ಮೈಸೂರು | ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ: ನ್ಯಾ. ನಾಗರಾಜ್ ಸಿದ್ದಪ್ಪ ಅಂಕಸದೊಡ್ಡಿ

Date:

ಅರಣ್ಯ, ನೈಸರ್ಗಿಕ ಸಂಪತ್ತು, ವನ್ಯಜೀವಿ ಸೇರಿದಂತೆ ಒಟ್ಟಾರೆ ಪರಿಸರವನ್ನು ಸಂರಕ್ಷಿಸುವುದು ದೇಶದ ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದ್ದು, ಈ ಕುರಿತು ಕಾನೂನು ಅರಿವು ಎಲ್ಲರಿಗೂ ಅಗತ್ಯವಾಗಿದೆ ಎಂದು ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಹಾಗೂ ಹಿರಿಯ ನ್ಯಾಯಾಧೀಶ ನಾಗರಾಜ್ ಸಿದ್ದಪ್ಪ ಅಂಕಸದೊಡ್ಡಿ ಹೇಳಿದರು.

- Advertisement -

ನಗರದ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಮೈಸೂರು ಗ್ರಾಹಕರ ಪರಿಷತ್ತು ಹಾಗೂ ಹಾರ್ಟ್‌ಫುಲ್‌ನೆಸ್‌ ಸಾಮಾಜಿಕ ಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ್ದ ‘ಕಾಡು ಹಬ್ಬ’ ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಸರ್ವೋಚ್ಚ ನ್ಯಾಯಾಲಯದ ನಿರ್ದೇಶನದಂತೆ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರವು ಪರಿಸರ, ವನ್ಯಸಂಪತ್ತು ಹಾಗೂ ಜಲಸಂಪತ್ತಿಗೆ ಗೌರವ ನೀಡುವ ಮತ್ತು ಅವುಗಳನ್ನು ಸಂರಕ್ಷಿಸುವ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಅರಣ್ಯ ಸಂಪತ್ತು, ವನ್ಯಜೀವಿ ಹಾಗೂ ಪ್ರಾಣಿ ಸಂಪತ್ತನ್ನು ನಾಶವಾಗದಂತೆ ಉಳಿಸಲು ಅಗತ್ಯವಿರುವ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಪ್ರಾಧಿಕಾರದಿಂದ ಪ್ರಯತ್ನಿಸಲಾಗುತ್ತಿದೆ. ಇದಕ್ಕೆ ಸಾರ್ವಜನಿಕರ ಸಹಕಾರ ಅತ್ಯಗತ್ಯ ಎಂದರು.

ಸಂವಿಧಾನದ 42ನೇ ತಿದ್ದುಪಡಿಯ ಮೂಲಕ ಸೇರಿಸಲಾದ 48ಎ ವಿಧಿಯ ನಿರ್ದೇಶಕ ತತ್ವದಡಿ ಪರಿಸರ, ಅರಣ್ಯ ಹಾಗೂ ವನ್ಯಜೀವಿಗಳನ್ನು ರಕ್ಷಿಸುವ ಜವಾಬ್ದಾರಿ ರಾಜ್ಯದ ಮೇಲಿದ್ದು, 51ಎ(ಜಿ) ಅಡಿಯಲ್ಲಿ ನೈಸರ್ಗಿಕ ಪರಿಸರ, ಅರಣ್ಯ, ಸರೋವರ, ನದಿ ಹಾಗೂ ವನ್ಯಜೀವಿಗಳನ್ನು ರಕ್ಷಿಸಿ, ಸುಧಾರಿಸುವುದು ಪ್ರತಿಯೊಬ್ಬ ನಾಗರಿಕನ ಮೂಲಭೂತ ಕರ್ತವ್ಯವಾಗಿದೆ. ಈ ಆಶಯವನ್ನು ಜನರು ಅರ್ಥಮಾಡಿಕೊಂಡು ಪರಿಸರ ಸಂರಕ್ಷಣೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು. ‘ಕಾಡು ಹಬ್ಬ’ದಂತಹ ಪರಿಸರ ಸಂರಕ್ಷಣಾ ಕಾರ್ಯಕ್ರಮಗಳು ಜನರಲ್ಲಿ ಪ್ರಕೃತಿ ಪ್ರೀತಿ ಹಾಗೂ ಸಂರಕ್ಷಣೆಯ ಜವಾಬ್ದಾರಿಯನ್ನು ಬೆಳೆಸುವ ನಿಟ್ಟಿನಲ್ಲಿ ಶ್ಲಾಘನೀಯ ಕಾರ್ಯವಾಗಿದೆ ಎಂದರು.

