ಮೈಸೂರು | ವಿದ್ಯುತ್ ಖಾಸಗೀಕರಣಕ್ಕೆ ವಿರೋಧ: ಸಂಸದ ಯದುವೀರ್ ಒಡೆಯರ್‌ಗೆ ರೈತ ಸಂಘದಿಂದ ಮನವಿ

Date:

ಕರ್ನಾಟಕದಲ್ಲಿ ವಿದ್ಯುತ್ ವಿತರಣಾ ಕ್ಷೇತ್ರವನ್ನು ಖಾಸಗೀಕರಣಗೊಳಿಸದಂತೆ ಹಾಗೂ ಟಾಟಾ ಪವರ್ ಸಂಸ್ಥೆಗೆ ವಿದ್ಯುತ್ ವಿತರಣಾ ಪರವಾನಗಿ ನೀಡದಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಗೆ ಮನವಿ ಸಲ್ಲಿಸಲಾಯಿತು.

- Advertisement -

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣದ ಬಿಜಿಎಸ್ ಆವರಣದಲ್ಲಿ ನಡೆದ ಉದ್ಯೋಗ ಮೇಳ ಕಾರ್ಯಕ್ರಮದ ಸಂದರ್ಭದಲ್ಲಿ ರೈತ ಸಂಘದ ಮುಖಂಡರು ಸಂಸದರಿಗೆ ಮನವಿ ಪತ್ರ ನೀಡಿ ತಮ್ಮ ಆತಂಕವನ್ನು ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಹಾಸ್ಟೆಲ್‌’ ಇಲ್ಲದ ಶಿಕ್ಷಣದ ಸ್ವರೂಪ ಹೇಗಿರಲಿದೆ?

ಸಾಮಾನ್ಯವಾಗಿ ʼಶಿಕ್ಷಣʼ ಎಂದರೆ ʼತರಗತಿ, ಪಠ್ಯಪುಸ್ತಕ ಮತ್ತು ಪರೀಕ್ಷೆಗಳʼ ಸುತ್ತ ಹೆಣೆದುಕೊಂಡಿರುವ ಕಲ್ಪನೆ. ಆದರೆ ಒಬ್ಬ ವಿದ್ಯಾರ್ಥಿ ದಿನದ ಬಹುಪಾಲು ಕಳೆಯುವ ಜಾಗ ʼಹಾಸ್ಟೆಲ್‌ʼ. ಹೆಚ್ಚಾಗಿ ಚರ್ಚೆಗೆ ಬಾರದ ಈ ʼಹಾಸ್ಟೆಲ್‌ʼ ಎಂಬ...

ಬರದ ಬೇಗೆಯಲ್ಲಿ ರಾಜ್ಯ ಬೆಂದರೂ ಅನುದಾನಕ್ಕ ದನಿ ಎತ್ತದ...

ಸದಾ ಕಾಲ 'ಮೋದಿ ಜಪ' ಮಾಡುತ್ತಾ, ಕೇವಲ ರಾಜಕೀಯಕ್ಕಾಗಿ ಮತ್ತು ಪಕ್ಷದ ಅಜೆಂಡಾಗಳಿಗಾಗಿ ರಾಜ್ಯಾದ್ಯಂತ ಸುತ್ತುವ ಈ ಸಂಸದರಿಗೆ, ನಾಡಿನ ಜನತೆ ಬರಗಾಲದ ತೀವ್ರ ಸಂಕಷ್ಟದಲ್ಲಿ ಬೆಂದು ಹೋಗುತ್ತಿರುವಾಗ ಅದೇ ಪ್ರಧಾನಿ ನರೇಂದ್ರ...

SIR ಅಕ್ರಮ | ಗ್ಯಾನೇಶ್‌ ಕುಮಾರ್ ‘ಅಪರಾಧಿ’ಯಾದ್ರೆ, ಮೋದಿ-ಅಮಿತ್...

ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಅತ್ಯಂತ ಕರಾಳ ಅಧ್ಯಾಯವೊಂದು ಈಗ ಜಗಜ್ಜಾಹೀರಾಗಿದೆ. ಪ್ರತಿಯೊಬ್ಬ ನಾಗರಿಕನ ಅತಿ ದೊಡ್ಡ ರಾಜಕೀಯ ಶಕ್ತಿಯಾಗಿರುವ 'ಮತದಾನದ ಹಕ್ಕು' ಮತ್ತು ಅದನ್ನು ಕಾಯಬೇಕಾದ ಸಾಂವಿಧಾನಿಕ ಸಂಸ್ಥೆಯನ್ನೇ ಆಡಳಿತಾರೂಢ ಮೋದಿ-ಅಮಿತ್ ಶಾ...

ಈ ವೇಳೆ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರ್ ಕುಮಾರ್, ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ದೂರದೃಷ್ಟಿಯಿಂದ ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಗೆ ಅಡಿಪಾಯ ಹಾಕಲಾಗಿದ್ದು, 124 ವರ್ಷಗಳ ಇತಿಹಾಸ ಹೊಂದಿರುವ ಸಾರ್ವಜನಿಕ ವಿದ್ಯುತ್ ವ್ಯವಸ್ಥೆಯನ್ನು ಖಾಸಗೀಕರಣಗೊಳಿಸಲು ಸರ್ಕಾರ ಮುಂದಾಗಿರುವುದು ಆತಂಕಕಾರಿ ಬೆಳವಣಿಗೆ ಎಂದು ಹೇಳಿದರು.

ರಾಜ್ಯದ ಜನತೆ, ಸರ್ಕಾರ ಹಾಗೂ ನೌಕರರ ಸಹಭಾಗಿತ್ವದಲ್ಲಿ ಬೆಳೆದು ಬಂದಿರುವ ವಿದ್ಯುತ್ ಕ್ಷೇತ್ರವು ರೈತರಿಗೆ ಹಾಗೂ ಬಡಜನರಿಗೆ ಉಚಿತ ಮತ್ತು ಕಡಿಮೆ ದರದ ವಿದ್ಯುತ್ ಸೌಲಭ್ಯ ಒದಗಿಸುತ್ತಿದೆ. ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ವಿದ್ಯುತ್ ಕೊರತೆಯಿಲ್ಲದೇ ಹೊರ ರಾಜ್ಯಗಳಿಗೆ ವಿದ್ಯುತ್ ರಫ್ತು ಮಾಡುವ ಮಟ್ಟಿಗೆ ಅಭಿವೃದ್ಧಿಯಾಗಿದೆ ಎಂದು ಅವರು ತಿಳಿಸಿದರು.

ಟಾಟಾ ಪವರ್ ಸಂಸ್ಥೆಯು ರಾಜ್ಯದ 19 ಜಿಲ್ಲೆಗಳಲ್ಲಿ ವಿದ್ಯುತ್ ವಿತರಣಾ ಪರವಾನಗಿ ಕೋರಿ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗಕ್ಕೆ (ಕೆ.ಇ.ಆರ್.ಸಿ.) ಅರ್ಜಿ ಸಲ್ಲಿಸಿರುವ ಹಿನ್ನೆಲೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ವಿದ್ಯುತ್ ಖಾಸಗೀಕರಣಕ್ಕೆ ಅನುಮತಿ ನೀಡಬಾರದೆಂದು ಈಗಾಗಲೇ ಮೂರು ಲಕ್ಷಕ್ಕೂ ಅಧಿಕ ಆಕ್ಷೇಪಣಾ ಪತ್ರಗಳನ್ನು ಕೆ.ಇ.ಆರ್.ಸಿ.ಗೆ ಸಲ್ಲಿಸಲಾಗಿದೆ ಎಂದು ಅವರು ಹೇಳಿದರು.

