ಎಸ್. ಜಾನಕಿಯವರಿಗೆ ಮೈಸೂರು ದಸರಾ ವೇದಿಕೆಯಲ್ಲಿ ವಿಶೇಷ ಗೌರವ ಸಲ್ಲಿಸಲು ಮನವಿ

Date:

ಮೈಸೂರು ದಸರಾ ನಮ್ಮ ನಾಡಿನ ಕಲೆ, ಸಂಸ್ಕೃತಿ ಹಾಗೂ ಪರಂಪರೆಯ ಪ್ರತೀಕವಾಗಿದ್ದು, ಗಾನಕೋಗಿಲೆ ಎಸ್. ಜಾನಕಿ ಅವರ ಅಪೂರ್ವ ಕಲಾ ಸೇವೆಯನ್ನು ಸ್ಮರಿಸಿ 2026ರ ದಸರಾ ಮಹೋತ್ಸವದ ಸಾಂಸ್ಕೃತಿಕ ವೇದಿಕೆಯಲ್ಲಿ ಅವರಿಗೆ ವಿಶೇಷ ಗೌರವ ಸಲ್ಲಿಸುವ ಕಾರ್ಯಕ್ರಮಗಳನ್ನು ಸರ್ಕಾರದಿಂದ ಆಯೋಜಿಸುವಂತೆ ಅನುರಾಗ ಕ್ರಿಯೇಷನ್ಸ್ ಟ್ರಸ್ಟ್ ಅಧ್ಯಕ್ಷೆ ಡಾ. ರೇಖಾ ಅರುಣ್ ಅವರ ನೇತೃತ್ವದಲ್ಲಿ ಅಪರ ಪ್ರಾದೇಶಿಕ ಆಯುಕ್ತ ಡಾ. ಪಿ. ಶಿವರಾಜು ಅವರಿಗೆ ಮನವಿ ಸಲ್ಲಿಸಲಾಯಿತು.

- Advertisement -

ಕನ್ನಡ ಸೇರಿದಂತೆ ಹಲವು ಭಾರತೀಯ ಭಾಷೆಗಳಲ್ಲಿ 48 ಸಾವಿರಕ್ಕೂ ಅಧಿಕ ಹಾಡುಗಳನ್ನು ಹಾಡಿ, ತಮ್ಮ ಅಮೋಘ ಕಂಠಸಿರಿಯಿಂದ ವಿಶ್ವದಾದ್ಯಂತ ಜನಮನ ಗೆದ್ದಿರುವ ಎಸ್. ಜಾನಕಿ ಅವರ ಕಲಾ ಸೇವೆಯನ್ನು ದಸರಾ ವೇದಿಕೆಯ ಮೂಲಕ ಗೌರವಿಸುವುದು ನಾಡಿನ ಕಲಾ ಪರಂಪರೆಗೆ ಸಲ್ಲಿಸುವ ಗೌರವವಾಗಲಿದೆ ಎಂದು ಟ್ರಸ್ಟ್ ಪ್ರತಿನಿಧಿಗಳು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಜಾನಕಿ ಅವರ ಸ್ತಬ್ಧಚಿತ್ರವನ್ನು ಸಂಬಂಧಪಟ್ಟ ಇಲಾಖೆಯ ಮೂಲಕ ಪ್ರದರ್ಶಿಸುವುದು, ಅವರ ಪ್ರಸಿದ್ಧ ಗೀತೆಗಳನ್ನು ಒಳಗೊಂಡ ವಿಶೇಷ ಸಂಗೀತ ಕಾರ್ಯಕ್ರಮ ಆಯೋಜಿಸುವುದು, ಅವರ ಕಲಾ ಜೀವನದ ಕುರಿತು ಕಿರು ಪರಿಚಯ ನೀಡುವುದು, ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವುದು ಹಾಗೂ ಗೌರವ ಸಮರ್ಪಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ದಸರಾ ಮಹೋತ್ಸವದಲ್ಲಿ ಹಮ್ಮಿಕೊಳ್ಳುವಂತೆ ಮನವಿ ಮಾಡಿದರು.

ಈ ವಿಶೇಷ ಸುದ್ದಿ ಓದಿದ್ದೀರಾ?ಶುಂಠಿ ಬೆಳೆ: ಮಣ್ಣಿನಲ್ಲಿ ಜೀವವಿದೆ. ಆ ಜೀವ ಉಳಿದರೆ ಮಾತ್ರ ಕೃಷಿ ಉಳಿಯುತ್ತದೆ

ಮನವಿ ನೀಡುವಾಗ ಕಾರ್ಯದರ್ಶಿ ಗುರುರಾಜ್, ನಿರೂಪಕ ಅಜಯ್ ಶಾಸ್ತ್ರಿ, ಸಮಾಜ ಸೇವಕ ವಿಕ್ರಮ ಅಯ್ಯಂಗಾರ್, ಗಗನ್ ಗೌಡ ಸೇರಿದಂತೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ...

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...