ಕೆಂಚಲಗೂಡು ರೈತರಿಗೆ ನ್ಯಾಯ ಒದಗಿಸಲು ಆಗ್ರಹಿಸಿ ಪ್ರತಿಭಟನೆ

Date:

ಮೈಸೂರು ತಾಲ್ಲೂಕಿನ ಜಯಪುರ ಹೋಬಳಿಯ ಕೆಂಚಲಗೂಡು ಗ್ರಾಮದ ರೈತರಿಗೆ ಜಿಲ್ಲಾಡಳಿತದೊಂದಿಗೆ ಮಾಡಿಕೊಂಡ ಒಪ್ಪಂದದಂತೆ ನಿವೇಶನಗಳನ್ನು ನೀಡಬೇಕು ಹಾಗೂ ರೈತರ ಮೇಲೆ ದೌರ್ಜನ್ಯ ನಡೆಸುತ್ತಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರೈತರು ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

- Advertisement -

ಕೆಂಚಲಗೂಡು ಗ್ರಾಮದ ಸರ್ವೆ ನಂಬರ್ 14ರಲ್ಲಿ ಒಟ್ಟು 27 ಎಕರೆ ಸರ್ಕಾರಿ ಬಿ ಖರಾಬು ಜಮೀನಿದ್ದು, ಇದರಲ್ಲಿ ರೈತರು ಹಲವು ವರ್ಷಗಳಿಂದ ಸಾಗುವಳಿ ಮಾಡಿಕೊಂಡು ಬರುತ್ತಿದ್ದಾರೆ. ಈ ಪೈಕಿ 13 ಎಕರೆ ಜಮೀನನ್ನು ವಿಮಾನ ನಿಲ್ದಾಣಕ್ಕೆ ನೀಡುವ ಸಂದರ್ಭದಲ್ಲಿ ರೈತರು ಮತ್ತು ಜಿಲ್ಲಾಡಳಿತದ ನಡುವೆ ಒಪ್ಪಂದವಾಗಿತ್ತು. ಅದರಂತೆ ಜಮೀನು ಸಾಗುವಳಿ ಮಾಡುತ್ತಿದ್ದ ರೈತರಿಗೆ ತಲಾ ಎರಡು ನಿವೇಶನಗಳನ್ನು ನೀಡುವುದಾಗಿ ಭರವಸೆ ನೀಡಲಾಗಿತ್ತು ಎಂದು ಪ್ರತಿಭಟನಾಕಾರರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್ ಭವಿಷ್ಯಕ್ಕೆ...

ಹೊರಗೆ ‘ರಾಮ’-ಒಳಗೆ ‘ನಾಥೂರಾಮ’: ಗಾಂಧೀಜಿಯವರ ತಾತ್ವಿಕತೆಯ ಮುಂದೆ ಬಲಪಂಥೀಯ...

ಗಾಂಧೀಜಿಯವರನ್ನು ವಿರೋಧಿಸುವ ರಾಜಕೀಯ ಪ್ರಯತ್ನಗಳು ಅವರ ವ್ಯಕ್ತಿತ್ವವನ್ನು ಕುಗ್ಗಿಸುವ ಬದಲು, ಅವರ ಆದರ್ಶಗಳ ಪ್ರಸ್ತುತತೆಯನ್ನು ಮತ್ತಷ್ಟು ಮುನ್ನೆಲೆಗೆ ತರುತ್ತಿವೆ. ಸತ್ಯ, ಅಹಿಂಸೆ, ಮಾನವೀಯತೆ, ಸಾಮಾಜಿಕ ಸಮಾನತೆ ಮತ್ತು ಗ್ರಾಮ ಸ್ವರಾಜ್ಯದ ಪರಿಕಲ್ಪನೆಗಳು ಇಂದಿಗೂ...

ಇದರ ನಡುವೆ ನಾಲ್ಕು ಎಕರೆ ಜಮೀನಿಗೆ ಸಂಬಂಧಿಸಿದಂತೆ ಗ್ರಾಮದ ಎಂ. ಮಂಚನಾಯಕ ಮತ್ತು ಅವರ ತಾಯಿ ಮಾಳಿಗಮ್ಮ ಅವರು ನಕಲಿ ದಾಖಲೆಗಳನ್ನು ಸೃಷ್ಟಿಸಿ ನ್ಯಾಯಾಲಯದಲ್ಲಿ ದಾವೆ ಹೂಡಿದ್ದಾರೆ. ಈ ಸಂಬಂಧ ತಾಲ್ಲೂಕು ಆಡಳಿತವು ಅವರ ವಿರುದ್ಧ ವಂಚನೆ ಪ್ರಕರಣ ದಾಖಲಿಸಿದ್ದರೂ ಸೂಕ್ತ ಕ್ರಮ ಕೈಗೊಳ್ಳದ ಕಾರಣ ನ್ಯಾಯಾಲಯದ ತಡೆಯಾಜ್ಞೆ ಮುಂದುವರಿದಿದೆ. ಇದರಿಂದ ಜಿಲ್ಲಾಡಳಿತದೊಂದಿಗಿನ ಒಪ್ಪಂದದಂತೆ ನಿವೇಶನ ಪಡೆಯಬೇಕಿದ್ದ ರೈತರಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದರು.

