ಅ.18ರಂದು ಮೈಸೂರಿನಲ್ಲಿ ಎರಡನೇ ವರ್ಷದ ದಸರಾ ಕಲಾಜಾತ್ರೆ

Date:

ಮೈಸೂರು ದಸರಾ ಮಹೋತ್ಸವದ ಅಂಗವಾಗಿ ದಸರಾ ಲಲಿತಕಲೆ ಮತ್ತು ಕರಕುಶಲ ಕಲೆ ಉಪಸಮಿತಿ ಹಾಗೂ ಕಾವಾ ಹಿರಿಯ ವಿದ್ಯಾರ್ಥಿಗಳ ಸಂಘದ ಸಹಯೋಗದಲ್ಲಿ ಎರಡನೇ ವರ್ಷದ ದಸರಾ ಕಲಾಜಾತ್ರೆಯನ್ನು ಅಕ್ಟೋಬರ್ 18ರ ಭಾನುವಾರ ಮೈಸೂರಿನ ಸಿದ್ದಾರ್ಥನಗರದಲ್ಲಿರುವ ನೂತನ ಜಿಲ್ಲಾಧಿಕಾರಿ ಕಚೇರಿಯ ಹಿಂಭಾಗದ ಕಾವಾ ಕಾಲೇಜಿನಲ್ಲಿ ಆಯೋಜಿಸಲಾಗಿದೆ.

- Advertisement -

ಅಂದು ಬೆಳಿಗ್ಗೆ 9ರಿಂದ ಸಂಜೆ 7 ಗಂಟೆಯವರೆಗೆ ಕಲಾಜಾತ್ರೆ ನಡೆಯಲಿದ್ದು, ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಶಾಸಕ ತನ್ವೀರ್ ಸೇಠ್ ಹಾಗೂ ಸುಪ್ರಸಿದ್ಧ ಶಿಲ್ಪಕಲಾವಿದ ಅರುಣ್ ಯೋಗಿರಾಜ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಬಾಗಲಕೋಟೆ | ನಿಲ್ದಾಣಗಳಿದ್ದರೂ ರಸ್ತೆಯಲ್ಲೇ ಬಸ್‌ ನಿಲುಗಡೆ; ಟ್ರಾಫಿಕ್...

ಬಾಗಲಕೋಟೆ ನಗರದಲ್ಲಿ ಸುಗಮ ಸಂಚಾರಕ್ಕಾಗಿ ಬಸ್‌ ನಿಲ್ದಾಣಗಳನ್ನು ನಿರ್ಮಿಸಲಾಗಿದೆ. ಪ್ರಯಾಣಿಕರು ಬಿಸಿಲು, ಮಳೆಯಿಂದ ರಕ್ಷಣೆ ಪಡೆಯಲು ಆಸನ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ. ಬಸ್‌ಗಳು ನಿಲುಗಡೆಗೊಳ್ಳಲು ಪ್ರತ್ಯೇಕ ಜಾಗವನ್ನೂ ಗುರುತಿಸಲಾಗಿದೆ. ಆದರೆ, ಬಸ್‌ಗಳು ಮಾತ್ರ ನಿಲ್ದಾಣಕ್ಕೆ...

ಅಂಬಾನಿ ರಕ್ಷಣೆಗೆ ನಿಂತಿತೇ ಮೋದಿ ಸರ್ಕಾರ; ಗೆಳೆಯನ ಹಿತ...

ಭಾರತದ ಡಿಜಿಟಲ್ ಆಕಾಶದಲ್ಲಿ ಈಗ ಜಾಗತಿಕ ದೈತ್ಯ ಎಲಾನ್ ಮಸ್ಕ್ ಮತ್ತು ದೇಶೀಯ ಕುಬೇರ ಮುಖೇಶ್ ಅಂಬಾನಿ ನಡುವೆ ಮಹಾಸಮರ ಶುರುವಾಗಿದೆ. ಜನಸಾಮಾನ್ಯರಿಗೆ ಕೈಗೆಟುಕುವ ದರದಲ್ಲಿ ಇಂಟರ್‌ನೆಟ್ ನೀಡಲು ಸಜ್ಜಾಗಿರುವ ಮಸ್ಕ್ ಅವರ...

ನಗರದ ಜಿಲ್ಲಾ ಪತ್ರಕರ್ತರ ಭವನದಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ದಸರಾ ಲಲಿತಕಲೆ ಮತ್ತು ಕರಕುಶಲ ಕಲೆ ಉಪಸಮಿತಿಯ ಉಪ ವಿಶೇಷಾಧಿಕಾರಿ ಹಾಗೂ ಕಾವಾ ಕಾಲೇಜಿನ ಡೀನ್ ದೇವರಾಜು ಅವರು, ಈ ಬಾರಿಯ ಕಲಾಜಾತ್ರೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳು ಹಾಗೂ ಹೊರರಾಜ್ಯಗಳ ನೂರಕ್ಕೂ ಹೆಚ್ಚು ವೃತ್ತಿಪರ ಮತ್ತು ಹವ್ಯಾಸಿ ಕಲಾವಿದರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಕಲಾಜಾತ್ರೆಯಲ್ಲಿ ಕಲಾವಿದರು ತಾವು ರಚಿಸಿರುವ ಚಿತ್ರಕಲೆ, ಶಿಲ್ಪಕಲೆ, ಛಾಯಾಚಿತ್ರ ಹಾಗೂ ಮಿಶ್ರ ಮಾಧ್ಯಮದ ಕಲಾಕೃತಿಗಳನ್ನು ಪ್ರದರ್ಶಿಸುವುದರ ಜೊತೆಗೆ ಮಾರಾಟಕ್ಕೂ ಇಡಲಿದ್ದಾರೆ. ಈ ಮೂಲಕ ಕಲಾವಿದರಿಗೆ ತಮ್ಮ ಸೃಜನಶೀಲತೆಯನ್ನು ಪ್ರದರ್ಶಿಸಲು ಹಾಗೂ ಕಲಾಕೃತಿಗಳನ್ನು ಕಲಾಸಕ್ತರಿಗೆ ಪರಿಚಯಿಸಲು ಉತ್ತಮ ವೇದಿಕೆ ಕಲ್ಪಿಸಲಾಗಿದೆ ಎಂದು ಹೇಳಿದರು.

ಮೈಸೂರು ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಕಲಾಸಕ್ತರು, ಕಲಾಪ್ರೇಮಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಕಲಾಜಾತ್ರೆಗೆ ಆಗಮಿಸಿ ಕಲಾವಿದರನ್ನು ಪ್ರೋತ್ಸಾಹಿಸಬೇಕು ಎಂದು ಮನವಿ ಮಾಡಿದರು. ಇದು ಎರಡನೇ ವರ್ಷದ ದಸರಾ ಕಲಾಜಾತ್ರೆಯಾಗಿದ್ದು, ಮುಂದಿನ ವರ್ಷಗಳಲ್ಲಿ ಕಾರ್ಯಕ್ರಮವನ್ನು ಮತ್ತಷ್ಟು ವಿಸ್ತರಿಸಿ ಹೆಚ್ಚಿನ ಕಲಾವಿದರಿಗೆ ಅವಕಾಶ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ದೇವರಾಜು ತಿಳಿಸಿದರು.

ಈ ವಿಶೇಷ ವರದಿ ಓದಿದ್ದೀರಾ? ರ‍್ಯಾಂಕ್ ಸಾಮರ್ಥ್ಯದ ಮಾನದಂಡವಲ್ಲ: ಮಕ್ಕಳ ವಿಕಾಸಕ್ಕೆ ಒತ್ತಡ ರಹಿತ ಕಲಿಕೆಯ ವಾತಾವರಣ ಅಗತ್ಯ

ಸುದ್ದಿಗೋಷ್ಠಿಯಲ್ಲಿ ದಸರಾ ಲಲಿತಕಲೆ ಮತ್ತು ಕರಕುಶಲ ಕಲೆ ಉಪಸಮಿತಿಯ ಕಾರ್ಯಾಧ್ಯಕ್ಷ ರಾಘವೇಂದ್ರ, ಉಪಾಧ್ಯಕ್ಷ ರವಿಕುಮಾರ್, ದೊರೆಸ್ವಾಮಿ, ಕಾವಾ ಹಿರಿಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಮಂಜು ಪ್ರಸಾದ್ ಹಾಗೂ ಉಪಾಧ್ಯಕ್ಷ ಮಧುಸೂಧನ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀಳಗಿ | ಅ.18ರಂದು ‘ಬಸವ-ಭೀಮ ಸಂಗಮ’ ಸಮಾವೇಶ

ಜಾತ್ಯತೀತ ಹಾಗೂ ಬಹುತ್ವದ ಕರ್ನಾಟಕದ ಸಂಕಲ್ಪದೊಂದಿಗೆ ಸರ್ವಜಾತಿ-ಸರ್ವಧರ್ಮ ಸಹೋದರತ್ವ ಸಾರುವ ‘ಬಸವ-ಭೀಮ...

ಗೋಕರ್ಣ | ಹಾಪ್‌ಮೂನ್ ಬೀಚ್‌ನಲ್ಲಿ ಎರಡು ಬೋಟ್‌ಗಳಿಗೆ ಹಾನಿ: ₹1.80 ಲಕ್ಷ ನಷ್ಟ

ಗೋಕರ್ಣ: ಹಾಪ್‌ಮೂನ್ ಬೀಚ್‌ನ ದಡದಲ್ಲಿ ನಿಲ್ಲಿಸಿದ್ದ ಜಲಸಾಹಸ ಕ್ರೀಡೆಗಳಿಗೆ ಬಳಸುವ ಎರಡು...

ಕೊಪ್ಪಳ | ಸರ್ಕಾರಿ ಪ್ರೌಢಶಾಲೆಯ ರಂಗಮಂದಿರದ ಕೊಠಡಿಯಲ್ಲಿ ಬೆಂಕಿ: ಕ್ರೀಡಾ ಸಾಮಗ್ರಿಗಳು ಭಸ್ಮ

ಕನಕಗಿರಿ ತಾಲೂಕಿನ ಹುಲಿಹೈದರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ರಂಗಮಂದಿರದ ಕೊಠಡಿಯಲ್ಲಿ ಮುಂಜಾನೆ...

ಉಡುಪಿ | 11 ವರ್ಷವಾದರೂ ಪೂರ್ಣಗೊಳ್ಳದ ಕುಂದಾಪುರ ಯುಜಿಡಿ ಕಾಮಗಾರಿ: ಸಚಿವ ಬಾಲಕೃಷ್ಣ ಅಸಮಾಧಾನ

ಕುಂದಾಪುರ ಪುರಸಭೆ ವ್ಯಾಪ್ತಿಯಲ್ಲಿ ಸುಮಾರು ₹56.54 ಕೋಟಿ ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ ಒಳಚರಂಡಿ...