ಮೈಸೂರು | ಮಾಧ್ಯಮದ ವಿಶ್ವಾಸಾರ್ಹತೆ ಉಳಿಸುವುದು ಪತ್ರಕರ್ತರ ಹೊಣೆ: ಯತೀಂದ್ರ ಸಿದ್ದರಾಮಯ್ಯ

Date:

ದೇಶದಲ್ಲಿ ಮಾಧ್ಯಮದ ವಿಶ್ವಾಸಾರ್ಹತೆ ಕುರಿತು ಪ್ರಶ್ನೆಗಳು ಮೂಡುತ್ತಿದ್ದು, ಜನರ ವಿಶ್ವಾಸ ಗಳಿಸುವುದು ಮಾಧ್ಯಮದ ಮುಂದಿರುವ ದೊಡ್ಡ ಸವಾಲಾಗಿದೆ. ವಿಶ್ವಾಸ ಗಳಿಸುವುದು ಅಥವಾ ಕಳೆದುಕೊಳ್ಳುವುದು ಪತ್ರಕರ್ತರ ಕೈಯಲ್ಲಿದೆ ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹೇಳಿದರು.

- Advertisement -

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ನಗರದ ಕೆಎನ್‌ಎಸ್ ಬಡಾವಣೆ ಆವರಣದಲ್ಲಿ ಶನಿವಾರ ಆಯೋಜಿಸಿದ್ದ ಸಮಾರಂಭದಲ್ಲಿ ಪತ್ರಕರ್ತರ ಭವನದ ಕಟ್ಟಡ ಕಾಮಗಾರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿ ಶುಭ ಹಾರೈಸಿದರು. ಬಳಿಕ ನಡೆದ ಕಾರ್ಯಕ್ರಮದಲ್ಲಿ ಪತ್ರಿಕಾ ದಿನಾಚರಣೆ, ಹಿರಿಯ ಪತ್ರಕರ್ತರ ಅಭಿನಂದನೆ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಉದ್ಘಾಟಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಬಳಿಕ ಮಾತನಾಡಿದ ಅವರು, ಇತ್ತೀಚೆಗೆ ದೆಹಲಿಯಲ್ಲಿ ಜೆನ್‌ಜೀಗಳು ನಡೆಸಿದ ಹೋರಾಟದ ಸಂದರ್ಭದಲ್ಲಿ ಪ್ರಮುಖ ಮಾಧ್ಯಮಗಳ ವರ್ತನೆಯಿಂದಾಗಿ ಜನಸಾಮಾನ್ಯರು ಪತ್ರಕರ್ತರ ಮೇಲಿನ ವಿಶ್ವಾಸ ಕಳೆದುಕೊಂಡಿದ್ದಾರೆ. ಆದರೆ ಪತ್ರಕರ್ತರು ವಸ್ತುನಿಷ್ಠ ಹಾಗೂ ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುವ ಮೂಲಕ ಆ ವಿಶ್ವಾಸವನ್ನು ಮತ್ತೆ ಗಳಿಸಬಹುದು ಎಂದರು.

ಅನ್ಯಾಯದ ವಿರುದ್ಧ ಹಾಗೂ ಜನಪರ ವಿಚಾರಗಳ ಪರವಾಗಿ ಪತ್ರಕರ್ತರು ನಿಂತು ಕೆಲಸ ಮಾಡಬೇಕು. ವಸ್ತುನಿಷ್ಠ ವರದಿಗಾರಿಕೆಯ ಮೂಲಕ ಮಾಧ್ಯಮ ಜನರ ವಿಶ್ವಾಸ ಮತ್ತು ಗೌರವವನ್ನು ಮರಳಿ ಪಡೆಯಬೇಕಿದೆ. ಪ್ರಜಾಪ್ರಭುತ್ವದ ಆಶಯಗಳನ್ನು ಬಲಪಡಿಸುವಲ್ಲಿ ಪತ್ರಕರ್ತರ ಪಾತ್ರ ಮಹತ್ವದ್ದಾಗಿದೆ ಎಂದು ಹೇಳಿದರು.

ಪತ್ರಕರ್ತರ ವೃತ್ತಿ ಸುಲಭವಾದದ್ದಲ್ಲ. ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿರುವ ಮಾಧ್ಯಮಗಳ ಜವಾಬ್ದಾರಿ ಅತ್ಯಂತ ಮಹತ್ವದ್ದಾಗಿದೆ. ಹೀಗಾಗಿ ಪತ್ರಕರ್ತರು ತಮ್ಮ ವೃತ್ತಿಯನ್ನು ಕೇವಲ ಉದ್ಯೋಗವೆಂದು ಪರಿಗಣಿಸದೆ ಸಾಮಾಜಿಕ ಹೊಣೆಗಾರಿಕೆಯಾಗಿ ನಿರ್ವಹಿಸಬೇಕು ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದರು.

ವರದಿಗಾರರು ಸ್ಥಳಕ್ಕೆ ತೆರಳಿ ವರದಿ ಮಾಡುವ ಸಂದರ್ಭದಲ್ಲಿ ಹಲವು ಸವಾಲುಗಳನ್ನು ಎದುರಿಸುತ್ತಾರೆ. ಅವುಗಳನ್ನು ಮೆಟ್ಟಿನಿಂತು ಸಮಾಜಕ್ಕೆ ಕೊಡುಗೆ ನೀಡುವ ಉದ್ದೇಶದಿಂದ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರ ಸೇವೆ ಶ್ಲಾಘನೀಯ. ಪತ್ರಕರ್ತರ ಸೇವೆಗೆ ಸಮಾಜ ಗೌರವ ಸಲ್ಲಿಸಬೇಕು ಎಂದರು.

ಪತ್ರಕರ್ತರ ಭವನ ನಿರ್ಮಾಣಕ್ಕೆ ಅನುದಾನ ಮಂಜೂರಾಗಿದ್ದರೂ ಹಣ ಬಿಡುಗಡೆ ಸ್ವಲ್ಪ ವಿಳಂಬವಾಗಿತ್ತು. ಸಂಘದ ಅಧ್ಯಕ್ಷ ಕೆ. ದೀಪಕ್ ಅವರು ಅನುದಾನ ಬಿಡುಗಡೆಗೆ ನಡೆಸಿದ ಪ್ರಯತ್ನದ ಫಲವಾಗಿ ಇದೀಗ ಕಾಮಗಾರಿಗೆ ಚಾಲನೆ ದೊರೆತಿದೆ. ಮೂರು ಕೋಟಿ ರೂ.ಗೂ ಹೆಚ್ಚಿನ ವೆಚ್ಚದಲ್ಲಿ ಪತ್ರಕರ್ತರ ಭವನ ನಿರ್ಮಾಣವಾಗುತ್ತಿದ್ದು, ಕಾಮಗಾರಿ ಶೀಘ್ರ ಪೂರ್ಣಗೊಂಡು ಜಿಲ್ಲೆಯ ಎಲ್ಲ ಪತ್ರಕರ್ತರಿಗೆ ಸದುಪಯೋಗವಾಗಲಿ ಎಂದು ಹಾರೈಸಿದರು.

