ಕಾಂಗ್ರೆಸ್ ಸಂಘಟನೆ ಬಲಪಡಿಸಲು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ: ಡಾ. ಯತೀಂದ್ರ ಸಿದ್ದರಾಮಯ್ಯ

Date:

ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು ಎಂದು ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಕರೆ ನೀಡಿದರು.

- Advertisement -

ಮೈಸೂರಿನ ಜೆ.ಪಿ. ಫಾರ್ಚೂನ್ ಹೋಟೆಲ್‌ನಲ್ಲಿ ಮೈಸೂರು ನಗರ ಹಾಗೂ ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಮತ್ತು ಪಕ್ಷದ ಪ್ರಮುಖ ಮುಖಂಡರೊಂದಿಗೆ ಸಭೆ ನಡೆಸಿ, ಪಕ್ಷದ ಸಂಘಟನೆ ಹಾಗೂ ಮುಂದಿನ ಕಾರ್ಯಚಟುವಟಿಕೆಗಳ ಕುರಿತು ಅವರು ಸಮಾಲೋಚನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ಜನರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳು ಮತ್ತು ಸರ್ಕಾರದ ಜನಪರ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸುವ ಕೆಲಸ ಮಾಡಬೇಕು. ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ಶ್ರಮಿಸುವ ಪ್ರತಿಯೊಬ್ಬರಿಗೂ ಸೂಕ್ತ ಸ್ಥಾನಮಾನ ಹಾಗೂ ಅವಕಾಶಗಳನ್ನು ದೊರಕಿಸಿಕೊಡಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು. ಸಂಘಟನೆಗಾಗಿ ಕಾರ್ಯಕರ್ತರು ನಡೆಸುವ ಶ್ರಮವನ್ನು ಪಕ್ಷ ಗುರುತಿಸಿ ಸೂಕ್ತ ಮನ್ನಣೆ ನೀಡಲಿದೆ ಎಂದು ಭರವಸೆ ನೀಡಿದರು.

ಪಕ್ಷದ ಸಂಘಟನೆಯನ್ನು ಇನ್ನಷ್ಟು ಚುರುಕುಗೊಳಿಸುವ ಉದ್ದೇಶದಿಂದ ತಿಂಗಳಿಗೊಮ್ಮೆಯಾದರೂ ಸಭೆ ಸೇರಿ ಸಂಘಟನೆಯ ಪ್ರಗತಿ ಹಾಗೂ ಕಾರ್ಯಕರ್ತರು ಎದುರಿಸುತ್ತಿರುವ ಸಮಸ್ಯೆಗಳ ಕುರಿತು ಚರ್ಚಿಸಲು ಸಭೆಯಲ್ಲಿ ನಿರ್ಧರಿಸಲಾಯಿತು. ಅಲ್ಲದೆ, ಮುಂಬರುವ ಸಂವಿಧಾನ ದಿನಾಚರಣೆಯನ್ನು ಮೈಸೂರಿನಲ್ಲಿ ಅತ್ಯಂತ ಯಶಸ್ವಿಯಾಗಿ ಆಯೋಜಿಸುವ ನಿಟ್ಟಿನಲ್ಲಿ ಎಲ್ಲ ಮುಖಂಡರು ಮತ್ತು ಕಾರ್ಯಕರ್ತರು ಒಗ್ಗಟ್ಟಿನಿಂದ ಕೈಜೋಡಿಸಿ ಶ್ರಮಿಸಬೇಕು ಎಂದು ಕರೆ ನೀಡಿದರು.

ಈ ವಿಶೇಷ ಲೇಖನ ಓದಿದ್ದೀರಾ? ಗಾಂಧೀಜಿ ತತ್ವಗಳ ಪ್ರಸ್ತುತತೆ: ಸಮಾನತೆಯ ಸಮಾಜಕ್ಕೆ ಶ್ರಮದ ಘನತೆಯೇ ಅಡಿಪಾಯ

ಸಭೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಎಂ. ನಾರಾಯಣಸ್ವಾಮಿ, ಮೈಸೂರು ನಗರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಆರ್. ಮೂರ್ತಿ, ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬೀರಿಹುಂಡಿ ಬಸವಣ್ಣ, ನಿಕಟಪೂರ್ವ ಅಧ್ಯಕ್ಷ ಡಾ. ಬಿ.ಜೆ. ವಿಜಯ್ ಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಲವು ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಸಹಕಾರಿ ಬ್ಯಾಂಕ್‌ಗಳ ಬಲವರ್ಧನೆಯಿಂದ ಸಮಾಜದ ಪ್ರಗತಿ ಸಾಧ್ಯ : ವಿನಯಕುಮಾರ್ ಸೊರಕೆ

ಕರ್ನಾಟಕ ರಾಜ್ಯ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಪಡುಬಿದ್ರಿ...

ಮಂಗಳೂರು | ಮಂಗಳ ಕ್ರೀಡಾಂಗಣ ಸಮಗ್ರ ಅಭಿವೃದ್ಧಿಗೆ ಸಚಿವರಿಂದ ಸ್ಥಳ ಪರಿಶೀಲನೆ

ನಗರದ ಮಂಗಳಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ಜಿಲ್ಲಾ ಉಸ್ತುವಾರಿ ಸಚಿವ...

ಸರ್ಕಾರದ ನಿಯಮಾವಳಿಗಳ ಪ್ರಕಾರ ವ್ಯಾಪಾರಸ್ಥರಿಗೆ ಮಳಿಗೆ ಹಂಚಿಕೆ ಮಾಡಿ : ಶಾಸಕ ಪಿ. ರವಿಕುಮಾರ್ ಗೌಡ

ಮಂಡ್ಯ ನಗರಸಭೆ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಿಸಲಾಗಿರುವ 174 ವಾಣಿಜ್ಯ ಮಳಿಗೆಗಳನ್ನು ಸರ್ಕಾರದ...

ಉಡುಪಿ | ಅಪರಾಧಿಗಳಿಗೆ ಜಾಮೀನು ನೀಡಿರುವುದು ಆಘಾತಕಾರಿ: ಸಾಲಿಡಾರಿಟಿ ಯೂತ್ ಮೂವ್ಮೆಂಟ್

2002ರ ಗುಜರಾತ್ ನರಮೇಧದ ಸಂದರ್ಭದಲ್ಲಿ ಗರ್ಭಿಣಿ ಬಿಲ್ಕಿಸ್ ಬಾನು ಮೇಲೆ ಸಾಮೂಹಿಕ...