ಪ್ರಜಾಸತ್ಯ ಪ್ರಧಾನ ಸಂಪಾದಕ ಹಾಗೂ ಹಾರ್ಟ್‌ಫುಲ್‌ನೆಸ್‌ ಪ್ರಾದೇಶಿಕ ಫೆಸಿಲಿಟೇಟರ್‌ ಮಧುಸೂದನ್‌ ಮಾತನಾಡಿ, ಹಾರ್ಟ್‌ಫುಲ್‌ನೆಸ್‌ ಸಂಸ್ಥೆಯು ವಿಶ್ವದ 160ಕ್ಕೂ ಹೆಚ್ಚು ದೇಶಗಳಲ್ಲಿ 22 ಸಾವಿರ ಕೇಂದ್ರಗಳ ಮೂಲಕ ಸೇವೆ ಸಲ್ಲಿಸುತ್ತಿದ್ದು, ರಾಜ್ಯದಲ್ಲಿಯೂ ಲಕ್ಷಾಂತರ ಜನರು ಇದರ ಪ್ರಯೋಜನ ಪಡೆಯುತ್ತಿದ್ದಾರೆ. ಸೇವಾ ಚಟುವಟಿಕೆಗಳ ಜೊತೆಗೆ ಪರಿಸರ ಸಂರಕ್ಷಣೆಯನ್ನೂ ಪ್ರಮುಖ ಕಾರ್ಯಕ್ರಮವನ್ನಾಗಿ ಕೈಗೆತ್ತಿಕೊಳ್ಳಲಾಗಿದೆ. ರಾಜ್ಯದಲ್ಲಿ ಕೋಟ್ಯಂತರ ಗಿಡಗಳನ್ನು ನೆಡುವ ಕಾರ್ಯದಲ್ಲಿ ಹೈಕೋರ್ಟ್‌ನ ಸಹಭಾಗಿತ್ವ ದೊರೆತಿರುವುದು ಹೆಮ್ಮೆಯ ಸಂಗತಿ ಎಂದರು.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪರಿಸರ ಸಂರಕ್ಷಣೆ, ಸಸಿ ನೆಡುವಿಕೆ ಹಾಗೂ ಬಯೋಗ್ಯಾಸ್‌ ನಿರ್ಮಾಣಕ್ಕೆ ಅಗತ್ಯ ಸಹಕಾರ ನೀಡಲಾಗುವುದು. ನಾಲ್ಕು ವರ್ಷಗಳ ಅವಧಿಯಲ್ಲಿ ದೊಡ್ಡ ಪ್ರಮಾಣದ ಭೂಪ್ರದೇಶದಲ್ಲಿ ಹಸಿರು ಪ್ರದೇಶ ನಿರ್ಮಿಸುವ ಕಾರ್ಯಕ್ಕೂ ಒತ್ತು ನೀಡಲಾಗುತ್ತಿದೆ. ಜೀವನದಲ್ಲಿನ ಗೊಂದಲ ಹಾಗೂ ಒತ್ತಡವನ್ನು ನಿಯಂತ್ರಿಸಲು ಧ್ಯಾನ ಮತ್ತು ಯೋಗ ಸಹಕಾರಿಯಾಗಿದ್ದು, ಇಲವಾಲ ಕೇಂದ್ರದಲ್ಲಿ ಧ್ಯಾನ, ಯೋಗದ ಮಹತ್ವವನ್ನು ತಿಳಿಸಿಕೊಡಲಾಗುತ್ತಿದೆ ಎಂದರು.

ಯಾವುದೇ ಕೆರೆಗಳಿಗೆ ಕೊಳಚೆ ನೀರು ಹರಿಯುತ್ತಿರುವುದು ಕಂಡುಬಂದರೆ ಮಾಹಿತಿ ನೀಡುವಂತೆ ಮನವಿ ಮಾಡಿದ ಅವರು, ಸಮಸ್ಯೆ ಪರಿಹಾರಕ್ಕೆ ಉಚಿತವಾಗಿ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು. ಸಾವಯವ ಜೈವಿಕ ಸಂಸ್ಕೃತಿ ಕುರಿತು ತರಬೇತಿ ನೀಡುವುದರ ಜೊತೆಗೆ ಅಗತ್ಯ ಉಪಕರಣಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು.

