ಪಿರಿಯಾಪಟ್ಟಣದಲ್ಲಿ 21,795 ಮತದಾರರ ಹೆಸರು ಡಿಲಿಟ್; ಬಿಜೆಪಿ-ಜೆಡಿಎಸ್ ಸಂಚು: ಎಂ ಲಕ್ಷ್ಮಣ್ ಆರೋಪ

Date:

ಸಮಗ್ರ ಮತದಾರರ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನೆಪದಲ್ಲಿ ರಾಜ್ಯದಲ್ಲಿ ಒಂದು ಕೋಟಿಗೂ ಅಧಿಕ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಮೂಲಕ ಬಿಜೆಪಿ ಹಾಗೂ ಜೆಡಿಎಸ್ ವ್ಯವಸ್ಥಿತ ಪಿತೂರಿ ನಡೆಸುತ್ತಿವೆ ಎಂದು ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆರೋಪಿಸಿದರು.

- Advertisement -

ಪಟ್ಟಣದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೈಸೂರು ಜಿಲ್ಲೆಯಲ್ಲಿ ಒಟ್ಟು 27.99 ಲಕ್ಷ ಮತದಾರರ ಪೈಕಿ 5.65 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರನ್ನು ವಿವಿಧ ಕಾರಣಗಳಿಂದ ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಕೈಬಿಡಲಾದವರಲ್ಲಿ 2.41 ಲಕ್ಷ ಮಂದಿ ಶಾಶ್ವತ ಸ್ಥಳಾಂತರಗೊಂಡವರು, 1.44 ಲಕ್ಷ ಮಂದಿ ಪತ್ತೆಯಾಗದವರು ಹಾಗೂ 1.12 ಲಕ್ಷ ಮಂದಿ ಮೃತಪಟ್ಟವರು ಎಂದು ದಾಖಲಿಸಿರುವುದು ಅಸಹಜ ಅಂಕಿ-ಅಂಶವಾಗಿದೆ ಎಂದು ಅವರು ಪ್ರಶ್ನಿಸಿದರು.

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಬೂತ್ ಮಟ್ಟದ ಅಧಿಕಾರಿಗಳ ಮೂಲಕ ಮನೆ-ಮನೆಗೆ ತೆರಳಿ ಮಾಹಿತಿ ಸಂಗ್ರಹಿಸುವ ಕಾರ್ಯ ಸಮರ್ಪಕವಾಗಿ ನಡೆದಿಲ್ಲ. ಪರಿಣಾಮ ಸಾವಿರಾರು ಮತದಾರರ ಹೆಸರುಗಳು ಪಟ್ಟಿಯಿಂದ ಕೈಬಿಟ್ಟಿವೆ. ಪರಿಷ್ಕರಣೆ ಸಂದರ್ಭದಲ್ಲಿ ಗೈರುಹಾಜರು, ಸ್ಥಳಾಂತರ ಅಥವಾ ಮೃತಪಟ್ಟವರು ಎಂದು ಗುರುತಿಸಿ ಶಾಶ್ವತವಾಗಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ ಮೂಲಕ ಮತದಾರರ ಹಕ್ಕನ್ನು ಕಸಿಯುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದರು.

ಮೈಸೂರು ಜಿಲ್ಲೆಯ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ 87 ಸಾವಿರ, ಕೃಷ್ಣರಾಜ ಕ್ಷೇತ್ರದಲ್ಲಿ 88 ಸಾವಿರ, ನರಸಿಂಹರಾಜ ಕ್ಷೇತ್ರದಲ್ಲಿ 1.11 ಲಕ್ಷ, ವರುಣ ಕ್ಷೇತ್ರದಲ್ಲಿ 26 ಸಾವಿರ ಹಾಗೂ ಚಾಮುಂಡೇಶ್ವರಿ ಕ್ಷೇತ್ರದಲ್ಲಿ 80 ಸಾವಿರ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಡಿಲಿಟ್ ಮಾಡಲಾಗಿದೆ ಎಂದು ಅವರು ಹೇಳಿದರು.

ಕರ್ನಾಟಕ ರಾಜ್ಯದಲ್ಲಿ ಒಟ್ಟು 5.56 ಕೋಟಿ ಮತದಾರರ ಪೈಕಿ ಸುಮಾರು 1.10 ಕೋಟಿ ಮತದಾರರ ಹೆಸರುಗಳು ಪರಿಷ್ಕರಣೆ ವೇಳೆ ಕೈಬಿಟ್ಟಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಎಂ. ಲಕ್ಷ್ಮಣ್ ತಿಳಿಸಿದರು.

ಚುನಾವಣಾ ಆಯೋಗದ ನಿಯಮಗಳ ಪ್ರಕಾರ ಪ್ರತಿಯೊಬ್ಬ ಮತದಾರನಿಗೂ ಸಮರ್ಪಕ ನೋಟಿಸ್ ನೀಡಿ, ಪರಿಶೀಲನೆ ನಡೆಸಿದ ಬಳಿಕವೇ ಹೆಸರು ಕೈಬಿಡಬೇಕು. ಆದರೆ ಹಲವೆಡೆ ಯಾವುದೇ ಮಾಹಿತಿ ನೀಡದೆ ಏಕಪಕ್ಷೀಯ ಕ್ರಮ ಕೈಗೊಳ್ಳಲಾಗುತ್ತಿದೆ ಎಂಬ ದೂರುಗಳು ಬಂದಿವೆ ಎಂದು ಹೇಳಿದರು.

ಜನಬೆಂಬಲ ಕಳೆದುಕೊಳ್ಳುತ್ತಿರುವ ಬಿಜೆಪಿ ಆಡಳಿತ ಯಂತ್ರವನ್ನು ಬಳಸಿಕೊಂಡು ಮತದಾರರ ಪಟ್ಟಿಯಲ್ಲೇ ಹಸ್ತಕ್ಷೇಪ ಮಾಡುವ ಮೂಲಕ ಮತಚೌರಿಗೆ ಯತ್ನಿಸುತ್ತಿದೆ. ಇದು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾದ ಕ್ರಮವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಬಿಎಲ್‌ಒಗಳ ಕಾರ್ಯವೈಖರಿ, ಮತದಾರರ ಪಟ್ಟಿಯಲ್ಲಿನ ತಿದ್ದುಪಡಿ ಹಾಗೂ ಕೈಬಿಡಲಾದ ಹೆಸರುಗಳ ಕುರಿತು ಜಿಲ್ಲಾವಾರು ಶ್ವೇತಪತ್ರ ಪ್ರಕಟಿಸಬೇಕು. ಅನ್ಯಾಯವಾಗಿ ಹೆಸರುಗಳನ್ನು ತೆಗೆದುಹಾಕಿದ್ದರೆ ಕೂಡಲೇ ಮರು ಸೇರ್ಪಡೆಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.

ತಾಲ್ಲೂಕು ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ನಿತಿನ್ ವೆಂಕಟೇಶ್ ಮಾತನಾಡಿ, ಪಿರಿಯಾಪಟ್ಟಣ ತಾಲ್ಲೂಕಿನಲ್ಲಿ ಒಟ್ಟು 1,99,706 ಮತದಾರರ ಪೈಕಿ 21,795 ಮತದಾರರ ಹೆಸರನ್ನು ಕೈಬಿಡಲಾಗಿದೆ. ಇವರಲ್ಲಿ 7,153 ಮಂದಿ ಮೃತಪಟ್ಟವರು ಹಾಗೂ 10,657 ಮಂದಿ ಸ್ಥಳಾಂತರಗೊಂಡವರು ಎಂದು ದಾಖಲಾಗಿದೆ. ಈಗಾಗಲೇ 1,75,972 ಮತದಾರರನ್ನು ಗುರುತಿಸಿ ಡಿಜಿಟಲೀಕರಣ ಮಾಡಲಾಗಿದ್ದು, ತಾಲ್ಲೂಕಿನಲ್ಲಿ ಎಸ್‌ಐಆರ್ ಪ್ರಕ್ರಿಯೆ ಶೇ.90ರಷ್ಟು ಪೂರ್ಣಗೊಂಡಿದೆ ಎಂದು ಮಾಹಿತಿ ನೀಡಿದರು.

ಈ ವಿಶೇಷ ಸುದ್ದಿ ಓದಿದ್ದೀರಾ?ಅರಣ್ಯ, ಹಾಡಿ, ದುರ್ಗಮ ಹಾದಿಗಳ ನಡುವೆ ‘SIR’ ಶೇ.100: ಚಾಮರಾಜನಗರದ ಸಾಧನೆ ಹೇಗೆ ಸಾಧ್ಯವಾಯಿತು?

ಸುದ್ದಿಗೋಷ್ಠಿಯಲ್ಲಿ ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಶೋಕ್ ಕುಮಾರ್ ಗೌಡ, ಮುಖಂಡರಾದ ಬಿ.ಪಿ. ರಾಜೇಶ್, ರಘು ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ...