ಮೈಸೂರು | ಪೌಷ್ಟಿಕ ಆಹಾರ ಸೇವನೆಯಿಂದ ಆರೋಗ್ಯ ಕಾಪಾಡಿಕೊಳ್ಳಿ: ಶ್ವೇತಾ ಜೆ.ಎಸ್.ಪೋದ್ದಾರ

Date:

ಗರ್ಭಿಣಿಯರು, ಬಾಣಂತಿಯರು ಹಾಗೂ ಕಿಶೋರಿಯರು ಪೌಷ್ಟಿಕ ಮತ್ತು ಸಮತೋಲನ ಆಹಾರ ಸೇವಿಸುವ ಮೂಲಕ ತಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬೇಕು ಎಂದು ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ವೇತಾ ಜೆ.ಎಸ್.ಪೋದ್ದಾರ ಸಲಹೆ ನೀಡಿದರು.

- Advertisement -

ನಂಜನಗೂಡು ಸಮೀಪದ ಗೋಳೂರು ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ‘ಪೋಷಣ್‌ ಅಭಿಯಾನ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಏಕದಳ ಧಾನ್ಯ, ದ್ವಿದಳ ಧಾನ್ಯ, ಸೊಪ್ಪು, ನಾರಿನಾಂಶ ಹೆಚ್ಚಿರುವ ತರಕಾರಿಗಳು ಹಾಗೂ ಹಾಲಿನ ಉತ್ಪನ್ನಗಳನ್ನು ಆಹಾರದಲ್ಲಿ ಹೆಚ್ಚು ಬಳಸಬೇಕು. ಇದರಿಂದ ದೇಹಕ್ಕೆ ಅಗತ್ಯವಾದ ಪೌಷ್ಟಿಕಾಂಶ ದೊರೆತು ಆರೋಗ್ಯ ವೃದ್ಧಿಯಾಗುತ್ತದೆ. ಸ್ಥಳೀಯವಾಗಿ ಲಭ್ಯವಿರುವ ತರಕಾರಿ, ಸೊಪ್ಪು ಸೇರಿದಂತೆ ಪೌಷ್ಟಿಕ ಆಹಾರ ಪದಾರ್ಥಗಳನ್ನು ಬಳಸುವ ಮೂಲಕವೂ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚಿಕ್ಕಮಗಳೂರು | ಉದ್ಯಾನವನಕ್ಕೆ ಮೀಸಲಿಟ್ಟ ಜಾಗದಲ್ಲಿ ಸಂತೆ ನಡೆಸಲು...

ಉದ್ಯಾನವನ ಮಾನವನ ಮಾನಸಿಕ ನೆಮ್ಮದಿ, ವಿನೋದ, ವಿಶ್ರಾಂತಿ ಹಾಗೂ ವನ್ಯಜೀವಿ ಹಾಗೂ ನೈಸರ್ಗಿಕ ಪರಿಸರವನ್ನು ಸಂರಕ್ಷಿಸಲು ಮೀಸಲಿಟ್ಟ ಒಂದು ಹಸಿರು ತಾಣ ಎಂದೇ ಹೇಳಬಹುದು. ಆಧುನಿಕ ವ್ಯವಸ್ಥೆಯಲ್ಲಿ ನಗರ ಜೀವನದ ಜಂಜಾಟದ ನಡುವೆ...

ವಿಜಯಪುರ | 80ರ ಗಡಿ ದಾಟಿದ ಬಿಳಿ ಜೋಳ,...

ವಿಜಯಪುರ ಎಂದಾಕ್ಷಣ ನೆನಪಾಗುವುದು ಬಿಳಿ ಜೋಳದ ರೊಟ್ಟಿ. ಉತ್ತರ ಕರ್ನಾಟಕದ ಜನರ ಬದುಕು, ಆಹಾರ ಸಂಸ್ಕೃತಿಯ ಅವಿಭಾಜ್ಯ ಭಾಗವಾಗಿರುವ ಜೋಳವೇ ಈಗ ಸಾಮಾನ್ಯ ಜನರ ಕೈಗೆಟುಕದ ವಸ್ತುವಾಗುತ್ತಿದೆ. ಕೆಲವೇ ದಿನಗಳ ಹಿಂದೆ ಕೆಜಿಗೆ...

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಮಹಿಳೆಯರ ಆರೋಗ್ಯದ ದೃಷ್ಟಿಯಿಂದ ಸರ್ಕಾರವು ಪೋಷಣ್‌ ಅಭಿಯಾನದಡಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮಹಿಳೆಯರು ಹಾಗೂ ಕಿಶೋರಿಯರು ಇಂತಹ ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಹೇಳಿದರು. ಹೆಡತಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಂಜುಳಾ ಮಾತನಾಡಿ, ತರಕಾರಿ, ದ್ವಿದಳ ಧಾನ್ಯಗಳು, ಹಾಲು ಹಾಗೂ ಹಣ್ಣುಗಳನ್ನು ಒಳಗೊಂಡ ಸಮತೋಲನ ಆಹಾರ ಸೇವಿಸುವುದು ಅತ್ಯಗತ್ಯ. ಇದರಿಂದ ರಕ್ತಹೀನತೆ ಸೇರಿದಂತೆ ಹಲವು ಆರೋಗ್ಯ ಸಮಸ್ಯೆಗಳಿಂದ ದೂರವಿರಬಹುದು ಎಂದರು.