ಶ್ರೀ ಚಾಮರಾಜೇಂದ್ರ ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕಿ ಪಿ. ಅನೂಷ ಮಾತನಾಡಿ, ಕೂರ್ಗಳ್ಳಿಯಲ್ಲಿರುವ ಕೇಂದ್ರದಲ್ಲಿ ಪ್ರಾಣಿಗಳಿಗೆ ಅಗತ್ಯವಾಗುವ ಸಸ್ಯಗಳನ್ನು ಅಲ್ಲಿಯೇ ಬೆಳೆಸಿ ವನ್ಯಜೀವಿಗಳಿಗೆ ಒದಗಿಸುವ ಸಿದ್ಧತೆ ನಡೆಸಲಾಗುತ್ತಿದೆ. ಹಾರ್ಟ್‌ಫುಲ್‌ನೆಸ್‌ ಸಂಸ್ಥೆ ನೀಡಿರುವ ಸಸಿಗಳನ್ನು ಮೃಗಾಲಯದ ಆವರಣದಲ್ಲಿ ನೆಟ್ಟು ಬೆಳೆಸಲಾಗುವುದು ಎಂದು ಹೇಳಿದರು.

ಮೈಸೂರು ಗ್ರಾಹಕರ ಪರಿಷತ್ತಿನ ಸಂಸ್ಥಾಪಕ ಭಾಮಿ ವಿ. ಶೆಣೈ ಮಾತನಾಡಿ, ಒಂದು ಮರದ ಪರಿಸರ ಮೌಲ್ಯವನ್ನು ಹಣದಲ್ಲಿ ಅಳೆಯಲು ಸಾಧ್ಯವಿಲ್ಲ. ನಗರದಲ್ಲಿ ಅನಗತ್ಯವಾಗಿ ಮರಗಳನ್ನು ತೆರವುಗೊಳಿಸುವುದರಿಂದ ಪರಿಸರಕ್ಕೆ ದೊಡ್ಡ ನಷ್ಟ ಉಂಟಾಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. 1992ರಲ್ಲಿ ಮರಗಳನ್ನು ಕಡಿದ ಸಂದರ್ಭದಲ್ಲಿ ಅದನ್ನು ವಿರೋಧಿಸಿ ಹೋರಾಟ ಆರಂಭಿಸಿದ ಮೈಸೂರು ಗ್ರಾಹಕರ ಪರಿಷತ್ತು, ಅಂದಿನಿಂದಲೂ ಮರಗಳ ಸಂರಕ್ಷಣೆಗೆ ನಿರಂತರವಾಗಿ ಹೋರಾಟ ನಡೆಸಿಕೊಂಡು ಬಂದಿದೆ. ನಗರಪಾಲಿಕೆ ವತಿಯಿಂದ ನಗರದ ಐದು ಕಡೆಗಳಲ್ಲಿ ಕಿರು ಅರಣ್ಯಗಳನ್ನು ನಿರ್ಮಿಸಿರುವುದು ಸ್ವಾಗತಾರ್ಹವಾಗಿದ್ದು, ಮುಂದಿನ ದಿನಗಳಲ್ಲಿ ಅವು ದೊಡ್ಡ ಹಸಿರು ಪ್ರದೇಶಗಳಾಗಿ ಬೆಳೆಯಬೇಕು ಎಂದು ಆಶಿಸಿದರು.
ಮೃಗಾಲಯದ ಆವರಣದಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಮರಗಳನ್ನು ಬೆಳೆಸುವ ಇಂತಹ ಕಾರ್ಯಕ್ರಮಗಳು ಪರಿಸರ ಸಂರಕ್ಷಣೆಗೆ ಪೂರಕವಾಗಿವೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?ಗುಂಡ್ಲುಪೇಟೆ | ಕೆರೆಗಳಿಗೆ ನೀರು ತುಂಬಿಸಲು ಒತ್ತಾಯಿಸಿ ಬೃಹತ್ ಪ್ರತಿಭಟನೆ

ಕಾರ್ಯಕ್ರಮದಲ್ಲಿ ಶ್ರೀ ಚಾಮರಾಜೇಂದ್ರ ಮೃಗಾಲಯದ ಉಪನಿರ್ದೇಶಕ ಲಕ್ಷ್ಮಿಕಾಂತ, ಮೈಸೂರು ಗ್ರಾಹಕರ ಪರಿಷತ್ತಿನ ಸಂಸ್ಥಾಪಕ ಡಿ.ವಿ. ದಯಾನಂದ ಸಾಗರ್ ಸೇರಿದಂತೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಕೂಡಲೇ ಸಾಲಮನ್ನಾ ಮಾಡಿ: ನರಸಿಂಗ್‌ರಾವ್‌ ಸರರ್ಕಿಲ್‌ ಆಗ್ರಹ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬಡ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಾ...

ಕೋಲಾರ | ಜಾನಪದ ಗಾಯಕ ಗೋ.ನಾ. ಸ್ವಾಮಿಗೆ ಕಲಾದರ್ಪಣ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಜಿಲ್ಲೆಯ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಗಾಯಕ ಹಾಗೂ ಜಾನಪದ ಸಂರಕ್ಷಣಾ...