ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

Date:

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಕಾರ್ಯವೈಖರಿಯನ್ನು ಖಂಡಿಸಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ಮೈಸೂರು ನಗರದ ರಾಮಸ್ವಾಮಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.

- Advertisement -

ಪ್ರತಿಭಟನೆಯ ಭಾಗವಾಗಿ ಜ್ಞಾನೇಶ್ ಕುಮಾರ್ ಅವರಿಗೆ ಆರ್‌ಎಸ್‌ಎಸ್ ಸಮವಸ್ತ್ರವನ್ನು ಸಾಂಕೇತಿಕವಾಗಿ ಅಂಚೆ ಮೂಲಕ ಕಳುಹಿಸಲಾಯಿತು. ಚುನಾವಣಾ ಆಯೋಗದಂತಹ ಸ್ವತಂತ್ರ ಸಾಂವಿಧಾನಿಕ ಸಂಸ್ಥೆಯ ಮುಖ್ಯಸ್ಥರು ಆಡಳಿತ ಪಕ್ಷ ಅಥವಾ ಅದರ ಸೈದ್ಧಾಂತಿಕ ಸಂಘಟನೆಯ ಪರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ರೀತಿಯ ಪ್ರತಿಭಟನೆ ನಡೆಸಲಾಗಿದೆ ಎಂದು ಪ್ರತಿಭಟನಾಕಾರರು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ನೂರು ಡಿ ಕೆ ಶಿವಕುಮಾರ್‌ ಹೆಗ್ಗಡೆಯವರೊಂದಿಗಿದ್ದಾರೆ- ಹಳೆಯ ಹೇಳಿಕೆಗೆ...

ಅಕ್ರಮ ಶವ ಹೂತ ಪ್ರಕರಣದ ಎಸ್‌ಐಟಿ ತನಿಖೆ ನಡೆಯುತ್ತಿದ್ದಾಗ "ಇದು ಧರ್ಮಸ್ಥಳದ ವಿರುದ್ಧದ ಷಡ್ಯಂತ್ರ" ಎಂದು ಸದನದಲ್ಲಿ ವಿಪಕ್ಷಗಳು ಗದ್ದಲ ಮಾಡುತ್ತಿದ್ದಾಗ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಅವರು "ಧರ್ಮಸ್ಥಳದ ವಿರುದ್ಧ ಯಾರೆಲ್ಲ...

SIR | ರಾಜ್ಯದಲ್ಲಿ ಮಹಿಳೆಯರಿಗೇ ಹೆಚ್ಚು ನೋಟಿಸ್

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಕುರಿತು ಗಂಭೀರ ಆತಂಕಗಳನ್ನು ಹುಟ್ಟುಹಾಕಿದೆ. ರಾಜ್ಯದ 34 ಜಿಲ್ಲಾ ಮತ್ತು ನಗರ ಆಡಳಿತ ಘಟಕಗಳ...

ಭಾರತೀಯ ಯುವ ಕಾಂಗ್ರೆಸ್‌ನ ರಾಷ್ಟ್ರೀಯ ಕಾರ್ಯದರ್ಶಿ ಹಾಗೂ ಕೇರಳ ಉಸ್ತುವಾರಿ ನಾಗೇಶ್ ಕರಿಯಪ್ಪ ಮಾತನಾಡಿ, “ಚುನಾವಣಾ ಆಯೋಗದೊಳಗೇ ಇಬ್ಬರು ಆಯುಕ್ತರು ಹಲವು ನಿರ್ಧಾರಗಳ ಕುರಿತು ಕನಿಷ್ಠ 14 ಬಾರಿ ಲಿಖಿತ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂಬ ವರದಿಗಳು ಗಂಭೀರವಾಗಿವೆ. ಇಂತಹ ಆರೋಪಗಳ ಹಿನ್ನೆಲೆಯಲ್ಲಿ ಕೇವಲ ಸ್ಪಷ್ಟೀಕರಣ ನೀಡುವುದಷ್ಟೇ ಸಾಕಾಗುವುದಿಲ್ಲ” ಎಂದು ಹೇಳಿದರು.

ಜ್ಞಾನೇಶ್ ಕುಮಾರ್ ಅವರು ತಕ್ಷಣ ಮುಖ್ಯ ಚುನಾವಣಾ ಆಯುಕ್ತರ ಹುದ್ದೆಗೆ ರಾಜೀನಾಮೆ ನೀಡಬೇಕು. ಅವರ ಅವಧಿಯಲ್ಲಿ ಕೈಗೊಳ್ಳಲಾದ ವಿವಾದಿತ ನಿರ್ಧಾರಗಳು ಹಾಗೂ ಮತದಾರರ ಪಟ್ಟಿಯಲ್ಲಿನ ಬದಲಾವಣೆಗಳ ಕುರಿತು ಸ್ವತಂತ್ರ ತನಿಖೆ ನಡೆಸಬೇಕು. ತನಿಖೆಯಲ್ಲಿ ಯಾವುದೇ ಕಾನೂನುಬಾಹಿರ ಕೃತ್ಯಗಳು ಸಾಬೀತಾದರೆ ಅನ್ವಯಿಸುವ ಕಾನೂನುಗಳ ಅಡಿ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.

