ದಸರಾದಲ್ಲಿ ಕಂಬಳ ಆಯೋಜನೆ ವಿರೋಧಿಸಿ ನಾಳೆ ಮೈಸೂರಿನಲ್ಲಿ ಬೃಹತ್ ಪ್ರತಿಭಟನೆ

Date:

ಮುಂಬರುವ ಮೈಸೂರು ದಸರಾ ಮಹೋತ್ಸವದಲ್ಲಿ ಕಂಬಳ ಕ್ರೀಡೆ ಆಯೋಜಿಸುವ ಪ್ರಸ್ತಾವವನ್ನು ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ, ದಲಿತ ಸಂಘರ್ಷ ಸಮಿತಿ, ‘ಪರಿಸರಕ್ಕಾಗಿ ನಾವು’ ಸಂಘಟನೆ, ಕನ್ನಡ ಹಾಗೂ ಪ್ರಗತಿಪರ ಸಂಘಟನೆಗಳು ಸೇರಿದಂತೆ ಹಲವು ಸಂಘ-ಸಂಸ್ಥೆಗಳು ಜಂಟಿಯಾಗಿ ಜುಲೈ 18ರಂದು (ಶನಿವಾರ) ಬೆಳಿಗ್ಗೆ 10 ಗಂಟೆಗೆ ಮೈಸೂರಿನ ಸಾತಗಳ್ಳಿಯಲ್ಲಿರುವ ವಿ.ಟಿ.ಯು. ಕಚೇರಿ ಪಕ್ಕದ (ಹೊರ ವರ್ತುಲ ರಸ್ತೆ) ಪ್ರದೇಶದಲ್ಲಿ ಬೃಹತ್ ಪ್ರತಿಭಟನಾ ಸಭೆ ಹಮ್ಮಿಕೊಂಡಿವೆ.

- Advertisement -

ಪ್ರತಿಭಟನಾ ಸಭೆಯಲ್ಲಿ ‘ಪರಿಸರಕ್ಕಾಗಿ ನಾವು’ ಸಂಘಟನೆಯ ರಾಜ್ಯಾಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಟಿ. ರಾಮಸ್ವಾಮಿ, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಹಿರಿಯ ಪರಿಸರ ಹೋರಾಟಗಾರ ಹಾಗೂ ನಿವೃತ್ತ ಮೇಜರ್ ಜನರಲ್ ಸುಧೀರ್ ಒಂಬತ್ಕೆರೆ, ಪರಂಪರೆ ತಜ್ಞ ಪ್ರೊ. ಎನ್.ಎಸ್. ರಂಗರಾಜು, ದಲಿತ ಸಂಘರ್ಷ ಸಮಿತಿಯ ಬೆಟ್ಟಯ್ಯ ಕೋಟೆ, ಕನ್ನಡ ಕ್ರಿಯಾ ಸಮಿತಿಯ ಮ.ಗು. ಸದಾನಂದಯ್ಯ, ಭೂಮಿ ತಾಯಿ ಹೋರಾಟ ಸಮಿತಿಯ ಕೆ.ಎಸ್. ನಂಜುಂಡೇಗೌಡ, ಬೆಳವಲ ಫೌಂಡೇಶನ್‌ನ ಡಾ. ರಾಮಕೃಷ್ಣ, ಟೀಮ್ ಮೈಸೂರು ಪರವಾಗಿ ಕೆ. ಗೋಕುಲ ಗೋವರ್ಧನ, ಹಿರಿಯ ಪರಿಸರ ಹೋರಾಟಗಾರ್ತಿ ಭಾನು ಮೋಹನ್, ಪನಾ ಸಂಘಟನೆಯ ಪ್ರೊ. ಕಾಳಚನ್ನೇಗೌಡ, ಪ್ರೊ. ಬಿ.ವಿ. ಶ್ಯಾಮಲಾ, ಪ್ರೊ. ಎಂ.ಆರ್. ಜನಾರ್ದನ, ನಬಿಜಾನ್, ಮನ್ಸೂರ್ ಅಹ್ಮದ್, ಪ್ರಗತಿಪರ ಸಂಘಟನೆಗಳ ಉಗ್ರನರಸಿಂಹೇಗೌಡ ಸೇರಿದಂತೆ ಹಲವಾರು ಮುಖಂಡರು ಭಾಗವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಈ ವಿಶೇಷ ಸುದ್ದಿ ಓದಿದ್ದೀರಾ?SIR ಪರಿಷ್ಕೃತ ವೇಳಾಪಟ್ಟಿ: ರಾಜ್ಯದಲ್ಲಿ ಶೇ.95.69ರಷ್ಟು ಎಣಿಕೆ ನಮೂನೆ ವಿತರಣೆ; ಜಿಲ್ಲಾವಾರು ಪ್ರಗತಿ ಹೇಗಿದೆ?

ಮೈಸೂರು ದಸರಾದ ಅಸ್ಮಿತೆ, ಅನನ್ಯತೆ, ಹಿರಿಮೆ-ಗರಿಮೆ, ವೈಭವ ಹಾಗೂ ಪರಂಪರೆಯನ್ನು ಸಂರಕ್ಷಿಸಬೇಕೆಂಬ ಉದ್ದೇಶದಿಂದ ಈ ಪ್ರತಿಭಟನೆ ಆಯೋಜಿಸಲಾಗಿದೆ ಎಂದು ಸಂಘಟನೆಗಳು ತಿಳಿಸಿವೆ. ಜೊತೆಗೆ, ಮಳೆಯ ಕೊರತೆಯಿಂದ ಸಂಕಷ್ಟದಲ್ಲಿರುವ ಅನ್ನದಾತ ರೈತರ ಸಮಸ್ಯೆಗಳಿಗೆ ಸರ್ಕಾರ ತುರ್ತಾಗಿ ಸ್ಪಂದಿಸಬೇಕೆಂಬ ಒತ್ತಾಯವೂ ಪ್ರತಿಭಟನೆಯ ಪ್ರಮುಖ ಉದ್ದೇಶವಾಗಿದೆ.

ಈ ವಿಶೇಷ ಸುದ್ದಿ ಓದಿದ್ದೀರಾ?ರಾಜ್ಯದ ಟಾಪ್-5 ಗುರಿಯತ್ತ ಚಾಮರಾಜನಗರ: ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಶಿಕ್ಷಣ ಇಲಾಖೆಯ ಮಹತ್ವದ ಯೋಜನೆ

ದಸರಾದ ಮೂಲ ಪರಂಪರೆ ಮತ್ತು ಸಾಂಸ್ಕೃತಿಕ ವೈಶಿಷ್ಟ್ಯವನ್ನು ಉಳಿಸುವುದರ ಜೊತೆಗೆ ರೈತರ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ನಡೆಯುತ್ತಿರುವ ಈ ಪ್ರತಿಭಟನೆಯಲ್ಲಿ ನಾಡಿನ ಹಿತಚಿಂತಕರು, ರೈತರು, ಮಹಿಳೆಯರು, ಯುವಕರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ‘ಪರಿಸರಕ್ಕಾಗಿ ನಾವು’ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಪರಶುರಾಮೇಗೌಡ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...