ಮೈಸೂರು | ಹವ್ಯಾಸಿ ರಂಗಭೂಮಿಯೇ ರಂಗಚಳುವಳಿಯ ಜೀವಾಳ: ಪ್ರಸಾದ್ ಕುಂದೂರು

Date:

ರಂಗಚಳುವಳಿಯ ಜೀವಂತಿಕೆ, ಸೃಜನಶೀಲತೆ ಹಾಗೂ ಹೊಸ ಪ್ರತಿಭೆಗಳ ಬೆಳವಣಿಗೆಯನ್ನು ಇಂದಿಗೂ ಮುನ್ನಡೆಸುತ್ತಿರುವುದು ಹವ್ಯಾಸಿ ರಂಗಭೂಮಿಯೇ ಎಂದು ಹಿರಿಯ ರಂಗಕರ್ಮಿ ಹಾಗೂ ನಿರಂತರ ಫೌಂಡೇಶನ್ ನಿರ್ದೇಶಕ ಪ್ರಸಾದ್ ಕುಂದೂರು ಅಭಿಪ್ರಾಯಪಟ್ಟರು.

- Advertisement -

ಮೈಸೂರು ನಗರದ ರಂಗಾಯಣದ ಭೂಮಿಗೀತ ರಂಗಮಂದಿರದಲ್ಲಿ ಕರ್ನಾಟಕ ಸರ್ಕಾರದ ರಂಗಾಯಣ ಆಯೋಜಿಸಿದ್ದ ‘ಸಿಜಿಕೆ ನೆನಪಿನ ಗ್ರೀಷ್ಮ ರಂಗೋತ್ಸವ–2026’ಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವೃತ್ತಿಪರ ರೆಪರ್ಟರಿಗಳ ಕೊಡುಗೆ ಮಹತ್ವದ್ದಾಗಿದ್ದರೂ, ರಂಗಚಳುವಳಿಯ ಉತ್ಸಾಹ ಮತ್ತು ಸೃಜನಶೀಲತೆಯನ್ನು ಉಳಿಸಿಕೊಂಡು ಬಂದಿರುವುದು ಹವ್ಯಾಸಿ ರಂಗಭೂಮಿಯೇ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ರಂಗಾಯಣದ ಆರಂಭಿಕ ದಿನಗಳನ್ನು ಸ್ಮರಿಸಿದ ಅವರು, ಸಂಸ್ಥಾಪಕ ನಿರ್ದೇಶಕ ಬಿ.ವಿ. ಕಾರಂತ ಅವರು ವೃತ್ತಿಪರ ಹಾಗೂ ಹವ್ಯಾಸಿ ರಂಗತಂಡಗಳನ್ನು ಸಮಾನವಾಗಿ ಪ್ರೋತ್ಸಾಹಿಸುತ್ತಿದ್ದರು. ಎರಡೂ ವಲಯಗಳ ನಡುವೆ ಪರಸ್ಪರ ಕಲಿಕೆ, ಅನುಭವ ವಿನಿಮಯ ಮತ್ತು ಸಹಯೋಗದ ಸಂಬಂಧ ಬೆಳೆಯಬೇಕು ಎಂಬುದು ಅವರ ಆಶಯವಾಗಿತ್ತು ಎಂದು ತಿಳಿಸಿದರು.

ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹವ್ಯಾಸಿ ಕಲಾವಿದರು, ನಿರ್ದೇಶಕರು ಹಾಗೂ ರಂಗಸಂಘಗಳ ಸಮರ್ಪಿತ ಶ್ರಮದಿಂದಲೇ ಭಾರತೀಯ ರಂಗಚಳುವಳಿ ತನ್ನ ಚೈತನ್ಯವನ್ನು ಉಳಿಸಿಕೊಂಡಿದೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಹಿರಿಯ ರಂಗ ನಿರ್ದೇಶಕಿ ಕೆ.ಆರ್. ಸುಮತಿ ಮಾತನಾಡಿ, 1970ರ ದಶಕದ ಕಾಲೇಜು ರಂಗಚಳುವಳಿಯು ಕನ್ನಡ ರಂಗಭೂಮಿಗೆ ಹೊಸ ತಲೆಮಾರಿನ ಪ್ರತಿಭಾವಂತ ಕಲಾವಿದರನ್ನು ಪರಿಚಯಿಸಿದ ಮಹತ್ವದ ಘಟ್ಟವಾಗಿತ್ತು ಎಂದು ಹೇಳಿದರು.

