ಮೈಸೂರು | ಶಿಷ್ಯವೇತನ ವಿವಾದಕ್ಕೆ ತೆರೆ: 116 ಸಂಶೋಧನಾ ವಿದ್ಯಾರ್ಥಿಗಳಿಗೆ ಪರಿಹಾರದ ಭರವಸೆ

Date:

ಮೈಸೂರು ವಿಶ್ವವಿದ್ಯಾಲಯದ 2026-27ನೇ ಸಾಲಿನ ಸಂಶೋಧನಾ ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡುವಂತೆ ಆಗ್ರಹಿಸಿ ನಡೆಯುತ್ತಿದ್ದ ಪ್ರತಿಭಟನೆಗೆ ಪರಿಹಾರ ಕಂಡುಹಿಡಿಯುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಸಮಾಜ ಕಲ್ಯಾಣ ಸಚಿವರು ಅಧಿಕಾರಿಗಳು ಹಾಗೂ ವಿಶ್ವವಿದ್ಯಾಲಯದ ಆಡಳಿತದೊಂದಿಗೆ ಸಭೆ ನಡೆಸಿ, ಎಲ್ಲಾ 116 ಸಂಶೋಧನಾ ವಿದ್ಯಾರ್ಥಿಗಳಿಗೂ ಪ್ರವೇಶಾತಿ ಹಾಗೂ ಶಿಷ್ಯವೇತನ ಕಲ್ಪಿಸಲು ಕ್ರಮ ಕೈಗೊಳ್ಳುವಂತೆ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

- Advertisement -

2026-27ನೇ ಸಾಲಿನಲ್ಲಿ ಸಂಶೋಧನೆಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಶಿಷ್ಯವೇತನ ನೀಡಬೇಕು ಎಂದು ಒತ್ತಾಯಿಸಿ ವಿದ್ಯಾರ್ಥಿಗಳು ಮೈಸೂರಿನ ಕ್ರಾಫರ್ಡ್ ಭವನದ ಎದುರು ಧರಣಿ ನಡೆಸಿದ್ದರು. ಈ ಪ್ರತಿಭಟನೆಗೆ ದಲಿತ ಸಂಘರ್ಷ ಸಮಿತಿ ಸೇರಿದಂತೆ ವಿವಿಧ ದಲಿತ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದವು. ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಎನ್.ಕೆ. ಲೋಕನಾಥ್ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಪ್ರತಿಭಟನಾಕಾರರು ಆರೋಪಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಸಚಿವರು ಮಧ್ಯಪ್ರವೇಶಿಸಿ, ಉನ್ನತ ಶಿಕ್ಷಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿಶ್ವವಿದ್ಯಾಲಯದ ಅಧಿಕಾರಿಗಳನ್ನು ಬೆಂಗಳೂರಿಗೆ ಕರೆಸಿ ಸಭೆ ನಡೆಸಿದರು. ಸಭೆಯಲ್ಲಿ ವಿದ್ಯಾರ್ಥಿಗಳ ಪ್ರಮುಖ ಬೇಡಿಕೆಗಳನ್ನು ಅಧಿಕಾರಿಗಳ ಗಮನಕ್ಕೆ ತಂದ ಸಚಿವರು, ಪ್ರವೇಶ ಪರೀಕ್ಷೆಯಲ್ಲಿ (ಎಂಟ್ರೆನ್ಸ್) ಉತ್ತೀರ್ಣರಾಗಿರುವ ಎಲ್ಲಾ 116 ವಿದ್ಯಾರ್ಥಿಗಳಿಗೆ ಪ್ರವೇಶಾತಿ ನೀಡುವುದರ ಜೊತೆಗೆ ಶಿಷ್ಯವೇತನಕ್ಕೂ ಪರಿಗಣಿಸಬೇಕು ಎಂದು ನಿರ್ದೇಶನ ನೀಡಿದರು.

