ಮೈಸೂರು | ವಿಶ್ವ ಹಾವುಗಳ ದಿನಾಚರಣೆ: ‘ಹಾವುಗಳ ಬಗ್ಗೆ ಅನಗತ್ಯ ಭಯ ಬೇಡ’: ಸ್ನೇಕ್ ಶ್ಯಾಮ್ ಕರೆ

Date:

ಹಾವುಗಳ ಬಗ್ಗೆ ಇರುವ ಅನಗತ್ಯ ಭಯ ಮತ್ತು ತಪ್ಪು ಕಲ್ಪನೆಗಳಿಂದ ಅನೇಕ ಹಾವುಗಳನ್ನು ಕೊಲ್ಲಲಾಗುತ್ತಿದೆ. ಎಲ್ಲಾ ಹಾವುಗಳೂ ವಿಷಕಾರಿಯಲ್ಲ. ಹಾವುಗಳನ್ನು ಸಂರಕ್ಷಿಸುವುದು ಪರಿಸರ ಸಮತೋಲನ ಕಾಪಾಡಲು ಅತ್ಯಗತ್ಯ ಎಂದು ಅಂತರರಾಷ್ಟ್ರೀಯ ಉರಗ ರಕ್ಷಕ ಸ್ನೇಕ್ ಶ್ಯಾಮ್ ಹೇಳಿದರು.

- Advertisement -

ಮೈಸೂರು ನಗರದ ಆರ್‌ಟಿಒ ಸಮೀಪ ಕೆಎಂಪಿಕೆ ಚಾರಿಟೇಬಲ್ ಟ್ರಸ್ಟ್ ಹಾಗೂ ಪರಿಸರ ಸ್ನೇಹಿ ತಂಡದ ಆಶ್ರಯದಲ್ಲಿ ವಿಶ್ವ ಹಾವುಗಳ ದಿನಾಚರಣೆ ಅಂಗವಾಗಿ, 98 ಸಾವಿರಕ್ಕೂ ಹೆಚ್ಚು ಹಾವುಗಳನ್ನು ಸುರಕ್ಷಿತವಾಗಿ ರಕ್ಷಿಸಿ ಸಂರಕ್ಷಿಸಿರುವ ಸ್ನೇಕ್ ಶ್ಯಾಮ್ ಅವರಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಅರಣ್ಯ ಇಲಾಖೆ ವನ್ಯಜೀವಿ ಮತ್ತು ಪರಿಸರ ಸಂರಕ್ಷಣೆಗೆ ಕೈಗೊಂಡಿರುವ ಕಾರ್ಯಗಳಿಗೆ ಸಾರ್ವಜನಿಕರು ಸಹಕರಿಸಬೇಕು ಎಂದು ಮನವಿ ಮಾಡಿದ ಅವರು, ನಾಗರಹಾವು ಮತ್ತು ಕಾಳಿಂಗ ಸರ್ಪಗಳು ವಿಷಕಾರಿ. ಆದರೆ ಹಪ್ಪಟೆ ಹಾವು, ಕೇರೆ ಹಾವು, ಹಸಿರು ಹಾವು ಸೇರಿದಂತೆ ಹಲವು ಜಾತಿಯ ಹಾವುಗಳು ವಿಷಕಾರಿಯಲ್ಲ. ಕೆಲವು ಹಾವುಗಳ ವಿಷದ ಪ್ರಮಾಣ ಕಡಿಮೆಯಿದ್ದರೂ, ಯಾವುದೇ ಹಾವು ಕಚ್ಚಿದರೆ ನಿರ್ಲಕ್ಷ್ಯ ಮಾಡದೆ ತಕ್ಷಣ ವೈದ್ಯಕೀಯ ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ನೀಡಿದರು.

ಹಾವು ಕಚ್ಚಿದಾಗ ಹೆಚ್ಚಿನವರು ಭಯ ಮತ್ತು ಆತಂಕದಿಂದಲೇ ಪ್ರಾಣ ಕಳೆದುಕೊಳ್ಳುವ ಸಾಧ್ಯತೆ ಇರುತ್ತದೆ. ಆದ್ದರಿಂದ ಹಾವು ಕಡಿತಕ್ಕೊಳಗಾದವರಿಗೆ ಧೈರ್ಯ ತುಂಬಿ, ಯಾವುದೇ ಮೂಢನಂಬಿಕೆಗಳಿಗೆ ಒಳಗಾಗದೆ ಸಾಧ್ಯವಾದಷ್ಟು ಬೇಗ ಸಮೀಪದ ಆಸ್ಪತ್ರೆಗೆ ಕರೆದೊಯ್ಯುವುದು ಅತ್ಯಗತ್ಯ ಎಂದು ತಿಳಿಸಿದರು.

ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಹಾವು ಕಡಿತಕ್ಕೆ ವಿಶೇಷ ಚಿಕಿತ್ಸಾ ಕೊಠಡಿಗಳು ಮತ್ತು ಅಗತ್ಯ ಸೌಲಭ್ಯಗಳನ್ನು ಮೀಸಲಿಡಬೇಕು ಎಂಬ ಕುರಿತು ಈಗಾಗಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ. ಸರ್ಕಾರ ಈ ಬೇಡಿಕೆಯನ್ನು ಶೀಘ್ರ ಜಾರಿಗೆ ತರಬೇಕು ಎಂದು ಅವರು ಆಗ್ರಹಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಲಿಂಗರಾಜು, ಕೋವಿಡ್ ಸಂಕಷ್ಟದ ಸಂದರ್ಭದಲ್ಲಿಯೂ ಮನೆಗಳಿಗೆ ನುಗ್ಗಿದ ಹಾವುಗಳನ್ನು ಸುರಕ್ಷಿತವಾಗಿ ರಕ್ಷಿಸಿ ಸಾರ್ವಜನಿಕರ ಸೇವೆ ಮಾಡಿದ ಸ್ನೇಕ್ ಶ್ಯಾಮ್ ಅವರ ಕಾರ್ಯ ಶ್ಲಾಘನೀಯವಾಗಿದೆ ಎಂದರು.

ಈ ವಿಶೇಷ ಸುದ್ದಿ ಓದಿದ್ದೀರಾ?SIR ಪರಿಷ್ಕೃತ ವೇಳಾಪಟ್ಟಿ: ರಾಜ್ಯದಲ್ಲಿ ಶೇ.95.69ರಷ್ಟು ಎಣಿಕೆ ನಮೂನೆ ವಿತರಣೆ; ಜಿಲ್ಲಾವಾರು ಪ್ರಗತಿ ಹೇಗಿದೆ?

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾಗಿರುವ ಸ್ನೇಕ್ ಶ್ಯಾಮ್ ಅವರು 98 ಸಾವಿರಕ್ಕೂ ಅಧಿಕ ಹಾವುಗಳನ್ನು ಸಂರಕ್ಷಿಸಿರುವುದು ಅಪರೂಪದ ಸಾಧನೆ. ಪರಿಸರ ಸಂರಕ್ಷಣೆಯ ಜೊತೆಗೆ ಧಾರ್ಮಿಕ ಕೇಂದ್ರವನ್ನೂ ಸ್ಥಾಪಿಸಿ ಸಮಾಜಮುಖಿ ಕಾರ್ಯಗಳನ್ನು ನಡೆಸುತ್ತಿದ್ದಾರೆ. ಅವರ ಪರಿಸರ ಕಾಳಜಿ ಮತ್ತು ಉರಗ ಸಂರಕ್ಷಣೆಯ ಸೇವೆಯನ್ನು ರಾಜ್ಯ ಸರ್ಕಾರ ಪಠ್ಯಪುಸ್ತಕಗಳಲ್ಲಿ ಅಳವಡಿಸಿ, ಶಾಲಾ ಮಕ್ಕಳಲ್ಲಿ ಪರಿಸರ ಹಾಗೂ ವನ್ಯಜೀವಿ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಒತ್ತಾಯಿಸಿದರು.

ಈ ವಿಶೇಷ ಸುದ್ದಿ ಓದಿದ್ದೀರಾ?ರಾಜ್ಯದ ಟಾಪ್-5 ಗುರಿಯತ್ತ ಚಾಮರಾಜನಗರ: ಎಸ್ಸೆಸ್ಸೆಲ್ಸಿ ಫಲಿತಾಂಶ ಹೆಚ್ಚಳಕ್ಕೆ ಶಿಕ್ಷಣ ಇಲಾಖೆಯ ಮಹತ್ವದ ಯೋಜನೆ

ಕಾರ್ಯಕ್ರಮದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಲಿಂಗರಾಜು, ಮೃಗಾಲಯ ಪ್ರಾಧಿಕಾರದ ಮಾಜಿ ಅಧ್ಯಕ್ಷ ಶಿವಕುಮಾರ್, ಕೆ.ಆರ್. ಬ್ಯಾಂಕ್ ಅಧ್ಯಕ್ಷ ಬಸವರಾಜ್ ಬಸಪ್ಪ, ಜಿ. ರಾಘವೇಂದ್ರ, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಎಸ್.ಎನ್. ರಾಜೇಶ್, ಸಂದೇಶ್, ಪ್ರಮೋದ್ ಗೌಡ, ವಾಣಿಶ್, ಎಚ್.ಪಿ. ಚೇತನ್, ನಂದಕುಮಾರ್, ಸುಪ್ರೀತ್, ಮಹಾನ್ ಶ್ರೇಯಸ್ ಸೇರಿದಂತೆ ಹಲವಾರು ಗಣ್ಯರು ಹಾಗೂ ಪರಿಸರ ಪ್ರೇಮಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೊಬೈಲ್ ಕ್ಯಾಂಟೀನ್ ವಾಹನ ಖರೀದಿಗೆ ಸಹಾಯಧನ: ಅರ್ಜಿ ಸಲ್ಲಿಕೆ ಅವಧಿ ಅ.23ರವರೆಗೆ ವಿಸ್ತರಣೆ

ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2025-26ನೇ ಸಾಲಿನ ಎಸ್‌ಸಿಎಸ್‌ಪಿ ಯೋಜನೆಯಡಿ ಪರಿಶಿಷ್ಟ ಜಾತಿಯ...

ಬಬಲೇಶ್ವರ ನಾಕಾ ರಸ್ತೆ ಕಾಮಗಾರಿ ವಿಳಂಬಕ್ಕೆ ಆಪ್ ಆಕ್ರೋಶ; ಪಾಲಿಕೆಗೆ ಒಂದು ವಾರ ಗಡುವು

ಅಭಿವೃದ್ಧಿ ಕಾಮಗಾರಿ ಹೆಸರಿನಲ್ಲಿ ಬಬಲೇಶ್ವರ ನಾಕಾದಿಂದ ನಾಯರಾ ಪೆಟ್ರೋಲ್ ಪಂಪ್‌ವರೆಗಿನ ರಸ್ತೆಯ...

ಕೋಲಾರ | ಕಾಂಗ್ರೆಸ್ ಅಭ್ಯರ್ಥಿ ಶಶಿ ಹುಲಿಕುಂಟೆಮಠ್ ಪರ ಮತ ಯಾಚನೆ

ಮುಂಬರುವ ಜಿ.ಪಂ,‌ ತಾ.ಪಂ. ಗ್ರಾ.ಪಂ.ಗೆ ಈ ಚುನಾವಣೆಯೇ ಪ್ರಮುಖ ದಾರಿ. ನಂತರ...