ಬ್ಯಾಟರಿ ತ್ಯಾಜ್ಯದ ವೈಜ್ಞಾನಿಕ ನಿರ್ವಹಣೆಗೆ ಎವರೆಡಿಯೊಂದಿಗೆ ಮೈಸೂರು ಪಾಲಿಕೆ ಒಡಂಬಡಿಕೆ

Date:

ಬ್ಯಾಟರಿ ತ್ಯಾಜ್ಯ ನಿರ್ವಹಣಾ ನಿಯಮಗಳ ಸಮರ್ಪಕ ಅನುಷ್ಠಾನ ಹಾಗೂ ನಗರದಲ್ಲಿ ಉತ್ಪತ್ತಿಯಾಗುವ ಬಳಕೆಯಾದ ಬ್ಯಾಟರಿಗಳ ವೈಜ್ಞಾನಿಕ ನಿರ್ವಹಣೆಯನ್ನು ಖಚಿತಪಡಿಸುವ ಉದ್ದೇಶದಿಂದ ಮೈಸೂರು ಮಹಾನಗರ ಪಾಲಿಕೆಯು ಎವರೆಡಿ ಬ್ಯಾಟರೀಸ್ ಸಂಸ್ಥೆಯೊಂದಿಗೆ ತಿಳಿವಳಿಕೆ ಒಡಂಬಡಿಕೆಗೆ (ಎಂಒಯು) ಸಹಿ ಹಾಕಿದೆ.

- Advertisement -

ಈ ಒಡಂಬಡಿಕೆಯ ಮುಖ್ಯ ಉದ್ದೇಶವು ಬಳಕೆಯಾದ ಬ್ಯಾಟರಿಗಳನ್ನು ಸಾಮಾನ್ಯ ಘನತ್ಯಾಜ್ಯದೊಂದಿಗೆ ಮಿಶ್ರಣ ಮಾಡದೆ ಪ್ರತ್ಯೇಕವಾಗಿ ಸಂಗ್ರಹಿಸಿ, ಅಧಿಕೃತ ಹಾಗೂ ಮಾನ್ಯತೆ ಪಡೆದ ಸಂಸ್ಥೆಗಳ ಮೂಲಕ ಅವುಗಳನ್ನು ಸಾಗಣೆ, ಮರುಸಂಸ್ಕರಣೆ ಮತ್ತು ಸುರಕ್ಷಿತವಾಗಿ ವಿಲೇವಾರಿ ಮಾಡುವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವುದಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ರೀತಿಯ ಒಡಂಬಡಿಕೆಗೆ ಸಹಿ ಹಾಕಿರುವ ಕರ್ನಾಟಕದ ಮೊದಲ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೈಸೂರು ಮಹಾನಗರ ಪಾಲಿಕೆಯೂ ಒಂದಾಗಿದ್ದು, ತ್ಯಾಜ್ಯವನ್ನು ವೈಜ್ಞಾನಿಕವಾಗಿ ನಿರ್ವಹಿಸುವುದು, ಪರಿಸರ ಮಾಲಿನ್ಯವನ್ನು ತಡೆಗಟ್ಟುವುದು ಹಾಗೂ ಸಾರ್ವಜನಿಕ ಆರೋಗ್ಯವನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಪಾಲಿಕೆಯ ಬದ್ಧತೆಯನ್ನು ಈ ಉಪಕ್ರಮ ಪ್ರತಿಬಿಂಬಿಸುತ್ತದೆ.

ಒಡಂಬಡಿಕೆಯಡಿ ಸಾರ್ವಜನಿಕರು, ವಾಣಿಜ್ಯ ಸಂಸ್ಥೆಗಳು ಹಾಗೂ ವಿವಿಧ ಘಟಕಗಳಿಂದ ಉತ್ಪತ್ತಿಯಾಗುವ ಬಳಕೆಯಾದ ಬ್ಯಾಟರಿಗಳನ್ನು ಪ್ರತ್ಯೇಕವಾಗಿ ಸಂಗ್ರಹಿಸಿ, ಅಧಿಕೃತ ಸಂಗ್ರಹಣಾ ವ್ಯವಸ್ಥೆಯ ಮೂಲಕ ಮಾನ್ಯತೆ ಪಡೆದ ಮರುಸಂಸ್ಕರಣಾ ಸಂಸ್ಥೆಗಳಿಗೆ ಹಸ್ತಾಂತರಿಸಲು ಕ್ರಮ ಕೈಗೊಳ್ಳಲಾಗುವುದು. ಜೊತೆಗೆ ಬ್ಯಾಟರಿ ತ್ಯಾಜ್ಯವನ್ನು ಸಾಮಾನ್ಯ ತ್ಯಾಜ್ಯದೊಂದಿಗೆ ವಿಲೇವಾರಿ ಮಾಡುವುದರಿಂದ ಉಂಟಾಗುವ ಪರಿಸರ ಹಾಗೂ ಆರೋಗ್ಯದ ದುಷ್ಪರಿಣಾಮಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನೂ ಹಮ್ಮಿಕೊಳ್ಳಲಾಗುತ್ತದೆ.

ಈ ವಿಶೇಷ ಸುದ್ದಿ ಓದಿದ್ದೀರಾ?ಚಾಮರಾಜನಗರ ಜಿಲ್ಲೆಯ ‘SIR’ ಪ್ರಕ್ರಿಯೆ ಅಂಕಿಅಂಶಗಳ ಸಾಧನೆಯೋ, ಪ್ರಜಾಪ್ರಭುತ್ವದ ಪರೀಕ್ಷೆಯೋ?

ಮೈಸೂರು ನಗರವನ್ನು ಸ್ವಚ್ಛ, ಸುರಕ್ಷಿತ ಹಾಗೂ ಪರಿಸರಸ್ನೇಹಿ ನಗರವನ್ನಾಗಿಸುವ ನಿಟ್ಟಿನಲ್ಲಿ ಈ ಸಹಭಾಗಿತ್ವವು ಮತ್ತೊಂದು ಮಹತ್ವದ ಹೆಜ್ಜೆಯಾಗಿದ್ದು, ಬಳಕೆಯಾದ ಬ್ಯಾಟರಿಗಳನ್ನು ಸಾಮಾನ್ಯ ತ್ಯಾಜ್ಯದೊಂದಿಗೆ ಮಿಶ್ರಣ ಮಾಡದೆ ಪ್ರತ್ಯೇಕವಾಗಿ ಸಂಗ್ರಹಿಸಿ, ಪಾಲಿಕೆ ಸೂಚಿಸುವ ಅಧಿಕೃತ ವ್ಯವಸ್ಥೆಗೆ ಹಸ್ತಾಂತರಿಸುವಂತೆ ಮೈಸೂರು ಮಹಾನಗರ ಪಾಲಿಕೆ ಸಾರ್ವಜನಿಕರು ಹಾಗೂ ವಿವಿಧ ಸಂಸ್ಥೆಗಳಿಗೆ ಮನವಿ ಮಾಡಿದೆ.

ಈ ವಿಶೇಷ ಸುದ್ದಿ ಓದಿದ್ದೀರಾ?ಮಾನವೀಯತೆಗೂ SIRಗೂ ಸಂಬಂಧವೇನು? ಪ್ರಜಾಪ್ರಭುತ್ವದ ಹಕ್ಕು, ದಾಖಲೆಗಳ ಗೊಂದಲ-ಉತ್ತರ ಸಿಗದ ಪ್ರಶ್ನೆಗಳು

ಒಡಂಬಡಿಕೆ ಕಾರ್ಯಕ್ರಮದಲ್ಲಿ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಸವಿತಾ ಎಂ.ಕೆ., ಕಾರ್ಯಪಾಲಕ ಅಭಿಯಂತರ (ಪರಿಸರ) ಮೃತ್ಯುಂಜಯ ಕೆ.ಎಸ್., ಎವರೆಡಿ ಬ್ಯಾಟರೀಸ್ ಸಂಸ್ಥೆಯ ಹಿರಿಯ ಪ್ರಧಾನ ವ್ಯವಸ್ಥಾಪಕ (ಕಾರ್ಯಾಚರಣೆ) ಪ್ರಸಾದ್ ತಂತ್ರಿ ಹಾಗೂ ವ್ಯವಸ್ಥಾಪಕ (ಮಾನವ ಸಂಪನ್ಮೂಲ, ಕೈಗಾರಿಕಾ ಸಂಬಂಧ ಮತ್ತು ಆಡಳಿತ) ನಾಗೇಶ್ ಎಸ್. ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...