ಈ ವೇಳೆ ಕುಲಪತಿ ಪ್ರೊ. ಎನ್.ಕೆ. ಲೋಕನಾಥ್ ಮಾತನಾಡಿ, ಮಂಡ್ಯ ಮತ್ತು ಚಾಮರಾಜನಗರ ವಿಶ್ವವಿದ್ಯಾಲಯಗಳು ಪ್ರತ್ಯೇಕವಾದ ಬಳಿಕ ಮೈಸೂರು ವಿಶ್ವವಿದ್ಯಾಲಯಕ್ಕೆ ಆರ್ಥಿಕ ಸಂಪನ್ಮೂಲಗಳ ಕೊರತೆ ಉಂಟಾಗಿದೆ. ಈ ಹಿನ್ನೆಲೆಯಲ್ಲಿ ಇಷ್ಟೊಂದು ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳಿಗೆ ಶಿಷ್ಯವೇತನದ ಸಂಪೂರ್ಣ ವೆಚ್ಚವನ್ನು ಭರಿಸಲು ವಿಶ್ವವಿದ್ಯಾಲಯಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, 116 ವಿದ್ಯಾರ್ಥಿಗಳ ಪೈಕಿ 58 ಮಂದಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ಹಾಗೂ ಉಳಿದ 58 ಮಂದಿಗೆ ವಿಶ್ವವಿದ್ಯಾಲಯದಿಂದ ಶಿಷ್ಯವೇತನ ನೀಡುವಂತೆ ಜಂಟಿ ವ್ಯವಸ್ಥೆ ರೂಪಿಸಬೇಕು ಎಂದು ಸೂಚಿಸಿದರು. ಈ ಪ್ರಸ್ತಾವನೆಗೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆಯ ಅಧಿಕಾರಿಗಳು ಸಹ ಸಮ್ಮತಿ ಸೂಚಿಸಿದರು.

ಬಳಿಕ ವಿದ್ಯಾರ್ಥಿಗಳು ಹಾಗೂ ಸಂಶೋಧನಾ ವಿದ್ಯಾರ್ಥಿಗಳ ಸಂಘದ ಮುಖಂಡರೊಂದಿಗೆ ಸಚಿವರು ಚರ್ಚಿಸಿ, ವಿಶ್ವವಿದ್ಯಾಲಯದಲ್ಲಿ ಮಾರ್ಗದರ್ಶಕರು ತಮ್ಮ ಸಾಮರ್ಥ್ಯಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳನ್ನು ಸಂಶೋಧನೆಗೆ ಸೇರಿಸಿಕೊಂಡಿರುವುದೇ ಈ ಸಮಸ್ಯೆಗೆ ಕಾರಣವಾಗಿದೆ ಎಂದು ಹೇಳಿದರು. ಮುಂದಿನ ವರ್ಷಗಳಲ್ಲಿ ಇಷ್ಟು ಹೆಚ್ಚಿನ ಸಂಖ್ಯೆಯ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳುವುದು ಸಾಧ್ಯವಾಗುವುದಿಲ್ಲ. ಆದ್ದರಿಂದ ವಿದ್ಯಾರ್ಥಿಗಳು ಸಹ ಪರಿಸ್ಥಿತಿಯನ್ನು ಅರ್ಥ ಮಾಡಿಕೊಂಡು ಸಹಕರಿಸಬೇಕು ಎಂದು ಮನವಿ ಮಾಡಿದರು.

ಈ ಸುದ್ಧಿ ಓದಿದ್ದೀರಾ?ಮೈಸೂರು | ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಇಲ್ಲ, ರೈತರ ಹಿತವೇ ಮೊದಲ ಆದ್ಯತೆ: ಡಾ. ಹೆಚ್.ಸಿ. ಮಹದೇವಪ್ಪ

ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ತುಳಸಿ ಮದ್ದಿನೇನಿ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೋಹನ್ ರಾಜ್ ಹಾಗೂ ಮೈಸೂರು ವಿಶ್ವವಿದ್ಯಾಲಯದ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...