ಮೈಸೂರು ವಕೀಲರ ಸಂಘಕ್ಕೆ ಹೆಚ್ಚುವರಿ ₹10 ಕೋಟಿ ಅನುದಾನಕ್ಕೆ ಮನವಿ: ಸಕಾರಾತ್ಮಕ ಸ್ಪಂದನೆ ನೀಡಿದ ಸಿಎಂ ಡಿ.ಕೆ. ಶಿವಕುಮಾರ್

Date:

ಮೈಸೂರು ವಕೀಲರ ಸಂಘವನ್ನು ಮೇಲ್ದರ್ಜೆಗೇರಿಸುವ ಉದ್ದೇಶದಿಂದ ಗ್ರಂಥಾಲಯವನ್ನು ಆಧುನೀಕರಿಸುವುದು, ಡಿಜಿಟಲ್ ಸೌಲಭ್ಯಗಳನ್ನು ಒದಗಿಸುವುದು ಹಾಗೂ ಮೂಲಭೂತ ಸೌಕರ್ಯಗಳನ್ನು ವಿಸ್ತರಿಸಲು ಮುಖ್ಯಮಂತ್ರಿ ವಿಶೇಷ ಅನುದಾನದಡಿ ಹೆಚ್ಚುವರಿ ₹10 ಕೋಟಿ ಬಿಡುಗಡೆ ಮಾಡುವಂತೆ ಮೈಸೂರು ವಕೀಲರ ಸಂಘವು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿದೆ.

- Advertisement -

ಈ ಸಂಬಂಧ ಬೆಂಗಳೂರಿನ ಮುಖ್ಯಮಂತ್ರಿಗಳ ಕಚೇರಿಯಲ್ಲಿ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ ಮೈಸೂರು ವಕೀಲರ ಸಂಘದ ನಿಯೋಗವು, ವಕೀಲರ ಸಮುದಾಯದ ಅಭಿವೃದ್ಧಿಗೆ ರಾಜ್ಯ ಸರ್ಕಾರ ನೀಡುತ್ತಿರುವ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿತು. ಈಗಾಗಲೇ ರಾಜ್ಯ ಸರ್ಕಾರ ಮಂಜೂರು ಮಾಡಿರುವ ₹10 ಕೋಟಿ ಅನುದಾನದಡಿ ಸ್ವತಂತ್ರ ವಕೀಲರ ಭವನ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದ್ದು, ಅದಕ್ಕಾಗಿ ಸರ್ಕಾರಕ್ಕೆ ಸಂಘದ ಪರವಾಗಿ ಅಭಿನಂದನೆ ಸಲ್ಲಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಸಂವಿಧಾನವೆಂಬ ನಮ್ಮೆಲ್ಲರ ಆಸ್ತಿಗಾಗಿ ಸತ್ಯಾಗ್ರಹ

ಇವತ್ತು ಬೀದಿಗೆ ಇಳಿದಿರೋ ಜನ ಸಾಮಾನ್ಯರಲ್ಲ. ಬದುಕಿನ ಹಕ್ಕನ್ನು ಈ ದೇಶದ ಜನರಿಗೆ ಮರಳಿ ಕೊಡಿಸುವುದಕ್ಕಾಗಿ, ಗಾಂಧೀಜಿಯವರ ಮಾತುಗಳು ಮತ್ತು ಅಂಬೇಡ್ಕರ್ ಅವರ ಸಂವಿಧಾನದ ಪೀಠಿಕೆಯನ್ನು ಕೈಯಲ್ಲಿ ಹಿಡಿದುಕೊಂಡು ನಿಂತಿರುವ ನಿಜವಾದ ಹೋರಾಟಗಾರರು. ಸರ್ಕಾರದ...

ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ಎಸ್. ಲೋಕೇಶ್, ಪ್ರಸ್ತುತ ಸಂಘದ ಗ್ರಂಥಾಲಯವನ್ನು ಆಧುನಿಕ ಮಾದರಿಯಲ್ಲಿ ಅಭಿವೃದ್ಧಿಪಡಿಸುವುದು, ಡಿಜಿಟಲ್ ವ್ಯವಸ್ಥೆಗಳನ್ನು ಅಳವಡಿಸುವುದು, ಸದಸ್ಯರಿಗೆ ಉತ್ತಮ ಮೂಲಸೌಕರ್ಯ ಕಲ್ಪಿಸುವುದು ಹಾಗೂ ಸಂಘವನ್ನು ಮೇಲ್ದರ್ಜೆಗೇರಿಸುವ ಅಗತ್ಯವಿದೆ ಎಂದು ವಿವರಿಸಿದರು. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ವಿಶೇಷ ಅನುದಾನದಡಿ ಮತ್ತಷ್ಟು ₹10 ಕೋಟಿ ಮಂಜೂರು ಮಾಡಿ ಶೀಘ್ರ ಬಿಡುಗಡೆಗೊಳಿಸುವಂತೆ ಮನವಿ ಸಲ್ಲಿಸಿದರು.

ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಕೀಲರ ಸಂಘದ ಬೇಡಿಕೆಗೆ ತಾತ್ವಿಕ ಒಪ್ಪಿಗೆ ಸೂಚಿಸಿದ್ದು, ಹೆಚ್ಚುವರಿ ಅನುದಾನ ಬಿಡುಗಡೆಗೆ ಅಗತ್ಯ ಪ್ರಕ್ರಿಯೆಯನ್ನು ಶೀಘ್ರ ಆರಂಭಿಸಲಾಗುವುದು ಎಂದು ಭರವಸೆ ನೀಡಿದರು.

ಈ ವಿಶೇಷ ಸುದ್ದಿ ಓದಿದ್ದೀರಾ?ದಲಿತ ರೈತನ ಭೂಮಿ ಕಬಳಿಕೆ ಆರೋಪ: ಕಂದಾಯ ದಾಖಲೆ ತಿದ್ದುಪಡಿ ಕುರಿತು ತನಿಖೆಗೆ ಆಗ್ರಹ

ಇದೇ ಸಂದರ್ಭದಲ್ಲಿ ಸಿವಿಲ್ ನ್ಯಾಯಾಲಯಗಳ ಅಧಿಕಾರ ವ್ಯಾಪ್ತಿಗೆ ಸಂಬಂಧಿಸಿದಂತೆ ಬೆಂಗಳೂರು ವಕೀಲರ ಸಂಘವು ಮೇಲ್ಮನವಿ ಸಲ್ಲಿಸುವ ಸಾಧ್ಯತೆಯ ಕುರಿತು ಮುಖ್ಯಮಂತ್ರಿಯವರ ಗಮನ ಸೆಳೆಯಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ಈ ವಿಷಯದಲ್ಲಿ ಸರ್ಕಾರ ತನ್ನ ನಿಲುವನ್ನು ಸಮರ್ಥವಾಗಿ ನ್ಯಾಯಾಲಯದ ಮುಂದೆ ಮಂಡಿಸಿದ್ದು, ಅದನ್ನು ಉಚ್ಚ ನ್ಯಾಯಾಲಯವೂ ಎತ್ತಿಹಿಡಿದಿದೆ ಎಂದು ತಿಳಿಸಿದರು. ಒಂದು ವೇಳೆ ಪ್ರಕರಣವು ಸುಪ್ರೀಂ ಕೋರ್ಟ್‌ಗೆ ಹೋದರೂ ಸರ್ಕಾರದ ಪರವಾಗಿ ಸಮರ್ಥ ಹಾಗೂ ಹಿರಿಯ ವಕೀಲರನ್ನು ನೇಮಿಸಿ, ನ್ಯಾಯಸಮ್ಮತವಾಗಿ ಪ್ರಕರಣವನ್ನು ಸಮರ್ಥಿಸುವ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.

ಈ ವಿಶೇಷ ಸುದ್ದಿ ಓದಿದ್ದೀರಾ?“ಮಳೆಯಿದೆ… ಆದರೆ ಅದು ಕೊಡಗಿನ ಮಳೆಯಲ್ಲ!”

ಮುಖ್ಯಮಂತ್ರಿಯನ್ನು ಭೇಟಿ ಮಾಡಿದ ನಿಯೋಗದಲ್ಲಿ ಮೈಸೂರು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಜಿ. ಸುದೀರ್, ಹಿರಿಯ ಸಮಿತಿ ಸದಸ್ಯ ಜಿ.ಎಸ್. ಶಿವಸ್ವಾಮಿ, ಹಿರಿಯ ವಕೀಲರಾದ ಎಚ್. ಅರವಿಂದ್, ಸುರೇಶ್ ಪಡುವಾರಹಳ್ಳಿ, ವೆಂಕಟೇಶ್ ದಾಸನಕೊಪ್ಪಲು ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

ವಿಜಯಪುರದಲ್ಲಿ ಯುವಕನ ಬರ್ಬರ ಹತ್ಯೆ; ಇಬ್ಬರು ಆರೋಪಿಗಳು ವಶಕ್ಕೆ

ವಿಜಯಪುರ ನಗರದಲ್ಲಿ ಬೆಳಗಿನ ಜಾವ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಅಲ್ತಾಪ್...

ವಿಜಯಪುರ | ಬಿಎಲ್‌ಡಿಇ ಪಾಲಿಟೆಕ್ನಿಕ್‌ನಲ್ಲಿ ಸಿವಿಲ್ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ

ವಿದ್ಯಾರ್ಥಿಗಳಿಗೆ ತಾಂತ್ರಿಕ ಶಿಕ್ಷಣದ ಜೊತೆಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶದಿಂದ ವಿಜಯಪುರ ನಗರದ...

ವಿಜಯನಗರ | ಜಂತರ್ ಮಂತರ್‌ ಪ್ರತಿಭಟನೆಗೆ ದೆಹಲಿ ಪೊಲೀಸರ ನಿರ್ಬಂಧ; AIDSO ಖಂಡನೆ!

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುವುದಕ್ಕೆ ಪೊಲೀಸರು ನಿರ್ಬಂಧ ಹೇರಿರುವುದನ್ನು ವಿಜಯನಗರ...