ಶಾಸಕ ಜಿ.ಟಿ. ದೇವೇಗೌಡ ಮಾತನಾಡಿ, ಮೈಸೂರು ಪತ್ರಕರ್ತರಿಗೆ ದೇಶ ಹಾಗೂ ರಾಜ್ಯದ ಪತ್ರಿಕಾ ಇತಿಹಾಸದಲ್ಲಿ ವಿಶಿಷ್ಟ ಸ್ಥಾನವಿದೆ. ಮೈಸೂರಿನ ಪತ್ರಿಕಾ ರಂಗದ ಬೆಳವಣಿಗೆಯಲ್ಲಿ ರಾಜಶೇಖರ ಕೋಟಿ ಹಾಗೂ ಕೆ.ಬಿ. ಗಣಪತಿ ಅವರಂತಹ ಹಿರಿಯ ಪತ್ರಕರ್ತರ ಪರಿಶ್ರಮ ಮಹತ್ವದ್ದಾಗಿದೆ ಎಂದರು.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘ 62 ವರ್ಷಗಳ ಇತಿಹಾಸ ಹೊಂದಿದ್ದು, ಸಂಘದ ಮೂಲಕ ಹಿರಿಯ ಪತ್ರಕರ್ತರು ಪತ್ರಿಕಾ ಕ್ಷೇತ್ರಕ್ಕೆ ಹಲವು ಮಹತ್ವದ ಕೊಡುಗೆ ನೀಡಿದ್ದಾರೆ. ಮಹಾತ್ಮ ಗಾಂಧೀಜಿಯವರೂ ಪತ್ರಿಕಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದರು. ಹಲವು ಕಷ್ಟಗಳ ನಡುವೆಯೂ ಪತ್ರಕರ್ತರು ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದರು.

ಪತ್ರಕರ್ತರು ಸತ್ಯದ ಮಾರ್ಗದಲ್ಲಿ ನಡೆದು, ಅಸತ್ಯಕ್ಕೆ ಅವಕಾಶ ನೀಡದೆ ಸಮಾಜಕ್ಕೆ ಮಾರ್ಗದರ್ಶನ ನೀಡಬೇಕು. ಶಿಕ್ಷಣ, ಮಹಿಳೆಯರು, ಬಡವರು, ರೈತರು, ದೀನ-ದಲಿತರು ಸೇರಿದಂತೆ ಸಮಾಜದ ಎಲ್ಲ ವರ್ಗಗಳ ಸಮಸ್ಯೆಗಳಿಗೆ ಧ್ವನಿಯಾಗಬೇಕು ಎಂದು ಕರೆ ನೀಡಿದರು.

ಈ ವಿಶೇಷ ಸುದ್ದಿ ಓದಿದ್ದೀರಾ?ಮಂಡ್ಯದ ನ್ಯೂ ತಮಿಳು ಕಾಲೊನಿಯಲ್ಲಿ ‘SIR’ ಗೊಂದಲ: 207 ಮತದಾರರು ಎಲ್ಲಿ ಹೋದರು?

ಕಾರ್ಯಕ್ರಮದಲ್ಲಿ ಶಾಸಕರಾದ ತನ್ವೀರ್ ಸೇಠ್, ಟಿ.ಎಸ್. ಶ್ರೀವತ್ಸ, ಡಿ. ರವಿಶಂಕರ್, ದರ್ಶನ್ ಧ್ರುವನಾರಾಯಣ್, ವಿಧಾನ ಪರಿಷತ್ ಸದಸ್ಯರಾದ ಡಾ. ಡಿ. ತಿಮ್ಮಯ್ಯ, ಕೆ. ವಿವೇಕಾನಂದ, ಮಾಜಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಜಿಎಸ್‌ಎಸ್ ಸಮೂಹ ಸಂಸ್ಥೆಗಳ ಮುಖ್ಯಸ್ಥ ಶ್ರೀಹರಿ ದ್ವಾರಕನಾಥ್, ಪತ್ರಕರ್ತರ ಸಂಘದ ಅಧ್ಯಕ್ಷ ಕೆ. ದೀಪಕ್, ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ್ ಸೇರಿದಂತೆ ಹಿರಿಯ ಪತ್ರಕರ್ತರು, ಸಂಘದ ಪದಾಧಿಕಾರಿಗಳು ಹಾಗೂ ಪತ್ರಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ ಎಸಿಪಿ ವಿವೇಕ್ ಭಗತ್ FIR!

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...