ಈ ವಿಶೇಷ ಸುದ್ದಿ ಓದಿದ್ದೀರಾ? ಹಳೇ ಮೈಸೂರು: ಆಡಳಿತ, ನೀರಾವರಿ ಮತ್ತು ಸಾರ್ವಜನಿಕ ಬದುಕಿನಲ್ಲಿ ಅಚ್ಚಳಿಯದ ಹೆಜ್ಜೆ ಗುರುತು ಎಚ್.ಎಂ. ಚನ್ನಬಸಪ್ಪ

ಗರ್ಭಿಣಿಯರು, ಬಾಣಂತಿಯರು ಹಾಗೂ ಚಿಕ್ಕ ಮಕ್ಕಳಲ್ಲಿ ರಕ್ತಹೀನತೆ ಉಂಟಾಗದಂತೆ ಪ್ರತಿಯೊಬ್ಬರೂ ಕಾಳಜಿ ವಹಿಸಬೇಕು. ರಕ್ತಹೀನತೆಯಿಂದ ರೋಗನಿರೋಧಕ ಶಕ್ತಿ ಕುಗ್ಗುವುದರ ಜೊತೆಗೆ ವಿವಿಧ ಆರೋಗ್ಯ ಸಮಸ್ಯೆಗಳು ಎದುರಾಗಬಹುದು. ಗರ್ಭಿಣಿಯರು ಹೆರಿಗೆ ಸಂದರ್ಭದಲ್ಲಿ ತೊಂದರೆ ಅನುಭವಿಸುವ ಸಾಧ್ಯತೆಯೂ ಇರುವುದರಿಂದ ಸಮತೋಲನ ಆಹಾರ ಸೇವನೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.

ಈ ವಿಶೇಷ ಸುದ್ದಿ ಓದಿದ್ದೀರಾ? ಮಾತೃಭಾಷೆಯೇ ಜ್ಞಾನಭಾಷೆ: ಶಿಕ್ಷಣ ಯಾರ ಹಕ್ಕು?

ಕಾರ್ಯಕ್ರಮದಲ್ಲಿ ಪೋಷಣ್‌ ಅಭಿಯಾನ ಸಂಯೋಜಕ ನವೀನ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಹೆಡತಲೆ ಕೇಂದ್ರದ ಮೇಲ್ವಿಚಾರಕಿ ಅನ್ನಪೂರ್ಣ, ಹಿರಿಯ ಆರೋಗ್ಯಾಧಿಕಾರಿ ಗೌರಮ್ಮ, ಸಮುದಾಯ ಆರೋಗ್ಯಾಧಿಕಾರಿ ದಿವ್ಯಾ, ಚಂದ್ರಿಕಾ ಪಿ., ಶಿಕ್ಷಕಿ ಸೌಭಾಗ್ಯ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಮುದ್ದುಮಾದಶೆಟ್ಟಿ, ಯುವ ಮುಖಂಡ ಸತೀಶ್, ಅಂಗನವಾಡಿ ಕಾರ್ಯಕರ್ತೆಯರಾದ ಭಾಗ್ಯಲಕ್ಷ್ಮಿ, ಶಿವಮ್ಮ, ನಂದಿನಿ ಕೋಡಿನರಸೀಪುರ, ಪುಟ್ಟಮ್ಮ, ನಂದಿನಿ, ಚಂದ್ರಮ್ಮ, ಆಶಾ ಕಾರ್ಯಕರ್ತೆಯರಾದ ರೇಣುಕಾ, ರುಕ್ಮಿಣಿ, ಪ್ರಥಮ್ ಸಂಸ್ಥೆಯ ಧನರಾಜ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನವೆಂಬರ್ 26ರಿಂದ ರಾಜ್ಯಾದ್ಯಂತ ‘ಜನರ ದನಿ, ಸಂವಿಧಾನದ ದನಿ’ ಜಾಗೃತಿ ಅಭಿಯಾನ

ನವೆಂಬರ್ 26ರ ಸಂವಿಧಾನ ಸಮರ್ಪಣಾ ದಿನದ ಅಂಗವಾಗಿ, ದಲಿತ ಸಂಘರ್ಷ ಸಮಿತಿಗಳ...

ಉಡುಪಿ | ಮತದಾರರ ಹಕ್ಕು ರಕ್ಷಣೆಗೆ ಕಾಂಗ್ರೆಸ್‌ನಿಂದ ‘ವೋಟ್ ಬಚಾವೋ–ದೇಶ್ ಬಚಾವೋ’ ಆಂದೋಲನ

ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಹಾಗೂ ಮತದಾನದ ಹಕ್ಕುಗಳ ರಕ್ಷಣೆಗೆ ಅಖಿಲ ಭಾರತ...

ಯಾದಗಿರಿ | ಆಂಧ್ರಪ್ರದೇಶದಲ್ಲಿ ಪ್ರಜಾಪ್ರಭುತ್ವದ ಹಕ್ಕುಗಳ ದಮನದ ಆರೋಪ: ಎಐಬಿಎಸ್‌ಪಿ ತೀವ್ರ ಖಂಡನೆ

ಆಂಧ್ರಪ್ರದೇಶದಲ್ಲಿ ವಿರೋಧ ಪಕ್ಷಗಳ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅಡ್ಡಿಪಡಿಸಲಾಗಿದೆ ಎಂಬ ಆರೋಪಗಳನ್ನು...

ಯಾದಗಿರಿ | ಮಲ್ಹಾರ ಗ್ರಾಮದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಯಾದಗಿರಿ ತಾಲೂಕಿನ ಮಲ್ಹಾರ ಗ್ರಾಮದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಅವರ...