SIR: ಪಿರಿಯಾಪಟ್ಟಣದಲ್ಲಿ 1.76 ಲಕ್ಷ ಮತದಾರರ ಕರಡು ಪಟ್ಟಿ ಪ್ರಕಟ; 9,046 ಮತದಾರರಿಗೆ ನೋಟಿಸ್

Date:

ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (SIR) ಹಿನ್ನೆಲೆಯಲ್ಲಿ ಪಿರಿಯಾಪಟ್ಟಣ ತಾಲೂಕಿನಲ್ಲಿ ಕರಡು ಮತದಾರರ ಪಟ್ಟಿಯನ್ನು ಸೋಮವಾರ ಪ್ರಕಟಿಸಲಾಗಿದೆ. 2026ರ ಅಕ್ಟೋಬರ್ 1ನ್ನು ಅರ್ಹತಾ ದಿನಾಂಕವಾಗಿ ನಿಗದಿಪಡಿಸಲಾಗಿದ್ದು, ಅಂತಿಮ ಮತದಾರರ ಪಟ್ಟಿ ಅಕ್ಟೋಬರ್ 27ರಂದು ಪ್ರಕಟವಾಗಲಿದೆ ಎಂದು ಮೈಸೂರು ಜಿಲ್ಲೆಯ ಮುಡಾ ಕಾರ್ಯದರ್ಶಿ ಕೆ. ಜಾನ್ಸನ್ ತಿಳಿಸಿದರು.

- Advertisement -

ತಾಲ್ಲೂಕು ತಹಸೀಲ್ದಾರ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ತಾಲ್ಲೂಕಿನಲ್ಲಿ ಒಟ್ಟು 1,99,706 ಮತದಾರರಿಗೆ ಗಣತಿನಮೂನೆಗಳನ್ನು ವಿತರಿಸಲಾಗಿದ್ದು, ಶೇ.100ರಷ್ಟು ವಿತರಣೆ ಪೂರ್ಣಗೊಂಡಿದೆ. ಈ ಪೈಕಿ 1,76,859 ನಮೂನೆಗಳನ್ನು ಡಿಜಿಟೀಕರಣಗೊಳಿಸಲಾಗಿದ್ದು, ಶೇ.88.56ರಷ್ಟು ಪ್ರಗತಿಯಾಗಿದೆ. 22,847 ಮತದಾರರ (ಶೇ.11.44) ವಿವರಗಳು ವರ್ಗಾವಣೆಗೆ ಸೇರಿವೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಕರಡು ಪಟ್ಟಿಯ ಪ್ರಕಾರ 88,333 ಪುರುಷರು, 88,523 ಮಹಿಳೆಯರು ಹಾಗೂ ಮೂವರು ತೃತೀಯಲಿಂಗಿ ಮತದಾರರು ಸೇರಿದಂತೆ ಒಟ್ಟು 1,76,859 ಮತದಾರರು ಪಟ್ಟಿಯಲ್ಲಿದ್ದಾರೆ. ಜೂನ್ 16ರ ಮತದಾರರ ಪಟ್ಟಿಗೆ ಹೋಲಿಸಿದರೆ ಮತದಾರರ ಸಂಖ್ಯೆಯಲ್ಲಿ 22,847ರಷ್ಟು ಇಳಿಕೆಯಾಗಿದೆ ಎಂದು ತಿಳಿಸಿದರು.

ತಾಲ್ಲೂಕಿನಲ್ಲಿ ಮತಗಟ್ಟೆಗಳ ಸಂಖ್ಯೆಯನ್ನೂ 235ರಿಂದ 240ಕ್ಕೆ ಹೆಚ್ಚಿಸಲಾಗಿದ್ದು, ರಾಜನ ಬಿಳಗುಲಿ, ಹಲಗನಹಳ್ಳಿ, ಕೆಳಗನಹಳ್ಳಿ, ಆವರ್ತಿ ಹಾಗೂ ಎನ್. ಶೆಟ್ಟಹಳ್ಳಿ ಗ್ರಾಮಗಳಲ್ಲಿ ಹೆಚ್ಚುವರಿ ಮತಗಟ್ಟೆಗಳನ್ನು ಕಲ್ಪಿಸಲಾಗಿದೆ. ಕನಿಷ್ಠ 1,200 ಮತದಾರರನ್ನು ಹೊಂದಿರುವ ಬೂತ್‌ಗಳ ಆಧಾರದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದರು.

ಕರಡು ಮತದಾರರ ಪಟ್ಟಿಗೆ ಸಂಬಂಧಿಸಿದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಆಗಸ್ಟ್ 24ರಿಂದ ಸೆಪ್ಟೆಂಬರ್ 23ರವರೆಗೆ ಸಲ್ಲಿಸಲು ಅವಕಾಶವಿದೆ. ಮತದಾರರು ತಮ್ಮ ಹೆಸರು, ವಿಳಾಸ ಸೇರಿದಂತೆ ವಿವರಗಳನ್ನು ಪರಿಶೀಲಿಸಿ, ಅಗತ್ಯವಿದ್ದಲ್ಲಿ ನಿಗದಿತ ಅವಧಿಯಲ್ಲಿ ತಿದ್ದುಪಡಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅಂತಿಮ ಮತದಾರರ ಪಟ್ಟಿ ಅಕ್ಟೋಬರ್ 27ರಂದು ಪ್ರಕಟವಾಗಲಿದೆ ಎಂದು ಹೇಳಿದರು.

ತಹಸೀಲ್ದಾರ್ ನಿಸರ್ಗ ಪ್ರಿಯಾ ಮಾತನಾಡಿ, ಪಿರಿಯಾಪಟ್ಟಣ ತಾಲೂಕಿನಲ್ಲಿ 7,171 ಮತದಾರರ ವಿವರಗಳಲ್ಲಿ ವೈಪರೀತ್ಯ ಕಂಡುಬಂದಿದ್ದು, 1,875 ಮತದಾರರ ವಿವರಗಳು ಮ್ಯಾಪಿಂಗ್ ಆಗಿಲ್ಲ. ಒಟ್ಟು 9,046 ಮತದಾರರಿಗೆ ಸಂಬಂಧಿಸಿದಂತೆ ಇ.ಆರ್.ಒ.ಗಳಿಂದ ನೋಟಿಸ್ ನೀಡಲಾಗುವುದು ಎಂದರು.

ಈ ವಿಶೇಷ ಸುದ್ದಿ ಓದಿದ್ದೀರಾ?ಮಳೆಯೂ ಇಲ್ಲ, ಬೆಳೆಯೂ ಇಲ್ಲ; ಕಾವೇರಿ ಹರಿದಿದ್ದು ತಮಿಳುನಾಡಿನತ್ತ-ರೈತನ ಬದುಕಿನ ಮುಂದಿನ ದಾರಿ ಏನು?

ಹೊಸ ಮತದಾರರ ಹೆಸರು ಸೇರ್ಪಡೆಗೆ ನಮೂನೆ-6, ವಿವರಗಳ ತಿದ್ದುಪಡಿ ಅಥವಾ ವರ್ಗಾವಣೆಗೆ ನಮೂನೆ-8 ಹಾಗೂ ಹೆಸರು ತೆಗೆದುಹಾಕಲು ನಮೂನೆ-7 ಮೂಲಕ ಅರ್ಜಿ ಸಲ್ಲಿಸಬಹುದು. ಕರಡು ಮತದಾರರ ಪಟ್ಟಿ ಇ.ಆರ್.ಒ. ಹಾಗೂ ಎ.ಇ.ಆರ್.ಒ. ಕಚೇರಿಗಳಲ್ಲಿ ಲಭ್ಯವಿದ್ದು, ಅಧಿಕೃತ ಚುನಾವಣಾ ವೆಬ್‌ಸೈಟ್‌ಗಳಲ್ಲಿಯೂ ವೀಕ್ಷಿಸಬಹುದಾಗಿದೆ. ಸಾರ್ವಜನಿಕರು ತಮ್ಮ ಹೆಸರು ಮತ್ತು ವಿವರಗಳನ್ನು ಪರಿಶೀಲಿಸಿ, ಅಗತ್ಯವಿದ್ದಲ್ಲಿ ನಿಗದಿತ ಅವಧಿಯೊಳಗೆ ಹಕ್ಕು ಅಥವಾ ಆಕ್ಷೇಪಣೆ ಸಲ್ಲಿಸುವಂತೆ ಮನವಿ ಮಾಡಿದರು.

ಈ ವಿಶೇಷ ಸುದ್ದಿ ಓದಿದ್ದೀರಾ? SIR: ಮಠಾಧಿಪತಿಗಳಿಗೂ ದಾಖಲೆಗಳ ಕಗ್ಗಂಟು; ‘ಪೂರ್ವಾಶ್ರಮದ ಹೆಸರೋ, ಪೀಠಾಧ್ಯಕ್ಷರ ಹೆಸರೋ

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರೆಹಮತ್ ಜಾನ್ ಬಾಬು, ಮುಖಂಡರಾದ ಜಗದೀಶ್, ಲೋಕಪಾಲಯ್ಯ, ಪುಟ್ಟರಾಜು, ಸುನೀಲ್, ಶಿರೆಸ್ತದಾರ್ ನಾಗರಾಜ್, ರಾಕೇಶ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ವಸತಿ ಯೋಜನೆಗಳ ಪ್ರಗತಿಗೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ

ಚಾಮರಾಜನಗರ ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳ ನಿರ್ಮಾಣ ಕಾರ್ಯಕ್ಕೆ...

ಬಾಗೇಪಲ್ಲಿ | ಪ್ರಜಾಪ್ರಭುತ್ವದ ಪ್ರಕ್ರಿಯೆಗಳ ಬಗ್ಗೆ ಅಸಕ್ತಿ ಬೆಳೆಸಲು ಯುವ ಸಂಸತ್‌ ಕಾರ್ಯಕ್ರಮ ಸಹಕಾರಿ:- ತಹಶಿಲ್ದಾರ್ ಮನೀಷಾ ಎನ್ ಪತ್ರಿ

ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಪ್ರಜಾಪ್ರಭುತ್ವದ ಯಶಸ್ಸಿಗೆ ಯುವಜನರ ಪಾತ್ರ...