ರೈತರ ಸಂಕಷ್ಟ ನಿವಾರಿಸಲಿ, ಕಣ್ಣೀರು ಸುರಿಸುವ ಸಭೆಯಾಗದಿರಲಿ: ಕುರುಬೂರು ಶಾಂತಕುಮಾರ್

Date:

ಮೈಸೂರಿನ ಪತ್ರಕರ್ತರ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿ, ಅಕ್ಟೋಬರ್ 26ರಂದು ಬೆಳಗಾವಿಯಲ್ಲಿ ಮುಖ್ಯಮಂತ್ರಿ ಕರೆದಿರುವ ಸಭೆ ರೈತರ ಬಗ್ಗೆ ಕಣ್ಣೀರು ಸುರಿಸುವ ಮಾತುಗಳಿಗೆ ಸೀಮಿತವಾಗದೆ, ಅವರ ಸಂಕಷ್ಟಗಳನ್ನು ನಿವಾರಿಸಿ ಆರ್ಥಿಕ ಭದ್ರತೆ ಒದಗಿಸುವ ನಿರ್ಧಾರಗಳನ್ನು ಕೈಗೊಳ್ಳುವ ಸಭೆಯಾಗಬೇಕು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಆಗ್ರಹಿಸಿದ್ದಾರೆ.

- Advertisement -

ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿ, ಕೃಷಿ ಸಾಲಮನ್ನಾ, ಬಾಕಿ ಹಣ ಪಾವತಿ, ಕಟಾವು ಮತ್ತು ಸಾಗಾಣಿಕೆ ವೆಚ್ಚದ ಹೊರೆ ಕಡಿತ ಹಾಗೂ ಗ್ರಾಮೀಣ ಮಹಿಳೆಯರ ಸಾಲದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವಂತೆ ಅವರು ಒತ್ತಾಯಿಸಿದ್ದಾರೆ. ಕಬ್ಬಿನ ಉತ್ಪಾದನಾ ವೆಚ್ಚ ಟನ್‌ಗೆ ₹4,450 ಎಂದು ರಾಜ್ಯದ ಕಬ್ಬು ಅಭಿವೃದ್ಧಿ ಆಯುಕ್ತರು ಹಿಂದಿನ ವರ್ಷವೇ ಕೇಂದ್ರ ಕೃಷಿ ವೆಚ್ಚ ಮತ್ತು ಬೆಲೆ ಆಯೋಗಕ್ಕೆ ವರದಿ ನೀಡಿದ್ದಾರೆ. ಆದರೆ ಕಬ್ಬಿನ ಬೆಲೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿಗಳಿಗೆ ಮುಖ್ಯಮಂತ್ರಿ ಪತ್ರ ಬರೆದಾಗ ಈ ಅಂಶವನ್ನು ಪ್ರಸ್ತಾಪಿಸದಿರುವುದು ದುರದೃಷ್ಟಕರ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ತಿಪಟೂರು | ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ;...

ತಿಪಟೂರು ಕೊಬ್ಬರಿ ವ್ಯಾಪಾರದಲ್ಲಿ ಅಂಡರ್ ಬಿಲ್ಲಿಂಗ್ ಆಟ ಜೋರಿದೆ. ಟೆಂಡರ್ ದರ ಒಂದಾದರೆ, ಸುತ್ತಮುತ್ತಲಿನ ಮಾರುಕಟ್ಟೆಗಳಲ್ಲಿ ನೇರ ಖರೀದಿ (URD) ಮತ್ತು ರವಾನೆ ಕೊಬ್ಬರಿ ಖರೀದಿಗೆ ಮತ್ತೊಂದು ಬೆಲೆ ನಿಗದಿಯಾಗಿದೆ. ಅಂಡರ್ ಬಿಲ್ಲಿಂಗ್...

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

ಕಬ್ಬಿನ ಬೀಜ, ಗೊಬ್ಬರ, ಕೃಷಿ ಕೂಲಿ, ನೀರಾವರಿ, ವಿದ್ಯುತ್, ಡೀಸೆಲ್, ಕಟಾವು ಮತ್ತು ಸಾಗಾಣಿಕೆ ವೆಚ್ಚ ಹೆಚ್ಚಾಗಿರುವುದರಿಂದ, ಶೇ.10.25ರಷ್ಟು ಸಕ್ಕರೆ ಇಳುವರಿಗೆ ಅನ್ವಯಿಸುವ ಕೇಂದ್ರದ ನ್ಯಾಯಯುತ ಮತ್ತು ಲಾಭದಾಯಕ ಬೆಲೆ (ಎಫ್‌ಆರ್‌ಪಿ) ಹೆಚ್ಚಿಸಬೇಕು. ತಮಿಳುನಾಡಿನ ಮಾದರಿಯಲ್ಲಿ ಕೇಂದ್ರದ ಎಫ್‌ಆರ್‌ಪಿ ಜೊತೆಗೆ ಪ್ರತಿ ಟನ್‌ಗೆ ₹800 ಹೆಚ್ಚುವರಿ ರಾಜ್ಯ ಸಲಹಾ ಬೆಲೆ (ಎಸ್‌ಎಪಿ) ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಸಕ್ಕರೆಯನ್ನು ವಾಣಿಜ್ಯ ಉದ್ದೇಶಗಳಿಗೆ ಬಳಸುವ ಬೃಹತ್ ಕೈಗಾರಿಕೆಗಳು, ತಂಪು ಪಾನೀಯ ಕಂಪನಿಗಳು ಹಾಗೂ ಆಹಾರ ಸಂಸ್ಕರಣಾ ಘಟಕಗಳಿಗೆ ಹೆಚ್ಚಿನ ದರ ನಿಗದಿಪಡಿಸಿ, ಅದರಿಂದ ದೊರೆಯುವ ಹೆಚ್ಚುವರಿ ಆದಾಯದ ಒಂದು ಭಾಗವನ್ನು ರೈತರಿಗೆ ನೀಡಬೇಕು. ಸಕ್ಕರೆ ಕಾರ್ಖಾನೆಗಳಿಗೆ ಮೊಲಾಸಿಸ್, ಬಗಾಸ್, ಎಥನಾಲ್ ಮತ್ತು ವಿದ್ಯುತ್ ಉತ್ಪಾದನೆಯಿಂದ ದೊರೆಯುವ ಆದಾಯವನ್ನೂ ಪರಿಗಣಿಸಿ ರೈತರಿಗೆ ನ್ಯಾಯಯುತ ಬೆಲೆ ಒದಗಿಸಬೇಕು ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಹೆಚ್ಚುವರಿ ಬೆಲೆ ನಿಗದಿಪಡಿಸಿದಾಗ ಕೆಲವು ಸಕ್ಕರೆ ಕಾರ್ಖಾನೆಗಳು ನ್ಯಾಯಾಲಯದ ಮೊರೆ ಹೋಗಿ ತಡೆಯಾಜ್ಞೆ ತರುವುದರಿಂದ ರೈತರಿಗೆ ಹಣ ಸಕಾಲದಲ್ಲಿ ದೊರೆಯುತ್ತಿಲ್ಲ. ಹೀಗಾಗಿ ಕಾನೂನುಬದ್ಧವಾಗಿ ರೈತರಿಗೆ ಹೆಚ್ಚುವರಿ ಬೆಲೆ ಪಾವತಿಯಾಗುವಂತೆ ವ್ಯವಸ್ಥೆ ರೂಪಿಸಬೇಕು ಎಂದು ಆಗ್ರಹಿಸಿದ್ದಾರೆ.

ಪ್ರತಿ ರೈತನ ಕಬ್ಬಿನ ಸಕ್ಕರೆ ಇಳುವರಿಯನ್ನು ಪ್ರತ್ಯೇಕವಾಗಿ ವೈಜ್ಞಾನಿಕವಾಗಿ ಪರೀಕ್ಷಿಸಿ ಬೆಲೆ ನಿಗದಿಪಡಿಸಬೇಕು. ಕಟಾವು ಯಂತ್ರದ ಮೂಲಕ ಕಬ್ಬು ಕಟಾವು ಮಾಡಿದಾಗ ವೇಸ್ಟೇಜ್ ಹೆಸರಿನಲ್ಲಿ ಶೇ.8ರಿಂದ 10ರಷ್ಟು ತೂಕ ಕಡಿತ ಮಾಡುವುದನ್ನು ನಿಷೇಧಿಸಬೇಕು. ಕಟಾವು ಮತ್ತು ಸಾಗಾಣಿಕೆ ವೆಚ್ಚವನ್ನು ಕಾರ್ಖಾನೆಗಳೇ ಭರಿಸುವಂತೆ ಮಾಡಿ, ರೈತರಿಗೆ ಹೊಲದಲ್ಲಿನ ಕಬ್ಬಿನ ದರವನ್ನು ನಿಗದಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಕಬ್ಬು ಪೂರೈಸಿದ 14 ದಿನಗಳೊಳಗೆ ರೈತರಿಗೆ ಹಣ ಪಾವತಿಸುವುದನ್ನು ಕಡ್ಡಾಯಗೊಳಿಸಬೇಕು. ವಿಳಂಬ ಪಾವತಿಗೆ ಬಡ್ಡಿ ವಿಧಿಸುವುದರ ಜತೆಗೆ, ನಿಯಮ ಉಲ್ಲಂಘಿಸುವ ಕಾರ್ಖಾನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ರೈತರ ಬಾಕಿ ಹಣ ವಸೂಲಿಗೆ ಜಿಲ್ಲಾಧಿಕಾರಿಗಳಿಗೆ ಪರಿಣಾಮಕಾರಿ ಅಧಿಕಾರ ನೀಡಬೇಕು. ಬೆಂಕಿಯಿಂದ ಕಬ್ಬಿನ ಬೆಳೆ ನಷ್ಟವಾದಾಗ ನೀಡುವ ಪರಿಹಾರಧನವನ್ನೂ ಪ್ರಸ್ತುತ ಉತ್ಪಾದನಾ ವೆಚ್ಚಕ್ಕೆ ಅನುಗುಣವಾಗಿ ಪರಿಷ್ಕರಿಸಬೇಕು ಎಂದು ಹೇಳಿದ್ದಾರೆ.

ಬರಗಾಲ, ಅತಿವೃಷ್ಟಿ, ಅನಾವೃಷ್ಟಿ ಮತ್ತು ಬೆಳೆ ನಷ್ಟದಿಂದ ರೈತರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯದಲ್ಲಿ ₹40,000 ಕೋಟಿಗೂ ಅಧಿಕ ಬೆಳೆ ನಷ್ಟ ಸಂಭವಿಸಿರುವುದರಿಂದ ಸಾಲ ಮರುಪಾವತಿ ಕಷ್ಟವಾಗಿದೆ. ರಾಷ್ಟ್ರೀಕೃತ, ಸಹಕಾರಿ ಹಾಗೂ ಗ್ರಾಮೀಣ ಬ್ಯಾಂಕುಗಳು ಸೇರಿದಂತೆ ಅಧಿಕೃತ ಹಣಕಾಸು ಸಂಸ್ಥೆಗಳಲ್ಲಿ ರೈತರು ಪಡೆದಿರುವ ಕೃಷಿ ಸಾಲಗಳನ್ನು ಸಂಪೂರ್ಣವಾಗಿ ಮನ್ನಾ ಮಾಡಬೇಕು. ಸಾಲಮನ್ನಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೆ ಬಲವಂತದ ಸಾಲ ವಸೂಲಾತಿ ಮತ್ತು ಆಸ್ತಿ ಜಪ್ತಿಯನ್ನು ತಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ಗ್ರಾಮೀಣ ಮಹಿಳೆಯರು ಖಾಸಗಿ ಫೈನಾನ್ಸ್ ಕಂಪನಿಗಳು ಮತ್ತು ಕಿರುಹಣಕಾಸು ಸಂಸ್ಥೆಗಳಿಂದ ಪಡೆದ ಸಾಲಗಳನ್ನು ಮರುಪಾವತಿಸಲು ಸಾಧ್ಯವಾಗದೆ ಸಂಕಷ್ಟ ಎದುರಿಸುತ್ತಿದ್ದಾರೆ. ಸಾಲ ವಸೂಲಾತಿ ಸಂದರ್ಭದಲ್ಲಿ ಮಹಿಳೆಯರಿಗೆ ಮಾನಸಿಕ ಕಿರುಕುಳ, ಅವಮಾನ ಮತ್ತು ಬೆದರಿಕೆ ಹಾಕುತ್ತಿರುವ ದೂರುಗಳಿವೆ. ಆದ್ದರಿಂದ ಗ್ರಾಮೀಣ ಮಹಿಳೆಯರು ಪಡೆದಿರುವ ಸಾಲಗಳ ವಸೂಲಾತಿಯನ್ನು ಎರಡು ವರ್ಷಗಳವರೆಗೆ ಸ್ಥಗಿತಗೊಳಿಸಲು ಕಾನೂನುಬದ್ಧ ಕ್ರಮ ಕೈಗೊಳ್ಳಬೇಕು. ಬಡ್ಡಿ ರಿಯಾಯಿತಿ, ಸಾಲ ಪುನರ್‌ರಚನೆ ಮತ್ತು ವಿಶೇಷ ಆರ್ಥಿಕ ನೆರವು ನೀಡಬೇಕು. ಮಹಿಳೆಯರಿಗೆ ಕಿರುಕುಳ ನೀಡುವ ಹಣಕಾಸು ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸಾ ವೆಚ್ಚ ಮತ್ತು ಔಷಧಿಗಳ ದರಪಟ್ಟಿಯನ್ನು ಕಡ್ಡಾಯವಾಗಿ ಪ್ರಕಟಿಸುವ ಕುರಿತು ಆರೋಗ್ಯ ಸಚಿವ ಖಾದರ್ ವ್ಯಕ್ತಪಡಿಸಿರುವ ನಿರ್ಧಾರವನ್ನು ಸ್ವಾಗತಿಸಿರುವ ಕುರುಬೂರು ಶಾಂತಕುಮಾರ್, ಅದನ್ನು ಕೂಡಲೇ ಜಾರಿಗೆ ತರಬೇಕು ಎಂದು ಒತ್ತಾಯಿಸಿದ್ದಾರೆ. ದರಪಟ್ಟಿ ಪ್ರಕಟಿಸುವುದರಿಂದ ಚಿಕಿತ್ಸಾ ವೆಚ್ಚದಲ್ಲಿ ಪಾರದರ್ಶಕತೆ ಹೆಚ್ಚಲಿದ್ದು, ಬಡವರು ಮತ್ತು ಸಾಮಾನ್ಯ ಜನರ ಮೇಲಿನ ಆರ್ಥಿಕ ಹೊರೆ ಕಡಿಮೆಯಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ವಿಶೇಷ ವರದಿ ಓದಿದ್ದೀರಾ? ‘ಟಿಪ್ಪು ನಿಜ ಕನಸು’ಗಳಿಂದ ‘ಗಾಂಧೀ ಹತ್ಯೆಯ ಸತ್ಯ’ದವರೆಗೆ: ಇತಿಹಾಸ ತಿರುಚುವಿಕೆಯ ಸುತ್ತ ಮತ್ತೆ ವಿವಾದ

ಅಕ್ಟೋಬರ್ 26ರಂದು ಬೆಳಗಾವಿಯಲ್ಲಿ ನಡೆಯುವ ಸಭೆಯಲ್ಲಿ ಮುಖ್ಯಮಂತ್ರಿ ಮತ್ತು ಸಂಬಂಧಪಟ್ಟ ಸಚಿವರು ರೈತರ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸಿ, ಕಾಲಮಿತಿಯೊಳಗೆ ನಿರ್ಧಾರ ಕೈಗೊಳ್ಳಬೇಕು. ಸಭೆ ಕೇವಲ ಭರವಸೆಗಳಿಗೆ ಸೀಮಿತವಾಗದೆ, ರೈತರಿಗೆ ನ್ಯಾಯಯುತ ಬೆಲೆ, ಸಾಲದ ಹೊರೆಯಿಂದ ಮುಕ್ತಿ ಮತ್ತು ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಪರಿಣಾಮಕಾರಿ ಕ್ರಮಗಳಿಗೆ ನಾಂದಿಯಾಗಬೇಕು ಎಂದು ಕುರುಬೂರು ಶಾಂತಕುಮಾರ್ ಆಗ್ರಹಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಜಿಲ್ಲಾ ಶೋಟೊಕಾನ್ ಕರಾಟೆ ಪಟುಗಳು ರಾಜ್ಯಮಟ್ಟಕ್ಕೆ ಆಯ್ಕೆ

ಶಿವಮೊಗ್ಗ ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆ ಮತ್ತು...

ರೈತರ ಬೆನ್ನಿಗೆ ರಾಜ್ಯ ಸರ್ಕಾರ: ಸಚಿವ ಚಲುವರಾಯಸ್ವಾಮಿ ಭರವಸೆ

ರೈತರ ಸಮಸ್ಯೆಗಳಿಗೆ ಸ್ಪಂದಿಸುವುದರಿಂದ ರಾಜ್ಯ ಸರ್ಕಾರ ಹಿಂದೆ ಸರಿಯುವುದಿಲ್ಲ. ರೈತರ ಹಿತ...

ಬಾಗಲಕೋಟೆ | 77 ಪ್ರಕರಣ ದಾಖಲು, 53 ವಾಹನ ಜಪ್ತಿ; 104 ಆರೋಪಿಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆ

ಬಡವರು ಮತ್ತು ಅರ್ಹ ಫಲಾನುಭವಿಗಳಿಗೆ ಉಚಿತವಾಗಿ ತಲುಪಬೇಕಾದ ಪಡಿತರ ಅಕ್ಕಿಯನ್ನು ಕಾಳಸಂತೆಯಲ್ಲಿ...

ಹಾವೇರಿ | ಬರಪೀಡಿತ ಜಿಲ್ಲೆಯ ರೈತರಿಗೆ ಎಕರೆಗೆ ₹30,000 ಪರಿಹಾರ ನೀಡಲು ರೈತರು ಆಗ್ರಹ

"ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ, ಹಿಂಗಾರು ಬಿತ್ತನೆಯೂ ಕಷ್ಟವಾಗಿದೆ....