ಕೈಲಾಸಂ ಮತ್ತು ಶ್ರೀರಂಗ ಅವರ ಏಕಾಂಕ ನಾಟಕಗಳು, ಕಾಲೇಜುಗಳ ಸಾಹಿತ್ಯ ಅಧ್ಯಾಪಕರ ಪ್ರೋತ್ಸಾಹ, ಬೆಂಗಳೂರಿನಲ್ಲಿ ನಡೆದ ಟ್ರೋಫಿ ಸ್ಪರ್ಧೆಗಳು ಹಾಗೂ ಮೈಸೂರಿನ ಅಮರಕಲಾ ಸಂಘದ ಚಟುವಟಿಕೆಗಳು ಅನೇಕ ಯುವ ಪ್ರತಿಭೆಗಳನ್ನು ರಂಗಭೂಮಿಯತ್ತ ಸೆಳೆಯುವಲ್ಲಿ ಪ್ರಮುಖ ಪಾತ್ರವಹಿಸಿದ್ದವು ಎಂದು ಅವರು ಸ್ಮರಿಸಿದರು.

ರಂಗಭೂಮಿಯಲ್ಲಿ ಮಹಿಳೆಯರ ಪ್ರಾತಿನಿಧ್ಯ ಇನ್ನಷ್ಟು ವಿಸ್ತರಿಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟ ಅವರು, ಮಹಿಳೆಯರನ್ನು ನಟನೆಯ ಪಾತ್ರಗಳಿಗೆ ಮಾತ್ರ ಸೀಮಿತಗೊಳಿಸದೆ, ನಾಟಕ ನಿರ್ಮಾಣ, ನಿರ್ದೇಶನ, ರಂಗಸಂಘಟನೆ ಹಾಗೂ ಆಡಳಿತದಂತಹ ಜವಾಬ್ದಾರಿಯುತ ಕ್ಷೇತ್ರಗಳಲ್ಲೂ ಹೆಚ್ಚಿನ ಅವಕಾಶಗಳನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ಸಭಾ ಕಾರ್ಯಕ್ರಮದ ಬಳಿಕ ನಿರಂತರ ಫೌಂಡೇಶನ್ ತಂಡದಿಂದ ಮಹೇಶ್ ಎಲ್ಕುಂಚ್ವಾರ್ ಅವರ ಮರಾಠಿ ಮೂಲದ ‘ಪಾರ್ಟಿ’ ನಾಟಕ ಪ್ರದರ್ಶನಗೊಂಡಿತು. ಪ್ರಸಾದ್ ಕುಂದೂರು ಕನ್ನಡಕ್ಕೆ ಅನುವಾದಿಸಿರುವ ಈ ನಾಟಕವನ್ನು ಚಿದಂಬರರಾವ್ ಜಂಬೆ ನಿರ್ದೇಶಿಸಿದ್ದು, ಆಧುನಿಕ ಸಮಾಜದ ಮುಖವಾಡಗಳು, ಸಂಬಂಧಗಳ ಸಂಕೀರ್ಣತೆ ಹಾಗೂ ವ್ಯಕ್ತಿತ್ವಗಳ ಸಂಘರ್ಷವನ್ನು ಪರಿಣಾಮಕಾರಿಯಾಗಿ ಅನಾವರಣಗೊಳಿಸಿ ಪ್ರೇಕ್ಷಕರಿಂದ ಮೆಚ್ಚುಗೆ ಗಳಿಸಿತು.

ಈ ವಿಶೇಷ ಸುದ್ದಿ ಓದಿದ್ದೀರಾ?ಕಾವೇರಿ ಕಣಿವೆಯ ಜಲಾಶಯಗಳಲ್ಲಿ ವಾಡಿಕೆ ನೀರಿನ ಸಂಗ್ರಹ ಕುಸಿತ: ಹಳೇ ಮೈಸೂರು ಭಾಗದಲ್ಲಿ ಬರದ ಭೀತಿ

ಕಾರ್ಯಕ್ರಮದಲ್ಲಿ ರಂಗಸಮಾಜದ ಸದಸ್ಯ ಎಚ್.ಎಸ್. ಸುರೇಶ್‌ಬಾಬು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕಿ ನಿರ್ಮಲಾ ಮಠಪತಿ, ರಂಗಾಯಣದ ಮಾಜಿ ನಿರ್ದೇಶಕಿ ಭಾಗೀರಥಿ ಬಾಯಿ ಕದಂ ಹಾಗೂ ಸಹಾಯಕ ನಿರ್ದೇಶಕ ಡಾ. ಎಂ.ಡಿ. ಸುದರ್ಶನ್ ಉಪಸ್ಥಿತರಿದ್ದರು. ರಂಗಾಯಣದ ನಿರ್ದೇಶಕ ಸತೀಶ್ ತಿಪಟೂರು ಅಧ್ಯಕ್ಷತೆ ವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...

ರಾಯಚೂರು | ಕರ್ನಾಟಕ ಧಮ್ಮ ಜನಜಾಗೃತಿ ಯಾತ್ರೆ ರಥಕ್ಕೆ ದೇವದುರ್ಗದಲ್ಲಿ ಅದ್ಧೂರಿ ಸ್ವಾಗತ

ಸಂವಿಧಾನ ಆಧಾರಿತ ಪ್ರಬುದ್ಧ ಭಾರತ ನಿರ್ಮಾಣ ಹಾಗೂ ಬೌದ್ಧ ಧಮ್ಮದ ಮಾನವೀಯ...