ತನ್ವಿರ್ ಸೇಠ್‌ಗೆ ಸಚಿವ ಸ್ಥಾನ ಸಿಗದೆ ಮೈಸೂರಿನಲ್ಲಿ ಆಕ್ರೋಶ; ರಸ್ತೆ ತಡೆ, ಅಭಿಮಾನಿ ಆತ್ಮಹತ್ಯೆಗೆ ಯತ್ನ

Date:

ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮೈಸೂರು ಜಿಲ್ಲೆಯ ಹಿರಿಯ ಕಾಂಗ್ರೆಸ್ ಶಾಸಕ ತನ್ವಿರ್ ಸೇಠ್ ಅವರಿಗೆ ಸಚಿವ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಪ್ರತಿಭಟನೆ ನಡೆಸಿದರು.

- Advertisement -

ನಗರದ ಮಣಿಪಾಲ ಆಸ್ಪತ್ರೆ ವೃತ್ತದಲ್ಲಿ ಜಮಾಯಿಸಿದ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ರಸ್ತೆ ತಡೆ ನಡೆಸಿ, ತನ್ವಿರ್ ಸೇಠ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು ಆಗ್ರಹಿಸಿದರು. ಹಲವು ವರ್ಷಗಳಿಂದ ಪಕ್ಷ ಸಂಘಟನೆ ಹಾಗೂ ಕ್ಷೇತ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸಿರುವ ಹಿರಿಯ ಶಾಸಕರಿಗೆ ಸಚಿವ ಸ್ಥಾನ ನೀಡಲಾಗುತ್ತದೆ ಎಂಬ ನಿರೀಕ್ಷೆ ಇದ್ದರೂ ಅದು ಈಡೇರದಿರುವುದು ಕಾರ್ಯಕರ್ತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಒಂದು ಕಾಲದಲ್ಲಿ ಮುಖ್ಯಮಂತ್ರಿ ಸೇರಿದಂತೆ ಹಲವು ಪ್ರಭಾವಿ ಸಚಿವರನ್ನು ಹೊಂದಿದ್ದ ಮೈಸೂರು ಜಿಲ್ಲೆಗೆ ಈ ಬಾರಿಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಯಾವುದೇ ಹೊಸ ಪ್ರತಿನಿಧಿತ್ವ ಸಿಗದಿರುವುದು ಜಿಲ್ಲೆಯ ಕಾಂಗ್ರೆಸ್ ವಲಯದಲ್ಲಿ ಬೇಸರ ಮೂಡಿಸಿದೆ. ಈ ಹಿಂದೆ ಜಿಲ್ಲೆಯಿಂದ ಡಾ. ಹೆಚ್.ಸಿ. ಮಹದೇವಪ್ಪ ಹಾಗೂ ಕೆ. ವೆಂಕಟೇಶ್ ಸಚಿವರಾಗಿದ್ದರು. ಪ್ರಸ್ತುತ ಡಾ. ಯತೀಂದ್ರ ಸಿದ್ದರಾಮಯ್ಯ ಮಾತ್ರ ಜಿಲ್ಲೆಯ ಪ್ರತಿನಿಧಿಯಾಗಿ ಸಚಿವ ಸಂಪುಟದಲ್ಲಿದ್ದು, ತನ್ವಿರ್ ಸೇಠ್ ಅವರಿಗೆ ಅವಕಾಶ ದೊರೆಯಲಿದೆ ಎಂಬ ನಿರೀಕ್ಷೆ ಹುಸಿಯಾಗಿದೆ.

ಇದೇ ವೇಳೆ, ಮೈಸೂರಿನ ಉದಯಗಿರಿ ನಿವಾಸದ ಎದುರು ಜಮಾಯಿಸಿದ್ದ ಅಭಿಮಾನಿಗಳ ಪೈಕಿ ತಬ್ರೇಜ್ ಸೇಠ್ ಎಂಬವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ. ತಕ್ಷಣವೇ ಪೊಲೀಸರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ತನ್ವಿರ್ ಸೇಠ್, ಎರಡೂವರೆ ವರ್ಷದ ಬಳಿಕ ಸಚಿವ ಸ್ಥಾನ ನೀಡಲಾಗುತ್ತದೆ ಎಂಬ ಭರವಸೆ ಈಡೇರಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಸಚಿವ ಸ್ಥಾನ ಕೈತಪ್ಪಲು ರಾಜ್ಯ ಮಟ್ಟದ ಕೆಲವು ನಾಯಕರ ಕೈವಾಡವಿದೆ ಎಂದು ಆರೋಪಿಸಿದ ಅವರು, ಕಾರ್ಯಕರ್ತರೊಂದಿಗೆ ಚರ್ಚಿಸಿ ಮುಂದಿನ ರಾಜಕೀಯ ನಡೆ ಕುರಿತು ತೀರ್ಮಾನ ಕೈಗೊಳ್ಳುವುದಾಗಿ ಹೇಳಿದರು.

ಈ ವಿಶೇಷ ಸುದ್ದಿ ಓದಿದ್ದೀರಾ?SIR: ಕೊಡಗಿನ ಆದಿವಾಸಿಗಳ ಅಸ್ತಿತ್ವದ ಪ್ರಶ್ನೆಯ ಮುಂದೆ ಆಡಳಿತದ ಅಂಕಿ-ಅಂಶಗಳು ಸಾಕೇ?

ಸಚಿವ ಸಂಪುಟ ವಿಸ್ತರಣೆಯಲ್ಲಿ ಮೈಸೂರು ಜಿಲ್ಲೆಗೆ ಮತ್ತೊಮ್ಮೆ ನಿರೀಕ್ಷಿತ ಸ್ಥಾನಮಾನ ದೊರೆಯದಿರುವುದು ಜಿಲ್ಲೆಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಅಸಮಾಧಾನ ಮತ್ತು ಆಕ್ರೋಶಕ್ಕೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ನಾಯಕತ್ವ ಈ ಬೆಳವಣಿಗೆಗೆ ಹೇಗೆ ಸ್ಪಂದಿಸುತ್ತದೆ ಎಂಬುದು ಕುತೂಹಲ ಮೂಡಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮೂರು ದಲಿತ ಕೊಲೆ ಪ್ರಕರಣಗಳ ತನಿಖೆ ಸಿಐಡಿಗೆ ವಹಿಸಲು ಆಗ್ರಹ: ಅನಿರ್ದಿಷ್ಟಾವಧಿ ಧರಣಿ

ರಾಯಚೂರು ಜಿಲ್ಲೆಯಲ್ಲಿ ನಡೆದ ಮೂರು ಪ್ರತ್ಯೇಕ ದಲಿತ ಕೊಲೆ ಪ್ರಕರಣಗಳನ್ನು ಸಮಗ್ರ...

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

ನೆಲಮಂಗಲ | ಶಾಲಾ ಆವರಣದಲ್ಲಿ ಚೋಳರ ಕಾಲದ ಪ್ರಾಚೀನ ಶಾಸನ ಪತ್ತೆ

ನೆಲಮಂಗಲ ಬಳಿಯ ಮಂಡಿಗೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಕ್ರಿ.ಶ 1050ರ ಪ್ರಾಚೀನ...

ಕೋಲಾರ | ಹಾಲು ಉತ್ಪಾದಕರಿಗೆ ಕೋಮುಲ್, ಕೆಎಂಎಫ್ ಸೌಲಭ್ಯ ಸದುಪಯೋಗಪಡಿಸಿಕೊಳ್ಳಿ: ಚಂಚಿಮಲೆ ರಮೇಶ್

ತಾಲೂಕಿನ ವೇಮಗಲ್ ಕುರಗಲ್ ಪಟ್ಟಣ ಪಂಚಾಯಿತಿ ವ್ಯಾಪ್ತಿಯ 10ನೇ ವಾರ್ಡ್‌ನ ಹಾರ್ಜೇನಹಳ್ಳಿ...