80 ತ್ಯಾಜ್ಯಮುಕ್ತ ತಾಣಗಳ ಗುರಿ: ಮೈಸೂರು ಪಾಲಿಕೆಯಿಂದ ಸ್ವಚ್ಛತಾ ಅಭಿಯಾನ

Date:

80ನೇ ಸ್ವಾತಂತ್ರೋತ್ಸವದ ಅಂಗವಾಗಿ ಮೈಸೂರು ಮಹಾನಗರ ಪಾಲಿಕೆಯ ವತಿಯಿಂದ ಹಮ್ಮಿಕೊಳ್ಳಲಾಗಿರುವ ‘ಸ್ವಾತಂತ್ರೋತ್ಸವ ಸ್ವಚ್ಛತಾ ಅಭಿಯಾನ-2026: 80 ತ್ಯಾಜ್ಯ ಮುಕ್ತ ತಾಣಗಳು’ ಅಭಿಯಾನದ ಭಾಗವಾಗಿ ಬುಧವಾರ ಬೆಳಿಗ್ಗೆ 6.30 ಗಂಟೆಗೆ ಫೈವ್ ಲೈಟ್ ಸರ್ಕಲ್ ಸಮೀಪದ ದಾವೂದ್ ಖಾನ್ ರಸ್ತೆಯಲ್ಲಿರುವ ಗಾರ್ಬೇಜ್ ವಲ್ನರಬಲ್ ಪಾಯಿಂಟ್ (GVP) ತಾಣವನ್ನು ಸ್ವಚ್ಛಗೊಳಿಸಿ ತ್ಯಾಜ್ಯಮುಕ್ತ ತಾಣವನ್ನಾಗಿ ಪರಿವರ್ತಿಸುವ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

- Advertisement -

ಕಾರ್ಯಕ್ರಮದಲ್ಲಿ ವಿವಿಧ ಸಂಘ-ಸಂಸ್ಥೆಗಳ ಸದಸ್ಯರು, ಸ್ವಯಂಸೇವಕರು ಹಾಗೂ ಸ್ಥಳೀಯ ನಾಗರಿಕರು ಉತ್ಸಾಹದಿಂದ ಭಾಗವಹಿಸಿ ಸ್ವಚ್ಛತಾ ಕಾರ್ಯದಲ್ಲಿ ಕೈಜೋಡಿಸಿದರು. ಸಾರ್ವಜನಿಕರ ಸಹಭಾಗಿತ್ವದ ಮೂಲಕ ನಗರವನ್ನು ಸ್ವಚ್ಛ ಹಾಗೂ ಸುಂದರವಾಗಿಡುವ ನಿಟ್ಟಿನಲ್ಲಿ ಪಾಲಿಕೆ ಕೈಗೊಂಡಿರುವ ಈ ಅಭಿಯಾನಕ್ಕೆ ಉತ್ತಮ ಸ್ಪಂದನೆ ವ್ಯಕ್ತವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಸ್ವಚ್ಛಗೊಳಿಸಲಾದ ತಾಣದಲ್ಲಿ ಮತ್ತೆ ತ್ಯಾಜ್ಯ ಸುರಿಯದಂತೆ ನಿರಂತರ ಮೇಲ್ವಿಚಾರಣೆ ಹಾಗೂ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದರು. ಮೈಸೂರು ನಗರದಲ್ಲಿ ಗುರುತಿಸಲಾದ ಒಟ್ಟು 80 ಗಾರ್ಬೇಜ್ ವಲ್ನರಬಲ್ ಪಾಯಿಂಟ್‌ಗಳನ್ನು ಹಂತ ಹಂತವಾಗಿ ಸ್ವಚ್ಛಗೊಳಿಸಿ ತ್ಯಾಜ್ಯಮುಕ್ತ ತಾಣಗಳನ್ನಾಗಿ ಪರಿವರ್ತಿಸುವುದು ಅಭಿಯಾನದ ಪ್ರಮುಖ ಉದ್ದೇಶವಾಗಿದೆ.

ನಗರದ ಸ್ವಚ್ಛತೆ ಮತ್ತು ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ನಾಗರಿಕರು, ಸಂಘ-ಸಂಸ್ಥೆಗಳು ಹಾಗೂ ಸ್ವಯಂಸೇವಾ ಸಂಘಟನೆಗಳು ಮೈಸೂರು ಮಹಾನಗರ ಪಾಲಿಕೆಯೊಂದಿಗೆ ಕೈಜೋಡಿಸಿ ನಗರದ ಸ್ವಚ್ಛತೆಯನ್ನು ಕಾಪಾಡುವ ಕಾರ್ಯದಲ್ಲಿ ನಿರಂತರ ಸಹಕರಿಸುವಂತೆ ಪಾಲಿಕೆ ಮನವಿ ಮಾಡಿದೆ.

‘ಸ್ವಚ್ಛ ಮೈಸೂರು-ನಮ್ಮೆಲ್ಲರ ಸಂಕಲ್ಪ’ ಎಂಬ ಧ್ಯೇಯವಾಕ್ಯದೊಂದಿಗೆ ನಗರವನ್ನು ತ್ಯಾಜ್ಯಮುಕ್ತ ಮತ್ತು ಸ್ವಚ್ಛ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಅಭಿಯಾನ ಮುಂದುವರಿಯಲಿದೆ.

ಈ ವಿಶೇಷ ಸುದ್ದಿ ಓದಿದ್ದೀರಾ?ಮತದಾರರ ಪಟ್ಟಿ ಪರಿಷ್ಕರಣೆನಾ, ದಾಖಲೆಗಳ ಪರೀಕ್ಷೆಯಾ? -SIR ಮೇಲೇಳಿಸಿರುವ ಪ್ರಶ್ನೆಗಳು

ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಸವಿತಾ ಎಂ.ಕೆ. ಅವರು ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ, ತ್ಯಾಜ್ಯ ತೆರವು ಹಾಗೂ ಸ್ಥಳ ಪರಿವರ್ತನಾ ಕಾರ್ಯವನ್ನು ಪರಿಶೀಲಿಸಿದರು. ಅವರೊಂದಿಗೆ ಪಾಲಿಕೆಯ ಹಿರಿಯ ಅಧಿಕಾರಿಗಳು, ಕಾರ್ಯಪಾಲಕ ಅಭಿಯಂತರರು, ಸಹಾಯಕ ಕಾರ್ಯಪಾಲಕ ಅಭಿಯಂತರರು, ಪರಿಸರ ಅಭಿಯಂತರರು, ಆರೋಗ್ಯ ನಿರೀಕ್ಷಕರು, ಮೇಲ್ವಿಚಾರಕರು ಹಾಗೂ ಪೌರಕಾರ್ಮಿಕರು ಸ್ವಚ್ಛತಾ ಕಾರ್ಯದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಳಾ ಶಕ್ತಿಯ ಅನಾವರಣ: ಮಂಡ್ಯ ಜಿಲ್ಲಾ ಪಂಚಾಯತ್ ಸ್ತಬ್ಧಚಿತ್ರಕ್ಕೆ ಈಶ್ವರ ಖಂಡ್ರೆ ಮೆಚ್ಚುಗೆ

ಮೈಸೂರು ದಸರಾ ಜಂಬೂಸವಾರಿಯಲ್ಲಿ ಜನಮೆಚ್ಚುಗೆ ಗಳಿಸುವುದರ ಜೊತೆಗೆ ಪ್ರಥಮ ಬಹುಮಾನ ಪಡೆದ...

ಕಬ್ಬಿನ ದರ ನಿಗದಿಗೆ ಆಗ್ರಹಿಸಿ ಮೈಶುಗರ್ ಸಕ್ಕರೆ ಗೋದಾಮಿಗೆ ರೈತರ ಮುತ್ತಿಗೆ

ಕಬ್ಬು ಬೆಳೆಗಾರರಿಗೆ ನ್ಯಾಯಯುತ ಬೆಲೆ ನೀಡಬೇಕು ಹಾಗೂ ಪ್ರತಿ ಟನ್ ಕಬ್ಬಿಗೆ...

ಕಬ್ಬು ಬೆಳೆಗಾರರ ರಕ್ಷಣೆಗೆ ಪ್ರತ್ಯೇಕ ವಿಮೆ, ನ್ಯಾಯಯುತ ಬೆಲೆ ಸೇರಿದಂತೆ 12 ಬೇಡಿಕೆ

ಕಬ್ಬು ಬೆಳೆಗಾರರಿಗೆ ಪ್ರಸಕ್ತ ಸಾಲಿನಲ್ಲಿ ಪ್ರತಿ ಟನ್ ಕಬ್ಬಿಗೆ ₹6,000 ಕನಿಷ್ಠ...

ದಾಂಡೇಲಿ | ನಗರ ಪಾರ್ಕ್ ಅಭಿವೃದ್ಧಿ ಕಾಮಗಾರಿ ಕಳಪೆ: ತನಿಖೆ ನಡೆಸಿ ಕ್ರಮಕ್ಕೆ ಡಿ. ಸ್ಯಾಮ್ಸನ್ ಆಗ್ರಹ

ಕೇಂದ್ರ ಸರ್ಕಾರದ ಅನುದಾನದಲ್ಲಿ ದಾಂಡೇಲಿ ನಗರದಲ್ಲಿ ಕೈಗೆತ್ತಿಕೊಂಡಿರುವ ಪಾರ್ಕ್ ಅಭಿವೃದ್ಧಿ ಕಾಮಗಾರಿ...