ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ಕಾಕ್ ಅವರನ್ನು ಸರ್ಕಾರ ಆಹ್ವಾನಿಸಿರುವುದನ್ನು ವಿರೋಧಿಸಿ ಹಿಂದೂ ಜಾಗರಣ ವೇದಿಕೆ ಆಯೋಜಿಸಿದ್ದ ಚಾಮುಂಡಿ ಬೆಟ್ಟ ಚಲೋಗೆ ಆಗಮಿಸಿದ್ದ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ಸಹಿತ ಹಲವು ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ.
ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ, ಸಂದೇಶ್ ಸ್ವಾಮಿ, ಸುಶ್ರುತ್ ಗೌಡ ಸೇರಿದಂತೆ ಮುಖಂಡರು ಹಾಗೂ ಮಹಿಳಾ ಕಾರ್ಯಕರ್ತರನ್ನು ಮುಂಜಾಗ್ರತಾ ಕ್ರಮವಾಗಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕುರುಬಾರಹಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತಕ್ಕೆ ಆಗಮಿಸಿದ ಶಾಸಕರು ಪೊಲೀಸರ ನಡೆಗೆ ಆಕ್ರೋಶ ವ್ಯಕ್ತಪಡಿಸಿದರು. “ಯಾವುದೇ ಸೆಕ್ಷನ್ ಹಾಕದಿದ್ದರೂ ರಸ್ತೆ ಬದಿಯಲ್ಲಿದ್ದವರನ್ನು ಏಕೆ ಬಂಧಿಸುತ್ತಿದ್ದೀರಿ” ಎಂದು ಪ್ರತಿಭಟನಾಕಾರರು ಪ್ರಶ್ನಿಸಿದರು.
ಸಿವಿಲ್, ನಗರ ಸಶಸ್ತ್ರ ಪಡೆ, ಕಮಾಂಡೋ ದಳ, ಚಾಮುಂಡಿ ಪಡೆಯ ಸುಮಾರು 500 ಪೊಲೀಸರನ್ನು ನಿಯೋಜಿಸಲಾಗಿದೆ.