ಇತರೆ ರಾಜ್ಯಗಳಲ್ಲಿ ಟಾಟಾ ಪವರ್ ನಿರ್ವಹಿಸುತ್ತಿರುವ ವಿದ್ಯುತ್ ವಿತರಣಾ ವ್ಯವಸ್ಥೆಯಲ್ಲಿ ಹಲವು ಸಮಸ್ಯೆಗಳು ಕಂಡುಬಂದಿದ್ದು, ಗ್ರಾಹಕರಿಂದ ಹೆಚ್ಚಿನ ದರ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪಗಳೂ ಕೇಳಿಬಂದಿವೆ. ಹೀಗಾಗಿ ರಾಜ್ಯದ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸದೇ ಸರ್ಕಾರದ ಅಧೀನದಲ್ಲಿಯೇ ಮುಂದುವರಿಸಬೇಕು ಎಂದು ರೈತ ಸಂಘ ಆಗ್ರಹಿಸಿದೆ.

ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ರಾಜವಂಶದ ವಾರಸುದಾರರಾಗಿದ್ದು, ರಾಜ್ಯದ ವಿದ್ಯುತ್ ಇತಿಹಾಸದೊಂದಿಗೆ ವಿಶೇಷ ಸಂಬಂಧ ಹೊಂದಿದ್ದಾರೆ. ಆದ್ದರಿಂದ ಕೇಂದ್ರ ಸರ್ಕಾರದ ಮಟ್ಟದಲ್ಲಿ ಮಧ್ಯಸ್ಥಿಕೆ ವಹಿಸಿ ವಿದ್ಯುತ್ ಖಾಸಗೀಕರಣ ಪ್ರಕ್ರಿಯೆಯನ್ನು ತಡೆಯುವಂತೆ ರೈತ ಸಂಘ ಮನವಿ ಮಾಡಿದೆ.

ಈ ಸುದ್ದಿ ಓದಿದ್ದೀರಾ?ಕೊಡಗು | ಮಡಿಕೇರಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಇ-ಮೇಲ್: ತೀವ್ರ ತಪಾಸಣೆ, ಹುಸಿ ಕರೆ ಎಂದು ಖಾತ್ರಿ

ಮನವಿ ಸಲ್ಲಿಸುವಾಗ ಎಂ.ಟಿ. ನಾರಾಯಣ, ಪ್ರಕಾಶ್ ರಾಜೇ ಅರಸ್, ವಿಕ್ರಂ ಗೌಡ, ಕೊಣಸೂರು ಆನಂದ್, ದೇವರಾಜ್, ಗುರುರಾಜ್, ದಶರಥ್, ಕಿರಿಜಾಜಿ ಧನಂಜಯ, ಹರೀಶ್, ಅರಸ್ ಬಸವರಾಜೇಗೌಡ, ರಘುಪತಿ ಹಾಗೂ ಮಹೇಶ್ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ದರ್ಗಾ ಆವರಣದಲ್ಲಿ ದಫನ್‌ಗೆ ಅನುಮತಿ ನಿರಾಕರಣೆ ಖಂಡನೀಯ: SDPI

ಚಿಕ್ಕಮಗಳೂರು: ಹಜರತ್ ಬಾಬಾ ಬುಡನ್ ಅವರ ವಂಶಸ್ಥರಾದ ಸೈಯದ್ ಹುಸೇನ್ ಶಾ...

ಚಿಕ್ಕಮಗಳೂರು | ‘ಮಳಲೂರು ಏತ ನೀರಾವರಿ ಯೋಜನೆ’: ಹೆಸರಿಗಷ್ಟೇ ಈ ಯೋಜನೆ ಆಗಿದೆಯೇ?

ಸರ್ಕಾರದಿಂದ ಅನೇಕ ರೀತಿಯ ಯೋಜನೆ ಮಾಡುತ್ತ ಬರುತ್ತಿದೆ. ಹಾಗೆಯೇ, ಚಿಕ್ಕಮಗಳೂರು ತಾಲೂಕಿನ...