ಸರ್ಕಾರಿ ಶಾಲೆಗಳನ್ನು ಖಾಸಗಿಯವರಿಗೆ ದತ್ತು ನೀಡುವ ಸರ್ಕಾರದ ನಡೆ ಖಂಡಿಸಿ ಪ್ರತಿಭಟನೆ

Date:

ಎಡಿಬಿ (ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್) ಜತೆ ರಾಜ್ಯ ಸರ್ಕಾರ ಮಾಡಿಕೊಂಡಿರುವ ಒಪ್ಪಂದ ಹಾಗೂ ಸರ್ಕಾರಿ ಶಾಲೆಗಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಮತ್ತು ಕಾರ್ಪೊರೇಟ್ ಕಂಪನಿಗಳಿಗೆ ದತ್ತು ನೀಡಲು ಮುಂದಾಗಿರುವುದನ್ನು ಖಂಡಿಸಿ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿ ಹಾಗೂ ವಿವಿಧ ಸಂಘಟನೆಗಳ ವತಿಯಿಂದ ಮೈಸೂರು ನಗರದ ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

- Advertisement -

ಕೆಪಿಎಸ್ ಮ್ಯಾಗ್ನೆಟ್ ನೀತಿ ಹಾಗೂ ಎಡಿಬಿ ಸಾಲದ ಒಪ್ಪಂದದ ಮೂಲಕ ರಾಜ್ಯದ 45 ಸಾವಿರ ಸರ್ಕಾರಿ ಶಾಲೆಗಳನ್ನು ಮುಚ್ಚಲು ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು. ಸರ್ಕಾರಿ ಶಾಲೆಗಳನ್ನು ಖಾಸಗಿ ಶಿಕ್ಷಣ ಸಂಸ್ಥೆಗಳು ಹಾಗೂ ಕಾರ್ಪೊರೇಟ್ ಕಂಪನಿಗಳಿಗೆ ಹಸ್ತಾಂತರಿಸುವ ಉದ್ದೇಶದಿಂದ ನವೆಂಬರ್ 4ರಂದು ವಿಧಾನಸೌಧದಲ್ಲಿ ಸಭೆ ನಡೆಸಲಾಗಿದೆ. ಮೊದಲ ಹಂತದಲ್ಲಿ 2,000 ಸರ್ಕಾರಿ ಶಾಲೆಗಳನ್ನು ಖಾಸಗಿಯವರಿಗೆ ದತ್ತು ನೀಡಲು ಒಪ್ಪಂದ ಮಾಡಿಕೊಳ್ಳಲಾಗಿದೆ. ಇದು ಜನವಿರೋಧಿ ಹಾಗೂ ಶಿಕ್ಷಣ ವಿರೋಧಿ ಕ್ರಮ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಕೊಪ್ಪಳ | 8 ತಿಂಗಳಿನಿಂದ ಕಿಟ್‌ ವಿತರಣೆಯಿಲ್ಲ, ಮಲಗಲು...

ಕೊಪ್ಪಳ ನಗರದ ಡಾ.ಬಿ ಆರ್‌ ಅಂಬೇಡ್ಕರ್ ಸರಕಾರಿ ಮೆಟ್ರಿಕ್‌ ನಂತರದ ಬಾಲಕರ ವೃತ್ತಿಪರ ವಸತಿ (ಪರಿಶಿಷ್ಟ ಜಾತಿ) ನಿಲಯದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ಕಳೆದ ಸುಮಾರು...

ನುಡಿನಮನ | ಕೆವಿಎನ್: ಕನ್ನಡದ ಘನವಿವೇಕ

ಪ್ರಭುತ್ವದ ಭಾಷೆಗಳಾದ ಸಂಸ್ಕೃತ ಮತ್ತು ಇಂಗ್ಲಿಷ್ ಭಾಷೆಗಳು ವರ್ತಿಸುವ ಭಿನ್ನ ಬಗೆಗಳನ್ನು ಕೆವಿಎನ್ ಅವರು ವರ್ಗ ನೆಲೆಯ ಹಿನ್ನೆಲೆಯಲ್ಲಿ ನೋಡುತ್ತ ನೀಡುವ ಒಳನೋಟಗಳು ಭಾಷೆ ಮತ್ತು ಸಮಾಜದ ಸಂಬಂಧವನ್ನು ಅರ್ಥ ಮಾಡಿಕೊಳ್ಳಲು ಬೆಳಕಿಂಡಿಯಾಗಿವೆ....

