ಯೆಗಳನ್ನು ಆಲಿಸಿ, ನ್ಯಾಯಯುತವಾಗಿ ಪರಿಹರಿಸಬೇಕು. ದೇಶದಾದ್ಯಂತ ವಿದ್ಯಾರ್ಥಿ ಚಳವಳಿಗಳು ಪ್ರಜಾಸತ್ತಾತ್ಮಕ ವ್ಯವಸ್ಥೆಯ ಭಾಗವಾಗಿದ್ದು, ಅವುಗಳನ್ನು ದಮನಿಸುವ ಯಾವುದೇ ಕ್ರಮವನ್ನು ಸಹಿಸಲಾಗುವುದಿಲ್ಲ ಎಂದು ಪ್ರತಿಭಟನೆಯಲ್ಲಿ ಪಾಲ್ಗೊಂಡವರು ಒತ್ತಾಯಿಸಿದರು.

ಈ ವಿಶೇಷ ಸುದ್ದಿ ಓದಿದ್ದೀರಾ?ಮಳೆ ಕೈಕೊಟ್ಟರೂ ತಂಬಾಕು ಕೈಬಿಡಲಿಲ್ಲ: ಮೈಸೂರು ಜಿಲ್ಲೆಯಲ್ಲಿ ಬರದ ನಡುವೆಯೂ ಮುಂದುವರಿದ ತಂಬಾಕು ಕೃಷಿ

ಈ ಪ್ರತಿಭಟನೆಯ ಮೂಲಕ ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ನೈತಿಕ ಬೆಂಬಲ ಹಾಗೂ ಐಕ್ಯತೆ ಸೂಚಿಸಲಾಯಿತು. ವಿದ್ಯಾರ್ಥಿಗಳ ಮೇಲಿನ ಲಾಠಿಚಾರ್ಜ್‌ಗೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಹಾಗೂ ಪ್ರತಿಭಟನಾಕಾರರ ನ್ಯಾಯಸಮ್ಮತ ಬೇಡಿಕೆಗಳ ಕುರಿತು ಸರ್ಕಾರ ತಕ್ಷಣ ಸಂವಾದ ನಡೆಸಿ ಪರಿಹಾರ ಕಂಡುಕೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಈ ವಿಶೇಷ ಸುದ್ದಿ ಓದಿದ್ದೀರಾ?ಕೊಡಗಿನಲ್ಲಿ ಪಡಿತರಕ್ಕೆ ಜಾತಿ ಪ್ರಮಾಣ ಪತ್ರ ಮ್ಯಾಪಿಂಗ್: ಬಡವರ ಬದುಕಿಗೆ ಹೊಸ ಸಂಕಷ್ಟವೇ?

ಪ್ರತಿಭಟನೆಯಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ವಿವಿಧ ವಿದ್ಯಾರ್ಥಿ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಪ್ರಜಾಪ್ರಭುತ್ವ ಪರ ಸಂಘಟನೆಗಳ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿ, ವಿದ್ಯಾರ್ಥಿ ಹಕ್ಕುಗಳ ರಕ್ಷಣೆಗೆ ಒಗ್ಗಟ್ಟಿನ ಸಂದೇಶ ಸಾರಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಉಚ್ಚಿಲ ದಸರಾ ಶೋಭಾಯಾತ್ರೆ: ಅ. 21ರಂದು ವಾಹನ ಸಂಚಾರಕ್ಕೆ ಬದಲಿ ಮಾರ್ಗ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ಉಡುಪಿ-ಉಚ್ಚಿಲ ದಸರಾ 2026ರ ಅಂಗವಾಗಿ...

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...