ಕ್ರೀಡೆಯಿಂದ ಆರೋಗ್ಯವಂತ ಸಮಾಜ ನಿರ್ಮಾಣ ಸಾಧ್ಯ: ಡಾ. ಎಚ್.ವಿ. ಉದಯಕುಮಾರ್

Date:

ಮೈಸೂರು ಮಹಾರಾಣಿ ಮಹಿಳಾ ಕಲಾ ಕಾಲೇಜಿನ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ ಚಂದ್ ಅವರ ಜನ್ಮದಿನದ ಅಂಗವಾಗಿ ರಾಷ್ಟ್ರೀಯ ಕ್ರೀಡಾ ದಿನಾಚರಣೆಯನ್ನು ಆಚರಿಸಲಾಯಿತು.

- Advertisement -

ಕಾರ್ಯಕ್ರಮದ ಅಂಗವಾಗಿ ಮೇಜರ್ ಧ್ಯಾನ್ ಚಂದ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಟಿ.ನರಸೀಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಎಚ್.ವಿ. ಉದಯಕುಮಾರ್ ಮಾತನಾಡಿ, ಕ್ರೀಡೆಯಿಂದ ಮಾನಸಿಕ, ದೈಹಿಕ ಹಾಗೂ ಭಾವನಾತ್ಮಕ ಶಕ್ತಿ ವೃದ್ಧಿಯಾಗುವುದಲ್ಲದೆ, ಜೀವನದಲ್ಲಿ ಉಲ್ಲಾಸ ಮತ್ತು ಚೈತನ್ಯ ಮೂಡುತ್ತದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿವಮೊಗ್ಗ | ಅಸುರಕ್ಷತೆಯ ತಾಣವಾದ ರೈಲ್ವೆ ನಿಲ್ದಾಣ: ಪ್ರಯಾಣಿಕರ...

ಕುಡಿಯುವ ನೀರಿಲ್ಲದಿರುವುದು, ಹಾಳಾದ ಶೌಚಾಲಯಗಳು, ರಾತ್ರಿ ವೇಳೆ ಬೀದಿದೀಪ ಹಾಗೂ ಕಾವಲುಗಾರರ ಕೊರತೆಯಿಂದಾಗಿ ಈ ನಿಲ್ದಾಣವು ನಿರ್ಜನ ಪ್ರದೇಶದಂತೆ ಭಾಸವಾಗುತ್ತಿದೆ. ಇದರೊಂದಿಗೆ ಕಳ್ಳತನ, ಅನೈತಿಕ ಚಟುವಟಿಕೆಗಳು ಹೆಚ್ಚಾಗಿರುವುದು ಜೊತೆಗೆ ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದಿರುವುದು...

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ಸೈನಿಕ ವೃತ್ತಿಯ ಜೊತೆಗೆ ಹಾಕಿಯನ್ನು ಉಸಿರಾಗಿಸಿಕೊಂಡಿದ್ದ ಮೇಜರ್ ಧ್ಯಾನ್ ಚಂದ್ ಅವರು ಭಾರತ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗಳಿಸುವಲ್ಲಿ ಮಹತ್ವದ ಕೊಡುಗೆ ನೀಡಿದ್ದರು. ಅವರ ಪರಿಶ್ರಮ, ಶಿಸ್ತು ಮತ್ತು ರಾಷ್ಟ್ರಪ್ರೇಮ ಅನನ್ಯವಾದದ್ದು ಎಂದು ಸ್ಮರಿಸಿದರು. ಇಂದಿನ ಯುವಜನರು ಪ್ರತಿದಿನ ಕನಿಷ್ಠ ಒಂದು ಗಂಟೆಯಾದರೂ ಯಾವುದಾದರೂ ದೈಹಿಕ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದ ದೈಹಿಕ ಸಾಮರ್ಥ್ಯ ಹೆಚ್ಚುವುದರ ಜೊತೆಗೆ ವೈಯಕ್ತಿಕ ಆರೋಗ್ಯ, ಸಾಮಾಜಿಕ ಆರೋಗ್ಯ ಹಾಗೂ ರಾಷ್ಟ್ರದ ಅಭಿವೃದ್ಧಿಗೆ ಕ್ರೀಡೆ ಸಹಕಾರಿಯಾಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಡಾ. ಎಂ.ಎಸ್. ಅನಿತಾ ಮಾತನಾಡಿ, ಮೇಜರ್ ಧ್ಯಾನ್ ಚಂದ್ ಅವರು ಎಲ್ಲ ಕ್ರೀಡಾಪಟುಗಳಿಗೂ ಆದರ್ಶ ವ್ಯಕ್ತಿಯಾಗಿದ್ದಾರೆ. ಅವರ ಶಿಸ್ತು, ರಾಷ್ಟ್ರಪ್ರೇಮ ಮತ್ತು ಸಮಯಪಾಲನೆಯನ್ನು ಜೀವನದಲ್ಲಿ ಅಳವಡಿಸಿಕೊಂಡು ಕ್ರೀಡೆಯನ್ನು ಉತ್ತೇಜಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಿಸಲು ಸಾಧ್ಯ ಎಂದರು.

ಈ ವಿಶೇಷ ಸುದ್ದಿ ಓದಿದ್ದೀರಾ?ಶುಂಠಿ ಬೆಳೆ: ಮಣ್ಣಿನಲ್ಲಿ ಜೀವವಿದೆ. ಆ ಜೀವ ಉಳಿದರೆ ಮಾತ್ರ ಕೃಷಿ ಉಳಿಯುತ್ತದೆ

ಕಾರ್ಯಕ್ರಮದಲ್ಲಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಭಾಸ್ಕರ್ ಕೆ.ಎಸ್., ಡಾ. ಮೋಹನ್ ಕುಮಾರ್ ಸಿ.ಎಸ್., ಕಾಲೇಜಿನ ಅಧ್ಯಾಪಕ ಮತ್ತು ಅಧ್ಯಾಪಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕತಾರ್‌ನಲ್ಲಿ ಉಡುಪಿಯ ಸಮಾಜ ಸೇವಕ ಎಂ. ಇಕ್ಬಾಲ್ ಮನ್ನಾ ಅವರಿಗೆ ಗೌರವ ಸನ್ಮಾನ

ಉಡುಪಿ ಜಿಲ್ಲೆಯ ಪ್ರಮುಖ ಸಮಾಜ ಸೇವಕರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಎಂ....

ಗದಗ | ಕನಿಷ್ಠ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

ಪರಿಷ್ಕರಣೆ ಮಾಡಿರುವ ಕನಿಷ್ಟ ವೇತನ ಜಾರಿಗಾಗಿ ಹಾಗೂ ಖಾಯಂಗಾಗಿ ಮತ್ತು ಕೆಲಸದ...

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...