ಕನ್ನಡಿಗರ ಹಿತಾಸಕ್ತಿಯೊಂದಿಗೆ ಸಮಾಜಮುಖಿ ಕಾರ್ಯಗಳಲ್ಲೂ ಕನ್ನಡಾಂಬೆ ರಕ್ಷಣಾ ವೇದಿಕೆ ಮಾದರಿ: ಜಿ.ಟಿ.ದೇವೇಗೌಡ

Date:

ಕನ್ನಡ ನಾಡು, ನುಡಿ, ಜಲ, ಭಾಷೆ ಹಾಗೂ ಕನ್ನಡಿಗರ ಹಿತಾಸಕ್ತಿಗಾಗಿ ನಿರಂತರವಾಗಿ ಶ್ರಮಿಸುತ್ತಿರುವ ಕನ್ನಡಾಂಬೆ ರಕ್ಷಣಾ ವೇದಿಕೆಯ ಸಮಾಜಮುಖಿ ಕಾರ್ಯಕ್ರಮಗಳು ಯುವ ಸಂಘಟನೆಗಳಿಗೆ ಮಾದರಿಯಾಗಿವೆ ಎಂದು ಶಾಸಕ ಜಿ.ಟಿ.ದೇವೇಗೌಡ ಹೇಳಿದರು.

- Advertisement -

ಮೈಸೂರು ನಗರದ ಜೆ.ಕೆ. ಮೈದಾನದಲ್ಲಿ ಕನ್ನಡಾಂಬೆ ರಕ್ಷಣಾ ವೇದಿಕೆ ಆಯೋಜಿಸಿರುವ ಎರಡು ದಿನಗಳ ಕನ್ನಡ ಹಬ್ಬವನ್ನು ಉದ್ಘಾಟಿಸಿ ಮಾತನಾಡಿ, ಹಲವು ವರ್ಷಗಳಿಂದ ಶಿಕ್ಷಣ, ಆರೋಗ್ಯ ಮತ್ತು ಮಹಿಳಾ ಸಬಲೀಕರಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಮಾಜಮುಖಿ ಕಾರ್ಯಗಳನ್ನು ನಡೆಸಿಕೊಂಡು ಬರುತ್ತಿದೆ. ಸರ್ಕಾರಿ ಶಾಲಾ ಮಕ್ಕಳಿಗೆ ಆರೋಗ್ಯ ಸೇವೆ ಹಾಗೂ ಶೈಕ್ಷಣಿಕ ಪರಿಕರಗಳ ವಿತರಣೆ, ಯುವಕರಿಗೆ ಕ್ರೀಡಾಕೂಟ ಆಯೋಜನೆ, ಅಶಕ್ತ ಮಹಿಳೆಯರಿಗೆ ಉಚಿತ ಹೊಲಿಗೆ ಯಂತ್ರಗಳ ವಿತರಣೆ ಮತ್ತು ವೃದ್ಧಾಶ್ರಮಗಳಿಗೆ ದಿನಸಿ ಸಾಮಗ್ರಿಗಳ ನೆರವು ನೀಡುವ ಮೂಲಕ ಸಂಘಟನೆಯು ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದೆ. ಸಾಮೂಹಿಕ ನಾಯಕತ್ವದೊಂದಿಗೆ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಶ್ಲಾಘನೀಯ. ಸಮಾಜಮುಖಿ ಕಾರ್ಯಗಳಿಗೆ ಸದಾ ಬೆಂಬಲವಾಗಿ ನಿಲ್ಲುವುದಾಗಿ ಭರವಸೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷೇತ್ರ ಮರುವಿಂಗಡಣೆಯ ಹಿಂದಿರುವ ಬಲಪಂಥೀಯ ರಾಜಕಾರಣದ ಗುಪ್ತ ಕಾರ್ಯಸೂಚಿ

ಕ್ಷೇತ್ರ ಮರುವಿಂಗಡಣೆ ಕೇವಲ ಲೋಕಸಭಾ ಸ್ಥಾನಗಳ ಹೆಚ್ಚಳವಲ್ಲ; ಅದು ದೇಶದ ರಾಜಕೀಯ ಅಧಿಕಾರದ ಹಂಚಿಕೆ, ಒಕ್ಕೂಟ ವ್ಯವಸ್ಥೆ ಮತ್ತು ಸಾಮಾಜಿಕ ನ್ಯಾಯದ ಭವಿಷ್ಯವನ್ನು ನಿರ್ಧರಿಸುವ ಪ್ರಕ್ರಿಯೆ. ಕ್ಷೇತ್ರಗಳ ಗಡಿ ಬದಲಾವಣೆಯಿಂದ ಅಹಿಂದ, ದಲಿತ,...

ಗುಳೇದಗುಡ್ಡ | ತಾಲೂಕಾಗಿ ಹತ್ತು ವರ್ಷ ಕಳೆದರೂ ಭೂ...

ಗುಳೇದಗುಡ್ಡ ತಾಲೂಕು ರಚೆನೆಯಾಗಿ ಹತ್ತು ವರ್ಷ ಕಳೆದಿದೆ. ತಾಲೂಕು ವ್ಯಾಪ್ತಿಯ ಪಟ್ಟಣ ಹಾಗೂ ಗ್ರಾಮಗಳಿಗೆ ಸಂಬಂಧಿಸಿದ ಭೂದಾಖಲೆಗಳು ಬಾದಾಮಿ ತಹಸೀಲ್ದಾರ್ ಕಚೇರಿ ಮತ್ತು ಗದಗ ರಸ್ತೆಯ ಎಪಿಎಂಸಿ ಸಮೀಪದ ಕಚೇರಿಯಲ್ಲಿ ಸಂಗ್ರಹವಾಗಿವೆ....

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ಇಮ್ಮಡಿ ಗುರುಲಿಂಗ ಸ್ವಾಮೀಜಿ ಮಾತನಾಡಿ, ಕನ್ನಡಾಂಬೆ ರಕ್ಷಣಾ ವೇದಿಕೆ ಕಳೆದ ಏಳು ವರ್ಷಗಳಿಂದ ಜನಪರ ಕಾರ್ಯಗಳ ಮೂಲಕ ಸಮಾಜದಲ್ಲಿ ತನ್ನದೇ ಆದ ಗುರುತನ್ನು ಮೂಡಿಸಿಕೊಂಡಿದೆ. ಮುಂದಿನ ದಿನಗಳಲ್ಲಿಯೂ ಇಂತಹ ಸಮಾಜಮುಖಿ ಕಾರ್ಯಕ್ರಮಗಳು ನಿರಂತರವಾಗಿ ಮುಂದುವರಿಯಲಿ ಎಂದು ಆಶಿಸಿದರು.

ಈ ವಿಶೇಷ ವರದಿ ಓದಿದ್ದೀರಾ? ಕಾಡಿನ ಮಕ್ಕಳೇ ವನ್ಯಜೀವಿಗಳ ನಿಜವಾದ ಬಂಧುಗಳು: ಆದಿವಾಸಿಗಳ ಜ್ಞಾನ, ಸಹಬಾಳ್ವೆ-ಅರಣ್ಯ ಸಂರಕ್ಷಣೆಯ ಭವಿಷ್ಯ

ಯೋಗಾನರಸಿಂಹ ದೇವಸ್ಥಾನದ ಆಡಳಿತಾಧಿಕಾರಿ ಶ್ರೀನಿವಾಸ್ ಗುರೂಜಿ ಅವರು ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಕ್ರೀಡೆ ಇರುವ ಕಡೆ ಸ್ನೇಹ, ಸೌಹಾರ್ದತೆ ಮತ್ತು ಪ್ರೀತಿ ಬೆಳೆಯುತ್ತದೆ. ಕ್ರೀಡಾಕೂಟಗಳ ಮೂಲಕ ಸಮಾಜವನ್ನು ಒಗ್ಗೂಡಿಸುವ ಕಾರ್ಯವನ್ನು ಅವರು ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಈ ವಿಶೇಷ ವರದಿ ಓದಿದ್ದೀರಾ? ವನ್ಯಜೀವಿ ಸಂಘರ್ಷದ ಸುಳಿಯಲ್ಲಿ ಅರಣ್ಯದ ಭವಿಷ್ಯ: ಸಂರಕ್ಷಣೆಯ ಹೆಸರಿನಲ್ಲಿ ಹೊಸ ಹಿತಾಸಕ್ತಿಗಳಿಗೆ ಅವಕಾಶವೇ?

ಕಾರ್ಯಕ್ರಮದಲ್ಲಿ ಕನ್ನಡಾಂಬೆ ರಕ್ಷಣಾ ವೇದಿಕೆಯ ರಾಜ್ಯ ಖಜಾಂಚಿ ನಂಜುಂಡ, ಮಹಿಳಾ ಘಟಕದ ಅಧ್ಯಕ್ಷೆ ತಾರಾ, ಸಹ ಕಾರ್ಯದರ್ಶಿ ಚೆನ್ನನಾಯಕ್, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷೆ ಶಶಿಕಲಾ, ಕಿಕ್ಕೇರಿ ಕಿರಣ ಸೇರಿದಂತೆ ಸಂಘಟನೆಯ ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ರೈತರು ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ – ಗುರುಪಾದ ಶ್ರೀಗಳು

ಕೃಷಿ ಕ್ಷೇತ್ರದಲ್ಲಿ ಬದಲಾಗುತ್ತಿರುವ ತಂತ್ರಜ್ಞಾನಕ್ಕೆ ರೈತರು ಹೊಂದಿಕೊಳ್ಳುವುದರ ಜೊತೆಗೆ ಸುಧಾರಿತ ತಳಿಗಳ...

ಬಾಗಲಕೋಟೆ | ಆನ್‌ಲೈನ್ ಗೇಮಿಂಗ್ ಆಮಿಷದ ವಂಚನೆಗೆ ಬ್ರೇಕ್: 495 ಲಿಂಕ್ ಪತ್ತೆ, ಬ್ಲಾಕ್‌ಗೆ ಪೊಲೀಸ್ ಕ್ರಮ

ಆನ್‌ಲೈನ್ ಗೇಮಿಂಗ್, ಬೆಟ್ಟಿಂಗ್ ಹಾಗೂ ಕ್ಯಾಸಿನೋ ಆಟಗಳ ಆಮಿಷವೊಡ್ಡಿ ಸಾರ್ವಜನಿಕರನ್ನು ವಂಚಿಸುತ್ತಿರುವ...

ಉಡುಪಿ | ಶಿವಪುರ, ಕೆರೆಬಿಟ್ಟು ಕೃಷಿ ಭೂಮಿ ಸ್ವಾಧೀನ ಕೈಬಿಡಲು ಕುಮಾರಸ್ವಾಮಿಗೆ ಜೆಡಿಎಸ್ ಮನವಿ

ಕಾರ್ಕಳ ವಿಧಾನಸಭಾ ಕ್ಷೇತ್ರದ ಹೆಬ್ರಿ ತಾಲ್ಲೂಕಿನ ಶಿವಪುರ ಹಾಗೂ ಕೆರೆಬಿಟ್ಟು ಗ್ರಾಮಗಳ...

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...