ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

Date:

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಳ್ಳುವ ಹಾಗೂ ಸಮಾಜವನ್ನು ನೋಡುವ ದೃಷ್ಟಿಕೋನವನ್ನು ವಿಸ್ತರಿಸುವ ಪಾಠಶಾಲೆಯಾಗಿದೆ ಎಂದು ನಿರಂತರ ಫೌಂಡೇಶನ್‌ನ ನಿರ್ದೇಶಕ ಶ್ರೀನಿವಾಸ ಪಾಲಹಳ್ಳಿ ಹೇಳಿದರು.

- Advertisement -

ಮೈಸೂರಿನ ಕಿರುರಂಗಮಂದಿರದಲ್ಲಿ ನಿರಂತರ ಫೌಂಡೇಶನ್ ವತಿಯಿಂದ ಆಯೋಜಿಸಿದ್ದ 20ನೇ ವರ್ಷದ ಸಹಜರಂಗೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಕಾಲೇಜು ವಿದ್ಯಾರ್ಥಿಗಳಿಗೆ ರಂಗಭೂಮಿಯ ಪರಿಚಯ ಮಾಡಿಸುವುದರ ಜೊತೆಗೆ ಅವರಲ್ಲಿ ಸೃಜನಶೀಲತೆ, ಆತ್ಮವಿಶ್ವಾಸ, ಸಾಮಾಜಿಕ ಅರಿವು ಮತ್ತು ಮಾನವೀಯ ಗುಣಗಳನ್ನು ಬೆಳೆಸುವುದು ಸಹಜರಂಗದ ಪ್ರಮುಖ ಉದ್ದೇಶವಾಗಿದೆ. ರಂಗಭೂಮಿಯಲ್ಲಿ ಪಾತ್ರ ನಿರ್ವಹಿಸುವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮತ್ತೊಬ್ಬರ ಬದುಕು, ಭಾವನೆ ಮತ್ತು ಅನುಭವಗಳನ್ನು ಅರ್ಥಮಾಡಿಕೊಳ್ಳಲು ಅವಕಾಶ ಪಡೆಯುತ್ತಾರೆ. ಇದರಿಂದ ಸಹಾನುಭೂತಿ, ತಂಡದ ಮನೋಭಾವ, ಜವಾಬ್ದಾರಿ ಮತ್ತು ಪರಸ್ಪರ ಗೌರವದಂತಹ ಗುಣಗಳು ಬೆಳೆಯುತ್ತವೆ. ಡಿಜಿಟಲ್ ಯುಗದಲ್ಲಿ ಮೊಬೈಲ್‌ ಮತ್ತು ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚುತ್ತಿರುವ ಸಂದರ್ಭದಲ್ಲಿ ಪರಸ್ಪರ ಮಾತನಾಡುವುದು, ಆಲಿಸುವುದು, ಕಾಯುವುದು ಹಾಗೂ ಒಟ್ಟಾಗಿ ಕೆಲಸ ಮಾಡುವಂತಹ ಬದುಕಿನ ಕೌಶಲ್ಯಗಳನ್ನು ರಂಗಭೂಮಿ ಕಲಿಸುತ್ತದೆ ಎಂದು ಅವರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸಂದರ್ಭದಲ್ಲಿ ಟೆರಿಸಿಯನ್ ಕಾಲೇಜಿನ ಇಂಗ್ಲಿಷ್ ವಿಭಾಗದ ಮುಖ್ಯಸ್ಥ ಚೇತನ್ ಎಂ. ಮಾತನಾಡಿ, ನಟರಂಗ ಥಿಯೇಟರ್ ಕ್ಲಬ್‌ ಹಾಗೂ ನಿರಂತರ ಫೌಂಡೇಶನ್‌ ಸಹಯೋಗದಲ್ಲಿ ವಿದ್ಯಾರ್ಥಿಗಳಿಗೆ ರಂಗಭೂಮಿಯ ಪ್ರಾಯೋಗಿಕ ತರಬೇತಿ ನೀಡಲಾಗುತ್ತಿದೆ. 25 ದಿನಗಳ ತರಬೇತಿ ಶಿಬಿರವು ವಿದ್ಯಾರ್ಥಿಗಳ ಆತ್ಮವಿಶ್ವಾಸ, ಮಾತುಗಾರಿಕೆ ಹಾಗೂ ಬದುಕಿನ ಕುರಿತ ದೃಷ್ಟಿಕೋನದಲ್ಲಿ ಬದಲಾವಣೆ ತಂದಿದೆ ಎಂದು ಹೇಳಿದರು.

ಕಾಲೇಜಿನ ಐಕ್ಯೂಎಸಿ ಸಂಚಾಲಕ ವಿವೇಕ್ ಚಾರ್ಲ್ಸ್ ಮಾತನಾಡಿ, ಕಾಲೇಜಿನಲ್ಲಿ ಮೊದಲ ಬಾರಿಗೆ ನಡೆದ ಒಂದು ತಿಂಗಳ ರಂಗ ತರಬೇತಿ ವಿದ್ಯಾರ್ಥಿಗಳ ಪ್ರತಿಭೆಯನ್ನು ಅನಾವರಣಗೊಳಿಸಲು ಉತ್ತಮ ವೇದಿಕೆಯಾಗಿದೆ. ದ್ವೇಷದ ಬದಲು ಪ್ರೀತಿ, ಮಾನವೀಯತೆ ಮತ್ತು ಸಹಬಾಳ್ವೆಯ ಮನೋಭಾವವನ್ನು ಬೆಳೆಸುವಲ್ಲಿ ರಂಗಭೂಮಿ ಮಹತ್ವದ ಪಾತ್ರ ವಹಿಸಲಿ ಎಂದು ಆಶಿಸಿದರು.

ಸಹಜರಂಗೋತ್ಸವದ ಅಂಗವಾಗಿ ವಿಲಿಯಂ ಶೇಕ್ಸ್‌ಪಿಯರ್‌ ಅವರ ‘ಎ ಮಿಡ್‌ಸಮ್ಮರ್ ನೈಟ್ಸ್ ಡ್ರೀಮ್’ ನಾಟಕವನ್ನು ಪ್ರದರ್ಶಿಸಲಾಯಿತು. ನಾಟಕವು ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಯಿತು.

ಈ ವಿಶೇಷ ವರದಿ ಓದಿದ್ದೀರಾ? SIR: ಕೊಡಗಿನ ಬ್ಯಾಡಗೊಟ್ಟದಲ್ಲಿ 66 ಮುಸ್ಲಿಂ ಮತಗಳ ಅಳಿಸುವಿಕೆಗೆ Form-7 ಅರ್ಜಿ

ಕಾರ್ಯಕ್ರಮದಲ್ಲಿ ಟೆರಿಸಿಯನ್ ಕಾಲೇಜಿನ ಪ್ರಾಂಶುಪಾಲರಾದ ರೇವ್. ಡಾ. ಸಿಸ್ಟರ್ ರೋಹಿಣಿ, ನಿರಂತರದ ಸುಗುಣ, ಹರಿಪ್ರಸಾದ್ ಬೇಸಾಯಿ, ಬದುಕು ಸಂಸ್ಥೆಯ ಧನಂಜಯ, ಡಾ. ರೇಖಾ, ಡಾ. ದೇವಕಿಧರ್ಮಿಸ್ಠೆ, ದೀಪಕ್ ಸಂಚಲನ, ಕೆಂಪರಾಜು ಸೇರಿದಂತೆ ವಿದ್ಯಾರ್ಥಿಗಳ ಪೋಷಕರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...