ಕಬ್ಬು ದರ ವಿಚಾರದಲ್ಲಿ ರೈತರನ್ನು ಒಡೆದಾಳಲು ಯತ್ನಿಸಿದರೆ ಉಗ್ರ ಹೋರಾಟ: ಕುರುಬೂರು ಶಾಂತಕುಮಾರ್ ಎಚ್ಚರಿಕೆ

Date:

ಕಬ್ಬಿನ ದರ ನಿಗದಿ ವಿಚಾರದಲ್ಲಿ ರೈತರನ್ನು ಒಡೆದಾಳುವ ನೀತಿಗೆ ರಾಜ್ಯ ಸರ್ಕಾರ ಮುಂದಾದರೆ ಉಗ್ರ ಹೋರಾಟ ನಡೆಸಲಾಗುವುದು ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಎಚ್ಚರಿಕೆ ನೀಡಿದರು.

- Advertisement -

ನಗರದ ಲೋಕೋಪಯೋಗಿ ಇಲಾಖೆ ಅತಿಥಿಗೃಹದಲ್ಲಿ ಬುಧವಾರ ನಡೆದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | ಪ್ರಜಾಪ್ರಭುತ್ವದ ಕಾವಲುಗಾರನಿಗೆ ʼಕನ್ನಡಕʼ ಬೇಕಿದೆ…

ತನ್ನ ನಿಷ್ಪಕ್ಷಪಾತ ಧೋರಣೆಯಿಂದಾಗಿ ಅತ್ಯುನ್ನತ ಗೌರವಕ್ಕೆ ಪಾತ್ರವಾಗಿದ್ದ ಚುನಾವಣೆ ಅಯೋಗ ಇಂದು ತನ್ನ ನಿಷ್ಪಕ್ಷಪಾತತೆಯನ್ನೇ ಜನ ಪರೀಕ್ಷೆಗೆ ಒಡ್ಡಿಕೊಂಡಿದೆ. ಆಯೋಗದ ನಿರ್ಣಯಗಳನ್ನು ಅನುಮಾನಿಸಿ ಬೀದಿ ಹೋರಾಟಗಳು, ಹರತಾಳಗಳು ಭುಗಿಲೆದ್ದಿವೆ. ಇಷ್ಟಕ್ಕೆ, ನಿಲ್ಲದೆ ಮುಖ್ಯ...

ಟ್ರಂಪ್‌ಗೆ ಮುಖಭಂಗ, ಯುರೋಪಿನಲ್ಲಿ ಆತಂಕ; ಜಗತ್ತಿನಲ್ಲಿ ಬದಲಾಗುತ್ತಿರುವ ಬಲಪಂಥೀಯ...

2026ರ ಅಮೆರಿಕ ಮತ್ತು ಬ್ರೆಜಿಲ್‌ನ ಚುನಾವಣಾ ಫಲಿತಾಂಶಗಳು ಜಾಗತಿಕ ಮಟ್ಟದಲ್ಲಿ ರಾಜಕೀಯ ಒಲವಿನ ಬದಲಾವಣೆಯನ್ನು ದೃಢಪಡಿಸಿವೆ. ಡೆಮಾಕ್ರಟರು ಸಾಧಿಸಿದ 255 ಹೌಸ್ ಮತ್ತು 54 ಸೆನೆಟ್ ಸ್ಥಾನಗಳ ಜಯ, ಹಾಗೂ ಬ್ರೆಜಿಲ್‌ನಲ್ಲಿನ ಅಧಿಕಾರ...

ಹೆಣ್ಣು-ಹಣ-ಚಾರಣ ಹಗರಣ: ಜಾಗತಿಕ ಚಿಪ್ ಸಾಮ್ರಾಜ್ಯದಲ್ಲಿ ಅಲ್ಲೋಲ ಕಲ್ಲೋಲ...

ಚಿಪ್ ಸಾಮ್ರಾಜ್ಯದ ಸಿಇಒ ಸುತ್ತ ಹೆಣೆದುಕೊಂಡಿರುವ ವಿವಾಹೇತರ ಸಂಬಂಧ, ಚೀನಿ ಚಾರಣ ಜಾಲ ಮತ್ತು ಭದ್ರತಾ ಆರೋಪಗಳು ಜಾಗತಿಕ ಮಾರುಕಟ್ಟೆಯನ್ನು ಅಲ್ಲೋಲ ಕಲ್ಲೋಲಗೊಳಿಸಿವೆ. ತಂತ್ರಜ್ಞಾನ ದೈತ್ಯರ ಒಳಸುಳಿಗಳೇನು? ಭಾರತದ ಡಿಜಿಟಲ್ ಹಾಗೂ ಸೆಮಿಕಂಡಕ್ಟರ್...

