ಪತ್ರಿಕಾ ವಿತರಕರು-ಏಜೆಂಟರು ಪತ್ರಿಕೋದ್ಯಮದ ಬೆನ್ನುಮೂಳೆ: ಕೆ.ವಿ.ಪ್ರಭಾಕರ್

Date:

Advertisements

ಪತ್ರಿಕಾ ವಿತರಕರು ಪತ್ರಿಕೆಗಳನ್ನು ವಿತರಿಸುವ ಜೊತೆಗೆ ಚಂದಾ ಹಣ ಸಂಗ್ರಹಿಸುವ ಕೆಲಸವನ್ನೂ ಮಾಡುತ್ತಾ ತಮ್ಮ ಆದಾಯದ ಜೊತೆಗೆ‌ ಸಂಸ್ಥೆಗೂ ಆದಾಯ ತಂದುಕೊಡುವ ಮೂಲಕ ರಾಜ್ಯದ ಆರ್ಥಿಕತೆಯಲ್ಲೂ ತೊಡಗಿಸಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅಭಪ್ರಾಯಪಟ್ಟರು.

ವಿಶ್ವ ಪತ್ರಿಕಾ ವಿತರಕರ ದಿನದ ಅಂಗವಾಗಿ ಏರ್ಪಡಿಸಿದ್ದ ಪತ್ರಿಕಾ ವಿತರಕರ ಸಮ್ಮೇಳನ‌ ಉದ್ಘಾಟಿಸಿ ಮಾತನಾಡಿದರು.

ಕೊಳಚೆ ಪ್ರದೇಶಗಳಿಂದ ವಿಧಾನಸೌಧದವರೆಗೂ ವ್ಯಾಪಿಸಿರುವ ಪತ್ರಿಕಾ ವಿತರಕರು ಮುದ್ರಣ ಮಾಧ್ಯಮದ ಬೆನ್ನುಮೂಳೆ ಮತ್ತು ಪತ್ರಿಕಾ ಸಂಸ್ಥೆಗಳ ನರಮಂಡಲ ಆಗಿ ಕಲಸ ಮಾಡುತ್ತಾರೆ. ಪತ್ರಿಕೆಯ ಚಂದಾ ಹಣ ಸಂಗ್ರಹಿಸುವ ಜೊತೆಗೆ ಸಣ್ಣ ಜಾಹಿರಾತುದಾರರನ್ನೂ ಸಂಸ್ಥೆಯ ಜೊತೆ ಬೆಸೆಯುತ್ತಾರೆ. (ಪತ್ರಿಕೆಗಳ ಒಳಗೆ ಜಾಹಿರಾತು ಕರಪತ್ರ ಹಾಕುವ insertion) ಎಂದರು.

ಸುದ್ದಿಗಳು, ಪತ್ರಿಕೆಗಳು ಹಳತಾಗುವ ಮೊದಲು, ಓದುಗರ ಕೈಗೆ ಕಾಫಿ ಲೋಟ ಬರುವ ಮೊದಲು ಪತ್ರಿಕಾ ವಿತರಕರು ಓದುಗರ ಮನೆ ಬಾಗಿಲಿಗೆ ತಲುಪುತ್ತಾರೆ. ಇದಕ್ಕಾಗಿ ಕೋಳಿ ಕೂಗುವ ಮೊದಲೇ ಮನೆಯಿಂದ ಎದ್ದು ಹೊರಡುತ್ತಾರೆ. ನಾವು ಪತ್ರಕರ್ತರು ಬೆಚ್ಚಗೆ ಮಲಗಿರುವಾಗ ಮಳೆ, ಚಳಿ ಮತ್ತು ಪ್ರತೀಕೂಲ ವಾತಾವರಣ ಲೆಕ್ಕಿಸದೆ ಸೈಕಲ್ ತುಳಿಯಬೇಕಿದೆ ಎಂದರು.

ಒಬ್ಬ ಪತ್ರಿಕಾ ವಿತರಕನಿಗೆ ತಿಂಗಳಿಗೆ ಸಿಗುವುದು ಕೆಲವೇ ಸಾವಿರ ರೂಪಾಯಿ ಇರಬಹುದು. ಆದರೆ, ಸಾವಿರಾರು ಪತ್ರಿಕಾ ವಿತರಕರು ಸಂಗ್ರಹಿಸುವ ಚಂದಾ ಹಣ ಮತ್ತು ಸಣ್ಣ ಪ್ರಮಾಣದ ಜಾಹಿರಾತು ಹಣ ಎಲ್ಲಾ ಒಟ್ಟು ಲೆಕ್ಕ ಹಾಕಿದರೆ ಹತ್ತಾರು ಕೋಟಿ‌ ಆಗುತ್ತದೆ. ಹೀಗಾಗಿ ಪತ್ರಿಕೋದ್ಯಮದ ಮತ್ತು ರಾಜ್ಯದ ಆರ್ಥಿಕ ಚಟುವಟಿಕೆಯಲ್ಲೂ ತೊಡಗಿಸಿಕೊಂಡಿರುವ ಸಮುದಾಯವಾಗಿದೆ ಎನ್ನುವುದನ್ನು ನಾವು ಮರೆಯಬಾರದು ಎಂದರು.