Advertisements

“ಮತದಾನದ ಹಕ್ಕಿನೊಂದಿಗೆ ಆಟವಾಡುವುದು ಪ್ರಜಾಪ್ರಭುತ್ವದೊಂದಿಗೆ ಆಟವಾಡಿದಂತೆ. ಚುನಾವಣಾ ಆಯೋಗಕ್ಕೆ ಆರ್‌ಎಸ್‌ಎಸ್ ಸಮವಸ್ತ್ರ ಬೇಡ, ಸಂವಿಧಾನದ ಕವಚ ಬೇಕು. ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು. ಆರೋಪಗಳ ಕುರಿತು ಸ್ವತಂತ್ರ ತನಿಖೆ ನಡೆಸಿ, ತಪ್ಪಿತಸ್ಥರೆಂದು ಕಂಡುಬಂದರೆ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಬೇಕು” ಎಂದು ಅವರು ಒತ್ತಾಯಿಸಿದರು.

ಈ ವಿಶೇಷ ಸುದ್ದಿ ಓದಿದ್ದೀರಾ? ಶಾಲಾ ದಾಖಲೆ ಪರಿಶೀಲಿಸಿ; ತಿದ್ದುಪಡಿಗೆ ಶಾಲೆ-BEO ಹಂತದವರೆಗೆ ಇರುವ ಮಾರ್ಗವೇನು?

ಪ್ರತಿಭಟನೆಯಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೊಯ್ಸಳ ಎಂ.ಆರ್., ಚಾಮರಾಜ ವಿಧಾನಸಭಾ ಕ್ಷೇತ್ರ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನಿಶಾಂತ್ ಪಟೇಲ್, ನಗರ ಪ್ರಧಾನ ಕಾರ್ಯದರ್ಶಿ ಚಂದ್ರು ಎನ್., ಪ್ರತಾಪ್, ಮಾಜಿದ್, ಉಪಾಧ್ಯಕ್ಷ ಮನೋಜ್ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಬರದ ಬೇಗೆಯಲ್ಲೂ ಕೈ ಹಿಡಿದ ಮೆಕ್ಕೆಜೋಳ; ರೈತ ಚಂ.ಸು ಪಾಟೀಲ್ ಸಾವಯವ ಸಾಧನೆ

"ಯಾವುದೇ ರಸಗೊಬ್ಬರಗಳನ್ನು ಬಳಸದೇ, ಕೀಟನಾಶಕಗಳನ್ನು ಸಿಂಪಡಿಸದೆಯೇ ಸಹಜ ಸಮೃದ್ಧ ಬೆಳೆ ಬೆಳೆಯುವುದು...

ಕಲಬುರಗಿ | ಪರವಾನಗಿ ಇಲ್ಲದೇ ಮದ್ಯ ಮಾರಾಟ; ಆರೋಪಿತನ ವಿರುದ್ಧ ಪ್ರಕರಣ ದಾಖಲು

ನಗರದ ಹೀರಾಪುರ ಬಡಾವಣೆಯಲ್ಲಿ ಪರವಾನಗಿ ಇಲ್ಲದೆ ಮದ್ಯ ಮಾರಾಟ ಮಾಡುತ್ತಿದ್ದ ಆರೋಪದ...

ಸುಡುಗಾಡು ಸಿದ್ಧರ ಕಾಲೋನಿಗೆ ಮೂಲಭೂತ ಸೌಕರ್ಯ ಕಲ್ಪಿಸಲು ಅಲೆಮಾರಿ ಜಾಗೃತ ಸಂಘ ಒತ್ತಾಯ

ರಾಯಚೂರು ಜಿಲ್ಲೆಯ ಹಟ್ಟಿ ಚಿನ್ನದ ಗಣಿ ಸೆ.25: ಪಾಮನಕಲ್ಲೂರು ಕ್ರಾಸ್ ಸಮೀಪ...

ಹಾಸನ | ಸಹಕಾರ ಸಂಘದ ಏಳಿಗೆಗೆ ಎಲ್ಲರೂ ಕೈಜೋಡಿಸಿ: ಜಗದೀಶ್

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಅಭಿವದ್ಧಿಯಾದರೆ, ರೈತರ ಅಭಿವದ್ಧಿ ಸಾಧ್ಯ...