ಸ್ವಚ್ಛ ಮೈಸೂರು ನಿರ್ಮಾಣಕ್ಕೆ ನ್ಯಾಯಾಂಗ-ಪಾಲಿಕೆ ಸಾಥ್

Date:

ಮೈಸೂರು ನಗರವನ್ನು ಸ್ವಚ್ಛ, ಸುಂದರ ಹಾಗೂ ಆರೋಗ್ಯಕರವಾಗಿಸುವ ಉದ್ದೇಶದಿಂದ ನ್ಯಾಯಾಂಗ ಇಲಾಖೆ ಮತ್ತು ಮೈಸೂರು ಮಹಾನಗರ ಪಾಲಿಕೆಯ ಸಂಯುಕ್ತ ಆಶ್ರಯದಲ್ಲಿ ‘ಸ್ವಚ್ಛತಾ ಹಿ ಸೇವಾ’ ಅಭಿಯಾನದ ಅಂಗವಾಗಿ ನಗರದ ಹಳೆಯ ನ್ಯಾಯಾಲಯ ಸಂಕೀರ್ಣ ಹಾಗೂ ಜಯನಗರದ ಮಳಲವಾಡಿಯಲ್ಲಿರುವ ಹೊಸ ನ್ಯಾಯಾಲಯ ಸಂಕೀರ್ಣದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಯಿತು.

- Advertisement -

ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಬಿ. ಜಯಂತ ಕುಮಾರ್ ಅವರ ನೇತೃತ್ವದಲ್ಲಿ ನಡೆದ ಅಭಿಯಾನದಲ್ಲಿ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾದ ಸವಿತಾ ಎಂ.ಕೆ. ಸೇರಿದಂತೆ ಜಿಲ್ಲಾ ನ್ಯಾಯಾಧೀಶರು, ಹಿರಿಯ ಸಿವಿಲ್ ನ್ಯಾಯಾಧೀಶರು, ಸಿವಿಲ್ ನ್ಯಾಯಾಧೀಶರು, ನ್ಯಾಯಾಂಗ ಅಧಿಕಾರಿಗಳು, ವಕೀಲರು, ಪಾಲಿಕೆ ಅಧಿಕಾರಿಗಳು ಹಾಗೂ ಪೌರಕಾರ್ಮಿಕರು ಸಕ್ರಿಯವಾಗಿ ಪಾಲ್ಗೊಂಡರು. ಕಾರ್ಯಕ್ರಮದಲ್ಲಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಬಿ. ಜಯಂತ ಕುಮಾರ್ ಅವರು ಮೈಸೂರು ಮಹಾನಗರ ಪಾಲಿಕೆಯ ನೂತನ ‘ಸ್ವಚ್ಛತಾ ಲಾಂಛನ’ವನ್ನು ಅನಾವರಣಗೊಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ವಿಶೇಷ ವೀಡಿಯೊ ವೀಕ್ಷಿಸಿ: https://youtu.be/LjQ1qNssx5g?si=y5cdupVPajc7Fdi-

‘ಸ್ವಚ್ಛ ಮೈಸೂರು-ನಮ್ಮ ಹೆಮ್ಮೆ, ನಮ್ಮ ಆದ್ಯತೆ’ ಎಂಬ ಸಂದೇಶದೊಂದಿಗೆ ರೂಪಿಸಿರುವ ಈ ಲಾಂಛನವು ನಗರದ ಸ್ವಚ್ಛತಾ ಕಾರ್ಯಗಳಿಗೆ ವಿಶಿಷ್ಟ ಗುರುತು ನೀಡುವುದರ ಜತೆಗೆ ಸಾರ್ವಜನಿಕರಲ್ಲಿ ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸುವ ಉದ್ದೇಶ ಹೊಂದಿದೆ. ನಗರದ ಸ್ವಚ್ಛತೆಯನ್ನು ಕಾಪಾಡುವುದು ಕೇವಲ ಆಡಳಿತ ವ್ಯವಸ್ಥೆಯ ಜವಾಬ್ದಾರಿಯಲ್ಲ; ಪ್ರತಿಯೊಬ್ಬ ನಾಗರಿಕರೂ ಇದರಲ್ಲಿ ಕೈಜೋಡಿಸಬೇಕು ಎಂಬ ಸಂದೇಶವನ್ನು ಸಾರಲಾಯಿತು.

ಈ ವಿಶೇಷ ಸುದ್ದಿ ಓದಿದ್ದೀರಾ? ಮೈಸೂರು | ಬರದ ನಾಡಿನಲ್ಲಿ ದಸರಾ ಸಂಭ್ರಮ! ಕಂಬಳ ಮುಖ್ಯವೋ, ಅನ್ನದಾತನ ಬದುಕೋ?

ಮೈಸೂರು ವಕೀಲರ ಸಂಘದ ಅಧ್ಯಕ್ಷ ಎಸ್. ಲೋಕೇಶ್, ಕಾರ್ಯದರ್ಶಿ ಎ.ಜಿ. ಸುಧೀರ್, ಸಂಘದ ಸದಸ್ಯರು, ನ್ಯಾಯಾಲಯದ ಮುಖ್ಯ ಆಡಳಿತಾಧಿಕಾರಿಗಳು, ನ್ಯಾಯಾಲಯ ವ್ಯವಸ್ಥಾಪಕರು, ಶಿರಸ್ತೇದಾರರು, ಅಟೆಂಡರ್‌ಗಳು, ಸ್ವಚ್ಛತಾ ಸಿಬ್ಬಂದಿ, ಮಹಾನಗರ ಪಾಲಿಕೆಯ ವಲಯ ಕಚೇರಿ 2 ಮತ್ತು 3ರ ಸಹಾಯಕ ಆಯುಕ್ತರು, ಕಾರ್ಯಪಾಲಕ ಅಭಿಯಂತರರು, ಅಭಿವೃದ್ಧಿ ಅಧಿಕಾರಿಗಳು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಪರಿಸರ ಅಭಿಯಂತರರು, ಆರೋಗ್ಯ ನಿರೀಕ್ಷಕರು, ಮೇಲ್ವಿಚಾರಕರು ಹಾಗೂ ಪೌರಕಾರ್ಮಿಕರು ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಂಡರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಪುಸ್ತಕವನ್ನು ಪರಿಚಯಿಸುವ ಸಾಮರ್ಥ್ಯ ಗ್ರಂಥಪಾಲಕರಿಗೆ ಇದೆ: ಡಾ. ರಾಘವೇಂದ್ರ ಪತ್ತೇಪುರ

"ನಾನು ಓದುವ ಕಾಲದಲ್ಲಿ ಗ್ರಂಥಾಲಯದಲ್ಲಿ ಓದುವಾಗ,  ಸಂಶೋದನೆಗೆ ಸಂಬಂಧಿಸಿ ಪುಸ್ತಕಗಳು ಕಡಿಮೆ...

ಮೈಸೂರು | ಬರದ ನಾಡಿನಲ್ಲಿ ದಸರಾ ಸಂಭ್ರಮ! ಕಂಬಳ ಮುಖ್ಯವೋ, ಅನ್ನದಾತನ ಬದುಕೋ?

ಎರಡು ದಿನದ ಕ್ರೀಡೆಗೆ ಕೋಟ್ಯಂತರ ರೂಪಾಯಿ; ಅನ್ನದಾತನಿಗೆ ಅಲ್ಪ ಪರಿಹಾರ! ದಸರಾ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ ಕೆಫೆ’: 44 ಲಕ್ಷ ರೂ. ವಹಿವಾಟು!

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ...

ಕಲಬುರಗಿ | ಬೆಂಬಲ ಬೆಲೆಯಲ್ಲಿ ಹೆಸರು ಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ: ಡಿ.19ರವರೆಗೆ ನೋಂದಣಿ

2026-27ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ಮುಂಗಾರು ಹಂಗಾಮಿನ...