ಟೆಕ್ನೋ ಆಯುರ್ವೇದ ಅಭಿವೃದ್ಧಿಗೆ ಪೂರಕ: ಗುಂಡಪ್ಪಗೌಡ

Date:

ಭಾರತದ ಸಾಂಪ್ರದಾಯಿಕ ವೈದ್ಯ ಪದ್ಧತಿಯಾದ ಆಯುರ್ವೇದಕ್ಕೆ ಆಧುನಿಕ ತಂತ್ರಜ್ಞಾನದ ಸ್ಪರ್ಶ ನೀಡುವುದರಿಂದ ಸಂಶೋಧನೆ, ಚಿಕಿತ್ಸಾ ವಿಧಾನಗಳು ಹಾಗೂ ಔಷಧ ತಯಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಹೆಚ್ಚಿನ ಪ್ರಗತಿ ಸಾಧಿಸಲು ಸಾಧ್ಯವಾಗಲಿದೆ ಎಂದು ವಿದ್ಯಾವರ್ಧಕ ಸಂಘದ ಅಧ್ಯಕ್ಷ ಗುಂಡಪ್ಪಗೌಡ ಅಭಿಪ್ರಾಯಪಟ್ಟರು.

- Advertisement -

ಮೈಸೂರು ನಗರದ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಸೆಮಿನಾರ್ ಹಾಲ್‌ನಲ್ಲಿ ಶನಿವಾರ ಸರ್ಕಾರಿ ಆಯುರ್ವೇದ ಸಂಶೋಧನಾ ಕೇಂದ್ರ ಹಾಗೂ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಸಹಯೋಗದಲ್ಲಿ 11ನೇ ರಾಷ್ಟ್ರೀಯ ಆಯುರ್ವೇದ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ‘ಟೆಕ್ನೋ ಆಯುರ್ವೇದ’ ರಾಷ್ಟ್ರೀಯ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ಆಯುರ್ವೇದವು ಭಾರತದ ಪರಂಪರೆಯ ವಿಶಿಷ್ಟ ವೈದ್ಯ ಪದ್ಧತಿಯಾಗಿದ್ದು, ಇದಕ್ಕೆ ಆಧುನಿಕ ತಾಂತ್ರಿಕ ನೆಲೆಗಟ್ಟನ್ನು ಒದಗಿಸುವ ಅಗತ್ಯವಿದೆ. ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಳ್ಳುವ ಮೂಲಕ ಆಯುರ್ವೇದ ಕ್ಷೇತ್ರದಲ್ಲಿ ಸಂಶೋಧನೆಗೆ ಹೊಸ ಆಯಾಮಗಳನ್ನು ಕಲ್ಪಿಸಬಹುದು. ಚಿಕಿತ್ಸಾ ವಿಧಾನಗಳನ್ನು ಸುಧಾರಿಸುವುದರ ಜೊತೆಗೆ ಔಷಧ ತಯಾರಿಕೆ ಮತ್ತು ಗುಣಮಟ್ಟದ ಅಭಿವೃದ್ಧಿಗೂ ಸಹಕಾರಿಯಾಗಲಿದೆ. ಆಯುರ್ವೇದ ಮತ್ತು ಆಧುನಿಕ ತಂತ್ರಜ್ಞಾನದ ಸಮನ್ವಯವು ಈ ವೈದ್ಯ ಪದ್ಧತಿಯ ಭವಿಷ್ಯದ ಬೆಳವಣಿಗೆಗೆ ಪೂರಕವಾಗಲಿದೆ ಎಂದು ಹೇಳಿದರು.

ವಿದ್ಯಾವರ್ಧಕ ಟ್ರಸ್ಟ್‌ನ ಕಾರ್ಯದರ್ಶಿ ಪಿ. ವಿಶ್ವನಾಥ್ ಮಾತನಾಡಿ, ‘ಟೆಕ್ನೋ ಆಯುರ್ವೇದ’ ಅದ್ಭುತ ಪರಿಕಲ್ಪನೆಯಾಗಿದ್ದು, ಸಾಂಪ್ರದಾಯಿಕ ವೈದ್ಯ ಜ್ಞಾನ ಮತ್ತು ಆಧುನಿಕ ತಂತ್ರಜ್ಞಾನವನ್ನು ಒಟ್ಟುಗೂಡಿಸುವ ಮೂಲಕ ಆಯುರ್ವೇದ ಕ್ಷೇತ್ರದ ಬೆಳವಣಿಗೆಗೆ ಹೊಸ ಅವಕಾಶಗಳನ್ನು ಸೃಷ್ಟಿಸಲಿದೆ ಎಂದು ಆಶಿಸಿದರು.

ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಧರ್ಮಾಪುರ ನಾರಾಯಣ ಮಾತನಾಡಿ, ಇಂತಹ ಸಮಾವೇಶಗಳು ಆಯುರ್ವೇದಕ್ಕೆ ಜಾಗತಿಕ ಮಟ್ಟದಲ್ಲಿ ಮನ್ನಣೆ ದೊರಕಿಸಲು ಸಹಕಾರಿಯಾಗಲಿವೆ. ಆಯುರ್ವೇದದ ಸಾಂಪ್ರದಾಯಿಕ ಜ್ಞಾನವನ್ನು ಆಧುನಿಕ ತಂತ್ರಜ್ಞಾನದೊಂದಿಗೆ ಸಮನ್ವಯಗೊಳಿಸುವ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುವ ಅಗತ್ಯವಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಭಾರತ ಸರ್ಕಾರದ ಸಲಹೆಗಾರ ಡಾ. ಕೌಸ್ತುಭ ಉಪಾಧ್ಯಾಯ, ಆಯುಷ್ ಇಲಾಖೆಯ ಆಯುಕ್ತ ಡಾ. ಸುನಿಲ್ ಪನ್ವಾರ್ ಹಾಗೂ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿ ಡಾ. ವಿದ್ಯಾಶಂಕರ್ ಅವರು ಆನ್‌ಲೈನ್ ಮೂಲಕ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.

ಸಮಾವೇಶದಲ್ಲಿ ಭಾಗವಹಿಸಿದ್ದ ಆಯುರ್ವೇದ ತಜ್ಞರು, ಆಯುರ್ವೇದ ಕ್ಷೇತ್ರದ ಅಭಿವೃದ್ಧಿಗೆ ಅಗತ್ಯವಿರುವ ತಾಂತ್ರಿಕ ಸಹಕಾರದ ಕುರಿತು ತಮ್ಮ ಅನುಭವ ಮತ್ತು ವಿಚಾರಗಳನ್ನು ಇಂಜಿನಿಯರಿಂಗ್ ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಸಾಂಪ್ರದಾಯಿಕ ವೈದ್ಯ ಪದ್ಧತಿಯ ಬೆಳವಣಿಗೆಯಲ್ಲಿ ತಂತ್ರಜ್ಞಾನ ವಹಿಸಬಹುದಾದ ಪಾತ್ರದ ಕುರಿತು ಚರ್ಚಿಸಲಾಯಿತು. ಮೈಸೂರಿನ 12 ತಾಂತ್ರಿಕ ಕಾಲೇಜುಗಳ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಮಾವೇಶದಲ್ಲಿ ಭಾಗವಹಿಸಿದ್ದರು.

ಈ ವಿಶೇಷ ವರದಿ ಓದಿದ್ದೀರಾ? ‘ಟಿಪ್ಪು ನಿಜ ಕನಸು’ಗಳಿಂದ ‘ಗಾಂಧೀ ಹತ್ಯೆಯ ಸತ್ಯ’ದವರೆಗೆ: ಇತಿಹಾಸ ತಿರುಚುವಿಕೆಯ ಸುತ್ತ ಮತ್ತೆ ವಿವಾದ

ಕಾರ್ಯಕ್ರಮದಲ್ಲಿ ಮೈಸೂರು ಸರ್ಕಾರಿ ಆಯುರ್ವೇದ ಸಂಶೋಧನಾ ಕೇಂದ್ರದ ಸಹಾಯಕ ನಿರ್ದೇಶಕ ಡಾ. ಲಕ್ಷ್ಮೀನಾರಾಯಣ ಶೆಣೈ, ಮೈಸೂರಿನ ಕಾವೇರಿ ಆಯುರ್ವೇದ ಮಹಾವಿದ್ಯಾಲಯದ ಡಾ. ಕೃಷ್ಣಪ್ರಸಾದ್, ಡಿಎಫ್‌ಆರ್‌ಎಲ್‌ನ ಡಾ. ರಾಮಕೃಷ್ಣ ಸೇರಿದಂತೆ ಮತ್ತಿತರರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸ್ಮಶಾನದಲ್ಲಿ ಹೂತ ಶವಗಳ ಅವಶೇಷ ಸಾಗಣೆ ಆರೋಪ: ಮೂವರು ಪೊಲೀಸ್ ವಶಕ್ಕೆ

ನಗರದ 13ನೇ ವಾರ್ಡ್‌ನ ಮಾರುತಿ ನಗರ ಸ್ಮಶಾನದಲ್ಲಿ ಹೂತು ಹಾಕಿದ ಶವಗಳ...

ಚಿಂತಾಮಣಿ ನಗರದಲ್ಲಿ ಧಾರಾಕಾರ ಮಳೆ ವಾಹನ ಸವಾರರು ಜನರ ಪರದಾಟ-ತಗ್ಗುಪ್ರದೇಶಗಳು ಜಲಾವೃತ

ನಗರದಲ್ಲಿ ರಾತ್ರಿ 8 ಸುಮಾರಿಗೆ ಸುರಿದ ಧಾರಾಕಾರ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು...

ರಾಯಚೂರು | ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಕೂಡಲೇ ಸಾಲಮನ್ನಾ ಮಾಡಿ: ನರಸಿಂಗ್‌ರಾವ್‌ ಸರರ್ಕಿಲ್‌ ಆಗ್ರಹ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬಡ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಾ...