ಮೈಸೂರು | ಕೆಂಪೇಗೌಡರು ಜಾತಿ, ಧರ್ಮ, ಊರಿಗೆ ಸೀಮಿತರಲ್ಲ: ಶಾಸಕ ಟಿ.ಎಸ್. ಶ್ರೀವತ್ಸ

Date:

ನಾಡಪ್ರಭು ಕೆಂಪೇಗೌಡರು ಯಾವುದೇ ಒಂದು ಜಾತಿ, ಧರ್ಮ ಅಥವಾ ಊರಿಗೆ ಸೀಮಿತವಾಗಿರದೆ, ಇಡೀ ಸಮಾಜವನ್ನು ಅಭಿವೃದ್ಧಿಯ ದಾರಿಯಲ್ಲಿ ಮುನ್ನಡೆಸಿದ ಮಹಾನ್ ಆಡಳಿತಗಾರರಾಗಿದ್ದರು ಎಂದು ಶಾಸಕ ಟಿ.ಎಸ್. ಶ್ರೀವತ್ಸ ಹೇಳಿದರು.

- Advertisement -

ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ಕೆಂಪೇಗೌಡ ಅಭಿಮಾನಿ ಬಳಗದ ವತಿಯಿಂದ ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಜೀವದಾರ ರಕ್ತ ನಿಧಿ ಕೇಂದ್ರದ ಸಹಯೋಗದಲ್ಲಿ ಆಯೋಜಿಸಿದ್ದ ಸ್ವಯಂಪ್ರೇರಿತ ರಕ್ತದಾನ ಶಿಬಿರದಲ್ಲಿ ರಕ್ತದಾನ ಮಾಡಿದ ದಾನಿಗಳಿಗೆ ಪ್ರಮಾಣಪತ್ರ ವಿತರಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಕೆಂಪೇಗೌಡರು ಒಕ್ಕಲಿಗ ಸಮುದಾಯದವರಾಗಿದ್ದರೂ, ತಮ್ಮ ಆಡಳಿತವನ್ನು ಯಾವುದೇ ಒಂದು ಸಮುದಾಯಕ್ಕೆ ಸೀಮಿತಗೊಳಿಸಲಿಲ್ಲ. ಅವರು ನಿರ್ಮಿಸಿದ ಬೆಂಗಳೂರು ನಗರವೇ ಇದಕ್ಕೆ ಜೀವಂತ ಸಾಕ್ಷಿಯಾಗಿದ್ದು, ವಿವಿಧ ಸಮುದಾಯಗಳ ಜನರಿಗೆ ಪ್ರತ್ಯೇಕ ಕೇರಿಗಳನ್ನು ನಿರ್ಮಿಸಿ, ಅವರ ಹೆಸರಿನಲ್ಲಿಯೇ ಗುರುತಿನೊಂದಿಗೆ ಅಭಿವೃದ್ಧಿಪಡಿಸಿದ್ದರು ಎಂದು ಹೇಳಿದರು.

ಕೆಂಪೇಗೌಡರ ಆಡಳಿತ ಮಾದರಿ ಇತರ ರಾಜರಿಗೂ ಆದರ್ಶವಾಗಿತ್ತು. ನ್ಯಾಯಸಮ್ಮತ, ದೂರದೃಷ್ಟಿಯ ಮತ್ತು ಜನಪರ ಆಡಳಿತ ನಡೆಸಿದ ಅವರ ಸಾಧನೆಗಳು ಇತಿಹಾಸದ ಪುಟಗಳಲ್ಲಿ ಅಜರಾಮರವಾಗಿವೆ. ಇಂತಹ ಮಹಾನ್ ನಾಯಕ ನೆಲೆಸಿದ ನಾಡಿನಲ್ಲಿ ಬದುಕುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ ಎಂದು ಶ್ರೀವತ್ಸ ಅಭಿಪ್ರಾಯಪಟ್ಟರು.

ನಾಡಪ್ರಭು ಕೆಂಪೇಗೌಡರ ಆದರ್ಶಗಳು ಇಂದಿನ ಸಮಾಜಕ್ಕೂ ಪ್ರಸ್ತುತವಾಗಿದ್ದು, ಅವರ ಜನಪರ ಆಡಳಿತ, ಸಾಮಾಜಿಕ ಸಾಮರಸ್ಯ ಮತ್ತು ಅಭಿವೃದ್ಧಿಯ ಚಿಂತನೆಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ?ಮೈಸೂರು ಕಲಾಮಂದಿರದಲ್ಲಿ ಅಕ್ಕ ನಾಗಲಾಂಬಿಕೆಯ ಬದುಕು ಜೀವಂತಗೊಳಿಸಿದ ಏಕವ್ಯಕ್ತಿ ನಾಟಕ

ಕಾರ್ಯಕ್ರಮದಲ್ಲಿ ಜೀವದಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಮಾಜಿ ನಗರಪಾಲಿಕೆ ಸದಸ್ಯ ಜಗದೀಶ್, ಜಯ ಕರ್ನಾಟಕ ಸಂಘದ ನಗರಾಧ್ಯಕ್ಷ ಶ್ರೀಹರ್ಷ, ಕಿರಣ್ ಗೌಡ, ವಾಣಿಶ್, ಪ್ರದೀಪ್ ಕುಮಾರ್, ಆರ್‌ಎಂಪಿ ಸತೀಶ್, ಪ್ರಭು ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...