ಹಿರಿಯ ಕವಯಿತ್ರಿ ಹಾಗೂ ಸಾಹಿತಿ ಸ. ಉಷಾ ಅವರು ಅನಾರೋಗ್ಯದಿಂದ ನಿಧನರಾಗಿರುವುದು ಕನ್ನಡ ಸಾಹಿತ್ಯ ಕ್ಷೇತ್ರಕ್ಕೆ, ಅದರಲ್ಲೂ ಮಹಿಳಾ ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ.
ಸಾಹಿತ್ಯ ಕ್ಷೇತ್ರದಲ್ಲಿ ತಮ್ಮದೇ ಆದ ವಿಶಿಷ್ಟ ಬರವಣಿಗೆಯ ಮೂಲಕ ಗುರುತಿಸಿಕೊಂಡಿದ್ದ ಸ. ಉಷಾ ಅವರು ‘ತೊಗಲು ಗೊಂಬೆಯ ಆತ್ಮಕಥೆ’, ‘ಈ ನೆಲದ ಹಾಡು’ ಸೇರಿದಂತೆ ಕವನ ಸಂಕಲನಗಳನ್ನು ಪ್ರಕಟಿಸಿದ್ದರು. ಅಲ್ಲದೆ, ‘ಹವಳ ಹಾರಿದ ಹೊತ್ತು’ ಮತ್ತು ‘ಕಸೂತಿ’ ಕಾದಂಬರಿಗಳ ಮೂಲಕ ಸಾಹಿತ್ಯ ಲೋಕಕ್ಕೆ ಮಹತ್ವದ ಕೊಡುಗೆ ನೀಡಿದ್ದಾರೆ.
ಅವರ ಸಾಹಿತ್ಯ ಸೇವೆಯನ್ನು ಗುರುತಿಸಿ ವರ್ಧಮಾನ ಸಾಹಿತ್ಯ ಪ್ರಶಸ್ತಿ ಹಾಗೂ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗಳು ಸಂದಿದ್ದವು. ತಮ್ಮ ಕವಿತೆ ಮತ್ತು ಕಾದಂಬರಿಗಳ ಮೂಲಕ ಕನ್ನಡ ಮಹಿಳಾ ಸಾಹಿತ್ಯವನ್ನು ಸಮೃದ್ಧಗೊಳಿಸಿದ ಅವರು, ಸಾಹಿತ್ಯಾಸಕ್ತರ ಮನದಲ್ಲಿ ವಿಶೇಷ ಸ್ಥಾನ ಪಡೆದಿದ್ದರು.
ಈ ವಿಶೇಷ ವರದಿ ಓದಿದ್ದೀರಾ? ಕಾಡಿನ ಮಕ್ಕಳೇ ವನ್ಯಜೀವಿಗಳ ನಿಜವಾದ ಬಂಧುಗಳು: ಆದಿವಾಸಿಗಳ ಜ್ಞಾನ, ಸಹಬಾಳ್ವೆ-ಅರಣ್ಯ ಸಂರಕ್ಷಣೆಯ ಭವಿಷ್ಯ
ಸ. ಉಷಾ ಅವರ ನಿಧನಕ್ಕೆ ಮೈಸೂರು ಜಿಲ್ಲಾ ಲೇಖಕಿಯರ ಟ್ರಸ್ಟ್‌ನ ಅಧ್ಯಕ್ಷರಾದ ಪ್ರೊ. ಪದ್ಮಶೇಖರ್ ಹಾಗೂ ಟ್ರಸ್ಟಿನ ಪದಾಧಿಕಾರಿಗಳು ಮತ್ತು ಸದಸ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದು, ಅಗಲಿದ ಹಿರಿಯ ಸಾಹಿತಿಗೆ ಗೌರವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಈ ವಿಶೇಷ ವರದಿ ಓದಿದ್ದೀರಾ? ವನ್ಯಜೀವಿ ಸಂಘರ್ಷದ ಸುಳಿಯಲ್ಲಿ ಅರಣ್ಯದ ಭವಿಷ್ಯ: ಸಂರಕ್ಷಣೆಯ ಹೆಸರಿನಲ್ಲಿ ಹೊಸ ಹಿತಾಸಕ್ತಿಗಳಿಗೆ ಅವಕಾಶವೇ?



