ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳು ಪದಗ್ರಹಣ ಮಾಡಿ ಅಧಿಕಾರ ಸ್ವೀಕರಿಸಿದರು. ಅಧ್ಯಕ್ಷರಾಗಿ ಪಂಡಿತ್ ನಾಟಿಕರ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ನಾಗೇಗೌಡ ನೇತೃತ್ವದ ತಂಡ ಅವಿರೋಧವಾಗಿ ಆಯ್ಕೆಯಾಗಿದ್ದು, ನೂತನ ಆಡಳಿತ ಮಂಡಳಿ ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಿದೆ.
ನಗರದ ಪತ್ರಕರ್ತರ ಭವನದಲ್ಲಿ ನಡೆದ ಸಮಾರಂಭದಲ್ಲಿ ಚುನಾವಣಾಧಿಕಾರಿ ಎಂ.ಎಸ್. ಕಾಶಿನಾಥ್ ಅವರು ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳು ಹಾಗೂ ಕಾರ್ಯಕಾರಿಣಿ ಸದಸ್ಯರಿಗೆ ಪ್ರಮಾಣಪತ್ರ ವಿತರಿಸಿದರು. ಗ್ರಾಮಾಂತರ ಉಪಾಧ್ಯಕ್ಷರಾಗಿ ಮಧುಸೂದನ್ ಸಿ.ಜೆ., ಗ್ರಾಮಾಂತರ ಕಾರ್ಯದರ್ಶಿಯಾಗಿ ಸಿ.ಸಿ. ಮಹದೇವ್ ಹಾಗೂ ಖಜಾಂಚಿಯಾಗಿ ಎಸ್. ಯೋಗಾನಂದ್ ಅಧಿಕಾರ ಸ್ವೀಕರಿಸಿದರು.
ಕಾರ್ಯಕಾರಿಣಿ ಸದಸ್ಯರಾಗಿ ಜಿ.ಕೆ. ನಾಗಣ್ಣ, ಕೆ.ಆರ್. ಶ್ರೀನಿವಾಸ್, ಎ. ಚೈತನ್ಯ, ರಾಮಕೃಷ್ಣೇಗೌಡ, ಮಹಮ್ಮದ್ ಸಬೀರ್ ಖಾನ್, ಎಂ.ಎಸ್. ರವಿಕುಮಾರ್ ಹಾಗೂ ಎಚ್.ಎಲ್. ಆನಂದ್ ಅವರಿಗೂ ಪ್ರಮಾಣಪತ್ರ ವಿತರಿಸಲಾಯಿತು.
ಪದಗ್ರಹಣ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ. ದೀಪಕ್, “ಆಸ್ತಿ ಮಾಡುವ ಉದ್ದೇಶದಿಂದ ಸಂಘಕ್ಕೆ ಬರಬೇಡಿ. ಸಂಘವನ್ನೇ ನಮ್ಮ ಆಸ್ತಿ ಎಂದು ಭಾವಿಸಿ ಅದರ ರಕ್ಷಣೆ ಹಾಗೂ ಪತ್ರಕರ್ತರ ಕ್ಷೇಮಾಭಿವೃದ್ಧಿಗೆ ನಿಸ್ವಾರ್ಥವಾಗಿ ಸೇವೆ ಸಲ್ಲಿಸುವ ಮನೋಭಾವ ಇರಬೇಕು” ಎಂದು ಕರೆ ನೀಡಿದರು.
This video cannot be played in your browser. Open the video directly
ರಾಜ್ಯದಲ್ಲೇ ಮಾದರಿ ಸಂಘವಾಗಿ ಗುರುತಿಸಿಕೊಂಡಿರುವ ಪತ್ರಕರ್ತರ ಸಂಘವು ಕಳೆದ 90 ವರ್ಷಗಳಿಂದ ಹಿರಿಯರ ಮಾರ್ಗದರ್ಶನ ಹಾಗೂ ಪರಿಶ್ರಮದಿಂದ ಬೆಳೆಯುತ್ತ ಬಂದಿದೆ. ಪತ್ರಕರ್ತರು ಸಂಘದ ಚೌಕಟ್ಟಿನಲ್ಲಿ ಒಗ್ಗಟ್ಟಿನಿಂದ ಇದ್ದರೆ ಅನ್ಯಾಯ, ದೌರ್ಜನ್ಯಗಳ ವಿರುದ್ಧ ಸಮರ್ಥವಾಗಿ ಹೋರಾಡಲು ಹಾಗೂ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.
ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ್ ಮಾತನಾಡಿ, ಗ್ರಾಮೀಣ ಭಾಗದ ಪತ್ರಕರ್ತರು ಸಂಕಷ್ಟದ ಪರಿಸ್ಥಿತಿಯಲ್ಲಿಯೇ ವೃತ್ತಿ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದ ಜೊತೆಗೆ ಆರ್ಥಿಕವಾಗಿಯೂ ಸದೃಢರಾಗುವ ಅಗತ್ಯವಿದೆ. ಗ್ರಾಮೀಣ ಪತ್ರಕರ್ತರ ಸಮಸ್ಯೆಗಳಿಗೆ ಜಿಲ್ಲಾ ಸಂಘ ಸದಾ ಸ್ಪಂದಿಸಲಿದೆ ಎಂದು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷ ವಿನಯ್ ಹಾಗೂ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಭೇರ್ಯ ಮಹೇಶ್ ಮಾತನಾಡಿದರು.
ಈ ಸುದ್ದಿ ಓದಿದ್ದೀರಾ? ಗುಂಡ್ಲುಪೇಟೆ | ಬರಿಗೈಯಲ್ಲೇ ಚರಂಡಿ ಸ್ವಚ್ಛತೆ; ಪಿಡಿಓ ವಿರುದ್ಧ ನಿರ್ಲಕ್ಷ್ಯದ ಆರೋಪ
ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷ ರವಿ ಪಾಂಡವಪುರ, ಗ್ರಾಮೀಣ ಕಾರ್ಯದರ್ಶಿ ದಾರಾ ಮಹೇಶ್, ಖಜಾಂಚಿ ಎನ್. ಸುರೇಶ್, ಕಾರ್ಯಕಾರಿಣಿ ಸದಸ್ಯರಾದ ಸೋಮಶೇಖರ್ ಚಿಕಮರಳ್ಳಿ, ಎಸ್. ಕವಿತಾ, ಹನಗೋಡು ನಟರಾಜ್ ಸೇರಿದಂತೆ ಹಲವರು ಇದ್ದರು.