ಸಭೆಯಲ್ಲಿ ಮುಖ್ಯಮಂತ್ರಿ ಸೇರಿದಂತೆ ಸರ್ಕಾರದ ಪ್ರತಿನಿಧಿಗಳು ಸರ್ಕಾರಿ ಶಾಲೆಗಳ ಶಿಕ್ಷಕರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಶಿಕ್ಷಕರಿಗೆ 70 ಸಾವಿರದಿಂದ 1.5 ಲಕ್ಷ ರೂ.ವರೆಗೆ ವೇತನ ನೀಡಿದರೂ ಶಿಕ್ಷಣದ ಗುಣಮಟ್ಟ ಸುಧಾರಿಸಿಲ್ಲ ಎಂದು ಹೇಳುವ ಮೂಲಕ ವ್ಯವಸ್ಥೆಯ ವೈಫಲ್ಯಕ್ಕೆ ಶಿಕ್ಷಕರನ್ನು ಹೊಣೆಗಾರರನ್ನಾಗಿ ಮಾಡಲಾಗುತ್ತಿದೆ. ಆದರೆ ಶಿಕ್ಷಣದ ಗುಣಮಟ್ಟ ಕುಸಿಯಲು ಕಾರಣವಾಗಿರುವ ಸರ್ಕಾರದ ನೀತಿಗಳನ್ನು ಮರೆಮಾಚಲಾಗುತ್ತಿದೆ ಎಂದು ದೂರಿದರು.

ಪ್ರತಿ ಖಾಸಗಿ ಸಂಸ್ಥೆಯು ಮೂರು ಸರ್ಕಾರಿ ಶಾಲೆಗಳನ್ನು ದತ್ತು ಪಡೆಯಲು ಅವಕಾಶ ನೀಡಲಾಗಿದ್ದು, ಅಭಿವೃದ್ಧಿಪಡಿಸುವ ಶಾಲೆಗಳಿಗೆ ಸಂಸ್ಥೆಗಳ ಹೆಸರಿಡಲು ಅನುಮತಿ ನೀಡಲಾಗಿದೆ. ಖಾಸಗಿ ಶಾಲೆಗಳಿಂದ ಶಿಕ್ಷಕರನ್ನು ಕಳುಹಿಸುವುದು, ಹಳೆಯ ಬಸ್‌ಗಳನ್ನು ಸರ್ಕಾರಿ ಶಾಲೆಗಳಿಗೆ ನೀಡುವುದು, ಪ್ರಯೋಗಾಲಯದ ಸಾಮಗ್ರಿ ಮತ್ತು ಕಂಪ್ಯೂಟರ್‌ಗಳನ್ನು ಒದಗಿಸುವಂತೆ ಖಾಸಗಿ ಆಡಳಿತ ಮಂಡಳಿಗಳಿಗೆ ಸರ್ಕಾರ ಮನವಿ ಮಾಡಿದೆ. ಸಾರ್ವಜನಿಕ ಶಿಕ್ಷಣದ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರ ಪ್ರಯತ್ನಿಸುತ್ತಿದೆ. ಶಾಲೆಗಳ ಮೂಲಸೌಕರ್ಯ ಅಭಿವೃದ್ಧಿ, ಶಿಕ್ಷಕರ ನೇಮಕಾತಿ ಹಾಗೂ ಗುಣಮಟ್ಟದ ಶಿಕ್ಷಣ ಒದಗಿಸುವುದು ಸರ್ಕಾರದ ಕರ್ತವ್ಯವಾಗಿದೆ ಎಂದರು.

