ಗಜಪಡೆಯ ಮಾವುತರು, ಕಾವಾಡಿಗಳ ಮಕ್ಕಳಿಗಾಗಿ ಅರಮನೆ ಆವರಣದಲ್ಲಿ ತಾತ್ಕಾಲಿಕ ಶಾಲೆ

Date:

2026ರ ದಸರಾ ಮಹೋತ್ಸವಕ್ಕೆ ಆಗಮಿಸಿರುವ ಗಜಪಡೆಯ ಮಾವುತರು ಹಾಗೂ ಕಾವಾಡಿಗಳ ಮಕ್ಕಳಿಗೆ ಶಿಕ್ಷಣದಿಂದ ವಂಚನೆಯಾಗದಂತೆ ಮತ್ತು ಕಲಿಕೆಯ ಅಂತರವನ್ನು ನಿವಾರಿಸುವ ಉದ್ದೇಶದಿಂದ ಶಾಲಾ ಶಿಕ್ಷಣ ಇಲಾಖೆ ವತಿಯಿಂದ ಅರಮನೆ ಆವರಣದಲ್ಲಿ ತಾತ್ಕಾಲಿಕ ಶಾಲೆಯನ್ನು ಆರಂಭಿಸಲಾಗಿದೆ.

- Advertisement -

ತಾತ್ಕಾಲಿಕ ಶಾಲೆಗೆ ಜಿಲ್ಲಾ ಉಪನಿರ್ದೇಶಕ (ಆಡಳಿತ) ಡಿ.ಉದಯ ಕುಮಾರ್ ಅವರು ಇಂದು ಅಧಿಕೃತವಾಗಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ದಸರಾ ಕರ್ತವ್ಯಕ್ಕಾಗಿ ಕುಟುಂಬ ಸಮೇತರಾಗಿ ಆಗಮಿಸಿರುವ ಮಾವುತರು ಮತ್ತು ಕಾವಾಡಿಗಳ ಮಕ್ಕಳು ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಲು ಅಗತ್ಯ ಸೌಲಭ್ಯ ಕಲ್ಪಿಸುವುದು ಇಲಾಖೆಯ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು. ಮಕ್ಕಳು ಹಾಗೂ ಪೋಷಕರಿಗೆ ಪ್ರೋತ್ಸಾಹದಾಯಕ ಮಾತುಗಳನ್ನಾಡಿ, ಶಾಲೆಗೆ ಪ್ರತಿನಿತ್ಯ ಹಾಜರಾಗುವಂತೆ ಕರೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಹಾವೇರಿ | ಡಿಜಿಟಲ್ ಜನನ ಪ್ರಮಾಣ ಪತ್ರ ಗೊಂದಲ:...

ಹಳೆ ಮಾದರಿಯ ಕೈಬರಹ ಜನನ ಪ್ರಮಾನ ಪತ್ರದ ವಿಧಾನವನ್ನು ಬಿಟ್ಟು, ಡಿಜಿಟಲ್ ಜನನ ಪ್ರಮಾಣ ಪತ್ರ ನಿಯಮ ಜಾರಿಗೊಳಿಸಿದ್ದರಿಂದ ಹಲವು ಸಮಸ್ಯೆಗಳು ಎದುರಾಗಿದ್ದು, ಹದಿನಾರು ವರ್ಷಕ್ಕಿಂತ ಕೆಳಗಿನ ಮಕ್ಕಳಿಗೆ ಆಧಾರ್ ಕಾರ್ಡ್ ತಿದ್ದುಪಡಿ...

ವಲಸೆ ಹಳ್ಳಿಗರಿಗೆ ಮಾತ್ರವೇ? ಉದ್ಯೋಗಕ್ಕಾಗಿ ನಗರ ಸೇರುವ ಯುವಜನರೂ...

ಭಾರತವು ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆ ಹೊಂದಿರುವ ದೇಶ. ಹೆಚ್ಚುತ್ತಿರುವ ಜನಸಂಖ್ಯೆಯೊಂದಿಗೆ ಆಹಾರ, ಶಿಕ್ಷಣ, ಆರೋಗ್ಯ, ವಸತಿ ಮತ್ತು ಉದ್ಯೋಗದ ಬೇಡಿಕೆಯೂ ಹೆಚ್ಚುತ್ತಿದೆ. ದೇಶದ ಅಭಿವೃದ್ಧಿಗೆ ಮಾನವ ಸಂಪನ್ಮೂಲವೇ ದೊಡ್ಡ ಶಕ್ತಿಯಾಗಿದ್ದರೂ, ಆ...

ತಾತ್ಕಾಲಿಕ ಶಾಲೆಯಲ್ಲಿ ಮಕ್ಕಳಿಗೆ ಅಗತ್ಯವಾದ ಬರವಣಿಗೆ ಸಾಮಗ್ರಿಗಳನ್ನು ವಿತರಿಸಲಾಯಿತು. ಮಕ್ಕಳಿಗೆ ಸಿಹಿ ಹಂಚಿ, ಶಿಕ್ಷಣದ ಕಡೆಗೆ ಆಸಕ್ತಿ ಬೆಳೆಸಿಕೊಳ್ಳುವಂತೆ ಪ್ರೋತ್ಸಾಹಿಸಲಾಯಿತು. ದಸರಾ ಮಹೋತ್ಸವದ ಕಾರ್ಯಕ್ರಮಗಳು ಪೂರ್ಣಗೊಂಡು ಗಜಪಡೆಯು ವಾಪಸ್ ತೆರಳುವವರೆಗೂ ಪ್ರತಿನಿತ್ಯ ತಾತ್ಕಾಲಿಕ ಶಾಲೆ ನಡೆಯಲಿದೆ. ಮಕ್ಕಳ ಕಲಿಕೆಗೆ ಯಾವುದೇ ಅಡಚಣೆಯಾಗದಂತೆ ಶಿಕ್ಷಣ ಇಲಾಖೆ ಅಗತ್ಯ ವ್ಯವಸ್ಥೆ ಮಾಡಿದೆ. ಅಲ್ಲದೆ, ಅಕ್ಷಯ ಪಾತ್ರೆ ಫೌಂಡೇಷನ್ ವತಿಯಿಂದ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ವ್ಯವಸ್ಥೆಯನ್ನೂ ಕಲ್ಪಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಬದಲಿ ಕಾರ್ಮಿಕರಿಗೆ ಅನ್ಯಾಯ: ಖಂಡಿಸಿ ಪ್ರತಿಭಟನೆ

ಕಾರ್ಯಕ್ರಮದಲ್ಲಿ ಡಿವೈಪಿಸಿ ಶೋಭಾ, ಬಿಇಒ ಕೃಷ್ಣ, ಬಿಆರ್‌ಸಿ ಎಂ.ಬಿ. ಶ್ರೀಕಂಠಸ್ವಾಮಿ, ಎಸಿಎಫ್ ಪ್ರಭುಗೌಡ, ಆರ್‌ಎಫ್ ರೇಷ್ಮಾ ಸೇರಿದಂತೆ ವಲಯದ ಅನುಪಾಲನಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ರೈತರ ಸಮಸ್ಯೆಗಳಿಗೆ ಸ್ಪಂದಿಸಿ, ಕೂಡಲೇ ಸಾಲಮನ್ನಾ ಮಾಡಿ: ನರಸಿಂಗ್‌ರಾವ್‌ ಸರರ್ಕಿಲ್‌ ಆಗ್ರಹ

ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬಡ ಜನರಿಗೆ ಸುಳ್ಳು ಭರವಸೆಗಳನ್ನು ನೀಡುತ್ತಾ...

ಕೋಲಾರ | ಜಾನಪದ ಗಾಯಕ ಗೋ.ನಾ. ಸ್ವಾಮಿಗೆ ಕಲಾದರ್ಪಣ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

ಜಿಲ್ಲೆಯ ಸುಗಟೂರು ಗ್ರಾಮದ ಅಂತರರಾಷ್ಟ್ರೀಯ ಜಾನಪದ ಗಾಯಕ ಹಾಗೂ ಜಾನಪದ ಸಂರಕ್ಷಣಾ...