ಮೈಸೂರು | ಬದಲಿ ಕಾರ್ಮಿಕರಿಗೆ ಅನ್ಯಾಯ: ಖಂಡಿಸಿ ಪ್ರತಿಭಟನೆ

Date:

ಮೈಸೂರು ಜೆ.ಕೆ. ಟೈರ್ಸ್‌ ಲಿಮಿಟೆಡ್‌ (ವಿಕ್ರಾಂತ್‌) ಕಾರ್ಖಾನೆಯಲ್ಲಿ 2ನೇ ಪಾಳಿಯಲ್ಲಿ ಬದಲಿ ಕಾರ್ಮಿಕರಿಗೆ ಕೆಲಸ ನಿರಾಕರಿಸಿರುವುದನ್ನು ಖಂಡಿಸಿ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಬದಲಿ ಮತ್ತು ದಿನಗೂಲಿ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಕಾರ್ಖಾನೆ ಎದುರು ಪ್ರತಿಭಟನೆ ನಡೆಯಿತು.

- Advertisement -

ನಗರದ ಕೆ.ಆರ್‌.ಎಸ್‌. ಮುಖ್ಯರಸ್ತೆಯಲ್ಲಿರುವ ಕಾರ್ಖಾನೆ ಎದುರು ಜಮಾಯಿಸಿದ ಕಾರ್ಮಿಕರು, ಬದಲಿ ಕಾರ್ಮಿಕರಿಗೆ ನ್ಯಾಯ ಒದಗಿಸಬೇಕು ಹಾಗೂ ಕೆಲಸದ ಅವಕಾಶವನ್ನು ಮುಂದುವರಿಸಬೇಕು ಎಂದು ಒತ್ತಾಯಿಸಿದರು. ಕಾರ್ಮಿಕ ಹೋರಾಟಗಾರ ಪ್ರಮೋದ್‌ ಚಿಕ್ಕಮಣ್ಣೂರ್‌ ಮಾತನಾಡಿ, ಕಾರ್ಖಾನೆಯ ಸ್ಥಾಯಿ ಆದೇಶ 3(ಎ) ಪ್ರಕಾರ ಸ್ಥಾಯಿ ಹಾಗೂ ಪರೀಕ್ಷಾರ್ಥಿ ಕಾರ್ಮಿಕರು ರಜೆಯಲ್ಲಿರುವ ಸಂದರ್ಭದಲ್ಲಿ ಅವರ ಸ್ಥಾನಕ್ಕೆ ಬದಲಿ ಕಾರ್ಮಿಕರನ್ನು ನೇಮಿಸಿಕೊಳ್ಳುವ ವ್ಯವಸ್ಥೆ ಇದೆ. ಆದರೆ, ಕಳೆದ 20 ವರ್ಷಗಳಿಂದ ಬದಲಿ ಕಾರ್ಮಿಕರು ನಿರಂತರವಾಗಿ ಖಾಲಿ ಇರುವ ಹುದ್ದೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಸೆ.7ರಂದು 2ನೇ ಪಾಳಿಯಲ್ಲಿ ಬದಲಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದ ಸ್ಥಳಗಳಿಗೆ ಮಹಿಳೆಯರು ಹಾಗೂ ಹೊರರಾಜ್ಯದ ಕಾರ್ಮಿಕರನ್ನು ನಿಯೋಜಿಸಿ, ಬದಲಿ ಕಾರ್ಮಿಕರನ್ನು ಕೆಲಸದಿಂದ ಹೊರಗಿಡಲಾಗಿದೆ. ಇದು ಕಾರ್ಮಿಕರ ಹಕ್ಕುಗಳಿಗೆ ಧಕ್ಕೆ ತರುವ ಕ್ರಮವಾಗಿದ್ದು, ಸ್ಪಷ್ಟ ಕಾನೂನು ಉಲ್ಲಂಘನೆಯಾಗಿದೆ ಎಂದು ಅವರು ಆರೋಪಿಸಿದರು.

ಇದಲ್ಲದೆ, ಮಹಿಳಾ ಹಾಗೂ ಹೊರಗುತ್ತಿಗೆ ಕಾರ್ಮಿಕರಿಗೆ ಮಿಷನ್‌ ಯಂತ್ರಗಳ ಮೇಲೆ ಕೆಲಸ ನಿರ್ವಹಿಸಲು ಅವಕಾಶ ನೀಡಿರುವುದು ಬದಲಿ ಕಾರ್ಮಿಕರಿಗೆ ಮಾಡುತ್ತಿರುವ ಅನ್ಯಾಯವಾಗಿದೆ. ಈ ಹಿನ್ನೆಲೆಯಲ್ಲಿ ಕಾರ್ಮಿಕರ ಸಮಸ್ಯೆ ಕುರಿತು ಬುಧವಾರ ಕಾರ್ಮಿಕ ಆಯುಕ್ತರೊಂದಿಗೆ ಹಾಗೂ ಗುರುವಾರ ಕಾರ್ಮಿಕ ಇಲಾಖೆಯ ಪ್ರಾದೇಶಿಕ ಆಯುಕ್ತರ ಸಮ್ಮುಖದಲ್ಲಿ ಸಭೆ ನಡೆಯಲಿದೆ. ಸಭೆಗಳಲ್ಲಿಯೂ ನ್ಯಾಯ ದೊರೆಯದಿದ್ದರೆ ಕುಟುಂಬದ ಸದಸ್ಯರೊಂದಿಗೆ ಉಗ್ರ ಹೋರಾಟ ನಡೆಸಲಾಗುವುದು ಎಂದು ಪ್ರಮೋದ್‌ ಚಿಕ್ಕಮಣ್ಣೂರ್‌ ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಪರಿಸರ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ: ನ್ಯಾ. ನಾಗರಾಜ್ ಸಿದ್ದಪ್ಪ ಅಂಕಸದೊಡ್ಡಿ

ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಎನ್‌. ಚಂದ್ರ, ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್‌, ಖಜಾಂಚಿ ಗಿರೀಶ್‌ ಸೇರಿದಂತೆ ಹಲವು ಕಾರ್ಮಿಕರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಕೂಡಲೇ ಸಾಲಮನ್ನಾ ಮಾಡಿ: ನರಸಿಂಗ್‌ರಾವ್‌ ಸರರ್ಕಿಲ್‌ ಆಗ್ರಹ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬಡ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಾ...

ಕೋಲಾರ | ಜಾನಪದ ಗಾಯಕ ಗೋ.ನಾ. ಸ್ವಾಮಿಗೆ ಕಲಾದರ್ಪಣ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಜಿಲ್ಲೆಯ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಗಾಯಕ ಹಾಗೂ ಜಾನಪದ ಸಂರಕ್ಷಣಾ...