ಒಂದೇ ಒಂದು ಸರ್ಕಾರಿ ಶಾಲೆಯನ್ನೂ ಮುಚ್ಚುವುದಿಲ್ಲ ಎಂದು ಸದನದ ಒಳಗೆ ಮತ್ತು ಹೊರಗೆ ಹೇಳುತ್ತಾ ಬಂದಿರುವ ಸರ್ಕಾರ, ಈಗಾಗಲೇ ಕನಕಪುರದ ಹೆಗ್ಗನೂರು ಕೆಪಿಎಸ್‌ಗೆ 14 ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸುವ ಮೂಲಕ ಮುಚ್ಚಿದೆ. ಇದು ಜನತೆಗೆ ಮಾಡಿದ ದ್ರೋಹವಾಗಿದೆ ಎಂದು ಆರೋಪಿಸಿದರು. ಎಡಿಬಿ ಜತೆಗಿನ ಒಪ್ಪಂದ ಮತ್ತು ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ಕೂಡಲೇ ಹಿಂಪಡೆಯಬೇಕು. ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯ ಮೇಲೆ ನಡೆಯುತ್ತಿರುವ ಕಾರ್ಪೊರೇಟ್ ದಾಳಿಯ ವಿರುದ್ಧ ಜನತೆ ಪ್ರಬಲ ಚಳವಳಿ ರೂಪಿಸಬೇಕು ಎಂದು ಮನವಿ ಮಾಡಿದರು.

ಸಾಮಾಜಿಕ ಹೋರಾಟಗಾರ ಉಗ್ರನರಸಿಂಹೇಗೌಡ ಮಾತನಾಡಿ, ದುಡಿಯುವ ಜನರ ತೆರಿಗೆಯಿಂದ ನಿರ್ಮಾಣವಾದ ಸರ್ಕಾರಿ ಶಾಲೆಗಳನ್ನು ಖಾಸಗಿ ಸಂಸ್ಥೆಗಳಿಗೆ ಒಪ್ಪಿಸುವುದು ಶಿಕ್ಷಣ ವಿರೋಧಿ ನಿಲುವು. ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಕಡ್ಡಾಯ ಶಿಕ್ಷಣ ನೀತಿಗೆ ವಿರುದ್ಧವಾಗಿದ್ದು, ಸರ್ಕಾರಿ ಶಾಲೆಗಳ ಉಳಿವಿಗಾಗಿ ರಾಜ್ಯದ ಜನತೆ ಬೀದಿಗಿಳಿದು ಹೋರಾಟ ನಡೆಸಬೇಕು ಎಂದರು.

ಡಿಎಸ್‌ಎಸ್ ಮುಖಂಡ ಚೋರನಹಳ್ಳಿ ಶಿವಣ್ಣ ಮಾತನಾಡಿ, ಸರ್ಕಾರಿ ಶಾಲೆಗಳ ಸಮಾಧಿಯ ಮೇಲೆ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಈ ಯೋಜನೆಯ ಮೂಲಕ ಗ್ರಾಮೀಣ ಮಕ್ಕಳ ಶಿಕ್ಷಣದ ಅವಕಾಶಗಳನ್ನು ಕಸಿದುಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ವಿಶೇಷ ವರದಿ ಓದಿದ್ದೀರಾ? ಅಕ್ಕಿ ಬೆಲೆ ಏರಿಕೆಯ ಹಿಂದಿನ ಆಟ ಯಾರದ್ದು?: ಕಾರ್ಪೋರೇಟ್ ಮಾರುಕಟ್ಟೆಯ ಕರಾಮತ್ತು!

