ಮೈಸೂರು | ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಇಲ್ಲ, ರೈತರ ಹಿತವೇ ಮೊದಲ ಆದ್ಯತೆ: ಡಾ. ಹೆಚ್.ಸಿ. ಮಹದೇವಪ್ಪ

Date:

ನನ್ನ ಮತಕ್ಷೇತ್ರವು ಕೃಷಿ ಪ್ರಧಾನ ಪ್ರದೇಶವಾಗಿದ್ದು, ಬಹುತೇಕ ಕುಟುಂಬಗಳು ಕೃಷಿಯನ್ನೇ ಅವಲಂಬಿಸಿ ಜೀವನ ಸಾಗಿಸುತ್ತಿವೆ. ಆದ್ದರಿಂದ ನೀರಾವರಿ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುವುದು ನನ್ನ ಗುರಿಯಾಗಿದೆ ಎಂದು ಮಾಜಿ ಸಚಿವರು ಹಾಗೂ ಶಾಸಕ ಡಾ. ಹೆಚ್‌.ಸಿ. ಮಹದೇವಪ್ಪ ಹೇಳಿದರು.

- Advertisement -

ಮೈಸೂರು ಜಿಲ್ಲೆಯ ಟಿ. ನರಸೀಪುರ ತಾಲ್ಲೂಕಿನ ಮುಡುಕುತೊರೆ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆ ವತಿಯಿಂದ ಶನಿವಾರ ಆಯೋಜಿಸಿದ್ದ ₹7 ಕೋಟಿ ವೆಚ್ಚದ ಏತ ನೀರಾವರಿ ಯೋಜನೆಗಳ ಪುನಶ್ಚೇತನ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, ಈ ಯೋಜನೆಯಿಂದ ಸುಮಾರು 2,800 ಎಕ್ಟರ್ ಕೃಷಿ ಭೂಮಿಗೆ ನೀರಾವರಿ ಸೌಲಭ್ಯ ದೊರೆಯಲಿದ್ದು, ಸಾವಿರಾರು ರೈತರಿಗೆ ಅನುಕೂಲವಾಗಲಿದೆ. ಈ ಭಾಗದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದ ಜನರೇ ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿದ್ದು, ಅವರ ಜೀವನೋಪಾಯ ಕೃಷಿಯೇ ಆಗಿದೆ. ಹೀಗಾಗಿ ನೀರಾವರಿ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಜನರು ನೆಮ್ಮದಿಯಿಂದ ಬದುಕುವುದೇ ತಮ್ಮ ಉದ್ದೇಶವಾಗಿದ್ದು, ಅವರ ಜೀವನಮಟ್ಟ ಸುಧಾರಿಸಿದಾಗಲೇ ಶಾಸಕ ಹಾಗೂ ಸಚಿವನಾಗಿ ತಮ್ಮ ಸೇವೆ ಸಾರ್ಥಕವಾಗುತ್ತದೆ ಎಂದರು. ರೈತರಿಗೆ ಸಮರ್ಪಕ ನೀರಾವರಿ ಸೌಲಭ್ಯ ಒದಗಿಸಿದರೆ ಅವರು ದೇಶದ ಅನ್ನದಾತರಾಗಿ ಮತ್ತಷ್ಟು ಶಕ್ತಿಶಾಲಿಯಾಗಿ ಕಾರ್ಯನಿರ್ವಹಿಸಲಿದ್ದಾರೆ. ಅಭಿವೃದ್ಧಿ ವಿಚಾರದಲ್ಲಿ ತಾವು ಎಂದಿಗೂ ರಾಜಕೀಯ ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು.

ಮುಡುಕುತೊರೆ ಏತ ನೀರಾವರಿ ಯೋಜನೆ 1983ರಲ್ಲಿ ಆರಂಭವಾಗಿದ್ದರೂ ಆರಂಭಿಕ ಹಂತದಲ್ಲಿ ಕೆಲವೇ ಗ್ರಾಮಗಳಿಗೆ ಮಾತ್ರ ಪ್ರಯೋಜನವಾಗುತ್ತಿತ್ತು. ಬಳಿಕ ಯೋಜನೆಯ ಐದು ಏತ ನೀರಾವರಿ ಯಂತ್ರಗಳು ನಿಷ್ಕ್ರಿಯಗೊಂಡಿದ್ದವು. 2005ರಲ್ಲಿ ಶಾಸಕರಾಗಿದ್ದ ವೇಳೆ ಯೋಜನೆಯನ್ನು ಪುನಶ್ಚೇತನಗೊಳಿಸಲಾಗಿತ್ತು. ಇದೀಗ ಎರಡು ಹಂತಗಳಲ್ಲಿ ₹7 ಕೋಟಿ ಅನುದಾನ ಬಿಡುಗಡೆ ಮಾಡಿ ಮತ್ತೊಮ್ಮೆ ಸಮಗ್ರವಾಗಿ ಪುನಶ್ಚೇತನಗೊಳಿಸಲಾಗಿದೆ ಎಂದು ವಿವರಿಸಿದರು.