ಈ ವಿಶೇಷ ಲೇಖನ ಓದಿದ್ದೀರಾ? ಹೊರಗೆ ‘ರಾಮ’-ಒಳಗೆ ‘ನಾಥೂರಾಮ’: ಗಾಂಧೀಜಿಯವರ ತಾತ್ವಿಕತೆಯ ಮುಂದೆ ಬಲಪಂಥೀಯ ರಾಜಕಾರಣದ ಆತಂಕ

ಜಮೀನಿನಲ್ಲಿ ನಿರಂತರವಾಗಿ ಸಾಗುವಳಿ ಮಾಡುತ್ತಿರುವ ರೈತರ ಮೇಲೆ ಎಂ. ಮಂಚನಾಯಕ ಅವರು ರೌಡಿಗಳನ್ನು ಕರೆಸಿ ದೌರ್ಜನ್ಯ ಮತ್ತು ಹಲ್ಲೆ ನಡೆಸುತ್ತಿದ್ದಾರೆ. ನಿನ್ನೆ ರಾತ್ರಿ ಕೂಡ ಗ್ರಾಮಸ್ಥರ ಮೇಲೆ ಹಲ್ಲೆ ನಡೆಸಲಾಗಿದೆ. ಈ ಘಟನೆಗಳ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ. ಇದರಿಂದ ಗ್ರಾಮಸ್ಥರು ನೆಮ್ಮದಿಯಿಂದ ಜೀವನ ನಡೆಸಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

ಈ ವಿಶೇಷ ವರದಿ ಓದಿದ್ದೀರಾ? ಮೆಕ್ಕೆಜೋಳಕ್ಕೆ ಉತ್ತಮ ಬೆಲೆ: ಬರದಿಂದ ಉತ್ಪಾದನೆ ಶೇ.33ರಷ್ಟು ಕುಸಿತ, ರಾಜ್ಯದ ಕೃಷಿ-ಮಾರುಕಟ್ಟೆ ಚಿತ್ರಣವೇನು?

ರೈತರ ಮೇಲೆ ದೌರ್ಜನ್ಯ ನಡೆಸುತ್ತಿರುವವರಿಗೆ ಗಡಿಪಾರು ಶಿಕ್ಷೆ ವಿಧಿಸಬೇಕು. ಹಲ್ಲೆ ಮತ್ತು ಬೆದರಿಕೆ ಪ್ರಕರಣಗಳಲ್ಲಿ ಭಾಗಿಯಾಗಿರುವವರ ವಿರುದ್ಧ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಳ್ಳಬೇಕು. ಜಿಲ್ಲಾಡಳಿತವು ರೈತರಿಗೆ ನೀಡಿದ್ದ ಭರವಸೆಯನ್ನು ಈಡೇರಿಸಿ ನ್ಯಾಯ ಒದಗಿಸಬೇಕು ಎಂದು ಒತ್ತಾಯಿಸಿದರು.

ಈ ವಿಶೇಷ ಲೇಖನ ಓದಿದ್ದೀರಾ? ಏಳು ಕೊಲೆಗಳು ಮತ್ತು ಮನುಷ್ಯ ಮೃಗ!: ಕ್ರೋಧ, ಕ್ರೌರ್ಯ, ವಿವೇಕದ ಕಾವಲು ಕಳಚಿದಾಗ…

ಪ್ರತಿಭಟನೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಿ. ಮರಂಕಯ್ಯ, ಯುವ ಘಟಕದ ಎಂ. ಪ್ರೇಮ್‌ರಾಜ್, ಜಿಲ್ಲಾ ಕಾರ್ಯದರ್ಶಿ ಮಂಡಕಳ್ಳಿ ಮಹೇಶ್, ನಾಗನಹಳ್ಳಿ ಚಂದ್ರಶೇಖರ್, ಇಲವಾಲ ಮಹೇಶ್ ಸೇರಿದಂತೆ ನೂರಾರು ರೈತರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

12 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ನಾಳೆ ಮುಂಡಗೋಡ ಬಂದ್‌ಗೆ ಹಿಂದೂ ಪರ ಸಂಘಟನೆಗಳ ಕರೆ

ಮುಂಡಗೋಡ: ತಾಲ್ಲೂಕಿನಲ್ಲಿ 12 ವರ್ಷದ ಬಾಲಕಿ ಮೇಲೆ ಚಾಕು ತೋರಿಸಿ ಲೈಂಗಿಕ...

ಚಿಂತಾಮಣಿ | ಅಪಘಾತದಲ್ಲಿ ಮೃತಪಟ್ಟವರ ಕುಟುಂಬಕ್ಕೆ ಮಾಜಿ ಶಾಸಕ ಜೆ.ಕೆ. ಕೃಷ್ಣಾರೆಡ್ಡಿ ಸಾಂತ್ವನ

ಸೋಮವಾರ ಸಂಜೆ ಬೋಲೊರೊ,ಆಟೋ. ಕೆ.ಎಸ್.ಆರ್.ಟಿ.ಸಿ.ಬಸ್ ಹಾಗೂ ದ್ವಿಚಕ್ರ ವಾಹನದ ನಡುವೆ ಭೀಕರ...

ರಾಯಚೂರು | ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ಡಾ. ರಜಾಕ್ ಉಸ್ತಾದ್ ನಾಮನಿರ್ದೇಶನ

ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿಗೆ ರಾಯಚೂರಿನ ಡಾ. ರಜಾಕ್ ಉಸ್ನಾದ್...

ಉಡುಪಿ | ಎಥೆನಾಲ್ ವಂಚನೆಯಿಂದ ವಾಹನಗಳ ಬಾಳಿಕೆಗೆ ಕುತ್ತು: ಕೇಂದ್ರ ಸರ್ಕಾರದ ವಿರುದ್ಧ ಪ್ರದೀಪ್ ಬೇಲಾಡಿ ಆಕ್ರೋಶ

ಪೆಟ್ರೋಲ್, ನಲ್ಲಿ ಎಥೆನಾಲ್ ಬೆರೆಸಿರುವ ಬಗ್ಗೆ ಜನರಿಗೆ ಗೊಂದಲಗಳಿದ್ದು ಜನರ ಬೇಡಿಕೆಯಂತೆ...