ಮೈಸೂರು | ಅತ್ಯುನ್ನತ ಸಾಧಕರಿಗೆ ‘ಸಾಧನಾ ಪುರಸ್ಕಾರ’; 450ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸನ್ಮಾನ

Date:

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 450ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಎಚ್.ವಿ. ರಾಜೀವ್ ಸ್ನೇಹ ಬಳಗದಿಂದ ‘ಸಾಧನಾ ಪುರಸ್ಕಾರ’ ಪ್ರದಾನ ಮಾಡಿ ಗೌರವಿಸಲಾಯಿತು.

- Advertisement -

ಮೈಸೂರು ನಗರದ ಶಾರದಾವಿಲಾಸ ಕಾಲೇಜಿನ ಶತಮಾನೋತ್ಸವ ಭವನದಲ್ಲಿ ಭಾನುವಾರ ಆಯೋಜಿಸಿದ್ದ 2025-26ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಗರಿಷ್ಠ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಹಾಗೂ ಸಾಧನಾ ಪುರಸ್ಕಾರ ಕಾರ್ಯಕ್ರಮವು ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಣ ತಜ್ಞರ ಸಮ್ಮುಖದಲ್ಲಿ ಯಶಸ್ವಿಯಾಗಿ ನಡೆಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದ ಮಧ್ಯಂತರ ಚುನಾವಣೆ: ಬೆಲೆ ಏರಿಕೆ, ಇರಾನ್ ಯುದ್ಧದ...

ಅಮೆರಿಕದಲ್ಲಿ ಏರುತ್ತಿರುವ ಪೆಟ್ರೋಲ್ ಬೆಲೆ, ದುಬಾರಿಯಾಗುತ್ತಿರುವ ದಿನಬಳಕೆಯ ವಸ್ತುಗಳು ಹಾಗೂ ಇರಾನ್ ವಿರುದ್ಧದ ಯುದ್ಧದ ಆರ್ಥಿಕ ಪರಿಣಾಮಗಳು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತಕ್ಕೆ ದೊಡ್ಡ ರಾಜಕೀಯ ಸವಾಲಾಗಿವೆ. ನವೆಂಬರ್ 3ರಂದು ನಡೆಯಲಿರುವ ಮಧ್ಯಂತರ...

ಖಾಲಿದ್‌ರಂತೆ ಸಿಜೆಪಿ ನಾಯಕರನ್ನೂ ದೀರ್ಘ ಜೈಲುವಾಸದ ಸುಳಿಯಲ್ಲಿ ಸಿಲುಕಿಸುವ...

ಚುನಾವಣಾ ಆಯೋಗದ ಅಕ್ರಮ ಪ್ರಶ್ನಿಸಿದ ಸಿಜೆಪಿ ನಾಯಕರ ವಿರುದ್ಧ ಸರಣಿ ದೂರು ದಾಖಲಿಸಲಾಗುತ್ತಿದೆ. ಮೋದಿ ಸರ್ಕಾರದ ಅವಧಿಯಲ್ಲಿ ‘ವಿಚಾರಣೆಯೇ ಒಂದು ಶಿಕ್ಷೆ’ ಎನ್ನುವ ತಂತ್ರ ಪುನರಾವರ್ತನೆಯಾಗುತ್ತಿದೆಯೇ? ಉಮರ್‌ ಖಾಲಿದ್‌ ರೀತಿಯಲ್ಲೇ ಸೌರವ್ ದಾಸ್,...

ಎಚ್ಚೆತ್ತುಕೊಳ್ಳುತ್ತಿವೆ DMK, YSRCP; ಡಿಲಿಮಿಟೇಷನ್‌ ಮಸೂದೆ ಮತ್ತೆ ಸೋಲುವ...

ಮೋದಿಯವರ ಅಹಂಕಾರದ ಆಡಳಿತಕ್ಕೆ ದಕ್ಷಿಣ ಭಾರತವು ಎಂದಿಗೂ ತಲೆಬಾಗುವುದಿಲ್ಲ, ಮತ್ತು ಈ ಬಾರಿಯ ಅವರ ಹತಾಶೆಯ ರಾಜಕೀಯ ಕುತಂತ್ರಗಳು ಅವರ ಪಾಲಿಗೆ ತಿರುಗುಬಾಣವಾಗಿ ದೇಶದ ಪ್ರಜಾಪ್ರಭುತ್ವವು ಗೆಲ್ಲುವುದು ಖಚಿತ ಮಹಿಳಾ ಮೀಸಲಾತಿ ಎಂಬ ಪವಿತ್ರ...

ಕಾರ್ಯಕ್ರಮವನ್ನು ಗಿಡಕ್ಕೆ ನೀರು ಎರೆಯುವ ಮೂಲಕ ಉದ್ಘಾಟಿಸಿ ಮಾತನಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕಿ ನಾಗಮ್ಮ, ಕೃಷ್ಣರಾಜ ಕ್ಷೇತ್ರದಲ್ಲಿ 450ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿರುವುದು ಹೆಮ್ಮೆಯ ಸಂಗತಿ ಎಂದು ಹೇಳಿದರು.

ವಿದ್ಯಾರ್ಥಿಗಳು ಶಿಕ್ಷಕರು ಹಾಗೂ ಪೋಷಕರು ನೀಡುವ ಮಾರ್ಗದರ್ಶನವನ್ನು ಗಂಭೀರವಾಗಿ ಪರಿಗಣಿಸಬೇಕು. ಸ್ನೇಹಿತರ ಪ್ರಭಾವಕ್ಕೆ ಒಳಗಾಗಿ ಕಾಲೇಜು ಅಥವಾ ಕೋರ್ಸ್ ಆಯ್ಕೆ ಮಾಡುವ ಬದಲು ತಮ್ಮ ಆಸಕ್ತಿ, ಸಾಮರ್ಥ್ಯ ಮತ್ತು ಭವಿಷ್ಯದ ಅವಕಾಶಗಳನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಬೇಕು ಎಂದು ಸಲಹೆ ನೀಡಿದರು.

“ನಾನು ಒಂದೇ ಕಾಂಬಿನೇಷನ್‌ನಲ್ಲಿ ಓದಿ ಸಮಾಜಶಾಸ್ತ್ರ ವಿಷಯದ ಮೂಲಕ ಡಿಡಿಪಿಐ ಹುದ್ದೆ ತಲುಪಿದ್ದೇನೆ. ಆದ್ದರಿಂದ ಯಾವುದೇ ಕೋರ್ಸ್ ಕಡಿಮೆ ಅಥವಾ ಹೆಚ್ಚು ಎಂಬ ಭಾವನೆ ಬೇಡ. ಪ್ರತಿಯೊಂದು ಕ್ಷೇತ್ರದಲ್ಲೂ ಉತ್ತಮ ಅವಕಾಶಗಳಿವೆ,” ಎಂದು ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬಿದರು.

ಎಂ ಹೈ ಕನ್ಸಲ್ಟಿಂಗ್ ಸಂಸ್ಥೆಯ ಮುಖ್ಯಸ್ಥ ರವಿಶಂಕರ್ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳು ಕೇವಲ ಉದ್ಯೋಗ ಪಡೆಯುವ ಗುರಿ ಹೊಂದದೇ, ಉದ್ಯೋಗ ಸೃಷ್ಟಿಸುವ ಉದ್ಯಮಿಗಳಾಗುವ ಕನಸು ಕಾಣಬೇಕು ಎಂದರು.

“ಜೀವನದಲ್ಲಿ ಒಳ್ಳೆಯದು-ಕೆಟ್ಟದ್ದು ಎರಡೂ ಇರುತ್ತವೆ. ನಾವು ಯಾವುದನ್ನು ಆಯ್ಕೆ ಮಾಡುತ್ತೇವೆ ಎಂಬುದೇ ನಮ್ಮ ಭವಿಷ್ಯವನ್ನು ರೂಪಿಸುತ್ತದೆ. ಗುರಿಯತ್ತ ದೃಢ ಸಂಕಲ್ಪದಿಂದ ಸಾಗಿದರೆ ಕೃತಕ ಬುದ್ಧಿಮತ್ತೆ (ಎಐ) ಯುಗದಲ್ಲಿಯೂ ಯಶಸ್ಸು ಸಾಧಿಸಲು ಸಾಧ್ಯ,” ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿ ಕದಂಬ ಮಾತನಾಡಿ, ಪಿಯುಸಿ ನಂತರ 75ಕ್ಕೂ ಹೆಚ್ಚು ಕೋರ್ಸ್‌ಗಳು ಲಭ್ಯವಿದ್ದು, ಕೃಷಿ ವಿಜ್ಞಾನ ಹಾಗೂ ಸಂಬಂಧಿತ ಕೋರ್ಸ್‌ಗಳಿಗೆ ಭವಿಷ್ಯದಲ್ಲಿ ಉತ್ತಮ ಉದ್ಯೋಗಾವಕಾಶಗಳಿವೆ ಎಂದು ತಿಳಿಸಿದರು.

ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ವಿಶಿಷ್ಟ ಪ್ರತಿಭೆ ಮತ್ತು ಸಾಮರ್ಥ್ಯ ಅಡಗಿದೆ. ಕೆಲವರು ಆತ್ಮವಿಶ್ವಾಸದಿಂದ ಸಂವಹನ ನಡೆಸಿದರೆ, ಇನ್ನು ಕೆಲವರು ನಾಚಿಕೆ ಸ್ವಭಾವದವರಾಗಿರಬಹುದು. ಆದರೆ ಅದು ಸಾಧನೆಗೆ ಅಡ್ಡಿಯಾಗುವುದಿಲ್ಲ. ತಮ್ಮ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ತಕ್ಕ ಕೋರ್ಸ್ ಆಯ್ಕೆ ಮಾಡಿಕೊಂಡರೆ ಉಜ್ವಲ ಭವಿಷ್ಯ ನಿರ್ಮಿಸಿಕೊಳ್ಳಬಹುದು ಎಂದು ಅವರು ಕರೆ ನೀಡಿದರು.

ವಾಗ್ಮಿ ಚೇತನ್ ರಾಮ್ ಸ್ಪೂರ್ತಿದಾಯಕ ಮಾತುಗಳ ಮೂಲಕ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದರು. ಇದೇ ವೇಳೆ ಮಾವನ ಕಂಪ್ಯೂಟರ್ ಖ್ಯಾತಿಯ ಅಂಧ ಸಾಧಕ ಬಸವರಾಜ ಅಥಣಿ ಅವರನ್ನು ಸನ್ಮಾನಿಸಲಾಯಿತು. ಮಧ್ಯಾಹ್ನ ನಡೆದ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ನಗದು ಬಹುಮಾನ, ಪ್ರಶಸ್ತಿ ಪತ್ರ ಹಾಗೂ ಉಡುಗೊರೆಗಳನ್ನು ನೀಡಿ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಯಿತು.

ಈ ಸುದ್ದಿ ಓದಿದ್ದೀರಾ?ಗುಂಡ್ಲುಪೇಟೆ | ಯಶಸ್ಸಿಗೆ ನಿರಂತರ ಪರಿಶ್ರಮ ಅತ್ಯಗತ್ಯ: ಶಾಸಕ ಎಚ್.ಎಂ. ಗಣೇಶಪ್ರಸಾದ್

ಕಾರ್ಯಕ್ರಮದಲ್ಲಿ ಬಳಗದ ಸದಸ್ಯ ಅಚ್ಯುತರಾವ್, ಖಾಸಗಿ ಸಂಸ್ಥೆಯ ಮಾನವ ಸಂಪನ್ಮೂಲ ಅಧಿಕಾರಿ ಅಮಿತ್ ಭೈರಪ್ಪ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಡೀಪುರ ಅರಣ್ಯದಲ್ಲಿ ಹೆಣ್ಣಾನೆ ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಕಟ್ಟೆ ಕೆರೆ ಸಮೀಪದ...

ಬಂಡೀಪುರದಲ್ಲಿ ಉರುಳು ಹಾಕಿ ಹುಲಿ ಕೊಂದ ಆರೋಪ: ವ್ಯಕ್ತಿ ಬಂಧನ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಉರುಳು ಹಾಕಿ ಹುಲಿಯನ್ನು ಕೊಂದ ಪ್ರಕರಣಕ್ಕೆ...

ವಿಚಾರವಾದಿಗಳು ಕಂಡ ಗಾಂಧೀ-ಟಿಪ್ಪು ಮತ್ತು ಕೋಮುವಾದಿಗಳ ತಿರುಚುವಿಕೆ!

ಇತಿಹಾಸದ ಕುರಿತು ಪ್ರಶ್ನೆಗಳನ್ನು ಎತ್ತುವುದು ಪ್ರಜಾಪ್ರಭುತ್ವದ ಲಕ್ಷಣ. ಆದರೆ ಪ್ರಶ್ನೆಗಳನ್ನು ಎತ್ತುವ...

ವಿಜಯಪುರ | ಸಾಧಕ ಗಣ್ಯರಿಗೆ ರಾಜ್ಯೋತ್ಸವ ಸನ್ಮಾನದ ಗೌರವ; ಅರ್ಜಿ ಆಹ್ವಾನ

2026 ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ. 1ರಂದು ವಿಜಯಪುರ...