ಮೈಸೂರು | ‘ಯೋಗ’ ಆರೋಗ್ಯಕರ ಸಮಾಜ ನಿರ್ಮಾಣದ ದಾರಿದೀಪ: ಡಾ. ವೆಂಕಟಕೃಷ್ಣ

Date:

ಆಯುಷ್ ಇಲಾಖೆ, ಸರ್ಕಾರಿ ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಆಸ್ಪತ್ರೆ, ಮೈಸೂರು ಇವರ ಸಂಯುಕ್ತ ಆಶ್ರಯದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಮಹಾವಿದ್ಯಾಲಯದ ಆವರಣದಲ್ಲಿ ಆಚರಿಸಲಾಯಿತು.

- Advertisement -

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ, ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಕೆ.ವಿ. ವೆಂಕಟಕೃಷ್ಣ, ಯೋಗ ಆರೋಗ್ಯಕರ ಸಮಾಜ ನಿರ್ಮಾಣದ ದಾರಿದೀಪವಾಗಿದ್ದು, ಎಲ್ಲರೂ ರೂಢಿಸಿಕೊಳ್ಳಬೇಕು, ಆರೋಗ್ಯವಂತರಾಗಬೇಕು ಎಂದು ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಮುಖ್ಯ ಅತಿಥಿ ವಿಧಾನ ಪರಿಷತ್ ಸದಸ್ಯರಾದ ಶ್ರೀ ಕೆ. ವಿವೇಕಾನಂದ ಅವರು ಮಾತನಾಡಿ, ಯೋಗವು ಭಾರತದ ಅಮೂಲ್ಯ ಪರಂಪರೆಯಾಗಿದ್ದು, ಇಂದು ವಿಶ್ವದಾದ್ಯಂತ ಆರೋಗ್ಯ ಸಂರಕ್ಷಣೆಯ ಪ್ರಮುಖ ಸಾಧನವಾಗಿ ಗುರುತಿಸಿಕೊಂಡಿದೆ ಎಂದು ಹೇಳಿದರು. ಯೋಗಾಭ್ಯಾಸದಿಂದ ಜೀವನದಲ್ಲಿ ಶಿಸ್ತು, ಏಕಾಗ್ರತೆ ಮತ್ತು ಸಮತ್ವವನ್ನು ಬೆಳೆಸಿಕೊಳ್ಳಬಹುದು. ಅಂತರಾಷ್ಟ್ರೀಯ ಯೋಗ ದಿನಾಚರಣೆಯು ಯೋಗದ ಮಹತ್ವವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಹೆಚ್ಚಿಸಿದ್ದು, ಯುವಜನತೆ ಯೋಗದತ್ತ ಹೆಚ್ಚಿನ ಆಸಕ್ತಿ ತೋರಬೇಕು ಎಂದು ಕರೆ ನೀಡಿದರು.

ಅಧ್ಯಕ್ಷೀಯ ಭಾಷಣದಲ್ಲಿ ಡಾ. ವೆಂಕಟಕೃಷ್ಣ ಕೆ.ವಿ. ಅವರು, “ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ; ಅದು ಸಮಗ್ರ ಜೀವನ ಪದ್ಧತಿಯಾಗಿದೆ. ಯೋಗದ ಮೂಲಕ ದೈಹಿಕ, ಮಾನಸಿಕ ಹಾಗೂ ಆಧ್ಯಾತ್ಮಿಕ ಆರೋಗ್ಯವನ್ನು ಸಾಧಿಸಬಹುದು. ಇಂದಿನ ಒತ್ತಡದ ಜೀವನಶೈಲಿಯಲ್ಲಿ ಯೋಗವು ಆರೋಗ್ಯಕರ ಮತ್ತು ಸಂತುಷ್ಟ ಜೀವನಕ್ಕೆ ದಾರಿದೀಪವಾಗಿದೆ. ಪ್ರತಿಯೊಬ್ಬರೂ ಯೋಗವನ್ನು ತಮ್ಮ ದೈನಂದಿನ ಜೀವನದ ಭಾಗವನ್ನಾಗಿ ಮಾಡಿಕೊಳ್ಳಬೇಕು” ಎಂದು ಹೇಳಿದರು.