ಬೆಳಗಾವಿ ಜಿಲ್ಲೆಗೆ ಮಾತ್ರ ಸೀಮಿತವಾಗಿ ಕಬ್ಬಿನ ದರ ಘೋಷಿಸಿರುವ ಸಕ್ಕರೆ ಕಾರ್ಖಾನೆ ಮಾಲೀಕ ಹಾಗೂ ಸಚಿವ ಸತೀಶ್ ಜಾರಕಿಹೊಳಿ, ರೈತರಿಗೆ ಮೋಸದ ಬೆಲೆ ನಿಗದಿಪಡಿಸುವ ಮೂಲಕ ಚಳವಳಿಯನ್ನು ದಿಕ್ಕು ತಪ್ಪಿಸುವ ಪ್ರಯತ್ನ ಮಾಡಿದ್ದಾರೆ ಎಂದು ಆರೋಪಿಸಿದರು.

ಬೆಳಗಾವಿ ಜಿಲ್ಲೆಯ ಇತರೆ ಸಕ್ಕರೆ ಕಾರ್ಖಾನೆಗಳು ಸ್ವಯಂಪ್ರೇರಿತವಾಗಿ ಪ್ರತಿ ಟನ್ ಕಬ್ಬಿಗೆ 4 ಸಾವಿರ ರೂ. ಘೋಷಿಸಿವೆ. ಆದರೆ ಸಚಿವ ಸತೀಶ್ ಜಾರಕಿಹೊಳಿ ಅವರ ಕಾರ್ಖಾನೆ 3,600 ರೂ. ಘೋಷಿಸಿರುವುದು ರೈತರಿಗೆ ಮಾಡಿದ ಅನ್ಯಾಯವಾಗಿದೆ. ಇದು ರೈತರ ಹೋರಾಟವನ್ನು ದುರ್ಬಲಗೊಳಿಸುವ ಕುತಂತ್ರ ಎಂದು ಟೀಕಿಸಿದರು.

ಹಾವೇರಿ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್, ಮೈಸೂರು, ಚಾಮರಾಜನಗರ, ಗದಗ, ಬಳ್ಳಾರಿ ಹಾಗೂ ಮಂಡ್ಯ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳ ಕಬ್ಬು ಬೆಳೆಗಾರರು ನ್ಯಾಯಯುತ ದರಕ್ಕಾಗಿ ಕಳೆದ ನಾಲ್ಕು ತಿಂಗಳಿಂದ ನಿರಂತರ ಹೋರಾಟ ನಡೆಸುತ್ತಿದ್ದಾರೆ. ಆದರೂ ಸರ್ಕಾರ ಈವರೆಗೆ ಸೂಕ್ತ ತೀರ್ಮಾನ ಕೈಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯ ಕಬ್ಬು ಬೆಳೆಗಾರರ ಸಮನ್ವಯ ಸಮಿತಿ ಸರ್ಕಾರಕ್ಕೆ ನವೆಂಬರ್ 20ರವರೆಗೆ ಗಡುವು ನೀಡಿದೆ. ಅಷ್ಟರೊಳಗೆ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳದಿದ್ದರೆ ರೈತರು ಬೀದಿಗಿಳಿದು ಪ್ರಬಲ ಹೋರಾಟ ನಡೆಸಲು ಸಜ್ಜಾಗಬೇಕು ಎಂದು ಕರೆ ನೀಡಿದರು.

ಕಬ್ಬಿನ ದರ ನಿಗದಿ ಮಾನದಂಡ, ಕಬ್ಬಿನ ತೂಕದಲ್ಲಿ ನಡೆಯುವ ವಂಚನೆ ತಡೆಗಟ್ಟಲು ವಿವಿಧ ರಾಜ್ಯಗಳು ಕೈಗೊಂಡಿರುವ ಕ್ರಮಗಳು ಹಾಗೂ ಕಬ್ಬು ಪೂರೈಕೆಯ ಹಣ ಪಾವತಿ ವ್ಯವಸ್ಥೆ ಕುರಿತು ಚರ್ಚಿಸಲು ನವೆಂಬರ್ 16ರಂದು ಬೆಂಗಳೂರಿನಲ್ಲಿ ರಾಷ್ಟ್ರಮಟ್ಟದ ವಿಚಾರ ಸಂಕಿರಣ ಆಯೋಜಿಸಲಾಗಿದೆ ಎಂದು ತಿಳಿಸಿದರು.

ಈ ವಿಶೇಷ ಲೇಖನ ಓದಿದ್ದೀರಾ? ಹೊರಗೆ ‘ರಾಮ’-ಒಳಗೆ ‘ನಾಥೂರಾಮ’: ಗಾಂಧೀಜಿಯವರ ತಾತ್ವಿಕತೆಯ ಮುಂದೆ ಬಲಪಂಥೀಯ ರಾಜಕಾರಣದ ಆತಂಕ

ರಾಜ್ಯ ಕಬ್ಬು ಬೆಳೆಗಾರರ ಸಂಘದ ವತಿಯಿಂದ ನಡೆಯುವ ಈ ವಿಚಾರ ಸಂಕಿರಣದಲ್ಲಿ ಉತ್ತರ ಪ್ರದೇಶ, ಮಹಾರಾಷ್ಟ್ರ, ತಮಿಳುನಾಡು, ಪಂಜಾಬ್, ಹರಿಯಾಣ ಹಾಗೂ ಗುಜರಾತ್ ರಾಜ್ಯಗಳ ರೈತ ಮುಖಂಡರು ಭಾಗವಹಿಸಲಿದ್ದಾರೆ ಎಂದರು.

