ಪಿರಿಯಾಪಟ್ಟಣ | ಶಿಡ್ಲುಮಲ್ಲಿಕಾರ್ಜುನ ಸ್ವಾಮಿ ಬೆಟ್ಟದಲ್ಲಿ ಬೃಹತ್ ಸ್ವಚ್ಛತಾ ಆಂದೋಲನ

Date:

ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲ್ಲೂಕಿನ ಬೆಟ್ಟದಪುರ ಸಮೀಪದ ಶಿಡ್ಲುಮಲ್ಲಿಕಾರ್ಜುನ ಸ್ವಾಮಿ ಬೆಟ್ಟದಲ್ಲಿ ನವೋದಯ ಸ್ವಯಂಸೇವಾ ಸಂಸ್ಥೆ ಹಾಗೂ ಮಸಣೀಕಮ್ಮ ಸೈನಿಕ ಅಕಾಡೆಮಿ ವತಿಯಿಂದ ಭಾನುವಾರ ಸ್ವಚ್ಛತಾ ಆಂದೋಲನ ಹಮ್ಮಿಕೊಳ್ಳಲಾಯಿತು.

- Advertisement -

ಪ್ರಕೃತಿ ಸಂರಕ್ಷಣೆ, ಪರಿಸರ ಸ್ವಚ್ಛತೆ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಬೆಟ್ಟದ ಪ್ರದೇಶದಲ್ಲಿ ಎಲ್ಲೆಂದರಲ್ಲಿ ಬಿದ್ದಿದ್ದ ಪ್ಲಾಸ್ಟಿಕ್ ಬಾಟಲಿಗಳು, ಆಹಾರ ಪದಾರ್ಥಗಳ ಹೊದಿಕೆಗಳು ಹಾಗೂ ವಿವಿಧ ತ್ಯಾಜ್ಯ ವಸ್ತುಗಳನ್ನು ಸಂಗ್ರಹಿಸಿ ತೆರವುಗೊಳಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ನವೋದಯ ಸ್ವಯಂಸೇವಾ ಸಂಸ್ಥೆಯ ಅಧ್ಯಕ್ಷ ನಾರಾಯಣ ಮಾತನಾಡಿ, ಶಿಡ್ಲುಮಲ್ಲಿಕಾರ್ಜುನ ಸ್ವಾಮಿ ಬೆಟ್ಟವು ಐತಿಹಾಸಿಕ ಹಾಗೂ ಧಾರ್ಮಿಕ ಮಹತ್ವ ಹೊಂದಿರುವ ಕ್ಷೇತ್ರವಾಗಿದೆ. ಪ್ರತಿದಿನ ನೂರಾರು ಭಕ್ತರು ಹಾಗೂ ಪ್ರವಾಸಿಗರು ಭೇಟಿ ನೀಡುತ್ತಿದ್ದು, ಕೆಲವರು ಪ್ಲಾಸ್ಟಿಕ್ ಬಾಟಲಿಗಳು ಸೇರಿದಂತೆ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಬಿಸಾಡುತ್ತಿರುವುದರಿಂದ ಪರಿಸರ ಮಾಲಿನ್ಯ ಉಂಟಾಗುತ್ತಿದೆ ಎಂದು ಹೇಳಿದರು.

ಪ್ರಕೃತಿ ಸೌಂದರ್ಯವನ್ನು ಕಾಪಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಸಾರ್ವಜನಿಕರು ಸ್ವಚ್ಛತೆಗೆ ಆದ್ಯತೆ ನೀಡಬೇಕು. ಸ್ಥಳೀಯ ಯುವಕರು ಪರಿಸರ ಸಂರಕ್ಷಣಾ ಕಾರ್ಯಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ ಪ್ರಕೃತಿ ಉಳಿಸುವ ಕಾರ್ಯಕ್ಕೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಸ್ಥಳೀಯ ಮುಖಂಡ ಕಂದೇಗಾಲ ರಾಜು ಮಾತನಾಡಿ, ಬೆಟ್ಟಕ್ಕೆ ಭೇಟಿ ನೀಡುವ ಭಕ್ತರು ಹಾಗೂ ಸಾರ್ವಜನಿಕರಲ್ಲಿ ಪರಿಸರ ಜಾಗೃತಿ ಮೂಡಿಸಲು ವಿವಿಧ ಸಂಘ-ಸಂಸ್ಥೆಗಳು ನಿರಂತರವಾಗಿ ಇಂತಹ ಸ್ವಚ್ಛತಾ ಆಂದೋಲನಗಳನ್ನು ಹಮ್ಮಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಈ ವಿಶೇಷ ಸುದ್ದಿ ಓದಿದ್ದೀರಾ?ಮಂಡ್ಯದ ನ್ಯೂ ತಮಿಳು ಕಾಲೊನಿಯಲ್ಲಿ ‘SIR’ ಗೊಂದಲ: 207 ಮತದಾರರು ಎಲ್ಲಿ ಹೋದರು?

ಸ್ವಚ್ಛತಾ ಕಾರ್ಯದಲ್ಲಿ ಮಸಣೀಕಮ್ಮ ಸೈನಿಕ ಅಕಾಡೆಮಿ ಅಧ್ಯಕ್ಷ ಸ್ವಾಮಿ, ಮಾಜಿ ಸೈನಿಕ ಜವರೇಗೌಡ, ಸೈನಿಕರಾದ ಮಹದೇವ್, ಹೇಮಂತ್ ಕುಮಾರ್, ಸಂಸ್ಥೆಯ ಪದಾಧಿಕಾರಿಗಳು, ಯುವ ಮುಖಂಡರು, ಶಾಲಾ ಮಕ್ಕಳು ಹಾಗೂ ಸೇನಾ ತರಬೇತಿ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತರನ್ನು ವಜಾಗೊಳಿಸಿ: ಆಗ್ರಹ

ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು ಹಾಗೂ...

ಎರಡು ದಿನದ ಕಂಬಳಕ್ಕಾಗಿ ಪರಿಸರ ಬಲಿ? ಕೆರೆಯ ಜಾಗ, ಮರಗಳ ತೆರವಿನ ಸುತ್ತ ಗಂಭೀರ ಪ್ರಶ್ನೆಗಳು!

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಕಂಬಳ ಆಯೋಜಿಸುವ ನಿರ್ಧಾರ ಈಗ ಕೇವಲ...

ಮೈಸೂರು | ‘SIR’ ವಿರುದ್ಧ ಮಾನಸಗಂಗೋತ್ರಿಯಲ್ಲಿ ಪ್ರತಿಭಟನಾ ಜಾಥಾ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ವಿರೋಧಿಸಿ, ಸಂವಿಧಾನದ...

ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ: ಸಿಎಂ ಡಿ ಕೆ ಶಿವಕುಮಾರ್

“ಕರಾವಳಿಯ ಕಂಬಳ, ತುಳುನಾಡಿನ ಟ್ಯಾಬ್ಲೋ ಈ ಬಾರಿಯ ಮೈಸೂರು ದಸರಾದ ಭಾಗವಾಗಿವೆ”...