ಸರಗೂರು | ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Date:

ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆಯನ್ನು ಜಾಗೃತಿ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು.

- Advertisement -

ಜನಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಟಿ. ರವಿಕುಮಾರ್, ವಿಶ್ವ ಜನಸಂಖ್ಯಾ ದಿನವನ್ನು ಪ್ರತಿ ವರ್ಷ ಜುಲೈ 11ರಂದು ಆಚರಿಸಲಾಗುತ್ತಿದ್ದು, ಹೆಚ್ಚುತ್ತಿರುವ ಜನಸಂಖ್ಯೆಯಿಂದ ಉಂಟಾಗುವ ಸವಾಲುಗಳು, ಕುಟುಂಬ ಯೋಜನೆ ಹಾಗೂ ಆರೋಗ್ಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದೇ ಈ ದಿನದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

ಈ ವರ್ಷದ ವಿಶ್ವ ಜನಸಂಖ್ಯಾ ದಿನದ ಘೋಷವಾಕ್ಯ ‘ಯುವಜನರ ಆಸೆ ಮತ್ತು ಆಕಾಂಕ್ಷೆಗಳನ್ನು ಸಾಕಾರಗೊಳಿಸುವುದು’ ಆಗಿದೆ ಎಂದು ತಿಳಿಸಿದ ಅವರು, 1987ರ ಜುಲೈ 11ರಂದು ವಿಶ್ವದ ಜನಸಂಖ್ಯೆ ಐದು ಬಿಲಿಯನ್ (500 ಕೋಟಿ) ತಲುಪಿದ ಹಿನ್ನೆಲೆಯಲ್ಲಿ ಆ ದಿನವನ್ನು ‘ಐದು ಬಿಲಿಯನ್ ದಿನ’ ಎಂದು ಗುರುತಿಸಲಾಯಿತು. ಬಳಿಕ 1989ರಲ್ಲಿ ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮ (UNDP) ವಿಶ್ವ ಜನಸಂಖ್ಯಾ ದಿನವನ್ನು ಅಧಿಕೃತವಾಗಿ ಆಚರಿಸಲು ಚಾಲನೆ ನೀಡಿತು ಎಂದು ವಿವರಿಸಿದರು.

ಅತಿಹೆಚ್ಚು ಜನಸಂಖ್ಯೆಯಿಂದ ಉಂಟಾಗುವ ಬಡತನ, ನಿರುದ್ಯೋಗ, ಪರಿಸರ ಹಾನಿ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು, ಕುಟುಂಬ ಯೋಜನೆಯ ಮಹತ್ವ ತಿಳಿಸುವುದು, ಮಹಿಳೆಯರ ಆರೋಗ್ಯ ಮತ್ತು ಲಿಂಗ ಸಮಾನತೆಗೆ ಉತ್ತೇಜನ ನೀಡುವುದು, ಬಡತನ ನಿರ್ಮೂಲನೆ ಹಾಗೂ ಮಾನವ ಹಕ್ಕುಗಳ ರಕ್ಷಣೆಗೆ ಒತ್ತು ನೀಡುವುದು ಮತ್ತು ಸುಸ್ಥಿರ ಭವಿಷ್ಯ ನಿರ್ಮಾಣದಲ್ಲಿ ಕುಟುಂಬ ಯೋಜನೆಯ ಪಾತ್ರವನ್ನು ಜನರಿಗೆ ಮನವರಿಕೆ ಮಾಡಿಕೊಡುವುದು ಈ ಆಚರಣೆಯ ಪ್ರಮುಖ ಉದ್ದೇಶಗಳಾಗಿವೆ ಎಂದು ಹೇಳಿದರು.

ಈ ವಿಶೇಷ ಸುದ್ದಿ ಓದಿದ್ದೀರಾ?SIR: ಸಂಬಂಧಗಳ ಗೊಂದಲ-ನಿವೃತ್ತ ಸೇನಾಧಿಕಾರಿಯ ಅನುಭವ ಎತ್ತಿದ ಗಂಭೀರ ಪ್ರಶ್ನೆಗಳು

ಕಾರ್ಯಕ್ರಮದಲ್ಲಿ ಆಡಳಿತ ವೈದ್ಯಾಧಿಕಾರಿ ಡಾ. ಶರತ್ ಎಚ್.ಎಸ್., ತಾಲ್ಲೂಕು ಮೇಲ್ವಿಚಾರಕರು, ಆಶಾ ಕಾರ್ಯಕರ್ತೆಯರು, ಆಸ್ಪತ್ರೆಯ ಸಿಬ್ಬಂದಿ, ಗ್ರಾಮಸ್ಥರು ಹಾಗೂ ಸಾರ್ವಜನಿಕರು ಇದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಆಹಾರ ಕಲಬೆರಕೆಗೆ ಕಡಿವಾಣ, ಕ್ಯಾನ್ಸರ್ ಔಷಧ ದರ ಇಳಿಕೆಗೆ ಯತ್ನ: ಸಚಿವ ಖಾದರ್‌ಗೆ ಹೋಟೆಲ್ ಸಂಘದ ಶಹಬ್ಬಾಸ್!

ರಾಜ್ಯದಲ್ಲಿ ಆಹಾರ ಸುರಕ್ಷತೆ, ಹೋಟೆಲ್‌ಗಳ ಸ್ವಚ್ಛತೆ ಹಾಗೂ ಕ್ಯಾನ್ಸರ್ ಔಷಧಗಳ ಬೆಲೆ...

ಬಾಗಲಕೋಟೆ |ಕಬ್ಬಿಗೆ ₹5,500 ಬೆಲೆ ನಿಗದಿಪಡಿಸಲು ಭಾರತೀಯ ಕಿಸಾನ ಸಂಘ ಆಗ್ರಹ

ಬರಗಾಲ, ಅಂತರ್ಜಲ ಕುಸಿತ, ಸುಡುಬಿಸಿಲು ಹಾಗೂ ಕೃಷಿ ವೆಚ್ಚ ಹೆಚ್ಚಳದಿಂದ ಸಂಕಷ್ಟದಲ್ಲಿರುವ...

ಮಂಗಳೂರು | ಕಾಂತಪುರಂ ಶೇಖ್ ಅಬೂಬಕರ್ ಅಹ್ಮದ್ ಅವರಿಗೆ ಯೆನೆಪೋಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್

ಪ್ರಸಿದ್ದ ಮುಸ್ಲಿಂ ಧಾರ್ಮಿಕ ಪಂಡಿತ, ಕಲ್ಲಿಕೋಟೆಯ ಮರ್ಕಝ್ ಸಂಸ್ಥೆಗಳ ರೂವಾರಿ ಮುಸ್ಲಿಂ...

ಬಾಗಲಕೋಟೆ | ಪೋಲಿಯೋ ಮುಕ್ತ ಸಮಾಜದ ಸಂಕಲ್ಪ: ಬಾಗಲಕೋಟೆಯಿಂದ ವಿಜಯಪುರದವರೆಗೆ 190 ಕಿ.ಮೀ ಜಾಗೃತಿ ರ್ಯಾಲಿ

ಪೋಲಿಯೋ ಮುಕ್ತ ಸಮಾಜ ನಿರ್ಮಾಣದ ಸಂಕಲ್ಪದೊಂದಿಗೆ ರೋಟರಿ ಕ್ಲಬ್ ಬಾಗಲಕೋಟೆ ವತಿಯಿಂದ...