ಮೈಸೂರು | ನೀಟ್ ಪರೀಕ್ಷೆ ಅಕ್ರಮ ಖಂಡನೆ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

Date:

ನೀಟ್ ಪರೀಕ್ಷೆಯಲ್ಲಿ ಪಾರದರ್ಶಕತೆ ಕಾಪಾಡುವಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಮೈಸೂರು ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಮಂಗಳವಾರ ನಗರದ ಪುರಭವನ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆ ಮುಂಭಾಗ ಪ್ರತಿಭಟನೆ ನಡೆಸಿದರು.

- Advertisement -

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮೈಸೂರು ಜಿಲ್ಲಾ ಕಾಂಗ್ರೆಸ್ ವಕ್ತಾರ ಎಸ್. ರಾಜೇಶ್, ನೀಟ್ ಪರೀಕ್ಷೆ ಬರೆದ 20 ಲಕ್ಷಕ್ಕೂ ಅಧಿಕ ವಿದ್ಯಾರ್ಥಿಗಳ ಭವಿಷ್ಯ ಪ್ರಶ್ನಾರ್ಥಕವಾಗಿದ್ದು, ಪ್ರಶ್ನೆಪತ್ರಿಕೆ ಸೋರಿಕೆಯಿಂದ ದೇಶದ ಲಕ್ಷಾಂತರ ವಿದ್ಯಾರ್ಥಿಗಳು ಅನ್ಯಾಯಕ್ಕೆ ಒಳಗಾಗಿದ್ದಾರೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಪ್ರಶ್ನೆಪತ್ರಿಕೆ ಸೋರಿಕೆಗೆ ಕಾರಣರಾದ ನಿಜವಾದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಬದಲು, ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ನಡೆಸಿರುವುದು ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ತೋರಿಸುತ್ತದೆ ಎಂದು ಅವರು ಟೀಕಿಸಿದರು.

ವಿದ್ಯಾರ್ಥಿಗಳ ನ್ಯಾಯಸಮ್ಮತ ಹೋರಾಟವನ್ನು ಬಲಪ್ರಯೋಗದಿಂದ ಹತ್ತಿಕ್ಕುವ ಪ್ರಯತ್ನ ಪ್ರಜಾಪ್ರಭುತ್ವ ವಿರೋಧಿ ನಡೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಭಿನ್ನಾಭಿಪ್ರಾಯಗಳನ್ನು ಹತ್ತಿಕ್ಕುವ ತೊಗಲಕ್ ಸಂಸ್ಕೃತಿ ಹಾಗೂ ಗೂಂಡಾಗಿರಿ ರಾಜಕಾರಣವನ್ನು ಅನುಸರಿಸುತ್ತಿದೆ ಎಂದು ಆರೋಪಿಸಿದರು.

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಪರಿಣಾಮಕಾರಿ ಕ್ರಮ ಕೈಗೊಂಡಿಲ್ಲ. ಬದಲಾಗಿ ಅಸಮರ್ಥ ಶಿಕ್ಷಣ ಸಚಿವರನ್ನು ರಕ್ಷಿಸುವ ಕೆಲಸ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಮಾಡುತ್ತಿದ್ದಾರೆ ಎಂದು ದೂರಿದರು.

ಈ ವಿಶೇಷ ಸುದ್ದಿ ಓದಿದ್ದೀರಾ?ಮಳೆ ಕೈಕೊಟ್ಟರೂ ತಂಬಾಕು ಕೈಬಿಡಲಿಲ್ಲ: ಮೈಸೂರು ಜಿಲ್ಲೆಯಲ್ಲಿ ಬರದ ನಡುವೆಯೂ ಮುಂದುವರಿದ ತಂಬಾಕು ಕೃಷಿ

ಬಡ ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳ ಕನಸುಗಳಿಗೆ ಪ್ರಶ್ನೆಪತ್ರಿಕೆ ಸೋರಿಕೆ ದೊಡ್ಡ ಹೊಡೆತವಾಗಿದೆ. ಇಂತಹ ಗಂಭೀರ ವಿಷಯದ ಕುರಿತು ಪ್ರಧಾನಿ ಮೋದಿ ಮೌನ ವಹಿಸಿರುವುದು ಖಂಡನೀಯ. ಕೂಡಲೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಪಡೆಯಬೇಕು ಎಂದು ಎಸ್. ರಾಜೇಶ್ ಆಗ್ರಹಿಸಿದರು.

ಈ ವಿಶೇಷ ಸುದ್ದಿ ಓದಿದ್ದೀರಾ?ಕೊಡಗಿನಲ್ಲಿ ಪಡಿತರಕ್ಕೆ ಜಾತಿ ಪ್ರಮಾಣ ಪತ್ರ ಮ್ಯಾಪಿಂಗ್: ಬಡವರ ಬದುಕಿಗೆ ಹೊಸ ಸಂಕಷ್ಟವೇ?

ಪ್ರತಿಭಟನೆಯಲ್ಲಿ ಮಂಜು, ಸಯ್ಯದ್ ಫಾರೂಕ್, ಎಸ್.ಎ. ರಹೀಮ್, ಆರ್.ಕೆ. ರವಿ, ಪುಟ್ಟರಾಜು, ರಾಮು, ಸುನೀಲ್, ನಾರಾಯಣ, ರಂಗಸ್ವಾಮಿ, ಕೆ. ರಾಮು, ಬಾಬು, ರವಿ ನಾಯಕ, ಮೋಹನ್ ಕುಮಾರ್, ರಫಿಉಲ್ಲಾ ಖಾನ್, ಬಿ.ಜಿ. ಕೇಶವ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...