ಕಬಿನಿ-ತಾರಕ-ವರುಣಾ ಅಚ್ಚುಕಟ್ಟುಗಳಿಗೆ ನೀರು ಬಿಡಲು ಆಗ್ರಹಿಸಿ ಆ.24ರಂದು ಕಾಡಾ ಕಚೇರಿ ಮುತ್ತಿಗೆ

Date:

ಬರದ ನಡುವೆಯೂ ಕಬಿನಿ ಜಲಾಶಯ ಭರ್ತಿಯಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಜಲಾಶಯದಿಂದ ಕೆರೆಕಟ್ಟೆಗಳನ್ನು ತುಂಬಿಸಲು ನೀರು ಹರಿಸುತ್ತಿರುವುದು ಸ್ವಾಗತಾರ್ಹವಾದರೂ, ಅಚ್ಚುಕಟ್ಟು ಪ್ರದೇಶಗಳಿಗೆ ನೀರು ಬಿಡುವ ಕುರಿತು ಇದುವರೆಗೂ ಯಾವುದೇ ತೀರ್ಮಾನ ಕೈಗೊಳ್ಳದಿರುವುದು ರೈತರಲ್ಲಿ ಗೊಂದಲ ಮೂಡಿಸಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಹೇಳಿದರು.

- Advertisement -

ಮೈಸೂರಿನ ಜಲದರ್ಶಿನಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಬಿನಿ ಜಲಾಶಯದ ಒಳಹರಿವು ತೃಪ್ತಿಕರವಾಗಿದ್ದು, ಜಲಾಶಯದ ಎಲ್ಲಾ ಅಚ್ಚುಕಟ್ಟು ಪ್ರದೇಶಗಳಿಗೆ ನೀರು ಹರಿಸಬೇಕು. ತಾರಕ ಜಲಾಶಯಕ್ಕೆ ನೀರು ತುಂಬಿಸಿ ಅಲ್ಲಿನ ಅಚ್ಚುಕಟ್ಟು ಪ್ರದೇಶಕ್ಕೂ ನೀರು ಬಿಡಬೇಕು. ವರುಣಾ, ಕಾವೇರಿ ಹಾಗೂ ಕಬಿನಿ ಅಚ್ಚುಕಟ್ಟು ಪ್ರದೇಶಗಳಿಗೂ ಸಂಪೂರ್ಣವಾಗಿ ನೀರು ಹರಿಸಬೇಕು ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಈ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಆಗಸ್ಟ್ 24ರಂದು ಸೋಮವಾರ ಬೆಳಗ್ಗೆ 11 ಗಂಟೆಗೆ ಮೈಸೂರಿನ ಕಾಡಾ ಕಚೇರಿಗೆ ಮುತ್ತಿಗೆ ಹಾಕಲಾಗುವುದು. ಕಬಿನಿ, ತಾರಕ, ವರುಣಾ ಹಾಗೂ ಕಾವೇರಿ ಅಚ್ಚುಕಟ್ಟು ಪ್ರದೇಶಗಳ ರೈತರು ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿ ಹೋರಾಟವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.

ಪ್ರತಿಭಟನೆಯಲ್ಲಿ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ, ಕಾರ್ಯಾಧ್ಯಕ್ಷ ಎ.ಎಂ. ಮಹೇಶ್ ಪ್ರಭು, ರಾಜ್ಯ ಉಪಾಧ್ಯಕ್ಷ ಎ.ಎಲ್. ಕೆಂಪೂಗೌಡ, ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ನೇತ್ರಾವತಿ ಸೇರಿದಂತೆ ಹಲವು ಮುಖಂಡರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಈ ವಿಶೇಷ ಸುದ್ದಿ ಓದಿದ್ದೀರಾ?SIR: 1.08 ಕೋಟಿ ಮತದಾರರಿಗೆ QR ಕೋಡ್ ನೋಟಿಸ್; ಹೆಸರು ಉಳಿಸಿಕೊಳ್ಳಲು ದಾಖಲೆ ಪರಿಶೀಲನೆ ನಿರ್ಣಾಯಕ

ಪತ್ರಿಕಾಗೋಷ್ಠಿಯಲ್ಲಿ ವಿಭಾಗೀಯ ಸಂಘಟನಾ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ. ಮರಂಕಯ್ಯ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸೋಗಳ್ಳಿ ಪುಟ್ಟಣ್ಣಯ್ಯ, ನಂಜನಗೂಡು ತಾಲ್ಲೂಕು ಅಧ್ಯಕ್ಷ ಮಹೇಶ್, ಟಿ. ನರಸೀಪುರ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಬೂದಳ್ಳಿ ಶಂಕರ್, ಹೆಚ್.ಡಿ. ಕೋಟೆ ತಾಲ್ಲೂಕು ಕಾರ್ಯಾಧ್ಯಕ್ಷ ಚಾಮಳ್ಳಿ ಮಹದೇವು, ಟಿ. ನರಸೀಪುರ ತಾಲ್ಲೂಕು ಸಂಘಟನಾ ಕಾರ್ಯದರ್ಶಿ ಎಸ್. ಶಾಂತಮೂರ್ತಿ ಕೊತ್ತೆಗಾಲ, ಮಹೇಂದ್ರ ಬಸವಟ್ಟಿಗೆ, ಶಿವಣ್ಣ, ಮಹೇಶ್, ಬಸಪ್ಪ ಮಾದಯ್ಯನ ಹುಂಡಿ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

ಹಾಸನ | ತಡೆಗೋಡೆ ಕಾಮಗಾರಿ ವೇಳೆ ಭೂಕುಸಿತ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮದ ಬಳಿ ತಡೆಗೋಡೆ ಕಾಮಗಾರಿ...

ಯಾದಗಿರಿ | ಮಾಜಿ ತಾ.ಪಂ ಸದಸ್ಯನ ಮೇಲೆ ಹಲ್ಲೆ ಆರೋಪ; ಆರು ಮಂದಿ ವಿರುದ್ಧ ಪ್ರಕರಣ ದಾಖಲು

ಸಾಲದ ಬಡ್ಡಿ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಶಹಾಪುರ ತಾಲ್ಲೂಕು ಪಂಚಾಯಿತಿ ಮಾಜಿ...