ಅಸಂಘಟಿತವಾಗಿಯೇ ಉಳಿದಿದ್ದ ವಿತರಕ‌ ಸಮುದಾಯ ಒಟ್ಟಿಗೇ ಸಂಘಟಿತರಾಗುವ ಅನಿವಾರ್ಯತೆ ಸೃಷ್ಟಿಯಾಗಿದ್ದು ಕೋವಿಡ್ ಸಮಯದಲ್ಲಿ. ಸದಾ ಪತ್ರಿಕಾ ಸಂಸ್ಥೆಗಳ ಪಾಲಿಗೆ ಅನಾಥ ರಕ್ಷಕರಾಗುವ ವಿತರಕರು, ಕೋವಿಡ್ ಸಂದರ್ಭದಲ್ಲಿ ತಾವೇ ಸ್ವತಃ ಅನಾಥರಾದರು. ಈ ಹೊತ್ತಲ್ಲಿ ಶಂಬುಲಿಂಗ ಅವರು ವಿತರಕರ ಸಂಘ ಮತ್ತು ಸಂಘಟನೆಗೆ ಜೀವ ತುಂಬಿದರು ಎಂದು ಮೆಚ್ಚುಗೆ ಸೂಚಿಸಿದರು.

ಸಂಘಟನೆ ಮೊದಲ ಹೆಜ್ಜೆ. ಸಂಘಟನೆ ಬೆನ್ನ ಹಿಂದೆಯೇ ನಿಮ್ಮ ಹಕ್ಕುಗಳಿಗೂ ಜೀವ ಬರುತ್ತದೆ. ಬಳಿಕ ಸರ್ಕಾರದ ಸವಲತ್ತುಗಳು ನಿಮ್ಮ ಹಕ್ಕು ಆಗಿ ಒಂದೊಂದಾಗಿ ಜಾರಿ ಆಗುತ್ತವೆ. ಜೊತೆಗೆ ಕೆಲಸದ ಅಭದ್ರತೆಯೂ ಕಡಿಮೆ ಆಗುತ್ತದೆ ಎಂದರು.

ವಿತರಕ ಸಮುದಾಯದ ಪರವಾಗಿ ಈ ಸಮ್ಮೇಳನದಲ್ಲಿ ಕೆಲವೊಂದು ಬೇಡಿಕೆಗಳನ್ನು ಇಡಲಾಗಿದೆ. ಅವೆಲ್ಲವನ್ನೂ ಪರಿಶೀಲಿಸಿ, ಹಂತ ಹಂತವಾಗಿ ಕ್ರಮ ಕೈಗೊಳ್ಳುವ ಸಾಧ್ಯತೆಗಳ ಬಗ್ಗೆ ಚರ್ಚಿಸುತ್ತೇನೆ. ಪತ್ರಿಕಾ ವಿತರಕರಿಗೆ ಸರ್ಕಾರದ ಸವಲತ್ತುಗಳು ಸಿಗಬೇಕು ಎನ್ನುವುದು ಒಂದು‌ ಕಡೆ ಇರಲಿ. ಜೊತೆಗೆ ಪತ್ರಿಕಾ ಸಂಸ್ಥೆಗಳೂ, ಇನ್ನಿತರೆ ಉದ್ಯಮಿಗಳ ಮೂಲಕ CSR ನಿಧಿಯಿಂದ ಈ ಸಮುದಾಯಕ್ಕೆ ಅನುಕೂಲ ಕಲ್ಪಿಸುವ ಅವಕಾಶಗಳೂ ಇವೆ. ಈ ದಿಕ್ಕಿನಲ್ಲೂ‌ ಗಮನ ಹರಿಸುವ ಅಗತ್ಯವಿದೆ ಎಂದು ಹೇಳಿದರು.‌

ಸುತ್ತೂರು ಮಠದ ಜಗದ್ಗುರು ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ KUWJ ಅಧ್ಯಕ್ಷರಾದ ಶಿವಾನಂದ ತಗಡೂರು ಮತ್ತು ಪತ್ರಿಕಾ ವಿತರಕರ ಮಹಾ ಸಂಘದ ಅಧ್ಯಕ್ಷರಾದ ಶಂಬುಲಿಂಗ ಅವರು ಸೇರಿ ಹಲವು ಮಹನೀಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

GST ಜಾರಿ ಮಾಡಿ ಭಾರತೀಯರ ತಲೆಗೆ ಟೋಪಿ ಹಾಕುತ್ತಿರುವ ಮೋದಿ: ಸಿಎಂ ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿ ಬರೀ ಡೋಂಗಿ. GST ಜಾರಿ ಮಾಡಿದ್ದೂ ಮೋದಿ....

ಮೈಸೂರು | ಪ್ಯಾಲೆಸ್ತೀನ್ ಜನರೊಂದಿಗೆ ಜಾಗತಿಕ ಐಕ್ಯತೆಯ ಸಪ್ತಾಹ; ಪ್ರತಿಭಟನಾ ಪ್ರದರ್ಶನ

ವಿಶ್ವ ಕಾರ್ಮಿಕ ಸಂಘಗಳ ಒಕ್ಕೂಟ ನೀಡಿದ ಕರೆಯ ಮೇರೆಗೆ, ಪ್ಯಾಲೆಸ್ತೀನಿಯನ್‌ ಜನರೊಂದಿಗೆ...

ಮೈಸೂರು | ಯುವ ದಸರಾ; ಸ್ಥಳ ಪರಿಶೀಲಿಸಿದ ಸಚಿವ ಮಹದೇವಪ್ಪ

ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ....

ಸರಗೂರು | ಸಮೀಕ್ಷೆಯಲ್ಲಿ ಬೌದ್ಧ ಧರ್ಮ ಎಂದು ನಮೂದಿಸಿ : ಜ್ಞಾನಪ್ರಕಾಶ ಸ್ವಾಮೀಜಿ

ಮೈಸೂರು ಜಿಲ್ಲೆ, ಸರಗೂರು ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಸಮುದಾಯದ ಭವನದಲ್ಲಿ...

Download Eedina App Android / iOS

X