ಈ ಸುದ್ದಿ ಓದೋದ್ದಿರಾ?ಕೊಡಗು | ಗಾಜಿನ ಸೇತುವೆ, ಹೋಂಸ್ಟೇ ಹಾಗೂ ರೆಸಾರ್ಟ್‌ಗಳ ಪರಿಶೀಲನೆ: ನಿಯಮ ಪಾಲನೆಗೆ ಜಿಲ್ಲಾಧಿಕಾರಿ ಸೂಚನೆ

ಕಾರ್ಯಕ್ರಮದಲ್ಲಿ ಸರ್ಕಾರಿ ಹೈಟೆಕ್ ಪಂಚಕರ್ಮ ಆಸ್ಪತ್ರೆಯ ಉಪವೈದ್ಯಕೀಯ ಅಧೀಕ್ಷಕಿ ಡಾ. ವಾಣಿಶ್ರೀ, ಸರ್ಕಾರಿ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಪ್ರಾಚಾರ್ಯ ಡಾ. ಶ್ರೀವತ್ಸ, ಸ್ವಸ್ತವೃತ್ತ ವಿಭಾಗದ ಮುಖ್ಯಸ್ಥ ಡಾ. ಸುಧೀಂದ್ರ ಜಿ. ನವಳೆ, ಆಸ್ಪತ್ರೆಯ ನಿವಾಸಿ ವೈದ್ಯಾಧಿಕಾರಿ ಡಾ. ಭಾರತೀಶ್ ಡಿ.ಎಸ್., ನ್ಯೂ ಮೆಡ್ ಹೆಲ್ತ್ ಮೈಸೂರು ಸಂಸ್ಥೆಯ ಎಂಡಿ ಹಾಗೂ ಸಿಇಒ ಡಾ. ಮುರಳಿ ಆರ್. ನಾಡಿಗ, ಸಂಸ್ಥೆಯ ನಿವೃತ್ತ ಪ್ರಾಚಾರ್ಯ ಡಾ. ಗಜಾನನ ಹೆಗಡೆ, ಆಡಳಿತಾಧಿಕಾರಿ ನಂಜುಂಡಸ್ವಾಮಿ, ಸುಜಾತ ಸೇರಿದಂತೆ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು, ಯೋಗಾಸಕ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...

ಬಾಗೇಪಲ್ಲಿ | ದ್ವಿಭಾಷಾ ನೀತಿ ಕೈಬಿಟ್ಟು ತ್ರಿಭಾಷಾ ಸೂತ್ರವನ್ನುಮುಂದುವರಿಸಬೇಕು ಎಂದು ಬೆಂಗಳೂರು ಛಲೋ

ರಾಜ್ಯದಲ್ಲಿ 15 ಸಾವಿರ ಹಿಂದಿ ಶಿಕ್ಷಕರು ಹಾಗೂ ಅವರ ಕುಟುಂಬದವರ ಹಿತದೃಷ್ಟಿಯಿಂದ...

ಶ್ರೀನಿವಾಸಪುರ | ಮೂರು ತಿಂಗಳಲ್ಲಿ ರೈತರಿಗೆ ಕೆಸಿಸಿ ಸಾಲ: ಕಸಬಾ ರೇಷ್ಮೆ ಬೆಳೆಗಾರರ ಸಂಘ ಸಂಜೀವಿನಿಯಾಗಲಿದೆ

ರೈತರಿಗೆ ಅಗತ್ಯವಿರುವ ಸಂದರ್ಭದಲ್ಲಿ ಸಾಲ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಮುಂದಿನ ಮೂರು...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು ಸಾಕಣೆದಾರರಿಗೂ ಸಂಕಷ್ಟ

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ...