ಪಿರಿಯಾಪಟ್ಟಣ | ಸ್ವಚ್ಛತೆಯಿಂದ ರಾಷ್ಟ್ರಮಟ್ಟದ ಸಾಧನೆ: ಅತ್ತಿಗೋಡು ಸರ್ಕಾರಿ ಶಾಲೆಗೆ ರಾಷ್ಟ್ರೀಯ ಗೌರವ

Date:

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಅತ್ತಿಗೋಡು ಗ್ರಾಮದ ಸರ್ಕಾರಿ ಪ್ರೌಢಶಾಲೆ ಮತ್ತೊಮ್ಮೆ ತನ್ನ ಸಾಧನೆಯ ಮೂಲಕ ರಾಜ್ಯದ ಗಮನ ಸೆಳೆದಿದೆ. ಕೇಂದ್ರ ಸರ್ಕಾರದ ಶಿಕ್ಷಣ ಮಂತ್ರಾಲಯ ಪ್ರಕಟಿಸಿರುವ 2025-26ನೇ ಸಾಲಿನ ಸ್ವಚ್ಛ ವಿದ್ಯಾಲಯ ಪುರಸ್ಕಾರದ ರಾಷ್ಟ್ರಮಟ್ಟದ ಅಂತಿಮ ಪಟ್ಟಿಯಲ್ಲಿ ಈ ಶಾಲೆ ಸ್ಥಾನ ಪಡೆದಿದ್ದು, ಇದು ಮೈಸೂರು ಜಿಲ್ಲೆ ಮಾತ್ರವಲ್ಲದೆ ಕರ್ನಾಟಕಕ್ಕೂ ಹೆಮ್ಮೆಯ ಕ್ಷಣವಾಗಿದೆ. ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಯೊಂದು ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಳ್ಳುವುದು ಶಿಕ್ಷಣ ಕ್ಷೇತ್ರದಲ್ಲಿ ಮಾದರಿಯ ಬೆಳವಣಿಗೆಯಾಗಿದೆ.

- Advertisement -

ಈ ಬಾರಿ ಕರ್ನಾಟಕದಿಂದ ಒಟ್ಟು ಮೂರು ಶಾಲೆಗಳು ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಅವುಗಳಲ್ಲಿ ಸರ್ಕಾರಿ ಪ್ರೌಢಶಾಲೆಗಳ ಪೈಕಿ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆಯೇ ಏಕೈಕ ಶಾಲೆ ಎಂಬುದು ವಿಶೇಷ. ಉಳಿದ ಎರಡು ಶಾಲೆಗಳು ಉಡುಪಿ ಜಿಲ್ಲೆಯ ಮುಲ್ಕಾಡು ಎಲ್ಲಾರೆ ಕಿರಿಯ ಪ್ರಾಥಮಿಕ ಶಾಲೆ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕನ್ನಮಂಗಲ ಹಿರಿಯ ಪ್ರಾಥಮಿಕ ಶಾಲೆಗಳಾಗಿವೆ. ಮೂರೂ ಸರ್ಕಾರಿ ಶಾಲೆಗಳು ರಾಷ್ಟ್ರಮಟ್ಟದ ಪ್ರಶಸ್ತಿಗೆ ಆಯ್ಕೆಯಾಗಿರುವುದು ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಗುಣಮಟ್ಟವನ್ನು ಪ್ರತಿಬಿಂಬಿಸುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಸ್ವಚ್ಛ ವಿದ್ಯಾಲಯ ಪುರಸ್ಕಾರವು ಕೇವಲ ಶಾಲೆಯ ಸ್ವಚ್ಛತೆಯನ್ನು ಮಾತ್ರವಲ್ಲ, ಸುರಕ್ಷಿತ ಕುಡಿಯುವ ನೀರು, ಶೌಚಾಲಯಗಳ ನಿರ್ವಹಣೆ, ಕೈತೊಳೆಯುವ ವ್ಯವಸ್ಥೆ, ತ್ಯಾಜ್ಯ ನಿರ್ವಹಣೆ, ಪರಿಸರ ಸಂರಕ್ಷಣೆ, ಆರೋಗ್ಯಕರ ಶಾಲಾ ವಾತಾವರಣ ಹಾಗೂ ವಿದ್ಯಾರ್ಥಿಗಳಲ್ಲಿ ಸ್ವಚ್ಛತಾ ಅಭ್ಯಾಸ ಬೆಳೆಸುವ ಕಾರ್ಯಗಳನ್ನು ಸಮಗ್ರವಾಗಿ ಮೌಲ್ಯಮಾಪನ ಮಾಡುವ ರಾಷ್ಟ್ರಮಟ್ಟದ ಪ್ರಶಸ್ತಿಯಾಗಿದೆ.

2025-26ನೇ ಸಾಲಿನ ಪ್ರಶಸ್ತಿಗಾಗಿ ಕಳೆದ ವರ್ಷದ ಆಗಸ್ಟ್‌ನಲ್ಲಿ ದೇಶಾದ್ಯಂತ 11,54,898 ಶಾಲೆಗಳು ನೋಂದಾಯಿಸಿಕೊಂಡಿದ್ದವು. ಸರ್ಕಾರಿ, ಅನುದಾನಿತ, ಅನುದಾನರಹಿತ, ಕೇಂದ್ರೀಯ ವಿದ್ಯಾಲಯ, ನವೋದಯ ಹಾಗೂ ಸಾರ್ವಜನಿಕ ಶಾಲೆಗಳು ಈ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದವು. ಕರ್ನಾಟಕದಿಂದ 71,369 ಶಾಲೆಗಳು, ಮೈಸೂರು ಜಿಲ್ಲೆಯಿಂದ 3,072 ಶಾಲೆಗಳು ನೋಂದಾಯಿಸಿಕೊಂಡಿದ್ದವು.

ರಾಜ್ಯಮಟ್ಟದ ವಿವಿಧ ಹಂತಗಳ ಮೌಲ್ಯಮಾಪನದ ಬಳಿಕ ಕರ್ನಾಟಕದಿಂದ 20 ಶಾಲೆಗಳು ರಾಷ್ಟ್ರಮಟ್ಟಕ್ಕೆ ಶಿಫಾರಸುಗೊಂಡಿದ್ದವು. ಅಂತಿಮವಾಗಿ ದೇಶದಾದ್ಯಂತ 191 ಶಾಲೆಗಳು ರಾಷ್ಟ್ರ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಅವುಗಳಲ್ಲಿ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ ಸ್ಥಾನ ಪಡೆದಿದೆ. ಕರ್ನಾಟಕದ ಸರ್ಕಾರಿ ಪ್ರೌಢಶಾಲೆಗಳ ಪೈಕಿ ರಾಷ್ಟ್ರಮಟ್ಟದಲ್ಲಿ ಆಯ್ಕೆಯಾದ ಏಕೈಕ ಶಾಲೆ ಎಂಬ ಹೆಗ್ಗಳಿಕೆ ಇದಕ್ಕೆ ಸಂದಿದೆ.

ಪ್ರಸ್ತುತ ಈ ಶಾಲೆಯಲ್ಲಿ 204 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಶೈಕ್ಷಣಿಕ ಸಾಧನೆ, ಸ್ವಚ್ಛತೆ, ಶಿಸ್ತು, ಪರಿಸರ ಕಾಳಜಿ ಹಾಗೂ ಸಮುದಾಯದ ಪಾಲ್ಗೊಳ್ಳುವಿಕೆಯಲ್ಲಿ ಈ ಶಾಲೆ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿಯೇ ಮುಂಚೂಣಿಯಲ್ಲಿದೆ.

ಶಾಲೆಯ ಸಾಧನೆ ಇದೊಂದರಲ್ಲೇ ಸೀಮಿತವಾಗಿಲ್ಲ. 2025-26ನೇ ಸಾಲಿನ ಅತ್ಯುತ್ತಮ ಎಸ್‌ಡಿಎಂಸಿ ಪ್ರಶಸ್ತಿ ಪಡೆದು ₹1 ಲಕ್ಷ ನಗದು ಬಹುಮಾನ ಗಳಿಸಿದೆ. ಅದಕ್ಕೂ ಮುನ್ನ 2024-25ನೇ ಸಾಲಿನಲ್ಲಿ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ (ಮುದ್ದೇನಹಳ್ಳಿ, ಚಿಕ್ಕಬಳ್ಳಾಪುರ) ರಾಜ್ಯದ ಸರ್ಕಾರಿ ಶಾಲೆಗಳ ಸಮೀಕ್ಷೆಯಲ್ಲಿ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆಯನ್ನು ರಾಜ್ಯದ ಅತ್ಯುತ್ತಮ ಪ್ರೌಢಶಾಲೆ ಎಂದು ಗುರುತಿಸಿ ₹1 ಲಕ್ಷ ನಗದು ಬಹುಮಾನ ನೀಡಿ ಗೌರವಿಸಿತ್ತು. ಅದೇ ವೇಳೆ ಶಾಲೆಯ ಮುಖ್ಯ ಶಿಕ್ಷಕರಾದ ನಾಗಶೆಟ್ಟಿ ಅವರನ್ನು ರಾಜ್ಯದ ಅತ್ಯುತ್ತಮ ಶಿಕ್ಷಕ ಎಂದು ಗುರುತಿಸಿ ₹25 ಸಾವಿರ ನಗದು ಬಹುಮಾನ ನೀಡಿ ಸನ್ಮಾನಿಸಲಾಗಿತ್ತು. ಇದು ಶಾಲೆಯ ಆಡಳಿತ, ಬೋಧನಾ ಗುಣಮಟ್ಟ ಹಾಗೂ ನಾಯಕತ್ವಕ್ಕೆ ದೊರೆತ ಮತ್ತೊಂದು ಮಹತ್ವದ ಮಾನ್ಯತೆಯಾಗಿದೆ.

ಅತ್ತಿಗೋಡು ಶಾಲೆಯ ಯಶಸ್ಸಿನ ಹಿಂದೆ ಶಿಕ್ಷಕರ ಶ್ರಮ ಮಾತ್ರವಲ್ಲ, ಪೋಷಕರು, ಎಸ್‌ಡಿಎಂಸಿ, ಹಳೆಯ ವಿದ್ಯಾರ್ಥಿಗಳು, ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯಿತಿಯ ನಿರಂತರ ಸಹಕಾರವೂ ಪ್ರಮುಖ ಕಾರಣವಾಗಿದೆ. ಶಾಲೆಯನ್ನು ತಮ್ಮದೇ ಸಂಸ್ಥೆಯಂತೆ ಕಾಪಾಡಿಕೊಂಡು ಅಭಿವೃದ್ಧಿಗೆ ಕೈಜೋಡಿಸಿದ ಸಮುದಾಯದ ಭಾಗವಹಿಸುವಿಕೆ ಈ ಸಾಧನೆಯ ಮೂಲಶಕ್ತಿಯಾಗಿದೆ.

ಗ್ರಾಮೀಣ ಸರ್ಕಾರಿ ಶಾಲೆಗಳ ಬಗ್ಗೆ ಇರುವ ಅನೇಕ ಪೂರ್ವಾಗ್ರಹಗಳಿಗೆ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆಯ ಸಾಧನೆ ಉತ್ತರವಾಗಿದೆ. ಸೂಕ್ತ ನಾಯಕತ್ವ, ಸಮುದಾಯದ ಸಹಭಾಗಿತ್ವ, ಶಿಕ್ಷಕರ ಬದ್ಧತೆ ಮತ್ತು ವಿದ್ಯಾರ್ಥಿಗಳ ಉತ್ಸಾಹ ಒಂದಾದರೆ ಸರ್ಕಾರಿ ಶಾಲೆಗಳೂ ರಾಷ್ಟ್ರಮಟ್ಟದ ಮಾನ್ಯತೆ ಪಡೆಯಬಹುದು ಎಂಬುದನ್ನು ಈ ಶಾಲೆ ಸಾಬೀತುಪಡಿಸಿದೆ.

ಈ ವಿಶೇಷ ಸುದ್ದಿ ಓದಿದ್ದೀರಾ?ಕೊಡಗಿನಲ್ಲಿ ಪಡಿತರಕ್ಕೆ ಜಾತಿ ಪ್ರಮಾಣ ಪತ್ರ ಮ್ಯಾಪಿಂಗ್: ಬಡವರ ಬದುಕಿಗೆ ಹೊಸ ಸಂಕಷ್ಟವೇ?

ಅತ್ತಿಗೋಡು ಸರ್ಕಾರಿ ಪ್ರೌಢಶಾಲೆಯ ಈ ರಾಷ್ಟ್ರಮಟ್ಟದ ಗೌರವವು ಕೇವಲ ಒಂದು ಶಾಲೆಯ ಸಾಧನೆಯಲ್ಲ; ಸರ್ಕಾರಿ ಶಿಕ್ಷಣ ವ್ಯವಸ್ಥೆಯ ಮೇಲಿನ ವಿಶ್ವಾಸವನ್ನು ಮತ್ತಷ್ಟು ಗಟ್ಟಿಗೊಳಿಸುವ ಪ್ರೇರಣಾದಾಯಕ ಯಶೋಗಾಥೆಯಾಗಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಗಣಂಗೂರು ಟೋಲ್‌ನಲ್ಲಿ ರೈತರಿಂದ ಹೆದ್ದಾರಿ ತಡೆ

ಕಬ್ಬಿಗೆ ವೈಜ್ಞಾನಿಕ ಬೆಲೆ ನಿಗದಿಪಡಿಸುವುದು, ಸಕ್ಕರೆ ಬೆಲೆ ಪರಿಷ್ಕರಣೆ, ಕಳೆದ ಸಾಲಿನ...

ಕರ್ನಾಟಕ ಪಶ್ಚಿಮ ಪದವೀಧರ ಚುನಾವಣೆ: ಜಿಲ್ಲೆಗಳಲ್ಲಿ  ಶೇ.75.62 ರಷ್ಟು ಮತದಾನ

"ಕರ್ನಾಟಕ ಪಶ್ಚಿಮ ಪದವೀಧರ ಮತಕ್ಷೇತ್ರ ವ್ಯಾಪ್ತಿಯ ಧಾರವಾಡ, ಹಾವೇರಿ, ಗದಗ ಮತ್ತು...

ಗದಗ | ಇಂದು ಅಮರ ಮಹಾವೀರ ಕವನ ಸಂಕಲನ ಲೋಕಾರ್ಪಣೆ

ಅಮರ ಮಾಹಾವೀರ ಕವನ ಸಂಕಲನ ಲೋಕಾರ್ಪಣೆ ಸಮಾರಂಭದಲ್ಲಿ ಕವನ ಸ್ಪರ್ಧೆಗಳಲ್ಲಿನ ವಿಜೇತರಿಗೆ...

ರಾಯಚೂರು | ಈಶಾನ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಶೇ. 86.02ರಷ್ಟು ಮತದಾನ

ಅಕ್ಟೋಬ‌ರ್ 23ರಂದು ಜಿಲ್ಲೆಯ ಎಲ್ಲ ಮತಗಟ್ಟೆಗಳಲ್ಲಿ ಮತದಾನ ಸುಗಮವಾಗಿ ನಡೆದಿದ್ದು, ಒಟ್ಟು...