ಮೈಸೂರು ಜಿಲ್ಲೆಯ ಕೃಷ್ಣರಾಜನಗರ ತಾಲೂಕಿನ 66/11 ಕೆ.ವಿ. ವಿದ್ಯುತ್ ಸ್ವೀಕರಣಾ ಕೇಂದ್ರದಲ್ಲಿ ಮೊದಲ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಜೂನ್ 20, 2026ರ ಶನಿವಾರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಪ್ರಕಟಣೆಯಲ್ಲಿ ತಿಳಿಸಿದೆ.
ನಿರ್ವಹಣಾ ಕಾರ್ಯದ ಕಾರಣ ಕೆ.ಆರ್.ನಗರ ಉಪವಿಭಾಗ ವ್ಯಾಪ್ತಿಯ ಕೆ.ಆರ್.ನಗರ ಪಟ್ಟಣ ಸೇರಿದಂತೆ ಚಂದಗಾಲು, ಹೆಬ್ಬಾಳು, ಸಿದ್ದಾಪುರ, ಬ್ಯಾಡರಹಳ್ಳಿ, ದೊಡ್ಡಕೊಪ್ಪಲು, ಲಾಳಂದೇವನಹಳ್ಳಿ, ಕಗ್ಗೆರೆ ಹಾಗೂ ತಿದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳ್ಳಲಿದೆ.
ಈ ಸುದ್ದಿ ಓದಿದ್ದೀರಾ?ಟಾಟಾ ಪವರ್ ಅರ್ಜಿ ದಾಖಲೆಗಳು ಕನ್ನಡದಲ್ಲಿಯೂ ಇರಲಿ: ಡಾ. ಪುರುಷೋತ್ತಮ ಬಿಳಿಮಲೆ ಆಗ್ರಹ
ಆದ್ದರಿಂದ ಸಾರ್ವಜನಿಕರು ಹಾಗೂ ವಿದ್ಯುತ್ ಗ್ರಾಹಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ವಿದ್ಯುತ್ ಇಲಾಖೆಯೊಂದಿಗೆ ಸಹಕರಿಸುವಂತೆ ಸೆಸ್ಕ್ ಅಧಿಕಾರಿಗಳು ಮನವಿ ಮಾಡಿದ್ದಾರೆ.




