ಮೈಸೂರು | ರಾಜ್ಯದಲ್ಲಿ 10 ಸಾವಿರ ‘ಭಾರತ್ ಜೋಡೋ ಯುವ ಸಂಘ’ಗಳ ಸ್ಥಾಪನೆಗೆ ಸ್ವಾಗತ: ನಾಗೇಶ್ ಕರಿಯಪ್ಪ

Date:

ಕರ್ನಾಟಕದ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಯುವಜನರನ್ನು ಸಂಘಟಿಸಿ, ಅವರ ಪ್ರತಿಭೆ, ನಾಯಕತ್ವ, ಕ್ರೀಡೆ, ಸಂಸ್ಕೃತಿ ಮತ್ತು ಸಮಾಜಸೇವಾ ಮನೋಭಾವವನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯದಾದ್ಯಂತ 10 ಸಾವಿರ ‘ಭಾರತ್ ಜೋಡೋ ಯುವ ಸಂಘ’ಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿರುವುದನ್ನು ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಕಾರ್ಯದರ್ಶಿ ನಾಗೇಶ್ ಕರಿಯಪ್ಪ ಸ್ವಾಗತಿಸಿದ್ದಾರೆ.

- Advertisement -

ಮೈಸೂರಿನಲ್ಲಿ ಗುರುವಾರ ಪತ್ರಿಕಾ ಹೇಳಿಕೆ ನೀಡಿದ ಅವರು, ಯುವಜನರ ಸಬಲೀಕರಣದ ದೃಷ್ಟಿಯಿಂದ ಇದು ಐತಿಹಾಸಿಕ ಹಾಗೂ ದೂರದೃಷ್ಟಿಯ ನಿರ್ಧಾರವಾಗಿದೆ ಎಂದು ಹೇಳಿದರು. ಪಕ್ಷ, ಜಾತಿ, ಧರ್ಮ, ಸಮುದಾಯ ಅಥವಾ ಸಾಮಾಜಿಕ ಹಿನ್ನೆಲೆಯ ಭೇದವಿಲ್ಲದೆ ಗ್ರಾಮ ಪಂಚಾಯಿತಿ ಹಾಗೂ ನಗರ ವಾರ್ಡ್ ಮಟ್ಟದಲ್ಲಿ ಪ್ರತಿಯೊಬ್ಬ ಯುವಕ-ಯುವತಿಗೂ ಸಮಾನ ಅವಕಾಶ ಕಲ್ಪಿಸುವ ಈ ಯೋಜನೆ ರಾಜ್ಯದ ಯುವಜನರ ಇತಿಹಾಸದಲ್ಲಿ ಮಹತ್ವದ ಮೈಲುಗಲ್ಲಾಗಲಿದೆ ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ರಾಜ್ಯದ ಅಭಿವೃದ್ಧಿ, ಸಾಮಾಜಿಕ ಸಾಮರಸ್ಯ ಹಾಗೂ ರಾಷ್ಟ್ರ ನಿರ್ಮಾಣದಲ್ಲಿ ಯುವಜನರನ್ನು ಪಾಲುದಾರರನ್ನಾಗಿ ಗುರುತಿಸಿರುವ ಸರ್ಕಾರದ ನಡೆ ಶ್ಲಾಘನೀಯವಾಗಿದೆ. ಯುವಜನರನ್ನು ಕೇವಲ ಮತದಾರರು ಅಥವಾ ಯೋಜನೆಗಳ ಫಲಾನುಭವಿಗಳಾಗಿ ನೋಡದೆ, ಅವರ ಶಕ್ತಿ, ಪ್ರತಿಭೆ ಹಾಗೂ ಸೇವಾ ಮನೋಭಾವವನ್ನು ಸಮಾಜದ ಅಭಿವೃದ್ಧಿಗೆ ಬಳಸಿಕೊಳ್ಳುವ ಉದ್ದೇಶ ಈ ಯೋಜನೆಯಲ್ಲಿದೆ ಎಂದು ಅವರು ಹೇಳಿದರು.