ಈ ವಿಶೇಷ ವರದಿ ಓದಿದ್ದೀರಾ? ಮೆಕ್ಕೆಜೋಳಕ್ಕೆ ಉತ್ತಮ ಬೆಲೆ: ಬರದಿಂದ ಉತ್ಪಾದನೆ ಶೇ.33ರಷ್ಟು ಕುಸಿತ, ರಾಜ್ಯದ ಕೃಷಿ-ಮಾರುಕಟ್ಟೆ ಚಿತ್ರಣವೇನು?

ಸಭೆಯಲ್ಲಿ ರೈತ ಮುಖಂಡರಾದ ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜು, ಕಿರಗಸೂರು ಶಂಕರ್, ಮುಕ್ಕಳ್ಳಿ ಮಹದೇವಸ್ವಾಮಿ, ಕೆ.ಜಿ. ಗುರುಸ್ವಾಮಿ, ಮಾರ್ಬಳ್ಳಿ ನೀಲಕಂಠಪ್ಪ, ಲಕ್ಷ್ಮೀಪುರ ವೆಂಕಟೇಶ್, ಬಿ.ಪಿ. ಪರಶಿವಮೂರ್ತಿ, ಸಿದ್ದೇಶ್, ಕೆಂಡಗಣಪ್ಪ, ಕುರುಬೂರು ಪ್ರದೀಪ್, ಕಿರಗಸೂರು ಪ್ರಸಾದ್, ಕುರುಬೂರು ಗೌರಿಶಂಕರ್, ವಾಜಮಂಗಲ ನಾಯಕ್, ನಾಗೇಶ್, ಮಹಾದೇವು, ಅಂಬಳೆ ಮಂಜುನಾಥ್, ಕೋಟೆ ಸುನೀಲ್, ಕೆಂಡಗಣ್ಣಸ್ವಾಮಿ, ಕೂರ್ಗಳ್ಳಿ ರವಿಕುಮಾರ್, ಶಿವಣ್ಣ, ಮಹೇಶ್, ಬಸವರಾಜ, ಮಿಲಿಟರಿ ಕುಮಾರ್, ನಂಜುಂಡ, ಉಮೇಶ್, ನಾಗೇಂದ್ರ, ಪ್ರಭಾಕರ್, ರೂಪ, ಪ್ರಭಾಮಣಿ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಬರಗಾಲದ ಸಂಕಷ್ಟದ ನಡುವೆ ಬೆಲೆ ಏರಿಕೆ: ಸರ್ಕಾರದ ವಿರುದ್ಧ ಆಕ್ರೋಶ

ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಸಿಪಿಐಎಂ ಜಿಲ್ಲಾ ಸಮಿತಿ ವತಿಯಿಂದ...

ಹಾವೇರಿ‌ | ತಾಂತ್ರಿಕ ದೋಷದಿಂದ ಹೆಲಿಕಾಪ್ಟರ್ ಭೂಸ್ಪರ್ಶ

ತಾಂತ್ರಿಕ ದೋಷ ಕಾಣಿಸಿಕೊಂಡಿದ್ದರಿಂದ ಭಾರತೀಯ ವಾಯುಪಡೆಗೆ ಸೇರಿದ ಹೆಲಿಕಾಪ್ಟರ್‌ ಶಿಗ್ಗಾವಿ ತಾಲೂಕಿನಲ್ಲಿ...

ಉಡುಪಿ | ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟಕ್ಕೆ ಚಾಲನೆ

ಮಂಗಳೂರು ವಿಶ್ವವಿದ್ಯಾನಿಲಯ, ಜಿಲ್ಲಾ ಪಂಚಾಯತ್ ಉಡುಪಿ, ಯುವಜನ ಸಬಲೀಕರಣ ಮತ್ತು ಕ್ರೀಡಾ...

ದಕ್ಷಿಣ ಕನ್ನಡ | ಬ್ಯಾರಿ ಮಹಿಳಾ ಸಾಹಿತ್ಯ ಸಮ್ಮೇಳನದ ಅಂಗವಾಗಿ ಸಾಂಪ್ರದಾಯಿಕ ಆಹಾರ ಸ್ಪರ್ಧೆ; ಆಹ್ವಾನ

ಮಂಗಳೂರು : ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯು ನವೆಂಬರ್ 18 ಬುಧವಾರದಂದು...