ತಾಲ್ಲೂಕಿನ ಎಲ್ಲ ನೀರಾವರಿ ಪ್ರದೇಶಗಳನ್ನು ಅಭಿವೃದ್ಧಿಪಡಿಸಿ ರೈತರಿಗೆ ಶಾಶ್ವತ ನೀರಾವರಿ ಸೌಲಭ್ಯ ಕಲ್ಪಿಸುವ ಗುರಿ ಹೊಂದಲಾಗಿದೆ ಎಂದ ಅವರು, ತುರಗನೂರು ನೀರಾವರಿ ಯೋಜನೆಗೆ ಈಗಾಗಲೇ ₹100 ಕೋಟಿ ಅನುದಾನ ಮಂಜೂರಾಗಿದ್ದು ಕಾಮಗಾರಿ ಪ್ರಗತಿಯಲ್ಲಿದೆ. ಮೂಗೂರು ಗ್ರಾಮದಲ್ಲಿ ₹5 ಕೋಟಿ ವೆಚ್ಚದ ನೀರಾವರಿ ಯೋಜನೆಯೂ ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.

ಇದೇ ವೇಳೆ ಚಂದಳ್ಳಿ ಕೆರೆ, ಹೆಮ್ಮಿಗೆ ಕೆರೆ, ಮುಡುಕುತೊರೆಯ ಕಣ್ಣೀರುಕಟ್ಟೆ, ಬಣವೆ ಕೆರೆ ಸೇರಿದಂತೆ ಅಭಿವೃದ್ಧಿಗೆ ಅವಕಾಶವಿರುವ ಎಲ್ಲಾ ನೀರಾವರಿ ಮೂಲಗಳನ್ನು ಗುರುತಿಸಿ ಸಮಗ್ರ ಅಭಿವೃದ್ಧಿ ಯೋಜನೆ ರೂಪಿಸುವಂತೆ ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ಗೆ ಸ್ಥಳದಲ್ಲೇ ಸೂಚನೆ ನೀಡಿದರು.

ಈ ಸುದ್ಧಿ ಓದಿದ್ದೀರಾ?ಪಿರಿಯಾಪಟ್ಟಣ | ವಚನ ಸಾಹಿತ್ಯ ಕನ್ನಡದ ಅಮೂಲ್ಯ ಧನ; ಫ.ಗು. ಹಳಕಟ್ಟಿ ಅವರ ಸೇವೆ ಅಪರೂಪದ ಸಾಧನೆ: ಮೋಕ್ಷಪತಿ ಸ್ವಾಮೀಜಿ

ಕಾರ್ಯಕ್ರಮದಲ್ಲಿ ಮಾಜಿ ಶಾಸಕಿ ಸುನೀತಾ ವೀರಪ್ಪಗೌಡ, ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್, ಮೈಮುಲ್ ಮಾಜಿ ಅಧ್ಯಕ್ಷ ಚಲುವರಾಜು, ಆಪ್ತ ಸಹಾಯಕ ಗೋಪಾಲ್ ಹೊರೆಯಾಲ, ಶ್ರೀನಿವಾಸ್, ಬಸವರಾಜು, ವೈಧ್ಯನಾಥೇಶ್ವರ ಸಮೂಹ ದೇವಾಲಯಗಳ ಅಧ್ಯಕ್ಷ ನಾಗರಾಜು, ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ದಕ್ಷಿಣಾಮೂರ್ತಿ, ಮುಖಂಡರಾದ ಬೆಟ್ಟಳ್ಳಿ ಗೋಪಾಲ್, ಕುಕ್ಕೂರು ಗಣೇಶ್, ನರಸಿಂಹ, ಮಾದನಾಯಕ, ಪ್ರಸನ್ನ, ಸುಂದರನಾಯಕ, ಸುಧಾ, ಮಲ್ಲಾಜಮ್ಮ, ಕೋಕಿಲಾ, ಪರಶಿವಮೂರ್ತಿ, ಉಮೇಶ್, ಮಹದೇವಸ್ವಾಮಿ, ಮೇದನಿ ಕುಮಾರ್ ಸೇರಿದಂತೆ ಅನೇಕ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ರೈತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್ ಹುದ್ದೆಯಿಂದ ವಜಾಗೊಳಿಸಿ: ಬಸವರಾಜ ಎಸ್ ಆಗ್ರಹ

"ಪ್ರಜಾಪ್ರಭುತ್ವ ಭಾರತದಲ್ಲಿ ಜನರ ಅತ್ಯಂತ ಪವಿತ್ರವಾದದ್ದು. ಮತದಾನದ ಹಕ್ಕನ್ನೇ ಕಸಿದುಕೊಳ್ಳುತ್ತಿರುವ ಚುನಾವಣಾ...

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...