ನಾಳೆ ‘ನಿರಾಕಾರ ವಿಶ್ವಕರ್ಮ’ ಕೃತಿ ಬಿಡುಗಡೆ

Date:

ಪತ್ರಕರ್ತ ಹಾಗೂ ಲೇಖಕ ಚಂದ್ರಶೇಖರ ಗಂಧನಹಳ್ಳಿ ಅವರ ‘ನಿರಾಕಾರ ವಿಶ್ವಕರ್ಮ’ ಕೃತಿ ಸೆ.17ರಂದು ಮೈಸೂರು ಜಿಲ್ಲೆ, ಕೃಷ್ಣರಾಜನಗರದಲ್ಲಿ ಲೋಕಾರ್ಪಣೆಯಾಗಲಿದೆ.

- Advertisement -

ಕಾವ್ಯಸ್ಪಂದನ ಪ್ರಕಾಶನ ಪ್ರಕಟಿಸಿರುವ ಈ ಕೃತಿಯನ್ನು ತಾಲ್ಲೂಕು ಆಡಳಿತದ ಆಶ್ರಯದಲ್ಲಿ ತಾಲ್ಲೂಕು ವಿಶ್ವಕರ್ಮ ಸೇವಾ ಸಮಾಜ ಹಾಗೂ ತಾಲ್ಲೂಕು ವಿಶ್ವಕರ್ಮ ಸಂಘದ ಜಂಟಿ ಆಶ್ರಯದಲ್ಲಿ ನಡೆಯುವ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಡಿ. ರವಿಶಂಕರ್ ಅವರು ಬಿಡುಗಡೆ ಮಾಡಲಿದ್ದಾರೆ. ಕಾರ್ಯಕ್ರಮವು ಸೆ.17ರಂದು ಬೆಳಗ್ಗೆ 10.30ಕ್ಕೆ ಕೆ.ಆರ್.ನಗರದ ತಾಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ತಹಶೀಲ್ದಾರ್ ಜಿ. ಸುರೇಂದ್ರ ಮೂರ್ತಿ ಅಧ್ಯಕ್ಷತೆ ವಹಿಸಲಿದ್ದು, ತಾಲ್ಲೂಕು ವಿಶ್ವಕರ್ಮ ಸೇವಾ ಸಮಾಜದ ಅಧ್ಯಕ್ಷ ರೇವಣ್ಣ, ತಾಲ್ಲೂಕು ವಿಶ್ವಕರ್ಮ ಸಂಘದ ಅಧ್ಯಕ್ಷ ವೇಣುಗೋಪಾಲ್ ಎನ್., ಪದಾಧಿಕಾರಿಗಳಾದ ಈಶ್ವರಾಚಾರ್, ರವಿಕುಮಾರ್, ಚೇತನ್ ಮೂರ್ತಿ ಸೇರಿದಂತೆ ವಿಶ್ವಕರ್ಮ ಸಮುದಾಯದ ಮುಖಂಡರು ಹಾಗೂ ತಾಲ್ಲೂಕು ಆಡಳಿತದ ಅಧಿಕಾರಿಗಳು ಭಾಗವಹಿಸಲಿದ್ದಾರೆ. ಕಾರ್ಯಕ್ರಮಕ್ಕೂ ಮುನ್ನ ಶ್ರೀ ಕಾಳಿಕಾಂಬಾ ದೇವಾಲಯದಲ್ಲಿ ವಿಶ್ವಕರ್ಮ ಜಯಂತಿ ಅಂಗವಾಗಿ ವಿಶೇಷ ಪೂಜೆ ನಡೆಯಲಿದೆ. ಬಳಿಕ ದೇವಾಲಯದಿಂದ ತಾಲೂಕು ಆಡಳಿತ ಕಚೇರಿಯವರೆಗೆ ಮೆರವಣಿಗೆ ನಡೆಯಲಿದೆ.

ವಿಶೇಷವೆಂದರೆ, ಪ್ರಕಾಶಕರು ಹಾಗೂ ಆಯೋಜಕರ ಆಸಕ್ತಿಯ ಮೇರೆಗೆ ‘ನಿರಾಕಾರ ವಿಶ್ವಕರ್ಮ’ ಕೃತಿಯನ್ನು ಮೂರು ಪ್ರತ್ಯೇಕ ಕಾರ್ಯಕ್ರಮಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ. ಸೆ.17ರಂದು ಕೆ.ಆರ್.ನಗರದಲ್ಲಿ ಮೊದಲ ಲೋಕಾರ್ಪಣೆ ನಡೆಯಲಿದ್ದು, ಸೆ.20ರಂದು ಬೆಂಗಳೂರಿನ ತಾತಗುಣಿಯ ವಿಶ್ವಕರ್ಮ ನಗರದಲ್ಲಿ ಕರ್ನಾಟಕ ರಾಜ್ಯ ವಿಶ್ವಕರ್ಮ ಮಹಾಮಂಡಳಿಯ ವತಿಯಿಂದ ನಡೆಯುವ ಕಾರ್ಯಕ್ರಮದಲ್ಲಿ ಮತ್ತೊಮ್ಮೆ ಕೃತಿ ಬಿಡುಗಡೆಯಾಗಲಿದೆ. ನ.22ರಂದು ಬೆಂಗಳೂರಿನ ಚಾಮರಾಜಪೇಟೆಯ ಕನ್ನಡ ಸಾಹಿತ್ಯ ಪರಿಷತ್ತಿನ ಸಭಾಂಗಣದಲ್ಲಿ ಕಾವ್ಯಸ್ಪಂದನ ಪ್ರಕಾಶನ ಆಯೋಜಿಸಿರುವ ಕಾರ್ಯಕ್ರಮದಲ್ಲಿಯೂ ಕೃತಿ ಲೋಕಾರ್ಪಣೆಯಾಗಲಿದೆ.

ಮಾನವ ನಾಗರಿಕತೆಯ ಬೆಳವಣಿಗೆಯ ಹಿಂದೆ ಶ್ರಮಿಸಿದ ಅನಾಮಿಕ ಸೃಜನಶೀಲ ಕೈಗಳ ಇತಿಹಾಸ, ಪರಂಪರೆ ಹಾಗೂ ಸಮೂಹ ಸ್ಮೃತಿಯನ್ನು ಅರಿಯುವ ಪ್ರಯತ್ನವನ್ನು ‘ನಿರಾಕಾರ ವಿಶ್ವಕರ್ಮ’ ಕೃತಿ ಮಾಡುತ್ತದೆ. ಕಲ್ಲನ್ನು ಕೆತ್ತಿ ದೇವಾಲಯ ನಿರ್ಮಿಸಿದವರು, ಕಬ್ಬಿಣಕ್ಕೆ ರೂಪ ನೀಡಿ ಉಪಕರಣ ಹಾಗೂ ಆಯುಧಗಳನ್ನು ರೂಪಿಸಿದವರು, ಮರಕ್ಕೆ ಕಲಾತ್ಮಕ ರೂಪ ನೀಡಿದವರು, ಮಣ್ಣಿಗೆ ಜೀವ ತುಂಬಿದವರು ಹಾಗೂ ಬಣ್ಣಗಳ ಮೂಲಕ ಸೌಂದರ್ಯವನ್ನು ಕಟ್ಟಿಕೊಟ್ಟವರು-ಇಂತಹ ಶ್ರಮಜೀವಿ ಸೃಷ್ಟಿಕರ್ತರ ಕೊಡುಗೆ ನಾಗರಿಕತೆಯ ನಿರ್ಮಾಣದಲ್ಲಿ ಮಹತ್ವದ್ದಾಗಿದೆ. ಆದರೆ ಇತಿಹಾಸದ ಅಧಿಕೃತ ಪುಟಗಳಲ್ಲಿ ರಾಜ-ಮಹಾರಾಜರ ಕಥೆಗಳ ನಡುವೆ ಈ ಸೃಜನಶೀಲ ಕೈಗಳ ಹೆಸರುಗಳು ಅನೇಕ ಬಾರಿ ಮರೆಯಾಗಿವೆ.

ಈ ವಿಶೇಷ ಸುದ್ದಿ ಓದಿದ್ದೀರಾ? ‘ಮೈಸೂರು ಚಲೋ’: ಪ್ರಜಾರಾಜ್ಯಕ್ಕಾಗಿ ಹೋರಾಡಿ ಬಲಿಯಾದ ಧೀರ ಬಾಲಕ ಬಾಣಾವರದ ರಾಮಸ್ವಾಮಿ

ಈ ಹಿನ್ನೆಲೆಯಲ್ಲಿ ವಿಶ್ವಕರ್ಮ ಸಮುದಾಯದ ಸೃಜನಶೀಲ ಪರಂಪರೆ, ಕಲೆ, ಶಿಲ್ಪ, ವಾಸ್ತು, ಕೌಶಲ್ಯ ಹಾಗೂ ಇತಿಹಾಸವನ್ನು ದಾಖಲಿಸುವ ಅರ್ಥಪೂರ್ಣ ಪ್ರಯತ್ನವಾಗಿ ಚಂದ್ರಶೇಖರ ಗಂಧನಹಳ್ಳಿ ಅವರ ‘ನಿರಾಕಾರ ವಿಶ್ವಕರ್ಮ’ ಕೃತಿ ಗಮನ ಸೆಳೆಯುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಸಿದ್ದರಾಮೇಶ್ವರ ಜಯಂತಿ ಪ್ರಯುಕ್ತ ಉಚಿತ ಆರೋಗ್ಯ, ನೇತ್ರ ತಪಾಸಣಾ ಶಿಬಿರ

ಜಿಡಾಗಾ ಮುಗಳಖೋಡ ಮಠದ ಪೂಜ್ಯ ಷಡಕ್ಷರಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಅವರ...

ಉಡುಪಿ | ಕಸ್ತೂರಿ ರಂಗನ್ ವರದಿ ಅಧಿಸೂಚನೆ ತಕ್ಷಣ ಹಿಂಪಡೆಯಿರಿ: ಕಾಂಗ್ರೆಸ್ ಆಗ್ರಹ

ಪಶ್ಚಿಮ ಘಟ್ಟ ಹಾಗೂ ಅದರ ತಪ್ಪಲು ಪ್ರದೇಶಗಳ ನಿವಾಸಿಗಳಿಗೆ ಮಾರಕವಾಗಿರುವ ಕಸ್ತೂರಿ...

ಕಲಬುರಗಿ | ₹16 ಸಾವಿರ ಕೋಟಿ ವೆಚ್ಚಕ್ಕೆ ಲೆಕ್ಕವೆಲ್ಲಿ? 371(ಜೆ) ಕುರಿತು ಶ್ವೇತಪತ್ರಕ್ಕೆ ಸಿಪಿಐ,ಎಐಕೆಎಸ್ ಪಟ್ಟು

ಕಲ್ಯಾಣ ಕರ್ನಾಟಕ ಅಭಿವೃದ್ಧಿಗಾಗಿ 371(ಜೆ) ಅಡಿಯಲ್ಲಿ ಇದುವರೆಗೆ ಖರ್ಚು ಮಾಡಿರುವ ₹16...

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...