ನಾಗರಹೊಳೆ | ಸಫಾರಿ ವಾಹನ ಮರಕ್ಕೆ ಡಿಕ್ಕಿ; 13 ಪ್ರವಾಸಿಗರು, ಚಾಲಕ ಗಾಯ

Date:

ಮೈಸೂರಿನ ನಾಗರಹೊಳೆಯಲ್ಲಿ ಸಫಾರಿ ವಾಹನದ ಬ್ರೇಕ್‌ ವೈಫಲ್ಯಗೊಂಡು 13 ಜನ ಪ್ರವಾಸಿಗರು ಗಾಯಗೊಂಡಿದ್ದಾರೆ. ಗಾಯಾಳುಗಳಿಗೆ ಎಚ್‌ ಡಿ ಕೋಟೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದವರನ್ನು ಮೈಸೂರಿನ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿದೆ.

- Advertisement -

ಮೈಸೂರು ಜಿಲ್ಲೆಯ ಹೆಚ್.ಡಿ. ಕೋಟೆ ತಾಲ್ಲೂಕಿನ ನಾಗರಹೊಳೆ ಹುಲಿ ರಕ್ಷಿತಾರಣ್ಯದ ದಮ್ಮನಕಟ್ಟೆ ಸಫಾರಿ ಪಾಯಿಂಟ್‌ನಲ್ಲಿ ಶನಿವಾರ ಮಧ್ಯಾಹ್ನ ಸಫಾರಿ ವಾಹನವೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ 13 ಪ್ರವಾಸಿಗರು ಮತ್ತು ಚಾಲಕ ಗಾಯಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಅಪಘಾತವು ಸಂಜೆ 3 ಗಂಟೆ ಸುಮಾರಿಗೆ ಸಫಾರಿ ಸ್ಲಾಟ್‌ನಲ್ಲಿ ನಡೆದಿದೆ. ವಾಹನದ ಬ್ರೇಕ್ ವಿಫಲವಾಗಿದ್ದರಿಂದ ಮರಕ್ಕೆ ಡಿಕ್ಕಿ ಹೊಡೆದಿರಬಹುದು ಎಂದು ಅಧಿಕಾರಿಗಳು ಊಹಿಸಿದ್ದಾರೆ. ಪ್ರವಾಸಿಗರು ಬೆಂಗಳೂರು ಮತ್ತು ಮೈಸೂರಿನಿಂದ ಬಂದಿದ್ದರು.

ಗಾಯಗೊಂಡವರಿಗೆ ಹೆಚ್.ಡಿ. ಕೋಟೆ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ನಂತರ ಅವರನ್ನು ಮೈಸೂರಿನ ಆಸ್ಪತ್ರೆಗೆ ವರ್ಗಾಯಿಸಲಾಗಿದೆ ಎಂದು ಹೆಚ್.ಡಿ. ಕೋಟೆ ತಾಲ್ಲೂಕು ಆರೋಗ್ಯಾಧಿಕಾರಿ ಟಿ. ರವಿಕುಮಾರ್ ತಿಳಿಸಿದ್ದಾರೆ.

ಅಪಘಾತದ ಬಗ್ಗೆ ಅರಣ್ಯ ಮತ್ತು ಪೊಲೀಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಸಫಾರಿ ವಾಹನಗಳ ಸುರಕ್ಷತೆ ಮತ್ತು ನಿರ್ವಹಣೆಯ ಬಗ್ಗೆ ಹೆಚ್ಚಿನ ಗಮನ ಹರಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...