‘ಭಾರತ್ ಜೋಡೋ ಯುವ ಸಂಘ’ಗಳು ಯಾವುದೇ ರಾಜಕೀಯ ಪಕ್ಷಕ್ಕೆ ಸೀಮಿತವಾಗದೆ, ಪಕ್ಷಾತೀತ ಯುವ ವೇದಿಕೆಗಳಾಗಿ ಕಾರ್ಯನಿರ್ವಹಿಸಬೇಕು. ಪ್ರತಿಭಾವಂತ ಕ್ರೀಡಾಪಟುಗಳು, ಕಲಾವಿದರು, ಸಾಹಿತಿಗಳು, ತಂತ್ರಜ್ಞಾನ ಆಸಕ್ತರು, ಯುವ ಉದ್ಯಮಿಗಳು ಹಾಗೂ ಸಮಾಜಸೇವಕರನ್ನು ಗುರುತಿಸಿ ಅವರಿಗೆ ತರಬೇತಿ, ಮಾರ್ಗದರ್ಶನ ಮತ್ತು ಸೂಕ್ತ ಅವಕಾಶಗಳನ್ನು ಕಲ್ಪಿಸುವ ಕೇಂದ್ರಗಳಾಗಿ ರೂಪುಗೊಳ್ಳಬೇಕು ಎಂದು ಅವರು ಸಲಹೆ ನೀಡಿದರು.

ಈ ಯುವ ಸಂಘಗಳ ಮೂಲಕ ಕ್ರೀಡೆ, ಕೌಶಲ್ಯಾಭಿವೃದ್ಧಿ, ವೃತ್ತಿ ಮಾರ್ಗದರ್ಶನ, ಸ್ಪರ್ಧಾತ್ಮಕ ಪರೀಕ್ಷೆಗಳ ಅರಿವು, ಡಿಜಿಟಲ್ ಸಾಕ್ಷರತೆ, ಯುವ ಉದ್ಯಮಶೀಲತೆ, ಪರಿಸರ ಸಂರಕ್ಷಣೆ, ರಕ್ತದಾನ, ಆರೋಗ್ಯ ಜಾಗೃತಿ, ರಸ್ತೆ ಸುರಕ್ಷತೆ ಹಾಗೂ ಮಾದಕವಸ್ತು ವಿರೋಧಿ ಅಭಿಯಾನಗಳಂತಹ ಜನಪರ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ನಡೆಸಬಹುದಾಗಿದೆ ಎಂದು ಹೇಳಿದರು.

ಇದು ಕೇವಲ 10 ಸಾವಿರ ಯುವ ಸಂಘಗಳ ಸ್ಥಾಪನೆಯಲ್ಲ; ರಾಜ್ಯದಾದ್ಯಂತ 10 ಸಾವಿರ ಯುವಶಕ್ತಿ, ಪ್ರತಿಭೆ, ಸೇವೆ, ಸಾಮರಸ್ಯ ಹಾಗೂ ನಾಯಕತ್ವದ ಕೇಂದ್ರಗಳನ್ನು ನಿರ್ಮಿಸುವ ಮಹತ್ವದ ಹೆಜ್ಜೆಯಾಗಿದೆ ಎಂದು ನಾಗೇಶ್ ಕರಿಯಪ್ಪ ಅಭಿಪ್ರಾಯಪಟ್ಟರು.

ಈ ವಿಶೇಷ ಸುದ್ದಿ ಓದಿದ್ದೀರಾ?ರಾಜ್ಯದ ಟಾಪ್-5 ಗುರಿಯತ್ತ ಚಾಮರಾಜನಗರ: ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಶಿಕ್ಷಣ ಇಲಾಖೆಯ ಮಹತ್ವದ ಯೋಜನೆ

ಈ ಐತಿಹಾಸಿಕ ಯೋಜನೆಯನ್ನು ಜಾರಿಗೆ ತಂದಿರುವ ಮುಖ್ಯಮಂತ್ರಿ ಹಾಗೂ ತಮ್ಮ ರಾಜಕೀಯ ಮಾರ್ಗದರ್ಶಕರಾದ ಡಿ.ಕೆ. ಶಿವಕುಮಾರ್ ಅವರಿಗೆ ರಾಜ್ಯದ ಯುವಜನರ ಪರವಾಗಿ ಅಭಿನಂದನೆ ಮತ್ತು ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದ ಅವರು, ಈ ಯೋಜನೆ ಸಮರ್ಥವಾಗಿ ಅನುಷ್ಠಾನಗೊಂಡು ದೇಶಕ್ಕೇ ಮಾದರಿಯಾದ ಯುವ ಚಳವಳಿಯಾಗಿ ಬೆಳೆಯಲಿ ಎಂದು ಆಶಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...