ನಿವೃತ್ತ ಕನ್ನಡ ಪ್ರಾಧ್ಯಾಪಕಿ, ಮೈಸೂರು ಮಹಾರಾಣಿ ಕಲಾ ಕಾಲೇಜಿನ ಲತಾ ಮೈಸೂರು ಮಾತನಾಡಿ, ಕನ್ನಡ ಪರ ಹೋರಾಟಗಾರರು ಮತ್ತು ಸಾಹಿತಿಗಳು ಕನ್ನಡ ಶಾಲೆಗಳ ಉಳಿವಿಗಾಗಿ ಬೀದಿಗಿಳಿದು ಹೋರಾಡುತ್ತಿಲ್ಲ. ಬದಲಿಗೆ ಸರ್ಕಾರದ ಕ್ರಮಗಳನ್ನು ಬೆಂಬಲಿಸುವ ಮೂಲಕ ಸರ್ಕಾರಿ ಶಾಲೆಗಳ ಅವನತಿಗೆ ಪಾಲುದಾರರಾಗುತ್ತಿದ್ದಾರೆ. ಪ್ರಾದೇಶಿಕ ಭಾಷೆಗಳೇ ಶಿಕ್ಷಣದ ಮಾಧ್ಯಮವಾಗಬೇಕು ಎಂದು ಒತ್ತಾಯಿಸಿದರು.

ಈ ವಿಶೇಷ ವರದಿ ಓದಿದ್ದೀರಾ? ಅಕ್ಕಿ ಬೆಲೆ ಏರಿಕೆಯ ಬಿಸಿ: ಗ್ರಾಹಕರ ಕೈ ಸುಡುತ್ತಿದೆ, ಆಹಾರ ಭದ್ರತೆಗೆ ಎದುರಾಗಿದೆ ಸವಾಲು!

ಪ್ರತಿಭಟನೆಯಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಿ ಸಮಿತಿಯ ಜಿಲ್ಲಾ ಉಪಾಧ್ಯಕ್ಷೆ ಸುಮಾ, ರೈತ ಸಂಘದ ಮುಖಂಡ ಹೆಜ್ಜಿಗೆ ಪ್ರಕಾಶ್, ಸಾಮಾಜಿಕ ಹೋರಾಟಗಾರ ಭೂಮಿಗೌಡ, ಎಐಎಸ್‌ಇಸಿ ಸಂಘಟನೆಯ ಆಸಿಯಾ ಬೇಗಂ, ಎಲ್. ಶಂಭುಲಿಂಗಸ್ವಾಮಿ, ಎಐಡಿಎಸ್‌ಒ ಅಧ್ಯಕ್ಷೆ ಚಂದ್ರಕಲಾ, ಪದಾಧಿಕಾರಿಗಳಾದ ಸ್ವಾತಿ, ಚಂದ್ರಿಕಾ, ಹೇಮಾ, ಅಂಜಲಿ, ನಂದೀಶ್, ವಿಜಯ್ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ‘ಮತ ಉಳಿಸಿ, ದೇಶ ಉಳಿಸಿ’ ಅಭಿಯಾನ; ಎಸ್‌ಐಆರ್ ರದ್ದತಿಗೆ ‘ಇಂಡಿಯಾ’ ಮೈತ್ರಿಕೂಟ ಆಗ್ರಹ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ವಿರೋಧಿಸಿ ಹಾಗೂ...

ದಕ್ಷಿಣ ಕನ್ನಡ | ಜಿಲ್ಲಾ ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ ರಚನೆ

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡಮಿಯು ನವೆಂಬರ್ 18ರಂದು ಮಂಗಳೂರಿನ ಪುರಭವನದಲ್ಲಿ ದ.ಕ...

ಕಲಬುರಗಿ | ಅಂಬೇಡ್ಕರ್ ಹಾಸ್ಟೆಲ್‌ನಲ್ಲಿ ನರ್ಸಿಂಗ್ ವಿದ್ಯಾರ್ಥಿ ಅನುಮಾನಾಸ್ಪದ ಸಾವು!

ನಗರದ ಅಂಬೇಡ್ಕರ್ ವಸತಿ ನಿಲಯದಲ್ಲಿ ನಾಲ್ಕನೇ ಮಹಡಿಯಿಂದ ಬಿದ್ದು ಬಿಎಸ್ಸಿ ನರ್ಸಿಂಗ್...

ವಿಜಯಪುರ | ನ.11ರಂದು ವೀರ ವನಿತೆ ಒನಕೆ ಓಬವ್ವ ಜಯಂತಿ ಆಚರಣೆ

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ...